ಕನ್ನಡ ಕಲಿಸದ ಪ್ರತಿಷ್ಠಿತ ಶಾಲೆಗಳ ಪಟ್ಟಿ ರಿಲೀಸ್
ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಶಾಲೆಗಳು ಕನ್ನಡ ಭಾಷೆಯನ್ನು ಕಲಿಸದೆ ನಿರ್ಲಕ್ಷ್ಯ ಮಾಡಿರುವ ಬಗ್ಗೆ ವರದಿ ಬಿಡುಗಡೆಯಾಗಿದೆ. ಸರ್ವ ಶಿಕ್ಷ ಅಭಿಯಾನ ಕಚೇರಿಯಲ್ಲಿ ಖಾಸಗಿ ಶಾಲೆಗಳಲ್ಲಿ ಕನ್ನಡ ಭಾಷೆ ಕಡ್ಡಾಯ ಬಗ್ಗೆ ಸಭೆ ಜರುಗಿತು. ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗಾಭರಣ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹಲವು ಅಧಿಕಾರಿಗಳು ಭಾಗಿಯಾಗಿದ್ದರು. ಕೇವಲ 4 ಶಾಲೆಗಳು ಕನ್ನಡ ಭಾಷೆ ಕಲಿಸುತ್ತಿಲ್ಲಾ ಎಂದು ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿ ಡಿಡಿಪಿಐಗಳು ಪೇಚಿಗೆ ಸಿಲುಕಿದರು. ಕನ್ನಡ ಕಲಿಸದ […]
ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಶಾಲೆಗಳು ಕನ್ನಡ ಭಾಷೆಯನ್ನು ಕಲಿಸದೆ ನಿರ್ಲಕ್ಷ್ಯ ಮಾಡಿರುವ ಬಗ್ಗೆ ವರದಿ ಬಿಡುಗಡೆಯಾಗಿದೆ.
ಸರ್ವ ಶಿಕ್ಷ ಅಭಿಯಾನ ಕಚೇರಿಯಲ್ಲಿ ಖಾಸಗಿ ಶಾಲೆಗಳಲ್ಲಿ ಕನ್ನಡ ಭಾಷೆ ಕಡ್ಡಾಯ ಬಗ್ಗೆ ಸಭೆ ಜರುಗಿತು. ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗಾಭರಣ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹಲವು ಅಧಿಕಾರಿಗಳು ಭಾಗಿಯಾಗಿದ್ದರು.
ಕೇವಲ 4 ಶಾಲೆಗಳು ಕನ್ನಡ ಭಾಷೆ ಕಲಿಸುತ್ತಿಲ್ಲಾ ಎಂದು ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿ ಡಿಡಿಪಿಐಗಳು ಪೇಚಿಗೆ ಸಿಲುಕಿದರು. ಕನ್ನಡ ಕಲಿಸದ 44 ಶಾಲೆಗಳ ಪಟ್ಟಿಯನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬಿಡುಗಡೆ ಮಾಡಿದೆ. ಈ ಸಂಬಂಧ ಶಾಲೆಗಳ ಮಾನ್ಯತೆ ರದ್ದು ಮಾಡುವ ಬಗ್ಗೆಯೂ ಚರ್ಚೆ ನಡೆಸಲಾಗಿದೆ.
Published On - 1:55 pm, Wed, 13 November 19