ಬೆಂಗಳೂರು, ಮಾರ್ಚ್ 25: ಲೋಕಸಭೆ ಚುನಾವಣೆಗೆ (Lok Sabha Election) ದಿನಾಂಕ ಘೋಷಣೆಯಾಗಿದೆ. ದೇಶದಲ್ಲಿ ಒಟ್ಟು ಏಳು ಹಂತದಲ್ಲಿ ಮನತಾದನ (Voting) ನಡೆಯಲಿದೆ. ಕರ್ನಾಟಕದಲ್ಲಿ (Karnataka) ಎರಡು ಹಂತದಲ್ಲಿ ಮತದಾನ ನಡೆಯಲಿದೆ. ದಕ್ಷಿಣ ಕರ್ನಾಟಕ ಎರಡನೇ ಹಂತದಲ್ಲಿ ಮತದಾನ ನಡೆದರೆ, ಉತ್ತರ ಕರ್ನಾಟಕ ಪ್ರದೇಶಗಳಲ್ಲಿ ಮೂರನೇ ಹಂತದಲ್ಲಿ ಮತದಾನ ನಡೆಯಲಿದೆ. ಇನ್ನು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ದಿನ, ನಾಮಪತ್ರ ಪರಿಶೀಲನೆ, ಹಿಂಪಡೆಯುವುದು, ಮತದಾನ ಮತ್ತು ಫಲಿತಾಂಶ ಯಾವಾಗ? ಎಂಬುವುದರ ಕುರಿತ ಮಾಹಿತಿ ಇಲ್ಲಿದೆ…
ಜನವರಿಯಲ್ಲಿ ಬಿಡುಗಡೆಯಾದ ಕರ್ನಾಟಕದ ಅಂತಿಮ ಮತದಾರರ ಪಟ್ಟಿ ಪ್ರಕಾರ, ರಾಜ್ಯದಲ್ಲಿ ಒಟ್ಟು 5,37,85,815 ಮತದಾರರಿದ್ದಾರೆ. ಇದರಲ್ಲಿ 2,69,33,750 ಪುರುಷ, 2,68,47,145 ಮಹಿಳಾ ಮತ್ತು 4,920 ಇತರೆ ಮತದಾರರಿದ್ದಾರೆ. ರಾಜ್ಯದ 28 ಕ್ಷೇತ್ರಗಳ ಪೈಕಿ 17 ಲೋಕಸಭಾ ಕ್ಷೇತ್ರಗಳಲ್ಲಿ ಮಹಿಳಾ ಮತದಾರರೇ ನಿರ್ಣಾಯಕರಾಗಿದ್ದಾರೆ.
ಇದನ್ನೂ ಓದಿ: ಬೆಳಗಾವಿ ಜಿಲ್ಲೆಯಲ್ಲಿ 1259 ಶತಾಯುಷಿ ಮತದಾರರು
ದಕ್ಷಿಣ ಕನ್ನಡ, ಮೈಸೂರು, ಶಿವಮೊಗ್ಗ, ಮಂಡ್ಯ, ಬೆಳಗಾವಿ, ಕೊಪ್ಪಳ, ಬಳ್ಳಾರಿ, ದಾವಣಗೆರೆ, ಹಾಸನ, ಚಿತ್ರದುರ್ಗ, ಚಾಮರಾಜನಗರ, ಚಿಕ್ಕಬಳ್ಳಾಪುರ, ಮಂಡ್ಯ, ಕೋಲಾರ, ತುಮಕೂರು ಮತ್ತು ಬಾಗಲಕೋಟೆ ಲೋಕಸಭಾ ಕ್ಷೇತ್ರಗಳಲ್ಲಿ ಹೆಚ್ಚು ಮಹಿಳಾ ಮತದಾರರಿದ್ದಾರೆ.
ಮತದಾನದ ಗುರುತಿನ ಚೀಟಿಗೆ ಅರ್ಜಿ ಸಲ್ಲಿಸಲು ಮಾರ್ಚ್ 31 ಕೊನೆಯ ದಿನಾಂಕವಾಗಿದ್ದು, ಈಗಾಗಲೆ 50 ಸಾವಿರ ಅರ್ಜಿಗಳು ಸಲ್ಲಿಕೆಯಾಗಿವೆ. ಅರ್ಜಿ ಸಲ್ಲಿಸಿರುವವರು ಮುಂದಿನ ಚುನಾವಣೆಯಲ್ಲಿ ಮತದಾನ ಮಾಡಲು ಅರ್ಹರಾಗಿರುತ್ತಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ