Breaking News in Kannada Highlights: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್
Siddaramaiah, DK Shivakumar meets AICC president Kharge Highlights: ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ 5 ಕೋಟಿ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿಂದತೆ ಮಹತ್ವದ ಬೆಳವಣಿಗೆಗಳು ಆಗುತ್ತಿವೆ. ಇನ್ನು ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರವಾಗಿ ರಾಜ್ಯಾದ್ಯಂತ ವಿರೋಧ ವ್ಯಕ್ತವಾಗುತ್ತಿದೆ. ವಿವಿಧ ಸಂಘಟನೆಗಳು, ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಇದರೊಂದಿಗೆ ರಾಜ್ಯದ ರಾಜಕೀಯ, ಹವಾಮಾನ ಹಾಗೂ ಇನ್ನಿತರೆ ಸುದ್ದಿಗಳ ಕ್ಷಣ ಕ್ಷಣದ ಮಾಹಿತಿ ಟಿವಿ9 ಡಿಜಿಟಲ್ನಲ್ಲಿ
ನಿತ್ಯ 5 ಸಾವಿರ ಕ್ಯುಸೆಕ್ ನೀರನ್ನು ತಮಿಳುನಾಡಿಗೆ ಬಿಡಬೇಕು ಎಂಬ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ರಾಜ್ಯದ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈಗಾಗಲೆ ರಾಜ್ಯದಲ್ಲಿ ಬರ ಆವರಿಸಿದ್ದು, ಈ ಮಧ್ಯಯೇ ನೀರು ಬಿಡಬೇಕು ಎಂಬ ಆದೇಶ ಕಾವೇರಿ ತೀರದ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಇನ್ನು ಬಿಜೆಪಿ ಕೊಡಿಸುವುದಾಗಿ ಉದ್ಯಮಿಗೆ 5 ಕೋಟಿ ರೂ. ವಂಚನೆ ಕೃತ್ಯ ಬೆಳಕಿಗೆ ಬಂದ ನಂತರ ಕಳೆದೊಂದು ವಾರದಿಂದ ಹೊರರಾಜ್ಯಗಳಲ್ಲಿ ತಲೆಮರೆಸಿಕೊಂಡಿದ್ದ ಸದ್ಗುರು ಶಿವಯೋಗಿ ಹಾಲಶ್ರೀ ಮಠದ ಅಭಿನವ ಹಾಲವೀರಪ್ಪಜ್ಜ ಸ್ವಾಮೀಜಿ ಅಲಿಯಾಸ್ ಹಾಲಶ್ರೀ ಅವರನ್ನು ಮಂಗಳವಾರ ಸಿಸಿಬಿ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬೆನ್ನುಹತ್ತಿ ಒಡಿಶಾದಲ್ಲಿ ಬಂಧಿಸಿದ್ದರು. ಹಾಗೇ ರಾಜ್ಯಾದ್ಯಂತ ಸಡಗರ, ಸಂಭ್ರಮದಿಂದ ಸೋಮವಾರ ಮತ್ತು ಮಂಗಳವಾರ ಗೌರಿ-ಗಣೇಶ ಹಬ್ಬವನ್ನು ಆಚರಿಸಲಾಯಿತು. ಗಣೇಶ ಪ್ರತಿಷ್ಠಾಪನೆ ಹಾಗೂ ಹಬ್ಬದ ಸಂಭ್ರಮದಿ ವಿಧಿ-ವಿಧಾನಗಳು ಸಾಂಗವಾಗಿ ಜರುಗಿದವು. ಇದರೊಂದಿಗೆ ಇಂದಿನ ಲೇಟೆಸ್ಟ್ ಅಪಡೇಟ್ಸ್ ಇಲ್ಲಿದೆ.
LIVE NEWS & UPDATES
-
Breaking News in Kannada Live: 2024ರ ಗಣರಾಜ್ಯೋತ್ಸವಕ್ಕೆ ಜೋ ಬೈಡೆನ್‌ಗೆ ಆಹ್ವಾನ ನೀಡಿದ ಪ್ರಧಾನಿ ಮೋದಿ
2024ರ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸುವಂತೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ಗೆ ಪ್ರಧಾನಿ ಮೋದಿ ಆಹ್ವಾನ ನೀಡಿದ್ದಾರೆ. ಬೈಡೆನ್‌ಗೆ ಆಹ್ವಾನ ಬಗ್ಗೆ ಅಮೆರಿಕ ರಾಯಭಾರಿ ಎರಿಕ್‌ಗಾರ್ಸೆಟ್ಟಿ ಮಾಹಿತಿ ನೀಡಿದೆ.
-
Breaking News in Kannada Live: ಸಮಯ ಬಂದಾಗ ಹೋರಾಟಕ್ಕೆ ಬಂದೇ ಬರ್ತೀನಿ-ಸಾ.ರಾ.ಗೋವಿಂದು
ಚುನಾವಣೆ ಮುಗಿದ 2ನೇ ದಿನಕ್ಕೆ ಕಾವೇರಿ ಹೋರಾಟ ಆರಂಭ ಮಾಡುತ್ತೇವೆ. ಸಮಯ ಬಂದಾಗ ಹೋರಾಟಕ್ಕೆ ಬಂದೇ ಬರುತ್ತೇವೆ ಎಂದು ಬೆಂಗಳೂರಿನಲ್ಲಿ ನಿರ್ಮಾಪಕ ಸಾ.ರಾ.ಗೋವಿಂದು ಹೇಳಿದ್ದಾರೆ.
-
Breaking News in Kannada Live: ಅಭಿನವ ಹಾಲಶ್ರೀಯನ್ನು ಹಾಲಸ್ವಾಮಿ ಮಠಕ್ಕೆ ಕರೆತಂದ ಪೊಲೀಸರು
ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಹಿರೇಹಡಗಲಿ ಗ್ರಾಮದ ಹಿರೇಹಡಗಲಿಯಲ್ಲಿರುವ ಹಾಲಸ್ವಾಮಿ ಮಠಕ್ಕೆ ಸ್ಥಳ ಮಹಜರು ಮಾಡಲು ಅಭಿನವ ಹಾಲಶ್ರೀಯನ್ನು ಪೊಲೀಸರು ಕರೆತಂದಿದ್ದಾರೆ. ಶ್ರೀಗಳನ್ನು ಕರೆತರುತ್ತಿದ್ದಂತೆ ತೆಂಗಿನಕಾಯಿ ಒಡೆದು ಮಠದ ಒಳಗೆ ಸ್ವಾಗತ ಮಾಡಲಾಗಿದೆ. ಮಠದ ಮುಖ್ಯದ್ವಾರ ಕ್ಲೋಸ್ ಮಾಡಿ ಸಿಸಿಬಿ ಅಧಿಕಾರಿಗಳು ಸ್ಥಳ ಮಹಜರು ನಡೆಸುತ್ತಿದ್ದಾರೆ.
Breaking News in Kannada Live: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ವಿಧೇಯಕ ಅಂಗೀಕಾರ
ಐತಿಹಾಸಿಕ ನಾರಿ ಶಕ್ತಿ ವಂದನ್ ವಿಧೇಯಕವನ್ನು ಲೋಕಸಭೆ ಅಂಗೀಕರಿಸಿದೆ. ಮತದಾನ ಮೂಲಕ ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರ ಮಾಡಲಾಗಿದೆ. ಮಹಿಳಾ ಮೀಸಲಾತಿ ವಿಧೇಯಕ ಪರ 454 ಸಂಸದರು ಮತ ಹಾಕಿದ್ದಾರೆ. ಮಹಿಳಾ ಮೀಸಲಾತಿ ಬಿಲ್ ವಿರುದ್ಧ ಇಬ್ಬರು ಸಂಸದರು ಮತ ಹಾಕಿದ್ದಾರೆ.
Women’s Reservation Bill: ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆ ಅಂಗೀಕಾರ
Breaking News in Kannada Live: ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್
ಎಐಸಿಸಿ ಅಧ್ಯಕ್ಷರಾದ @kharge ಅವರನ್ನು ದೆಹಲಿಯಲ್ಲಿ ಇಂದು ಭೇಟಿಮಾಡಿ, ಮಾತುಕತೆ ನಡೆಸಿದೆ. pic.twitter.com/bx16w2efPj
— Siddaramaiah (@siddaramaiah) September 20, 2023
Breaking News in Kannada Live: ರೈತರು ನಿಮ್ಮ ಮೇಲೆ ಸಿಟ್ಟಾಗಿದ್ದಾರೆ: ನಟ ರಾಘಣ್ಣ
Breaking News in Kannada Live: ಕಾವೇರಿ ಪರ ಕಿಚ್ಚ ಸುದೀಪ್
Breaking News in Kannada Live: ಡಿಎಂಕೆ ಪಾರ್ಟಿ ಮಾಡ್ತಿರೋ ಸಮಸ್ಯೆ ಇದು
ಕಾವೇರಿ ಗಲಾಟೆ 60 ವರ್ಷದಿಂದ ನೋಡಿತ್ತಾ ಬಂದಿದ್ದೇವೆ. ಕಾಂಗ್ರೆಸ್ ಕಾಲದಿಂದಲೂ ವಿವಾದ ಇದೆ. ಡಿಎಂಕೆ ಜೊತೆ ಸೇರಿ ಕಾಂಗ್ರೇಸ್ ಸಮಸ್ಯೆ ಬಗೆ ಹರಿಸಿಲ್ಲ. ಬ್ರಿಟಿಷ್ ಸರ್ಕಾರ ಇದ್ದಾಗ ತಮಿಳು ನಾಡಿಗೆ ಹೆಚ್ಚು ನೀರು ಬಿಡುವ ಬಗ್ಗೆ ಉಲ್ಲೇಖ ಇದೆ. ಇದನ್ನ ಸರಿ ಮಾಡೋ ಕೆಲಸ ಆಗೇ ಇಲ್ಲ. ಈಗ ಕಳೆದ 15 ವರ್ಷ ದಿಂದ ಕಾವೇರಿ ಗಲಾಟೆ ಹೆಚ್ಚಾಗಿದೆ. ಡಿಎಂಕೆ ಪಾರ್ಟಿ ಮಾಡ್ತಿರೋ ಸಮಸ್ಯೆ ಇದು. ಇದಕ್ಕೆ ನಾವೆಲ್ಲ ಕನ್ನಡಿಗರು ಒಗ್ಗಟ್ಟಾಗಿ ನಿಲ್ಲಬೇಕು ಎಂದು ಹಿರಿಯ ನಟ ಅನಂತ್ ನಾಗ್ ಹೇಳಿದ್ದಾರೆ.
Breaking News in Kannada Live: ಕಾವೇರಿ ಹೋರಾಟದ ಪರ ಧ್ವನಿ ಎತ್ತಿದ ನಟ ಶಿವರಾಜ್‌ಕುಮಾರ್
ರೈತ ನಮ್ಮ ದೇಶದ ಬೆನ್ನೆಲುಬು, ರೈತನ ಬೆನ್ನೆಲುಬು ಕಾವೇರಿ. ರಾಜ್ಯದಲ್ಲಿ ಮಳೆ ಕಡಿಮೆ ಆಗಿದೆ, ರೈತರು ತುಂಬಾ ಕಷ್ಟದಲ್ಲಿದ್ದಾರೆ. ಉಭಯ ರಾಜ್ಯಗಳ ನಾಯಕರು, ನ್ಯಾಯಾಲಯ ಇದನ್ನು ಗಮನಿಸಲಿ. ಇದನ್ನು ಗಮನದಲ್ಲಿಟ್ಟುಕೊಂಡು ಒಳ್ಳೆಯ ತೀರ್ಮಾನ ಕೈಗೊಳ್ಳಲಿ ಎಂದು ನಟ ಶಿವರಾಜ್‌ಕುಮಾರ್ ಹೇಳಿದ್ದಾರೆ.
Breaking News in Kannada Live: ಮಹಿಳಾ ಮೀಸಲಾತಿ ವಿಧೇಯಕವನ್ನು ವಿಶ್ವವೇ ಬೆಂಬಲಿಸುತ್ತಿದೆ
ಮಹಿಳಾ ಮೀಸಲಾತಿ ವಿಧೇಯಕವನ್ನು ವಿಶ್ವವೇ ಬೆಂಬಲಿಸುತ್ತಿದೆ. ಯುಪಿಎ ಅವಧಿಯಲ್ಲಿ ಲೋಕಸಭೆಯಲ್ಲಿ ವಿಧೇಯಕ ಅಂಗೀಕಾರವಾಗಿದ್ದು, ರಾಜ್ಯಸಭೆಯಲ್ಲಿ ವಿಧೇಯಕ ಅಂಗೀಕಾರವಾಗಿರಲಿಲ್ಲ. UPA ಸರ್ಕಾರದ ಅವಧಿ ಮುಗಿದಿದ್ದರಿಂದ, 4 ಬಾರಿ ವಿಧೇಯಕ ಮಂಡಿಸಿದರೂ ಅಂಗೀಕಾರವಾಗಿರಲಿಲ್ಲ ಎಂದು ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
Breaking News in Kannada Live: ಬೆಂಗಳೂರಿನ ಹಲವೆಡೆ ಗಣೇಶ ವಿಸರ್ಜನೆ ಹಿನ್ನೆಲೆ ನಾಳೆ ಮದ್ಯ ನಿಷೇಧ
ಬೆಂಗಳೂರಿನ ಹಲವೆಡೆ ಗಣೇಶ ವಿಸರ್ಜನೆ ಹಿನ್ನೆಲೆ ನಾಳೆ ಬೆಂಗಳೂರು ಕೇಂದ್ರ, ಉತ್ತರ, ಪೂರ್ವ, ಈಶಾನ್ಯ ವಿಭಾಗ, ಬೆಂಗಳೂರು ಉತ್ತರ ವಿಭಾಗದ ಜೆ.ಸಿ.ನಗರ, ಆರ್.ಟಿ.ನಗರ, ಹೆಬ್ಬಾಳ, ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ.
Breaking News in Kannada Live: ನನ್ನ ಪಕ್ಷದ ಬಗ್ಗೆ ಮಾತ್ರ ಕೇಳಿ, ಬೇರೆ ಪಕ್ಷಗಳ ಬಗ್ಗೆ ಕೇಳಬೇಡಿ
ನನ್ನ ಪಕ್ಷದ ಬಗ್ಗೆ ಮಾತ್ರ ಕೇಳಿ, ಬೇರೆ ಪಕ್ಷಗಳ ಬಗ್ಗೆ ಕೇಳಬೇಡಿ. ನಮ್ಮ ಪಕ್ಷ ಎಲ್ಲಾ ಸಮಾಜಗಳನ್ನು ಗೌರವಿಸುತ್ತದೆ. ಮೈತ್ರಿ ಬಗ್ಗೆ ಚರ್ಚೆ ಆಗಿದ್ದರೂ ಮೈತ್ರಿಯ ವಿಷಯವೇ ಬೇರೆ. ನಮ್ಮ ಪಕ್ಷದ ನಿಲುವುಗಳೇ ಬೇರೆ ಎಂದು ಮಾಜಿ ಸಿಎಂ H.D.ಕುಮಾರಸ್ವಾಮಿ ಹೇಳಿದ್ದಾರೆ.
Breaking News in Kannada Live: ರಾಜ್ಯದ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಬಲಾಢ್ಯ ಆಗಿರಬೇಕು
ಕಳೆದ 2 ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಕೆಟ್ಟದಾಗಿ ನಡೆದುಕೊಂಡಿದೆ. ರಾಜ್ಯದ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಬಲಾಢ್ಯ ಆಗಿರಬೇಕು. ಆ ನಿಟ್ಟಿನಲ್ಲಿ ನಾಳೆ ಚರ್ಚೆ ನಡೆಯಲಿದೆ ಎಂದು ಮಾಜಿ ಸಿಎಂ H.D.ಕುಮಾರಸ್ವಾಮಿ ಹೇಳಿದ್ದಾರೆ.
Breaking News in Kannada Live: ಜೆಡಿಎಸ್-ಬಿಜೆಪಿ ಮೈತ್ರಿ ವಿಚಾರ ಇನ್ನೂ ಚರ್ಚೆಯ ಹಂತದಲ್ಲಿದೆ
ಜೆಡಿಎಸ್-ಬಿಜೆಪಿ ಮೈತ್ರಿ ವಿಚಾರ ಇನ್ನೂ ಚರ್ಚೆಯ ಹಂತದಲ್ಲಿದೆ ಎಂದು ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಹೇಳಿದರು. ಲೋಕಸಭಾ ಚುನಾವಣೆಯಲ್ಲಿ ಮೈತ್ರಿಗೆ ಸಂಬಂಧಿಸಿದಂತೆ ಸಭೆ ಇದೆ. ಸಭೆಯಲ್ಲಿ ಚರ್ಚಿಸಿದ ನಂತರ ಇದರ ವಾಸ್ತವಾಂಶ ಹೊರಗೆ ಬರುತ್ತೆ. ಸೀಟು ಹೊಂದಾಣಿಕೆ ಬಗ್ಗೆ ಯಾವುದೇ ಚರ್ಚೆಗಳಾಗಿಲ್ಲ ಎಂದರು.
Breaking News in Kannada Live: ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಭೇಟಿಗೆ ಸಮಯ ನಿಗದಿ
ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಭೇಟಿಗೆ ನಾಳೆ ಬೆಳಗ್ಗೆ 10.30ಕ್ಕೆ ಸಮಯ ನಿಗದಿಯಾಗಿದೆ. ರಾತ್ರಿ 1 ಗಂಟೆಗೆ ಸಮಯ ನೀಡಿದರೂ ಭೇಟಿಯಾಗಲು ನಾವು ಸಿದ್ಧ. ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಇನ್ನೂ ಸಮಯ ನಿಗದಿಯಾಗಿಲ್ಲ ಎಂದು ದೆಹಲಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
Breaking News in Kannada Live: ಈಶ್ವರಪ್ಪ ಹೇಳಿಕೆಗೆ ಡಿಕೆ ಶಿವಕುಮಾರ್ ತಿರುಗೇಟು
ನನ್ನ ಬಗ್ಗೆ ಸುದ್ದಿಗೆ ಬಂದವರ, ನನ್ನ ವಿಚಾರಕ್ಕೆ ಬಂದವರ ಸೆಟ್ಲಮೆಂಟ್ ಆಗಿದೆ. ಕೆಲವರಿಗೆ ಒಬ್ಬೊಬ್ಬರಿಗೆ ಸೆಟ್ಲಮೆಂಟ್ ಆಗಿದೆ. ಈಶ್ವರಪ್ಪ ಎಲ್ಲಿದ್ದಾರೆ, ನಾನ್ ಎಲ್ಲಿದೀನಿ! ಅಸೆಂಬ್ಲಿಯಲ್ಲಿ ನನ್ನ ಅಪ್ಪನ ಮೀಟ್ ಮಾಡ್ತಿನಿ ಅಂದಿದ್ದರು. ಈಗ ಎಲ್ಲಿದ್ದಾರೆ, ರೆಸ್ಟ್ ಮಾಡ್ಲಿ ಎಂದು ಈಶ್ವರಪ್ಪ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.
Breaking News in Kannada Live: ಈಶ್ವರಪ್ಪಗೆ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ತಿರುಗೇಟು
ದೆಹಲಿ: 40% ಕಮಿಷನ್ ಕಳ್ಳ ಅನ್ನೋದಕ್ಕೆ ಈಶ್ವರಪ್ಪಗೆ ಟಿಕೆಟ್ ಕೊಡಲಿಲ್ಲ. ಮತ್ತೆ ಶಾಸಕರಾಗಿಲ್ಲ, ಹೀಗಾಗಿ ರೋಡ್ನಲ್ಲಿ ಕಳ್ಳತನ ಮಾಡುತ್ತಿದ್ದಾರೆ. ಈಶ್ವರಪ್ಪರನ್ನು ಆಸ್ಪತ್ರೆಗೆ ಸೇರಿಸಿ ಟ್ರೀಟ್ಮೆಂಟ್ ಕೊಡಿಸಬೇಕಿದೆ. ಹೀಗೆ ಮಾತನಾಡಿದರೆ ಯುವ ಕಾಂಗ್ರೆಸ್ ಫೀಲ್ಡ್ನಲ್ಲಿ ಉತ್ತರಕೊಡಲಿದೆ. ಮುಂದಿನ ದಿನಗಳಲ್ಲಿ ಈಶ್ವರಪ್ಪಗೆ ಫೀಲ್ಡ್ನಲ್ಲಿ ಉತ್ತರ ಕೊಡುತ್ತೇವೆ ಎಂದು ಈಶ್ವರಪ್ಪಗೆ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ತಿರುಗೇಟು ನೀಡಿದ್ದಾರೆ.
Breaking News in Kannada Live: ಸ್ಮಾರ್ಟ್ ಸಿಟಿ ಕಾಮಗಾರಿಗೆ ಬೇಸತ್ತ ಶಿವಮೊಗ್ಗ ಜನ: ಕೆಬಿ ಪ್ರಸನ್ನ ಕುಮಾರ್
ಶಿವಮೊಗ್ಗ: ಶಿವಮೊಗ್ಗ ಜನರು ಸ್ಮಾರ್ಟ್ ಸಿಟಿ ಕಾಮಗಾರಿಗೆ ಬೇಸತ್ತು ಹೋಗಿದ್ದಾರೆ. ಶಿವಮೊಗ್ಗ ನಗರದಲ್ಲಿ ಸಾವಿರ ಕೋಟಿ ವೆಚ್ಚದಲ್ಲಿ ಸ್ಮಾರ್ಟ್ ಕಾಮಗಾರಿ ಆಗುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವರು ಇದರ ಬಗ್ಗೆ ತನಿಖೆ ನಡೆಸುವುದಕ್ಕೆ ಮುಂದಾಗಿದ್ದಾರೆ. ಆಡಿಟಿಂಗ್ ಮೂಲಕ ಸ್ಮಾರ್ಟ್ ಸಿಟಿ ಕಾಮಗಾರಿ ತನಿಖೆಯನ್ನು ನಡೆಸಬೇಕು. ಪೂರ್ಣ ಕಾಮಗಾರಿ ಮುಗಿಯುವವರೆಗೂ ಪಾಲಿಕೆಗೆ ಹಸ್ತಾಂತರ ಮಾಡಬಾರದು ಎಂದು ಶಿವಮೊಗ್ಗದಲ್ಲಿ ಮಾಜಿ ಶಾಸಕ ಕೆ.ಬಿ ಪ್ರಸನ್ನ ಕುಮಾರ್ ಹೇಳಿದರು.
Breaking News in Kannada Live: ಕಾವೇರಿ ವಿವಾದ: ಹೊಸ ಕಮಿಟಿ ಬಂದ ಬಳಿಕ ಚರ್ಚಿಸಿ ಧ್ವನಿ ಎತ್ತುತ್ತೇವೆ; ಫಿಲ್ಮ್ ಚೇಂಬರ್ ಅಧ್ಯಕ್ಷ
ಬೆಂಗಳೂರು: ಕಾವೇರಿ ನದಿ ವಿಚಾರವಾಗಿ ಕನ್ನಡ ಚಲನಚಿತ್ರ ನಟರು ಧ್ವನಿ ಎತ್ತುತ್ತಿಲ್ಲ ಎಂದು ಕನ್ನಡ ಪರ ಸಂಘಟನೆಗಳುಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮುಂದೆ ಪ್ರತಿಭಟನೆ ನಡೆಸಿದವು. ಈ ವಿಚಾರವಾಗಿ ಫಿಲ್ಮ್ ಚೇಂಬರ್ ಅಧ್ಯಕ್ಷರಾದ ಭಾ.ಮ.ಹರೀಶ್ ಮಾತನಾಡಿ ವಾಣಿಜ್ಯ ಮಂಡಳಿ ಮುಂದೇ ಬಂದು ಪ್ರತಿಭಟನೆ ಮಾಡುವುದು ನಮಗೂ ಗೊತ್ತಿರಲಿಲ್ಲ. ನೆಲ, ಜಲ, ಭಾಷೆ ವಿಷಯ ಬಂದಾಗ ಕನ್ನಡ ಇಂಡಸ್ಟ್ರಿ ಯಾವತ್ತು ಬೆಂಬಲವಾಗಿ ನಿಲ್ಲುತ್ತೆ. ಸದ್ಯ ಫಿಲ್ಮ್ ಚೇಂಬರ್ ಎಲೆಕ್ಷನ್ ಇರುವ ಕಾರಣಕ್ಕೆ ಈ ಬಗ್ಗೆ ಚರ್ಚೆ ಮಾಡಿಲ್ಲ. ಹೊಸ ಕಮಿಟಿ ಬಂದ ಬಳಿಕ ಚರ್ಚೆ ಮಾಡಿ ಧ್ವನಿ ಎತ್ತುತ್ತೇವೆ ಎಂದು ಹೇಳಿದರು.
Breaking News in Kannada Live: ಸೆಪ್ಟೆಂಬರ್ 22 ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಂಪುಟ ಸಭೆ
ಸೆಪ್ಟೆಂಬರ್ 22ರ ಶುಕ್ರವಾರ ಸಂಜೆ 6 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಂಪುಟ ಸಭೆ ನಡೆಯಲಿದೆ.
Breaking News in Kannada Live: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮುಂದೆ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮುಂದೆ ಕನ್ನಡಪರ ಸಂಘಟನೆಗಗಳು ಹಾಗೂ ಕನ್ನಡಿಗರ ರಕ್ಷಣಾ ವೇದಿಕೆ ಪ್ರತಿಭಟನೆ ಮಾಡುತ್ತಿವೆ. ಕಾವೇರಿಯ ಬಗ್ಗೆ ಧ್ವನಿ ಎತ್ತದ ಕನ್ನಡ ಚಲನಚಿತ್ರ ನಟರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುತ್ತಿದೆ. ಕರ್ನಾಟಕದಲ್ಲಿ ರೈತರು ಸಂಕಷ್ಟದಲ್ಲಿ ಇದ್ದಾರೆ. ಕಾವೇರಿ ನೀರು ಬಗ್ಗೆ ಕನ್ನಡ ಚಲನಚಿತ್ರ ನಟರು ಧ್ವನಿ ಎತ್ತಿಲ್ಲ. ನಮ್ಮ ನಾಡಿಗೆ ಆಗುತ್ತಿರುವ ಅನ್ಯಾಯವನ್ನ ನೋಡಿಕೊಂಡು ಸುಮ್ಮನೆ ಕುಳಿತಿರುವ ಚಲನಚಿತ್ರ ನಟರ ವಿರುದ್ಧ ದಿಕ್ಕಾರ ಎಂದು ಸಂಘಟನೆಗಳು ಕೂಗುತ್ತಿವೆ.
Breaking News in Kannada Live: ಕಾವೇರಿ ವಿವಾದ: ನದಿಯಲ್ಲಿ ನೀರು ಇಲ್ಲವೆಂದು ಸೆ.21ರಂದು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಕೆ; ಸಿಎಂ
ಸಭೆಯಲ್ಲಿ ಎಲ್ಲ ಪಕ್ಷದ ಸಂಸದರು, ಕೇಂದ್ರ ಸಚಿವರು ಭಾಗಿಯಾಗಿದ್ದರು. ಅನ್ಯ ಕೆಲಸ ಹಿನ್ನೆಲೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಭೆಗೆ ಬಂದಿರಲಿಲ್ಲ. ರಾಜ್ಯದಲ್ಲಿ ಮಳೆ ಕೊರತೆಯಿಂದ ಡ್ಯಾಮ್ಗಳಲ್ಲಿ ನೀರು ಇಲ್ಲ. 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿದ್ದೇವೆ. 123 ವರ್ಷಗಳಲ್ಲಿ ಎಂದೂ ಇಷ್ಟು ಮಳೆ ಕೊರತೆ ಆಗಿರಲಿಲ್ಲ. ಕಾವೇರಿ ನೀರಿನ ಬಗ್ಗೆ ಹಿಂದೆ ಸುಪ್ರೀಂಕೋರ್ಟ್ ಆದೇಶ ಇದೆ. ರಾಜ್ಯದ ಕಾವೇರಿ ನದಿ ನೀರು ವಿಚಾರದಲ್ಲಿ ಸಂಕಷ್ಟ ಸೂತ್ರ ಅಗತ್ಯ. ಸಂಕಷ್ಟದ ಪರಿಸ್ಥಿತಿಯಲ್ಲಿ ಎಷ್ಟು ನೀರು ಬಿಡಬೇಕಿಂದು ತಿಳಿಸಿಲ್ಲ. ಸಂಕಷ್ಟದ ಸೂತ್ರ ಏನು ಅನ್ನೋದು ತಯಾರಿಯಾಗಿಲ್ಲ. ಮಳೆ ಸಾಮಾನ್ಯವಾಗಿದ್ದರೆ 108 ಟಿಎಂಸಿ ನಾವು ಕೊಡಬೇಕಿತ್ತು. ಮುಂದೆ ಮಳೆ ಬರುವ ಆಶಾದಾಯಕವಾಗಿಲ್ಲ. ಮಳೆ ಕೊರತೆಯಿಂದ ನಾವು ಕಷ್ಟದಲ್ಲಿ ಇದ್ದೇವೆ. ಎರಡೂ ರಾಜ್ಯಗಳ ನಾಯಕರನ್ನು ಪ್ರಧಾನಿ ಕರೆದು ಮಾತಾಡಬೇಕು. ಕೇಂದ್ರ ಜಲಸಂಪನ್ಮೂಲ ಸಚಿವರ ಭೇಟಿಗೆ ಸಮಯ ಕೇಳಲಾಗಿದೆ. ನಾಳೆ ಸುಪ್ರೀಂಕೋರ್ಟ್ಗೆ ನೀರು ಇಲ್ಲವೆಂದು ಅರ್ಜಿ ಹಾಕುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Breaking News in Kannada Live: ಕಾವೇರಿ ನೀರು ವಿಚಾರವಾಗಿ ಒಗ್ಗಟ್ಟು ಪ್ರದರ್ಶನಕ್ಕೆ ನಿರ್ಧರಿಸಲಾಗಿದೆ: ಡಿಕೆ ಶಿವಕುಮಾರ್
ನವದೆಹಲಿ: ಕಾವೇರಿ ನೀರು ವಿಚಾರವಾಗಿ ಒಗ್ಗಟ್ಟು ಪ್ರದರ್ಶನಕ್ಕೆ ನಿರ್ಧರಿಸಲಾಗಿದೆ. ಸಭೆಯಲ್ಲಿ ಎಲ್ಲ ಪಕ್ಷದ ಸಂಸದರು, ಜನಪ್ರತಿನಿಧಿಗಳು ಭಾಗಿಯಾಗಿದ್ದರು. ಎಲ್ಲರೂ ಒಗ್ಗಟ್ಟು ಪ್ರದರ್ಶಿಸಲು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ದೆಹಲಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
Breaking News in Kannada Live: ಕಾವೇರಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ; ಸರ್ಕಾರಕ್ಕೆ ಜೋಶಿ ತಾಕೀತು
ನವದೆಹಲಿ: ಕಾವೇರಿ ವಿವಾದದ ಕುರಿತು ದೆಹಲಿಯಲ್ಲಿ ನಡೆದ ರಾಜ್ಯ ಜನಪ್ರತಿನಿಧಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದರು. ಸಭೆ ಬಳಿಕ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕರ್ನಾಟಕದ ಹಿತಕಾಪಾಡುವಲ್ಲಿ ನಮ್ಮ ಬದ್ಧತೆ ಇದೆ. ಮೊದಲು ನೀರು ಹರಿಸಿ ಈಗ ಸಭೆ ಮಾಡುವುದು. ಮೈತ್ರಿ ಗಟ್ಟಿಗೊಳಿಸಲು ನೀರು ಹರಿಸಲಾಗಿದೆ. ಈಗ ಕೇಂದ್ರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಆಗಬಾರದು ಎಂದು ಹೇಳಿದ್ದೇನೆ. ನೀವು ಮೊದಲು ನೀರು ಹರಿಸುವಾಗ ಯಾರನ್ನು ಕೇಳಿದ್ರಿ ? ಆಗ ನಿಮಗೆ ಸಂಸದರ ನೆನಪು ಆಗಲಿಲ್ವಾ ? ಈ ವಿಷಯದಲ್ಲಿ ರಾಜಕೀಯ ಮಾಡಬೇಡಿ ಅಂತ ಸರ್ಕಾರಕ್ಕೆ ಹೇಳಿದ್ದೇನೆ ಎಂದು ಹೇಳಿದರು.
Breaking News in Kannada Live: ಎ3 ಹಾಲಶ್ರೀಯನ್ನ ನ್ಯಾಯಾಲಯಕ್ಕೆ ಹಾಜರುಪಡಿಸಲಿರುವ ಸಿಸಿಬಿ
ಚೈತ್ರಾ ಕುಂದಾಪುರ ಆ್ಯಂಡ್ ಗ್ಯಾಂಗ್ನಿಂದ 5 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ3 ಹಾಲಶ್ರೀ ಸ್ವಾಮಿಜಿಯನ್ನು ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಪ್ರಕರಣ ಸಂಬಂಧ ಹೆಚ್ಚಿನ ವಿಚಾರಣೆ, ಮಹಜರು ಪ್ರಕ್ರಿಯೆ ಹಿನ್ನೆಲೆಯಲ್ಲಿ ಹಾಲಶ್ರೀ ಸ್ವಾಮೀಜಿಯನ್ನು ವಶಕ್ಕೆ ನೀಡುವಂತೆ ಮನವಿ ಸಿಸಿಬಿ ಪೊಲೀಸರು ಮಾಡಲಿದ್ದಾರೆ. ಬಂಧಿಸಿದ್ದ ಸಿಸಿಬಿ ಪೊಲೀಸರು
Breaking News in Kannada Live: ಕಾವೇರಿ ಹೋರಾಟಕ್ಕೆ ಬೆಂಬಲ ನೀಡದ ಸ್ಯಾಂಡಲ್ವುಡ್ ನಟರ ವಿರುದ್ಧ ಆಕ್ರೋಶ
ಮಂಡ್ಯ: ಕಾವೇರಿ ಹೋರಾಟಕ್ಕೆ ಬೆಂಬಲ ಕನ್ನಡ ಚಿತ್ರರಂಗದ ನಟರು ಬೆಂಬಲ ನೀಡದ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ನಟರ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಧಿಕ್ಕಾರದ ಪೋಸ್ಟ್ ಹಾಕುವ ಮೂಲಕ ಪೋಸ್ಟ್ ಹಾಕಲಾಗುತ್ತಿದೆ. ಸೋಷಿಯಲ್ ಮೀಡಿಯಾ ಮೂಲಕ ಅನ್ನದಾತರು ಕಾವೇರಿ ಬಗ್ಗೆ ಧ್ವನಿ ಎತ್ತದ ಕನ್ನಡ ಚಲನಚಿತ್ರ ನಟರಿಗೆ ಧಿಕ್ಕಾರ ಧಿಕ್ಕಾರ ಎಂದು ಪೋಸ್ಟ್ ಹಾಕಿದ್ದಾರೆ. ಫೇಸ್ಬುಕ್, ವಾಟ್ಸ್ ಆಪ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಲಾಗಿದೆ. ಪ್ರಮುಖ ನಟರ ಫೋಟೋ ಹಾಕಿ, ನಟರ ಬಾಯಿಗೆ ಪಟ್ಟಿ ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Breaking News in Kannada Live: ಕಾವೇರಿ ನೀರು ವಿವಾದ: ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಸಭೆಯಲ್ಲಿ ಚಿಂತನೆ
ಕಾವೇರಿ ನದಿ ನೀರು ವಿವಾದದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ನವದೆಹಲಿ ನಡೆಯುತ್ತಿರುವ ಸಭೆಯಲ್ಲಿ ಕಾವೇರಿ ನದಿ ನೀರು ಕುರಿತು ಮುಂದಿನ ಕಾನೂನು ಪ್ರಕ್ರಿಯೆ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಜೊತೆಗೆ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸುವ ಬಗ್ಗೆ ಸಮಾಲೋಚನೆ ನಡೆಸಲಾಗುತ್ತಿದೆ. ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿರುವ ಯೋಜನೆಗಳ ಅನುದಾನ ವಿಚಾರ, ಬರ ಪರಿಹಾರ ಸೇರಿದಂತೆ ಹಲವು ವಿಚಾರಗಳ ಬಗ್ಗೆಯೂ ಪ್ರಸ್ತಾವಾಗಿದೆ.
Breaking News in Kannada Live: ಕಾವೇರಿ ನೀರು ವಿವಾದ; ರಾಜ್ಯದ ಜನಪ್ರತಿನಿಧಿಗಳ ಜೊತೆ ದೆಹಲಿಯಲ್ಲಿ ಸಿಎಂ ಸಭೆ ಆರಂಭ
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಿಡ್ಲೂಎಮ್ಎ ಆದೇಶದ ವಿಚಾರವಾಗಿ ರಾಜ್ಯದ ಜನಪ್ರತಿನಿಧಿಗಳ ಜೊತೆ ದೆಹಲಿಯ ಖಾಸಗಿ ಹೋಟೆಲ್ನಲ್ಲಿ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಚಲುವರಾಯಸ್ವಾಮಿ, ಸಂಸದರಾದ ಗದ್ದಿಗೌಡರ್, ಲೆಹರ್ ಸಿಂಗ್, ಬಚ್ಚೇಗೌಡ, ಸುಮಲತಾ ಅಂಬರೀಶ್, ಕೇಂದ್ರ ಸಚಿವರಾದ ನಾರಾಯಣಸ್ವಾಮಿ, ಶೋಭಾ ಕರಂದ್ಲಾಜೆ, ರಾಜ್ಯಸಭಾ ಸದಸ್ಯರಾದ ವೀರೇಂದ್ರ ಹೆಗ್ಗಡೆ, ಜಗ್ಗೇಶ್, ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ್ ಹುಕ್ಕೇರಿ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.
Breaking News in Kannada Live: ಕಾವೇರಿ ನೀರು ವಿವಾದ; ಸಿಎಂ ಜೊತೆ ರಾಜ್ಯನಾಯಕರ ಸಭೆ
ನವದೆಹಲಿ: ಸಿಡಬ್ಲೂಎಮ್ಎ ಆದೇಶ ವಿಚಾರವಾಗಿ ರಾಜ್ಯದ ಜನಪ್ರತಿನಿಧಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಜ್ಮಾನ್ ಸಿಂಗ್ ಹೋಟೆಲ್ನಲ್ಲಿ ಸಭೆ ನಡೆಸಲಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಚಲುವರಾಯಸ್ವಾಮಿ, ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ್ ಹುಕ್ಕೇರಿ, ಸಂಸದರಾದ ಗದ್ದಿಗೌಡರ್, ಲೆಹರ್ ಸಿಂಗ್, ಬಚ್ಚೇಗೌಡ, ಸುಮಲತಾ ಅಂಬರೀಶ್, ಕೇಂದ್ರ ಸಚಿವರಾದ ನಾರಾಯಣಸ್ವಾಮಿ, ಶೋಭಾ ಕರಂದ್ಲಾಜೆ ಆಗಮಿಸಿದ್ದಾರೆ.
Breaking News in Kannada Live: ಡೆಂಘಿ ಜ್ಚರ ಏರಿಕೆ; ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ
ರಾಜ್ಯದಲ್ಲಿ ನಿರಂತರ ಡೆಂಘಿ ಜ್ಚರ ಏರಿಕೆ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ಗೈಡ್ ಲೈನ್ಸ್ ಬಿಡಲಾಗಿದೆ.
Breaking News in Kannada Live: ಕೆಆರ್ಎಸ್ ಜಲಾಶಯದಿಂದ ತಮಿಳುನಾಡಿಗೆ ಕದ್ದು ಮುಚ್ಚಿ ನೀರುಬಿಟ್ಟ ಸರ್ಕಾರ?
ಮಂಡ್ಯ: ಸರ್ಕಾರ ತಮಿಳುನಾಡಿಗೆ ಕೆ.ಆರ್.ಎಸ್ ಜಲಾಶಯದಿಂದ ಕದ್ದು ಮುಚ್ಚಿ ಹರಿಸಲಾಗುತ್ತಿದಿಯಾ ಎಂಬ ಅನುಮಾನ ಶುರುವಾಗಿದೆ. ಹೌದು ಅಧಿಕಾರಿಗಳು ಕೊಟ್ಟಿರುವ ಅಂಕಿ ಅಂಶ. ಪ್ರತಿದಿನ ನದಿಗೆ 2 ಸಾವಿರ ಕ್ಯೂಸೆಕ್ ನೀರು ಹರಿಯುತ್ತಿದೆ. ಇದೇ ರೀತಿ ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ ಇನ್ನ 10 ದಿನಗಳ ಕಾಲ ಹರಿಸಿದರೆ 7 ಟಿಎಂಸಿಯಷ್ಟು ನೀರು ಜಲಾಶಯದಲ್ಲಿ ಖಾಲಿಯಾಗಲಿದೆ. ಸದ್ಯ ಜಲಾಶಯದಲ್ಲಿ 20 ಟಿಎಂಸಿ ನೀರು ಮಾತ್ರ ಸಂಗ್ರಹವಾಗಿದೆ. ಕೆಆರ್ಎಸ್ ಜಲಾಶಯದ ಗರಿಷ್ಠಮಟ್ಟ 124.80 ಅಡಿ ಇದ್ದು, ಇಂದಿನ ಮಟ್ಟ 97.08 ಅಡಿ ಇದೆ. ಒಳಹರಿವು 6016 ಕ್ಯೂಸೆಕ್ ಇದೆ. ಹೊರಹರಿವು 5735 ಕ್ಯೂಸೆಕ್ ಇದೆ.
Breaking News in Kannada Live: ಇಂದು ದೆಹಲಿಯಲ್ಲಿ ಕಾನೂನು ತಜ್ಞರ ಜೊತೆ ಸಿಎಂ ಸಿದ್ದರಾಮಯ್ಯ ಸಭೆ
ನವದೆಹಲಿ: ನಿತ್ಯ 5 ಸಾವಿರ ಕ್ಯುಸೆಕ್ ನೀರನ್ನು ತಮಿಳುನಾಡಿಗೆ ಬಿಡಬೇಕು ಎಂಬ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಇಂದು (ಸೆ.21) ದೆಹಲಿಯಲ್ಲಿ ಕಾನೂನು ತಜ್ಞರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ನಡೆಸಲಿದ್ದಾರೆ. ದೆಹಲಿಯ ತಾಜ್ ಮಾನ್ ಸಿಂಗ್ ಹೋಟೆಲ್ನಲ್ಲಿ ನಡೆಯುವ ಸಭೆಯಲ್ಲಿಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜ್ಯದ ಸಂಸದರು, ಕೇಂದ್ರ ಸಚಿವರು, ರಾಜ್ಯಸಭಾ ಸದಸ್ಯರು ಭಾಗಿಯಾಗಿಯಾಗಲಿದ್ದಾರೆ.
Published On - Sep 20,2023 8:09 AM