ಮೈಸೂರು, ಆಗಸ್ಟ್ 12: ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara) ಮಹೋತ್ಸವ-2024 ಅಕ್ಟೋಬರ್ 3 ರಂದು ಉದ್ಘಾಟನೆ, ಅಕ್ಟೋಬರ್ 12 ರಂದು ಜಂಬೂಸವಾರಿ (Jamboo Savari) ನಡೆಯಲಿದೆ. ಇದೀಗ ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿರುವ 13 ಗಂಡು ಮತ್ತು 05 ಹೆಣ್ಣು ಆನೆ ಸೇರಿದಂತೆ ಒಟ್ಟು 18 ಆನೆಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ.
ಈ ಬಾರಿಯೂ ಅಂಬಾರಿ ಹೊರುವ ಜವಾಬ್ದಾರಿಯನ್ನು ಅಭಿಮನ್ಯು ಹೆಗಲಿಗಿದೆ. ಗಜಪಯಣ, ಅಭಿಮನ್ಯು ಸೇರಿ 14 ಆನೆ ಭಾಗಿ ಆಗಲಿವೆ. ಪ್ರಥಮ ಹಂತದಲ್ಲಿ 9, 2ನೇ ಹಂತದಲ್ಲಿ 5 ಆನೆ ಆಗಮಿಸಲಿವೆ. ಚಿನ್ನದ ಅಂಬಾರಿಯನ್ನು ಅಭಿಮನ್ಯು ಹೊರಲಿದ್ದು, ಮೊದಲನೇ ತಂಡದಲ್ಲಿ ಅಭಿಮನ್ಯು, ವರಲಕ್ಷ್ಮೀ, ಧನಂಜಯ, ಗೋಪಿ, ಭೀಮ, ಲಕ್ಷ್ಮೀ, ಕಂಜನ್, ರೋಹಿತ್, ಏಕಲವ್ಯ.
ಇದನ್ನೂ ಓದಿ: ಈ ಬಾರಿ ಅದ್ಧೂರಿ ದಸರಾ ಆಚರಣೆ: ಅ 3 ರಂದು ಉದ್ಘಾಟನೆ, ಅ 12 ಕ್ಕೆ ಜಂಬೂಸವಾರಿ
ಎರಡನೇಯ ತಂಡದಲ್ಲಿ ಪ್ರಶಾಂತ, ಮಹೇಂದ್ರ, ಸುಗ್ರೀವ, ಲಕ್ಷ್ಮೀ, ಹಿರಣ್ಯ, ಮೀಸಲು, ಹರ್ಷ, ಅಯ್ಯಪ್ಪ, ಪಾರ್ಥಸಾರಥಿ, ಮಾಲದೇವಿ. ಹೀಗೆ ಒಟ್ಟು 13 ಗಂಡು ಆನೆ, 5 ಹೆಣ್ಣು ಆನೆಗಳು ಜಂಬೂಸವಾರಿಯಲ್ಲಿ ಭಾಗಿಯಾಗಲಿವೆ.
ದಸರಾ ಮಹೋತ್ಸವಕ್ಕೆ ಅರಣ್ಯ ಇಲಾಖೆ ಸಿದ್ದತೆ ಮಾಡಿಕೊಳ್ಳಲಾಗುತ್ತಿದ್ದು, ಸದ್ಯ ದಸರೆಗಾಗಿ 18 ಆನೆಗಳನ್ನ ಗುರುತಿಸಲಾಗಿದೆ. ದಸರಾ ಮಹೋತ್ಸವದ ಕೇಂದ್ರ ಬಿಂದು ಗಜಪಡೆ. ಹೀಗಾಗಿ ದಸರಾ ಮಹೋತ್ಸವದ ಸುಮಾರು 2 ತಿಂಗಳ ಮುಂಚಿತವಾಗಿ ಮೈಸೂರಿಗೆ ಗಜಪಡೆ ಆಗಮಿಸಲಿವೆ. ಆಗಸ್ಟ್ 21ಕ್ಕೆ ಗಜಪಯಣ ನಿಗದಿ ಆಗಿದ್ದು, ಈಗಾಗಲೇ ನಾಲ್ಕು ಹೆಚ್ಚುವರಿ ಆನೆಗಳನ್ನು ಸಹ ಗುರುತಿಸಲಾಗಿದೆ.
ಇದನ್ನೂ ಓದಿ: ಚಾಮುಂಡೇಶ್ವರಿ ದೇವಸ್ಥಾನ ನಮ್ಮ ಆಸ್ತಿ, ಅವಕಾಶ ಕೊಟ್ರೆ ನಾವೇ ನಿರ್ವಹಣೆ ಮಾಡ್ತೇವೆ: ಪ್ರಮೋದಾದೇವಿ
ಈ ಬಾರಿಯೂ ಒಟ್ಟು 14 ಆನೆಗಳನ್ನು ವಿವಿಧ ಶಿಬಿರಗಳಿಂದ ಕರೆತರಲಾಗುತ್ತಿದೆ. ಮೊದಲ ತಂಡದ 9 ಆನೆಗಳಿಗೆ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿಯಲ್ಲಿ 21ರಂದು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಬೀಳ್ಕೊಡಲಾಗುತ್ತದೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2024 ಅಕ್ಟೋಬರ್ 3 ರಂದು ಉದ್ಘಾಟನೆ, ಅಕ್ಟೋಬರ್ 12 ರಂದು ಜಂಬೂಸವಾರಿ ನಡೆಯಲಿದೆ ಎಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದ ಉನ್ನತಮಟ್ಟದ ಸಭೆಯಲ್ಲಿ ತಿರ್ಮಾನಿಸಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 9:18 pm, Mon, 12 August 24