AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lockdown Relief Fund: ಅಸಂಘಟಿತ ಕಾರ್ಮಿಕರು, ರಿಕ್ಷಾ ಡ್ರೈವರ್ಸ್, ಹೂ ಬೆಳೆಗಾರರಿಗೆ ಆರ್ಥಿಕ ಸಹಾಯ ಘೋಷಿಸಿದ ಸಿಎಂ ಯಡಿಯೂರಪ್ಪ

CM Yediyurappa Announcement: ರೈತರು, ಸ್ವಸಹಾಯ ಸಂಘ, ಸೊಸೈಟಿ ಸಾಲ ಮರು ಪಾವತಿ ದಿನಾಂಕ ಜುಲೈ ಅಂತ್ಯದವರೆಗೆ ವಿಸ್ತರಣೆ ಮಾಡಲಾಗುವುದು. ಪಿಎಂಜಿಕೆವೈ ಯೋಜನೆಯಡಿ ಬಿಪಿಎಲ್ ಅಂತ್ಯೋದಯ ಕಾರ್ಡ್  ಗೆ 5 ಕೆಜಿ ಅಕ್ಕಿ ನೀಡಲಾಗುವುದು.

Lockdown Relief Fund: ಅಸಂಘಟಿತ ಕಾರ್ಮಿಕರು, ರಿಕ್ಷಾ ಡ್ರೈವರ್ಸ್, ಹೂ ಬೆಳೆಗಾರರಿಗೆ ಆರ್ಥಿಕ ಸಹಾಯ ಘೋಷಿಸಿದ ಸಿಎಂ ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ರಶ್ಮಿ ಕಲ್ಲಕಟ್ಟ
|

Updated on:May 19, 2021 | 12:15 PM

Share

ಬೆಂಗಳೂರು:  ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಆರ್ಥಿಕ ಪ್ಯಾಕೇಜ್ ಘೋಷಿಸಿದ್ದಾರೆ. ₹1,250 ಕೋಟಿಗೂ ಹೆಚ್ಚು ಪ್ಯಾಕೇಜ್ ಘೋಷಣೆಯಲ್ಲಿ ಹೂವು ಬೆಳೆಗಾರರಿಗೆ ಹೆಕ್ಟೇರ್‌ಗೆ 10 ಸಾವಿರ ಸಹಾಯಧನ, ಇದಕ್ಕೆ 70 ಕೋಟಿ ರೂಪಾಯಿ ಖರ್ಚಾಗಲಿದೆ. ನೋಂದಣಿ ಮಾಡಿಸಿದ ಆಟೋ ಚಾಲಕರಿಗೆ ಆಟೋ, ಮ್ಯಾಕ್ಸಿ ಚಾಲಕರಿಗೆ 3 ಸಾವಿರ ರೂಪಾಯಿ, ಅಸಂಘಟಿತ ಕಾರ್ಮಿಕರಿಗೆ ತಲಾ 2 ಸಾವಿರ ರೂಪಾಯಿ ನೀಡಲಾಗುವುದು, ಇದಕ್ಕಾಗಿ 61 ಕೋಟಿ ರೂಪಾಯಿ ಖರ್ಚಾಗಲಿದೆ ಹಾಗೂ ಕಲಾವಿದರು, ಕಲಾ ತಂಡಗಳಿಗೆ ತಲಾ 3 ಸಾವಿರ ರೂ.ನಂತೆ 16,100 ಜನರಿಗೆ ನೀಡಲಾಗುವುದು  ಎಂದಿದ್ದಾರೆ.  ಇದಕ್ಕೆ 4 ಕೋಟಿ ರೂಪಾಯಿ ಖರ್ಚಾಗಲಿದೆ. ಸಾಲ ಮರು ಪಾವತಿ ದಿನಾಂಕ ಜುಲೈ ಅಂತ್ಯದವರೆಗೆ ವಿಸ್ತರಣೆ ಮಾಡುವುದಾಗಿ  ಯಡಿಯೂರಪ್ಪ ಹೇಳಿದ್ದಾರೆ.

ರೈತರು, ಸ್ವಸಹಾಯ ಸಂಘ, ಸೊಸೈಟಿ ಸಾಲ ಮರು ಪಾವತಿ ದಿನಾಂಕ ಜುಲೈ ಅಂತ್ಯದವರೆಗೆ ವಿಸ್ತರಣೆ ಮಾಡಲಾಗುವುದು. ಪಿಎಂಜಿಕೆವೈ ಯೋಜನೆಯಡಿ ಬಿಪಿಎಲ್ ಅಂತ್ಯೋದಯ ಕಾರ್ಡ್  ಗೆ 5 ಕೆಜಿ ಅಕ್ಕಿ ನೀಡಲಾಗುವುದು. ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿರುವವರಿಗೂ ಎರಡು ತಿಂಗಳು ಬಿಪಿಎಲ್ ಉಚಿತ ಅಕ್ಕಿ ಆಹಾರ ಧಾನ್ಯ ನೀಡಲಿದ್ದೇವೆ. ಎಪಿಎಲ್ ಕಾರ್ಡ್ಗೆ ಕೆಜಿಗೆ 15 ರೂ ನಂತೆ ಅಕ್ಕಿ ಕೊಡುತ್ತೇವೆ.

ಶಿಕ್ಷಕರು, ಲೈನ್ ಮ್ಯಾನ್, ಗ್ಯಾಸ್ ಸಿಲಿಂಡರ್ ಡೆಲಿವರಿ ಬಾಯ್ಸ್ ಇವರನ್ನೆಲ್ಲಾ ಫ್ರಂಟ್ ಲೈನ್ ವಾರಿಯರ್ಸ್‌ ಎಂದು ಪರಿಗಣಿಸಿ ಲಸಿಕೆ ನೀಡಲು ನಿರ್ಧಾರ ಮಾಡಲಾಗಿದೆ. ಸೋಂಕಿತ ರೋಗಿಗಳಿಗೆ ಸರ್ಕಾರದಿಂದ ನಿಗದಿತ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ  ಲಾಕ್‌ಡೌನ್ ಬಗ್ಗೆ ಮೇ 23ರಂದು ನಿರ್ಧಾರ ಮಾಡುತ್ತೇವೆ. ಲಾಕ್‌ಡೌನ್ ಮುಂದುವರಿಸುವ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದಿದ್ದಾರೆ.   ಫಲಾನುಭವಿಗಳಿಗೆ ಸಹಾಯಧನ ನೀಡಲು ಶಕ್ತಿಮೀರಿ ಕೆಲಸ ಮಾಡಲಿದ್ದು,ಎಲ್ಲ ಫಲಾನುಭವಿಗಳಿಗೆ ಸಹಾಯಧನ ಸಿಗುತ್ತದ ಎಂದಿದ್ದಾರೆ.

ವಿಶೇಷ ಆರ್ಥಿಕ ಪ್ಯಾಕೇಜ್‌ಗೆ ಹಣಕಾಸು ಸಮಸ್ಯೆ ಇಲ್ಲ. ತಕ್ಷಣವೇ ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು ಎಂದು ಸಿಎಂ ಭರವಸೆ ನೀಡಿದ್ದಾರೆ.

ಶಿಕ್ಷಕರು, ಲೈನ್‌ಮ್ಯಾನ್, ಸಿಲಿಂಡರ್ ಡೆಲಿವರಿ ಬಾಯ್ಸ್  ಅವರನ್ನು  ಫ್ರಂಟ್‌ಲೈನ್ ವಾರಿಯರ್ಸ್‌ ಎಂದು ಪರಿಗಣಿಸಲಾಗಿದೆ.ಇವರಿಗೆ ಕೊವಿಡ್ ಲಸಿಕೆ ನೀಡುವುದಕ್ಕೆ ನಿರ್ಧರಿಸಿದ್ದೇವೆ.

ಆರ್ಥಿಕ ಪ್ಯಾಕೇಜ್ ಸಿಎಂ ಬಿ.ಎಸ್.ಯಡಿಯೂರಪ್ಪ1,250 ಕೋಟಿಗೂ ಹೆಚ್ಚು ಮೊತ್ತದ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ವಿವರಗಳು ಇಂತಿವೆ

ಹೂವು ಬೆಳೆಗಾರರಿಗೆ ಹೆಕ್ಟೇರ್‌ಗೆ 10 ಸಾವಿರ ರೂಪಾಯಿ, ಇದರಿಂದ 20,000 ಹೂವು ಬೆಳೆಗಾರರಿಗೆ ಸಹಾಯವಾಗುತ್ತದೆ. ಹಣ್ಣು, ತರಕಾರಿ ಬೆಳೆಗಾರರಿಗೆ ಹೆಕ್ಟೇರ್‌ಗೆ 10 ಸಾವಿರ ರೂ., ಇದರಿಂದ ಸುಮಾರು 69 ಸಾವಿರ ರೈತರಿಗೆ ಸಹಾಯವಾಗುತ್ತದೆ ಆಟೋ, ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ-3 ಸಾವಿರ ರೂ., ಸುಮಾರು 2.10 ಲಕ್ಷ ಚಾಲಕರಿಗೆ ಸಹಾಯಧನ ಸಿಗುತ್ತದೆ. ಕಟ್ಟಡ ಕಾರ್ಮಿಕರಿಗೆ ತಲಾ 3 ಸಾವಿರ ರೂ. ನೀಡಲಾಗುವುದು. ಇದು ನೋಂದಣಿ ಮಾಡಿಸಿಕೊಂಡ ಕಾರ್ಮಿಕರಿಗೆ ಮಾತ್ರ ಹಣ. ಕರ್ನಾಟಕ ಕಟ್ಟಡ, ಇತರೆ ನಿರ್ಮಾಣ ಕಾರ್ಮಿಕರ, ಕಲ್ಯಾಣ ಮಂಡಳಿಯಲ್ಲಿ ನೋಂದಣಿ ಮಾಡಿಸಿಕೊಂಡಿರಬೇಕು. ಸವಿತಾ ಸಮಾಜದವರಿಗೆ 2 ಸಾವಿರ ರೂಪಾಯಿ ನೆರವು ಮಡಿವಾಳರಿಗೆ 2 ಸಾವಿರ ರೂಪಾಯಿ ನೆರವು.

ಹೂವು ಬೆಳೆಗಾರರಿಗೆ ಹೆಕ್ಟೇರ್‌ಗೆ ₹10 ಸಾವಿರ ಸಹಾಯಧನ. ಇದಕ್ಕೆ 70 ಕೋಟಿ ರೂಪಾಯಿ ಖರ್ಚಾಗಲಿದೆ ನೋಂದಣಿ ಮಾಡಿಸಿದ ಆಟೋ ಚಾಲಕರಿಗೆ 3 ಸಾವಿರ ರೂ.

ಅಸಂಘಟಿತ ವಲಯದ ಕಾರ್ಮಿಕರಿಗೆ ತಲಾ ₹2 ಸಾವಿರ.ಇದಕ್ಕಾಗಿ 61 ಕೋಟಿ ರೂಪಾಯಿ ಖರ್ಚಾಗಲಿದೆ ಕಲಾವಿದರು, ಕಲಾ ತಂಡಗಳಿಗೆ ತಲಾ 3 ಸಾವಿರ ರೂಪಾಯಿ. 16,100 ಜನರಿಗೆ 4 ಕೋಟಿ ರೂಪಾಯಿ ವೆಚ್ಚದಲ್ಲಿ ನೆರವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸಾಲ ಪಾವತಿ, ಸಾಲ ಮರುಪಾವತಿ ಅವಧಿ ಜುಲೈ 31ರವರೆಗೆ ವಿಸ್ತರಣೆ ಗರೀಬ್ ಕಲ್ಯಾಣ್ ಯೋಜನೆಯಡಿ ಪ್ರತಿ ತಿಂಗಳು 5 ಕೆಜಿ ಅಕ್ಕಿ, 30 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಈ ಯೋಜನೆ ಸಿಗಲಿದೆ. ಇದಕ್ಕಾಗಿ 180 ಕೋಟಿ ರೂಪಾಯಿ ಖರ್ಚಾಗಲಿದೆ.

ಬಿಬಿಎಂಪಿ ವ್ಯಾಪ್ತಿ, ನಗರ ಪ್ರದೇಶದಲ್ಲಿ ಉಚಿತ ಊಟ. ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಚಿತ ಊಟ ನೀಡಲಾಗುತ್ತಿದೆ. ಕೊರೊನಾ ರೋಗಿಗಳಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ

ಇದನ್ನೂ ಓದಿ: Lockdown Package: 2ನೇ ಹಂತದ ಲಾಕ್​ಡೌನ್ ಘೋಷಣೆ ವೇಳೆ ಸ್ವತಃ ಸಿಎಂ ಯಡಿಯೂರಪ್ಪರಿಂದಲೇ ಪ್ಯಾಕೇಜ್ ಘೋಷಣೆ; ಸಚಿವ ಆರ್ ಅಶೋಕ್

Published On - 12:00 pm, Wed, 19 May 21