AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣ ಉಪಚುನಾವಣೆಗೆ ಬಿಜೆಪಿ ಸ್ಟಾರ್​ ಪ್ರಚಾರಕರ ಪಟ್ಟಿ ಬಿಡುಗಡೆ

ನವೆಂಬರ್ 13 ರಂದು ನಡೆಯಲಿರುವ ಶಿಗ್ಗಾಂವಿ, ಸಂಡೂರು ಮತ್ತು ಚನ್ನಪಟ್ಟಣ ಉಪಚುನಾವಣೆಗಳಿಗೆ ಬಿಜೆಪಿ 40 ಜನ ಪ್ರಮುಖ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿ.ಎಸ್. ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ ಮುಂತಾದವರು ಈ ಪಟ್ಟಿಯಲ್ಲಿದ್ದಾರೆ. ನಾಯಕತ್ವ ವಿರುದ್ಧ ಧ್ವನಿಯೆತ್ತಿದ್ದವರಿಗೆ ಪಟ್ಟಿಯಲ್ಲಿ ಸ್ಥಾನ ನೀಡಿಲ್ಲ.

ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣ ಉಪಚುನಾವಣೆಗೆ ಬಿಜೆಪಿ ಸ್ಟಾರ್​ ಪ್ರಚಾರಕರ ಪಟ್ಟಿ ಬಿಡುಗಡೆ
ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣ ಉಪಚುನಾವಣೆಗೆ ಬಿಜೆಪಿ ಸ್ಟಾರ್​ ಪ್ರಚಾರಕರ ಪಟ್ಟಿ ಬಿಡುಗಡೆ
ಕಿರಣ್​ ಹನಿಯಡ್ಕ
| Edited By: |

Updated on:Oct 29, 2024 | 10:58 PM

Share

ಬೆಂಗಳೂರು, ಅಕ್ಟೋಬರ್ 29: ನ.13ರಂದು ನಡೆಯಲಿರುವ ಶಿಗ್ಗಾಂವಿ, ಸಂಡೂರು ಮತ್ತು ಚನ್ನಪಟ್ಟಣ ಉಪಚುನಾವಣೆ (by-elections) ನಡೆಯಲಿದೆ. ಈಗಾಗಲೇ ಮೂರು ಕ್ಷೇತ್ರದಲ್ಲಿ ಮೂರು ಪಕ್ಷಗಳು ಕಸರತ್ತು ಮಾಡುತ್ತಿವೆ. ಅಭ್ಯರ್ಥಿಗಳು ಈಗಾಗಲೇ ಪ್ರಚಾರ ಕೂಡ ಆರಂಭಿಸಿದ್ದಾರೆ. ಈ ಮಧ್ಯೆ ಬಿಜೆಪಿ ತನ್ನ ಸ್ಟಾರ್​ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ.

ಮೂರು ಕ್ಷೇತ್ರದ ಬೈಎಲೆಕ್ಷನ್‌ಗೆ ಅಖಾಡ ಸಜ್ಜಾಗಿದೆ. ಮೂರು ಕ್ಷೇತ್ರದಲ್ಲಿ ಗೆಲುವಿಗಾಗಿ ಬಿಜೆಪಿ ನಾನಾ ಕಸರತ್ತು ಮಾಡುತ್ತಿದೆ. ಸದ್ಯ 40 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಲಾಗಿದೆ.

ಬಿಜೆಪಿಯ 40 ಸ್ಟಾರ್ ಪ್ರಚಾರಕರು

ಬಿ.ಎಸ್​.ಯಡಿಯೂರಪ್ಪ, ರಾಧಾಮೋಹನ್ ದಾಸ್ ಅಗರ್ವಾಲ್, ಪ್ರಹ್ಲಾದ್ ಜೋಶಿ, ಬಿ.ವೈ.ವಿಜಯೇಂದ್ರ, ಆರ್​.ಅಶೋಕ್, ಸುಧಾಕರ್ ರೆಡ್ಡಿ, ಸಿ.ಎನ್​.ಮಂಜುನಾಥ್, ಶೋಭಾ ಕರಂದ್ಲಾಜೆ, ವಿ.ಸೋಮಣ್ಣ, ಸಿ.ಟಿ.ರವಿ, ಜಗದೀಶ್ ಶೆಟ್ಟರ್, ತಾರಾ ಅನುರಾಧ, ಶ್ರುತಿ ಸೇರಿದಂತೆ 40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಲಾಗಿದೆ.

ಇದನ್ನೂ ಓದಿ: ಹೊಂದಾಣಿಕೆ ರಾಜಕೀಯ ಮಾಡುವವರನ್ನು ಹೊರ ಹಾಕ್ತಿದ್ದೇವೆ: ವಿಜಯೇಂದ್ರ

ಇನ್ನು ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿ ಪ್ರಮುಖರ ಹೆಸರನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಇದ್ದಕ್ಕೆ ನಾಯಕತ್ವದ ವಿರುದ್ಧ ಧ್ವನಿಯೆತ್ತಿದ್ದು ಕಾರಣ ಎನ್ನಲಾಗುತ್ತಿದೆ.

ಶಿಗ್ಗಾಂವಿಯಲ್ಲಿ ಮಾಜಿ ಸಿಎಂ ಬಸವರಾಜ್​ ಬೊಮ್ಮಾಯಿ ಪುತ್ರ ಭರತ್​ ಬೊಮ್ಮಾಯಿಗೆ ಟಿಕೆಟ್​ ಸಿಕ್ಕಿದ್ದರೆ, ಸಂಡೂರಿನಲ್ಲಿ ರೆಡ್ಡಿ ಆಪ್ತ ಬಂಗಾರು ಹನುಮಂತುಗೆ ಟಿಕೆಟ್​ ಕೊಡಲಾಗಿದೆ. ಹೈವೋಲ್ಟೇಜ್ ಚನ್ನಪಟ್ಟಣ ಕ್ಷೇತ್ರಕ್ಕೆ ನಿಖಿಲ್​ ಕುಮಾರಸ್ವಾಮಿಗೆ ಟಿಕೆಟ್ ನೀಡಲಾಗಿದೆ.

ಇದನ್ನೂ ಓದಿ: ಚನ್ನಪಟ್ಟಣ ಉಪಚುನಾವಣೆ: ಕಾಂಗ್ರೆಸ್​​ನಿಂದ ಮತ್ತೆ ಬಿಗ್ ಆಪರೇಷನ್

ಇನ್ನು ಇದರ ಮಧ್ಯೆ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಶಕ್ಕೆ ಪಡೆಯಲು ಕಾಂಗ್ರೆಸ್​ ಪಣತೊಟ್ಟಿದೆ. ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್​​ಗೆ ಹೆಚ್ಚಿನ ಮತಗಳು ಸಿಗಬೇಕು ಅಂತ, ಉಸ್ತುವಾರಿ ಹಾಗೂ ಕ್ಯಾಂಪೇನರ್​ಗಳನ್ನು ನೇಮಿಸಿದೆ. ಸಚಿವರಿಗೆ ಜಿಲ್ಲಾ ಪಂಚಾಯ್ತಿ ವಾರ್ಡ್​ವಾರು ಜವಾಬ್ದಾರಿ ನೀಡಲಾಗಿದ್ದು, ಮತ ಶಿಕಾರಿಗೆ ತಂತ್ರ ರೂಪಿಸುವಂತೆ ಖಡಕ್​ ಸಂದೇಶ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:23 pm, Tue, 29 October 24

ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ