AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Election: ನಾಮಪತ್ರ ಸಲ್ಲಿಕೆ, ಪರಿಶೀಲನೆ ಮತ್ತು ಹಿಂಪಡೆಯುವ ದಿನಾಂಕ ಇಲ್ಲಿದೆ

ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ದೇಶದಲ್ಲಿ ನೀತಿ ಸಂಹಿತೆ ಜಾರಿಯಾಗಿದೆ. ದೇಶದಲ್ಲಿ ಒಟ್ಟು ಏಳು ಹಂತದಲ್ಲಿ ಮನತಾದನ ನಡೆಯಲಿದೆ. ಕರ್ನಾಟಕದಲ್ಲಿ ಎರಡು ಹಂತದಲ್ಲಿ ನಡೆಯಲಿದೆ. ಇನ್ನು ನಾಮಪತ್ರ ಸಲ್ಲಿಕೆ, ಹಿಂಪಡೆಯಲು ಕೊನೆಯ ದಿನಾಂಕ ಇಲ್ಲಿದೆ..

Lok Sabha Election: ನಾಮಪತ್ರ ಸಲ್ಲಿಕೆ, ಪರಿಶೀಲನೆ ಮತ್ತು ಹಿಂಪಡೆಯುವ ದಿನಾಂಕ ಇಲ್ಲಿದೆ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on: Mar 25, 2024 | 3:10 PM

Share

ಬೆಂಗಳೂರು, ಮಾರ್ಚ್ 25: ಲೋಕಸಭೆ ಚುನಾವಣೆಗೆ (Lok Sabha Election) ದಿನಾಂಕ ಘೋಷಣೆಯಾಗಿದೆ. ದೇಶದಲ್ಲಿ ಒಟ್ಟು ಏಳು ಹಂತದಲ್ಲಿ ಮನತಾದನ (Voting) ನಡೆಯಲಿದೆ. ಕರ್ನಾಟಕದಲ್ಲಿ (Karnataka) ಎರಡು ಹಂತದಲ್ಲಿ ಮತದಾನ ನಡೆಯಲಿದೆ. ದಕ್ಷಿಣ ಕರ್ನಾಟಕ ಎರಡನೇ ಹಂತದಲ್ಲಿ ಮತದಾನ ನಡೆದರೆ, ಉತ್ತರ ಕರ್ನಾಟಕ ಪ್ರದೇಶಗಳಲ್ಲಿ ಮೂರನೇ ಹಂತದಲ್ಲಿ ಮತದಾನ ನಡೆಯಲಿದೆ. ಇನ್ನು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ದಿನ, ನಾಮಪತ್ರ ಪರಿಶೀಲನೆ, ಹಿಂಪಡೆಯುವುದು, ಮತದಾನ ಮತ್ತು ಫಲಿತಾಂಶ ಯಾವಾಗ? ಎಂಬುವುದರ ಕುರಿತ ಮಾಹಿತಿ ಇಲ್ಲಿದೆ…

  •  ನಾಮಪತ್ರಗಳನ್ನು ಸಲ್ಲಿಸಲು ಗುರುವಾರ (ಏಪ್ರಿಲ್​ 4) ಕೊನೆಯ ದಿನವಾಗಿದೆ.
  • ಶುಕ್ರವಾರ (ಏಪ್ರಿಲ್​ 5) ರಂದು ನಾಮಪತ್ರಗಳನ್ನು ಪರಿಶೀಲಿಸಲಾಗುವುದು.
  • ನಾಮಪತ್ರಗಳನ್ನು ಹಿಂಪಡೆಯಲು ಸೋಮವಾರ (ಏಪ್ರಿಲ್​ 8) ಕೊನೆಯ ದಿನವಾಗಿದೆ.
  • ದಕ್ಷಿಣ ಕರ್ನಾಟಕದ ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್​ 26 ರಂದು ಮತದಾನ ನಡೆಯಲಿದೆ.
  • ಉತ್ತರ ಕರ್ನಾಟಕದ ಲೋಕಸಭಾ ಕ್ಷೇತ್ರಗಳಿಗೆ ಮೇ 7 ರಂದು ಮತದಾನ ನಡೆಯಲಿದೆ
  • ಮತಗಳ ಎಣಿಕೆ ಮತ್ತು ಫಲಿತಾಂಶ ಜೂನ್​ 4 ರಂದು ನಡೆಯುತ್ತದೆ.

ರಾಜ್ಯದಲ್ಲಿರುವ ಮತದಾರರು

ಜನವರಿಯಲ್ಲಿ ಬಿಡುಗಡೆಯಾದ ಕರ್ನಾಟಕದ ಅಂತಿಮ ಮತದಾರರ ಪಟ್ಟಿ ಪ್ರಕಾರ, ರಾಜ್ಯದಲ್ಲಿ ಒಟ್ಟು 5,37,85,815 ಮತದಾರರಿದ್ದಾರೆ. ಇದರಲ್ಲಿ 2,69,33,750 ಪುರುಷ, 2,68,47,145 ಮಹಿಳಾ ಮತ್ತು 4,920 ಇತರೆ ಮತದಾರರಿದ್ದಾರೆ. ರಾಜ್ಯದ 28 ಕ್ಷೇತ್ರಗಳ ಪೈಕಿ 17 ಲೋಕಸಭಾ ಕ್ಷೇತ್ರಗಳಲ್ಲಿ ಮಹಿಳಾ ಮತದಾರರೇ ನಿರ್ಣಾಯಕರಾಗಿದ್ದಾರೆ.

ಇದನ್ನೂ ಓದಿ: ಬೆಳಗಾವಿ ಜಿಲ್ಲೆಯಲ್ಲಿ 1259 ಶತಾಯುಷಿ ಮತದಾರರು

ದಕ್ಷಿಣ ಕನ್ನಡ, ಮೈಸೂರು, ಶಿವಮೊಗ್ಗ, ಮಂಡ್ಯ, ಬೆಳಗಾವಿ, ಕೊಪ್ಪಳ, ಬಳ್ಳಾರಿ, ದಾವಣಗೆರೆ, ಹಾಸನ, ಚಿತ್ರದುರ್ಗ, ಚಾಮರಾಜನಗರ, ಚಿಕ್ಕಬಳ್ಳಾಪುರ, ಮಂಡ್ಯ, ಕೋಲಾರ, ತುಮಕೂರು ಮತ್ತು ಬಾಗಲಕೋಟೆ ಲೋಕಸಭಾ ಕ್ಷೇತ್ರಗಳಲ್ಲಿ ಹೆಚ್ಚು ಮಹಿಳಾ ಮತದಾರರಿದ್ದಾರೆ.

50 ಸಾವಿರ ಅರ್ಜಿಗಳು

ಮತದಾನದ ಗುರುತಿನ ಚೀಟಿಗೆ ಅರ್ಜಿ ಸಲ್ಲಿಸಲು ಮಾರ್ಚ್​ 31 ಕೊನೆಯ ದಿನಾಂಕವಾಗಿದ್ದು, ಈಗಾಗಲೆ 50 ಸಾವಿರ ಅರ್ಜಿಗಳು ಸಲ್ಲಿಕೆಯಾಗಿವೆ. ಅರ್ಜಿ ಸಲ್ಲಿಸಿರುವವರು ಮುಂದಿನ ಚುನಾವಣೆಯಲ್ಲಿ ಮತದಾನ ಮಾಡಲು ಅರ್ಹರಾಗಿರುತ್ತಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ, ಇಬ್ಬರು ಸಾವು
ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ, ಇಬ್ಬರು ಸಾವು
ಜೈಲಿನಲ್ಲೇ ಉಗ್ರರಿಗೆ ರಾಜಾತಿಥ್ಯ, ಗೃಹ ಇಲಾಖೆ ನಿದ್ದೆ ಮಾಡ್ತಿದೆ: ಅಶೋಕ್
ಜೈಲಿನಲ್ಲೇ ಉಗ್ರರಿಗೆ ರಾಜಾತಿಥ್ಯ, ಗೃಹ ಇಲಾಖೆ ನಿದ್ದೆ ಮಾಡ್ತಿದೆ: ಅಶೋಕ್
ಹುದ್ದೆ ಒಪ್ಪಿಕೊಂಡರೂ ಸಿದ್ದರಾಮಯ್ಯ ಸಿಎಂ ಬಿಡಬೇಕಿಲ್ಲ: ಸತೀಶ್ ಜಾರಕಿಹೊಳಿ
ಹುದ್ದೆ ಒಪ್ಪಿಕೊಂಡರೂ ಸಿದ್ದರಾಮಯ್ಯ ಸಿಎಂ ಬಿಡಬೇಕಿಲ್ಲ: ಸತೀಶ್ ಜಾರಕಿಹೊಳಿ