ಸರ್ಕಾರಿ ಶಾಲೆಗಳಲ್ಲಿಯೂ ಆರಂಭವಾಗಲಿವೆ ಎಲ್​​ಕೆಜಿ, ಯುಕೆಜಿ; 262 ಶಾಲೆಗಳಲ್ಲಿ ಆರಂಭಕ್ಕೆ ಸಿಕ್ತು ಗ್ರೀನ್ ಸಿಗ್ನಲ್

Karnataka govt schools to start LKG, UKG; ಪ್ರಸ್ತುತ, 276 ಕರ್ನಾಟಕ ಪಬ್ಲಿಕ್ ಸ್ಕೂಲ್​ಗಳು ಸೇರಿದಂತೆ ಸುಮಾರು 900 ಶಾಲೆಗಳು ಎಲ್‌ಕೆಜಿ ಹಾಗೂ ಯುಕೆಜಿ ಒಳಗೊಂಡಿವೆ. ಶಾಲಾ ಅಭಿವೃದ್ಧಿ ಮೇಲ್ವಿಚಾರಣಾ ಸಮಿತಿಗಳು (ಎಸ್‌ಡಿಎಂಸಿ) 664 ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ನಡೆಸುತ್ತಿದೆ.

ಸರ್ಕಾರಿ ಶಾಲೆಗಳಲ್ಲಿಯೂ ಆರಂಭವಾಗಲಿವೆ ಎಲ್​​ಕೆಜಿ, ಯುಕೆಜಿ; 262 ಶಾಲೆಗಳಲ್ಲಿ ಆರಂಭಕ್ಕೆ ಸಿಕ್ತು ಗ್ರೀನ್ ಸಿಗ್ನಲ್
ಸರ್ಕಾರಿ ಶಾಲೆ (ಸಾಂದರ್ಭಿಕ ಚಿತ್ರ)
Follow us
Ganapathi Sharma
|

Updated on: Aug 23, 2023 | 3:37 PM

ಬೆಂಗಳೂರು: ಕರ್ನಾಟಕದ 262 ಸರ್ಕಾರಿ ಶಾಲೆಗಳು (Government Schools) ಈ ವರ್ಷದ ಸೆಪ್ಟೆಂಬರ್‌ನಿಂದ 4-5 ವಯೋಮಾನದ ಮಕ್ಕಳಿಗಾಗಿ ಪೂರ್ವ ಪ್ರಾಥಮಿಕ ವಿಭಾಗಗಳನ್ನು ಪ್ರಾರಂಭಿಸಲಿವೆ ಎಂದು ವರದಿಯಾಗಿದೆ. ಶಾಲೆಗಳಲ್ಲಿ ಎಲ್​ಕೆಜಿ ಹಾಗೂ ಯುಕೆಜಿಗೆ (LKG / UKG) ಪೋಷಕರಿಂದ ಬೇಡಿಕೆಯು ಹೆಚ್ಚಾಗಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ, ಅಂಗನವಾಡಿಗಳು ಮಕ್ಕಳ ಶೈಕ್ಷಣಿಕ ಅಗತ್ಯಗಳನ್ನು ಪೂರೈಸುತ್ತಿಲ್ಲ ಎಂಬ ಆರೋಪಗಳಿವೆ. ಇವುಗಳ ಮಧ್ಯೆಯೇ ಸರ್ಕಾರಿ ಶಾಲೆಗಳಲ್ಲಿ ಎಲ್​ಕೆಜಿ, ಯುಕೆಜಿ ಆರಂಭಿಸುವ ಕುರಿತು ವರದಿಯಾಗಿದೆ. ಪ್ರಾಜೆಕ್ಟ್-ಅನುಮೋದನಾ ಮಂಡಳಿಯು ಬೆಂಗಳೂರು ದಕ್ಷಿಣದಲ್ಲಿ 10 ಮತ್ತು ಬೆಂಗಳೂರು ಉತ್ತರದಲ್ಲಿ ನಾಲ್ಕು ಸೇರಿದಂತೆ 262 ಶಾಲೆಗಳಲ್ಲಿ ಎಲ್‌ಕೆಜಿ ಹಾಗೂ ಯುಕೆಜಿ ಆರಂಭಿಸಲು ಸಮ್ಮತಿ ನೀಡಿದೆ.

ಪ್ರಸ್ತುತ, 276 ಕರ್ನಾಟಕ ಪಬ್ಲಿಕ್ ಸ್ಕೂಲ್​ಗಳು ಸೇರಿದಂತೆ ಸುಮಾರು 900 ಶಾಲೆಗಳು ಎಲ್‌ಕೆಜಿ ಹಾಗೂ ಯುಕೆಜಿ ಒಳಗೊಂಡಿವೆ. ಶಾಲಾ ಅಭಿವೃದ್ಧಿ ಮೇಲ್ವಿಚಾರಣಾ ಸಮಿತಿಗಳು (ಎಸ್‌ಡಿಎಂಸಿ) 664 ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ನಡೆಸುತ್ತಿದೆ. ಪ್ರತಿ ತರಗತಿಯು ಕನಿಷ್ಠ 20 ಮತ್ತು ಗರಿಷ್ಠ 30 ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳುವ ಸಾಮರ್ಥ್ಯ ಹೊಂದಿರಬೇಕು. ಎಸ್‌ಡಿಎಂಸಿಗಳು 10 ತಿಂಗಳ ಅವಧಿಗೆ ಶಿಕ್ಷಕರನ್ನು ಮತ್ತು ಆಯಾಗಳನ್ನು ತಿಂಗಳಿಗೆ ಕ್ರಮವಾಗಿ ರೂ 7,000 ಮತ್ತು ರೂ 5,000 ಪಾವತಿಸಿ ನೇಮಕ ಮಾಡುತ್ತಿವೆ ಎಂದು ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ಅಂಗನವಾಡಿಗಳು ಲಭ್ಯವಿದ್ದರೂ, ಅವುಗಳಲ್ಲಿ ಶಿಕ್ಷಣಕ್ಕೆ ಸಂಬಂಧಿಸಿ ಅನೇಕ ಕೊರತೆಗಳಿವೆ. ಇಲ್ಲಿ, ನಾವು ತರಬೇತಿ ಪಡೆದ ಶಿಕ್ಷಕರು, ವೈಜ್ಞಾನಿಕ ಪಠ್ಯಕ್ರಮವನ್ನು ವಿನ್ಯಾಸಗೊಳಿಸಿದ್ದೇವೆ ಮತ್ತು ಉತ್ತಮ ಮೂಲಸೌಕರ್ಯವನ್ನು ಹೊಂದಿದ್ದೇವೆ, ಇದು ಪೋಷಕರಿಗೆ ದೊಡ್ಡ ಆಕರ್ಷಣೆಯಾಗಿದೆ ಎಂದು ಶಿಕ್ಷಣಾಧಿಕಾರಿ ತಿಳಿಸಿರುವುದಾಗಿ ವರದಿ ಉಲ್ಲೇಖಿಸಿದೆ.

ಇದನ್ನೂ ಓದಿ: ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆಗೆ ಚಿಂತನೆ; ಸಿಎಂ ಸಿದ್ದರಾಮಯ್ಯ

ಇದು ಸ್ವಾಗತಾರ್ಹ ಕ್ರಮವಾಗಿದೆ. ದುಡಿಯುವ ಮಹಿಳೆಯರಿಗೆ, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ, ಮಕ್ಕಳನ್ನು ಬಿಡಲು ಸಂಘಟಿತ ಸ್ಥಳಗಳಿಲ್ಲದವರಿಗೆ ಇದು ಅತ್ಯಂತ ಮುಖ್ಯವಾಗಿದೆ. 2.5-6 ವರ್ಷ ವಯೋಮಾನ ಕೂಡ ಮಕ್ಕಳ ಬೆಳವಣಿಗೆಯಲ್ಲಿ ಪ್ರಮುಖವಾಗಿದೆ. ಈ ಶಿಕ್ಷಕರು ಎಷ್ಟು ತರಬೇತಿ ಪಡೆದಿರುತ್ತಾರೆ ಮತ್ತು ಅವರ ಶೈಕ್ಷಣಿಕ ಅರ್ಹತೆ ಏನು ಎಂಬುದು ಸದ್ಯದ ಪ್ರಶ್ನೆಯಾಗಿದೆ ಎಂದು ಕರ್ನಾಟಕ ಪ್ರಿಸ್ಕೂಲ್ ಕೌನ್ಸಿಲ್ ಕಾರ್ಯದರ್ಶಿ ಪೃಥ್ವಿ ಬನವಾಸಿ ಅವರು ಹೇಳಿರುವುದನ್ನು ‘ಟೈಮ್ಸ್ ಆಫ್ ಇಂಡಿಯಾ’ ವರದಿ ಉಲ್ಲೇಖಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ