ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು ಇಂದು(ಸೆ.2) ಆಲಮಟ್ಟಿ ಬಳಿ ಕೃಷ್ಣಾ ನದಿಗೆ ನಿರ್ಮಿಸಲಾದ ಅಣೆಕಟ್ಟಿನಲ್ಲಿ ಬಾಗಿನ ಅರ್ಪಿಸಿದ್ದಾರೆ. ಈ ವೇಳೆ ಸಚಿವ ಎಂ.ಬಿ.ಪಾಟೀಲ್ ಸೇರಿ ಜಿಲ್ಲೆಯ ಶಾಸಕರು ಪಾಲ್ಗೋಂಡಿದ್ದರು. ಇನ್ನು ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ವರುಣನ ಅಬ್ಬರ ಜೋರಾಗಿದೆ. ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30ರಂದು ಚಾಲನೆ ಸಿಕ್ಕಿದ್ದು, ಈಗಾಗಲೇ ಕೆಲ ಮಹಿಳೆಯರ ಖಾತೆಗೆ 2ಸಾವಿರ ಹಣವೂ ವರ್ಗಾವಣೆಗೊಂಡಿದೆ. ಇದರೊಂದಿಗೆ ಇಂದಿನ ಕರ್ನಾಟಕದ ಲೇಟೆಸ್ಟ್ ಸುದ್ದಿಗಳ ಅಪ್ಡೇಟ್ಸ್ ಇಲ್ಲಿದೆ.
ಕಲಬುರಗಿ : ಸಿಡಿಲು ಬಡಿದು ಓರ್ವ ಮಹಿಳೆ ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾದ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಸಿದನೂರು ಗ್ರಾಮದ ಬಳಿ ಹೊಲದಲ್ಲಿ ನಡೆದಿದೆ. ಕಲಾವತಿ(35) ಮೃತ ಮಹಿಳೆ. ಗಂಭೀರ ಗಾಯಗೊಂಡಿರುವ ಸವಿತಾಗೆ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತಹಶೀಲ್ದಾರ್ ಸಂಜೀವ್ ಕುಮಾರ್ ದಾಸರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು: 2023-24ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪಟ್ಟಿಯನ್ನು ಸರ್ಕಾರ ಪ್ರಕಟಿಸಿದೆ. ಓರ್ವ ವಿಶೇಷ ಶಿಕ್ಷಕ ಸೇರಿ ಒಟ್ಟು 11 ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರಕಟ ಮಾಡಿದೆ. ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
ನಸೀಮ್ ಶಾ ಎಸೆತದಲ್ಲಿ ಸ್ಟ್ರೈಟ್ ಹಿಟ್ ಫೋರ್ ಬಾರಿಸಿದ ಜಸ್ಪ್ರೀತ್ ಬುಮ್ರಾ. ಟೀಮ್ ಇಂಡಿಯಾ ಖಾತೆಗೆ ಅಮೂಲ್ಯ ರನ್. ಕ್ರೀಸ್ನಲ್ಲಿ ಜಸ್ಪ್ರೀತ್ ಬುಮ್ರಾ- ಮೊಹಮ್ಮದ್ ಸಿರಾಜ್ ಬ್ಯಾಟಿಂಗ್
ಬೆಂಗಳೂರು: ನಾಳೆ ರಾಜ್ಯಾದ್ಯಂತ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಯಲಿದ್ದು, ರಾಜ್ಯದ 35 ಶೈಕ್ಷಣಿಕ ಕೇಂದ್ರಗಳಲ್ಲಿ ಟಿಇಟಿ ಪರೀಕ್ಷೆಗೆ ಏರ್ಪಡಿಸಲಾಗಿದೆ. ಪತ್ರಿಕೆ 1ಕ್ಕೆ ಒಟ್ಟು 1,43,705 ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಕೆಯಾಗಿದೆ. 1ರಿಂದ 5ನೇ ತರಗತಿ ಶಿಕ್ಷಕರಿಗೆ 1,43,705 ಅಭ್ಯರ್ಥಿಗಳಿಂದ ಅರ್ಜಿ ಮತ್ತು ಪತ್ರಿಕೆ 2ಕ್ಕೆ ಒಟ್ಟು 1,89,994 ಅಭ್ಯರ್ಥಿಗಳಿಂದ ಅರ್ಜಿ ಹಾಗೂ 6ರಿಂದ 8ನೇ ತರಗತಿ ಶಿಕ್ಷಕರಿಗಾಗಿ 1,89,994 ಅರ್ಜಿ ಸಲ್ಲಿಕೆಯಾಗಿದೆ.
ಉಡುಪಿ: ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟೇಶ್ವರದಲ್ಲಿ ಮಹಿಳೆಯಿಂದ ಸರ ಕಸಿದು ಪರಾರಿ ಆಗುತ್ತಿದ್ದ ವೇಳೆ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದಾನೆ.
ಈ ವೇಳೆ ಸರಗಳ್ಳನನ್ನು ಹಿಡಿದು ಥಳಿಸಿದ ಗ್ರಾಮಸ್ಥರು, ಪೊಲೀಸರಿಗೆ ಒಪ್ಪಿಸಿದ್ದಾರೆ.
ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ‘ಕೃಷ್ಣಾ, ಕಾವೇರಿ, ಮಹಾದಾಯಿ ವಿಚಾರವಾಗಿ ಪ್ರಧಾನಿಗೆ ಪತ್ರ ಬರೆದು, ಸರ್ವ ಪಕ್ಷದ ನಾಯಕರು ಪ್ರಧಾನಿ ಮೋದಿ ಅವರುನ್ನು ಭೇಟಿ ಮಾಡುತ್ತೇವೆ. ಯುಕೆಪಿ ಯೋಜನೆ ಅನುಷ್ಠಾನ ಬಗ್ಗೆ ಕುರಿತು ಚರ್ಚೆ ಮಾಡಿದ್ದೇವೆ. ಯುಕೆಪಿ 3ನೇ ಹಂತದ ಯೋಜನೆ ಜಾರಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದಿದ್ದಾರೆ.
ಬೆಂಗಳೂರು: ಇಸ್ರೋದ ಆದಿತ್ಯ ಎಲ್-1 ನೌಕೆ ಯಶಸ್ವಿ ಉಡಾವಣೆ ಹಿನ್ನೆಲೆ ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ ‘ ಇಸ್ರೋ ಪ್ರಪಂಚದಲ್ಲೇ ನಾಲ್ಕನೆಯ ಸ್ಥಾನ ಪಡೆದುಕೊಂಡಿದೆ. ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ ಚಂದ್ರನಲ್ಲೇ ಇದೆ. ಇದು ವೈಜ್ಞಾನಿಕವಾಗಿ ಚಂದ್ರನ ಮೇಲೆ ಸಂಶೋಧನೆ ನಡೆಸುತ್ತಿದೆ. ಚಂದ್ರನ ಮೇಲೆ ಗಂಧಕ, ತಾಮ್ರ ಇರೋ ಬಗ್ಗೆ ಮಾಹಿತಿ ನೀಡಿದೆ. ಈಗ ಸೂರ್ಯನ ಬಳಿ ಸಂಶೋಧನಕ್ಕೆ ಆದಿತ್ಯ ಎಲ್-1 ಕಳಿಸಿದ್ದಾರೆ. ಇದು ಸೂರ್ಯನ ಕಿರಣಗಳಿಂದ ಬರುವ ಶಕ್ತಿ ಬಗ್ಗೆ ಅಧ್ಯಯನ ನಡೆಸಲಿದೆ ಎಂದರು.
ಮಂಡ್ಯ: ಮತ್ತೆ ಜಿಲ್ಲೆಯಲ್ಲಿ ಮುಂದುವರಿದ ಕಾವೇರಿ ಕಿಚ್ಚು, ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ಕೆಆರ್ಎಸ್ ಜಲಾಶಯ ಬಳಿ ಕಾವೇರಿ ನದಿಗೆ ಇಳಿದು ರೈತರ ಪ್ರತಿಭಟನೆ ಮಾಡಿದ್ದಾರೆ.
ವಿಜಯಪುರ: ಜಿಲ್ಲೆಯ ಬಸವನಬಾಗೇಬಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ತಂದೆಯೇ ತನ್ನ ಮೂವರು ಮಕ್ಕಳಿಗೆ ವಿಷ ಹಾಕಿ ತಾನು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಇದೀಗ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.
ಬೆಂಗಳೂರು: ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿಯವರ ಆರೋಗ್ಯವನ್ನು ಗೃಹ ಸಚಿವ ಡಾ.ಜಿ. ಪರಮೇಶ್ವರ್ ವಿಚಾರಿಸಿದ್ದಾರೆ. ಕುಮಾರಸ್ವಾಮಿ ಅವರು ನಾಲ್ಕೈದು ದಿನಗಳ ಹಿಂದೆ ಒಂದು ಮೈಲ್ಡ್ ಸ್ಟ್ರೋಕ್ ಆಗಿತ್ತು. ಈ ಹಿನ್ನಲೆ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ವಿಜಯಪುರ: ಎಂಪಿ ಎಲೆಕ್ಷನ್ ಆಗುವ ಹಿಂದೆಯೇ ಕಾಂಗ್ರೆಸ್ ಸರ್ಕಾರ ಬೀಳುತ್ತದೆ ಎಂಬ ಕೆಎಸ್ ಈಶ್ವರಪ್ಪ ಹೇಳಿಕೆ ವಿಚಾರ ‘ಅದು ಅವರ ಭ್ರಮೆ ಎಂದು ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ.
ಕೋಲಾರ: ಜಿಲ್ಲೆಯಲ್ಲಿ ಮಳೆರಾಯನ ಅಬ್ಬರ ಹೆಚ್ಚಾಗಿದೆ. ನಿನ್ನೆಯಿಂದ ಬಿಟ್ಟು ಬಿಡದೇ ಮಳೆ ಸುರಿಯುತ್ತಿದ್ದು, ರೈತರ ಮುಖದಲ್ಲಿ ಸಂತಸ ಮೂಡಿದೆ. ಕಳೆದೊಂದು ತಿಂಗಳಿಂದ ರೈತರು ಮಳೆಗಾಗಿ ಕಾದು ಕುಳಿತಿದ್ದರು. ಬಿತ್ತನೆ ಮಾಡಿದ್ದ ಬೆಳೆ ಒಣಗಲಾರಂಭಿಸಿತ್ತು, ಸದ್ಯ ಮಳೆಯ ಸಿಂಚನದಿಂದ ಬೆಳೆ ಮರುಜೀವ ಪಡೆದುಕೊಂಡಿದೆ.
ವಿಜಯಪುರ: ಇಂದು ಕೃಷ್ಣಾ ನದಿಗೆ ಗಂಗಾಪೂಜೆ ಹಾಗೂ ಬಾಗಿನ ಅರ್ಪಣೆಯನ್ನು ಸಿಎಂ ಸಿದ್ದರಾಮಯ್ಯ ನೆರವೇರಿಸಿದರು. ಬಳಿಕ ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಇತರ ಸಚಿವರು ಸಭೆ ಮಾಡುತ್ತಿದ್ದಾರೆ. ಕೃಷ್ಣ ಮೇಲ್ದಂಡೆ ಯೋಜನೆ 3 ರ ಭೂಸ್ವಾಧೀನ, ಪುನರ್ವಸತಿ ಹಾಗೂ ಪುನರ್ ನಿರ್ಮಾಣ ಕುರಿತು ಸಭೆಯಲ್ಲಿ ಚರ್ಚೆ ಆಗುತ್ತಿದೆ.
Published On - 2:29 pm, Sat, 2 September 23