AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆ ಚುನಾವಣೆ: ಬೆಳಗಾವಿಯಲ್ಲಿ 2 ಲಕ್ಷ ರೂ. ಜಪ್ತಿ: ರಾಮನಗರದಲ್ಲಿ ಕುಕ್ಕರ್, ತವಾ ಹಂಚಿಕೆ ಆರೋಪ

ಕೇಂದ್ರ ಚುನಾವಣಾ ಆಯೋಗ ಇಂದು ಲೋಕಸಭಾ ಚುನಾವಣೆ ದಿನಾಂಕವನ್ನು ಘೋಷಿಸಿದೆ. ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಿದೆ. ಚುನಾವಣೆ ಘೋಷಣೆ ಬೆನ್ನಲ್ಲೇ ಬೆಳಗಾವಿ ಪೊಲೀಸರು ಹೈಅಲರ್ಟ್ ಆಗಿದ್ದು, ದಾಖಲೆ ಇಲ್ಲದೇ ಗೋಣಿ ಚೀಲದಲ್ಲಿ ಸಾಗಿಸುತ್ತಿದ್ದ 2 ಲಕ್ಷ ರೂ. ಹಣವನ್ನು ಜಪ್ತಿ ಮಾಡಿದ್ದಾರೆ. ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ‌ ಮರಳವಾಡಿ ಗ್ರಾಮದಲ್ಲಿ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಕುಕ್ಕರ್, ತವಾ ಹಂಚಿಕೆ ಆರೋಪ ಕೇಳಿಬಂದಿದೆ.

ಲೋಕಸಭೆ ಚುನಾವಣೆ: ಬೆಳಗಾವಿಯಲ್ಲಿ 2 ಲಕ್ಷ ರೂ. ಜಪ್ತಿ: ರಾಮನಗರದಲ್ಲಿ ಕುಕ್ಕರ್, ತವಾ ಹಂಚಿಕೆ ಆರೋಪ
ಜಪ್ತಿ ಮಾಡಿದ ಹಣ
Sahadev Mane
| Updated By: ಗಂಗಾಧರ​ ಬ. ಸಾಬೋಜಿ|

Updated on: Mar 16, 2024 | 10:34 PM

Share

ಬೆಳಗಾವಿ, ಮಾರ್ಚ್​​​ 16: ಬೇಸಿಗೆ ಬಿಸಿಲು ಏರುತ್ತಿದ್ದಂತೆ. ಲೋಕಸಭೆ (Lok Sabha Elections) ಕಣದ ಕಾವು ರಣ ರಣ ರಂಗೇರುತ್ತಿದೆ. ಈ ವೇಳೆ ಕೇಂದ್ರ ಚುನಾವಣಾ ಆಯೋಗ ಇಂದು ಲೋಕಸಭಾ ಚುನಾವಣೆ ದಿನಾಂಕವನ್ನು ಘೋಷಿಸಿದೆ. ಆ ಮೂಲಕ ಇಡೀ ದೇಶವೇ ಎದುರು ನೋಡುತ್ತಿದ್ದ ಕುತೂಹಲಕ್ಕೆ ತೆರೆ ಬಿದ್ದಿದೆ. ಕರ್ನಾಟಕದಲ್ಲಿ 2 ಹಂತದಲ್ಲಿ ಮತದಾನ ನಡೆಯಲಿದೆ. ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಿದೆ. ಚುನಾವಣೆ ಘೋಷಣೆ ಬೆನ್ನಲ್ಲೇ ಬೆಳಗಾವಿ ಪೊಲೀಸರು ಹೈಅಲರ್ಟ್ ಆಗಿದ್ದು, ದಾಖಲೆ ಇಲ್ಲದೇ ಗೋಣಿ ಚೀಲದಲ್ಲಿ ಸಾಗಿಸುತ್ತಿದ್ದ 2 ಲಕ್ಷ ರೂ. ಹಣವನ್ನು ಜಪ್ತಿ ಮಾಡಿದ್ದಾರೆ.

ಜಿಲ್ಲೆಯ ಮೂಡಲಗಿ ತಾಲೂಕಿನ ಹಳ್ಳೂರು ಚೆಕ್​ಪೋಸ್ಟ್​ನಲ್ಲಿ ಘಟನೆ ನಡೆದಿದ್ದು, 1 ಆಲ್ಟೋ ಕಾರು ಸೇರಿದಂತೆ ನಾಲ್ವರು ಆರೋಪಿಗಳನ್ನು ಮೂಡಲಗಿ ಪೊಲೀಸರ ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಲೋಕಸಭಾ ಚುನಾವಣೆ ದಿನಾಂಕ ಘೋಷಣೆ: ಜಿಲ್ಲಾವಾರು ಮತದಾರರ ವಿವರ ನೀಡಿದ ಜಿಲ್ಲಾಧಿಕಾರಿಗಳು

ಚುನಾವಣೆ ಘೋಷಣೆ ಬೆನ್ನಲ್ಲೆ ಬೆಳಗಾವಿ ಜಿಲ್ಲಾ ಚುನಾವಣಾ ಅಧಿಕಾರಿ ನಿತೇಶ್ ಪಾಟೀಲ್ ಸುದ್ದಿಗೋಷ್ಠಿ ನಡೆಸಿ ಚುನಾವಣೆ, ಮತದಾರರು, ಮತಗಟ್ಟೆ ವಿವರ ನೀಡಿದ್ದಾರೆ. ಚುನಾವಣೆ ವೇಳೆ ಅಕ್ರಮಗಳನ್ನ ತಡೆಯಲು ಒಟ್ಟು 64 ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದೆ ಎಂದು ಹೇಳಿದ್ದಾರೆ.

  • ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯಲ್ಲಿ ಒಟ್ಟು 4,524 ಮತಗಟ್ಟೆಗಳ ಸ್ಥಾಪನೆ.
  • ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯಲ್ಲಿ ಒಟ್ಟು 17,41,758 ಮತದಾರರು.
  • ಬೆಳಗಾವಿ ಲೋಕಸಭಾ ವ್ಯಾಪ್ತಿಯಲ್ಲಿ 19,04,099 ಮತದಾರರು.
  • ಉತ್ತರ ಕನ್ನಡ ಲೋಕಸಭಾ ವ್ಯಾಪ್ತಿಯಲ್ಲಿ ಒಟ್ಟು 4,16,353 ಮತದಾರರು.
  • ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭೆ ವ್ಯಾಪ್ತಿಯಲ್ಲಿ ಒಟ್ಟು 36,45,853 ಮತದಾರರು.
  • ಲೋಕಸಭಾ ಚುನಾವಣೆಯಲ್ಲಿ ಅಕ್ರಮ ಆಗದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

ಕಾಂಗ್ರೆಸ್ ಕಾರ್ಯಕರ್ತರಿಂದ ಕುಕ್ಕರ್, ತವಾ ಹಂಚಿಕೆ ಆರೋಪ

ರಾಮನಗರ: ಜಿಲ್ಲೆಯ ಹಾರೋಹಳ್ಳಿ ತಾಲೂಕಿನ‌ ಮರಳವಾಡಿ ಗ್ರಾಮದಲ್ಲಿ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಕುಕ್ಕರ್, ತವಾ ಹಂಚಿಕೆ ಆರೋಪ ಕೇಳಿಬಂದಿದೆ. ಜೆಡಿಎಸ್ ಕಾರ್ಯಕರ್ತರಿಂದ ಹಾರೋಹಳ್ಳಿ ತಹಶೀಲ್ದಾರ್​ಗೆ ದೂರು ನೀಡಲಾಗಿದೆ.

ಇದನ್ನೂ ಓದಿ: ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗದ ಅಧ್ಯಕ್ಷರಾಗಿ ಪ್ರೊ. ಗೋವಿಂದ ರಾವ್ ನೇಮಕ

ಕುಕ್ಕರ್​​ಗಳ ಮೇಲೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್​ ಸಂಸದ‌ ಡಿ‌.ಕೆ.ಸುರೇಶ್,‌‌ ಶಾಸಕ ಇಕ್ಬಾಲ್ ಹುಸೇನ್ ಭಾವಚಿತ್ರದ ಜೊತೆಗೆ ಹೊಸ ವರ್ಷದ ಶುಭಾಶಯದ ಪೋಸ್ಟರ್‌ ಇದೆ. ಸಂಜೆ ವೇಳೆ ಕುಕ್ಕರ್ ಹಂಚುತ್ತಿದ್ದರೆಂದು ಜೆಡಿಎದ್​ ಕಾರ್ಯಕರ್ತರು ತಹಶೀಲ್ದಾರ್​ಗೆ ಕರೆ ಮಾಡಿ ದೂರು ಕೊಟ್ಟರೂ ಭೇಟಿ ನೀಡದ ಆರೋಪ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ