ರಾಷ್ಟ್ರೀಯ ಲೋಕ ಅದಾಲತ್‌ ಯಶೋಗಾಥೆ: ಒಂದೇ ದಿನ 35.84 ಲಕ್ಷ ಕೇಸ್ ಇತ್ಯರ್ಥ!

| Updated By: ರಮೇಶ್ ಬಿ. ಜವಳಗೇರಾ

Updated on: Sep 20, 2024 | 7:38 PM

ಸೆಪ್ಟೆಂಬರ್​ 14ರಂದು ರಾಜ್ಯಾದ್ಯಂತ ನಡೆದ ರಾಷ್ಟ್ರೀಯ ಮೆಗಾ ಲೋಕ ಅದಾಲತ್ ಒಂದೇ ದಿನದಲ್ಲಿ ಸೌಹಾರ್ದಯುತವಾಗಿ ಬರೋಬ್ಬರಿ 35.84 ಲಕ್ಷ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಈ ಬಗ್ಗೆ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಮಾಹಿತಿ ನೀಡಿದೆ. ಹಾಗಾದ್ರೆ, ಯಾವೆಲ್ಲಾ ಎಷ್ಟೆಷ್ಟು ಕೇಸ್ ಇತ್ಯರ್ಥಗೊಂಡಿವೆ ಎನ್ನುವ ವಿವರ ಇಲ್ಲಿದೆ.

ರಾಷ್ಟ್ರೀಯ ಲೋಕ ಅದಾಲತ್‌ ಯಶೋಗಾಥೆ: ಒಂದೇ ದಿನ 35.84 ಲಕ್ಷ ಕೇಸ್ ಇತ್ಯರ್ಥ!
ಪ್ರಾತಿನಿಧಿಕ ಚಿತ್ರ
Follow us on

ಬೆಂಗಳೂರು, (ಸೆಪ್ಟೆಂಬರ್ 20): ಇದೇ ಸೆಪ್ಟೆಂಬರ್ 14 ರಂದು ಕರ್ನಾಟಕದಾದ್ಯಂತ ನಡೆದ ರಾಷ್ಟ್ರೀಯ ಮೆಗಾ ಲೋಕ ಅದಾಲತ್ ಒಂದೇ ದಿನದಲ್ಲಿ ಬರೋಬ್ಬರಿ 35.84 ಲಕ್ಷ ಪ್ರಕರಣಗಳನ್ನು ಇತ್ಯರ್ಥಪಡಿಸಿದೆ. ಇದರಲ್ಲಿ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇದ್ದ 2 ಲಕ್ಷ ಪ್ರಕರಣಗಳು ಮತ್ತು 33.84 ಲಕ್ಷ ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿವೆ. ಈ ಬಗ್ಗೆ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಮಾಹಿತಿ ನೀಡಿದೆ.

ನ್ಯಾಯಮೂರ್ತಿಗಳಾದ ವಿ.ಕಾಮೇಶ್ವರ ರಾವ್ ಮತ್ತು ಶ್ರೀನಿವಾಸ್ ಹರೀಶ್ ಕುಮಾರ್ ಸುದ್ದಿಗೋಷ್ಠಿ ನಡೆಸಿ, ಸೆಪ್ಟೆಂಬರ್​ 14ರಂದು ನಡೆದಿದ್ದ ರಾಷ್ಟ್ರೀಯ ಲೋಕ್ ಅದಾಲತ್​ನಲ್ಲಿ 35.84 ಲಕ್ಷ ಕೇಸ್ ಇತ್ಯರ್ಥಪಡಿಸಲಾಗಿದೆ. ನ್ಯಾಯಾಲಯಗಳಲ್ಲಿ ಬಾಕಿ ಇದ್ದ 2 ಲಕ್ಷ ಕೇಸ್​ ಹಾಗೂ 33.84 ಲಕ್ಷ ವ್ಯಾಜ್ಯ ಪೂರ್ವ ಪ್ರಕರಣಗಳು ಇತ್ಯರ್ಥಗೊಳಿಸಲಾಗಿದೆ ಎಂದು ತಿಳಿಸಿದರು.

2,402 ಕೋಟಿ ಪರಿಹಾರ ಮೊತ್ತದೊಂದಿಗೆ ಕೇಸ್​ ಇತ್ಯರ್ಥಗೊಳಿಸಲಾಗಿದೆ. ಅದಾಲತ್​ನಲ್ಲಿ 1,669 ವೈವಾಹಿಕ ಪ್ರಕರಣಗಳು ಇತ್ಯರ್ಥಪಡಿಸಲಾಗಿದೆ. ಇನ್ನು ಸಂಧಾನದ ಮೂಲಕ 248 ದಂಪತಿ ಒಟ್ಟುಗೂಡಿಸಲಾಗಿದೆ. 2,696 ವಿಭಾಗ ದಾವೆ ರಾಜಿಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ. 3,621 ಅಪಘಾತ ಕೇಸ್​​ಗಳಲ್ಲಿ 191 ಕೋಟಿ ಪರಿಹಾರ ನೀಡಲಾಗಿದೆ. 8,517 ಚೆಕ್ ಬೌನ್ಸ್ ಕೇಸ್​ಗಳನ್ನ ಮುಕ್ತಾಯಗೊಳಿಸಲಾಗಿದೆ. 2,598 ಅಮಲ್ದಾರಿ ಕೇಸ್, 73 ಗ್ರಾಹಕರ ವ್ಯಾಜ್ಯಗಳು ಇತ್ಯರ್ಥಗೊಳಿಸಲಾಗಿದ್ದು, 5 ವರ್ಷಕ್ಕೂ ಹಳೆಯ 1,443 ಕೇಸ್ ಇತ್ಯರ್ಥಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.