ಸಂಸದ ಅನಂತಕುಮಾರ ಹೆಗಡೆಗೆ ಟಿಕೆಟ್ ಮಿಸ್ ಆಗಲು ಒಂದಲ್ಲ, ಎರಡಲ್ಲ ಹಲವು ಕಾರಣ!

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಹಾಲಿ ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ಅವರಿಗೆ ಟಿಕೆಟ್​ ಕೈತಪ್ಪಿದೆ. ಮಾಜಿ ಸಭಾಪತಿ ವಿಶ್ವೇಶ್ಬರ ಹೆಗಡೆ ಕಾಗೇರಿ ಅವರಿಗೆ ಟಿಕೆಟ್​ ಸಿಕ್ಕಿದೆ. ಇನ್ನು ಹಿಂದೂ ಫೈರ್​ ಬ್ರ್ಯಾಂಡ್​ ಎಂದೆ ಹೆಸರುವಾಸಿಯಾಗಿರುವ ಅನಂತಕುಮಾರ್ ಹೆಗಡೆ ಅವರಿಗೆ ಟಿಕೆಟ್​ ಕೈ ತಪ್ಪಲು ಕಾರಣವೇನು ಇಲ್ಲಿದೆ ಓದಿ..

ಸಂಸದ ಅನಂತಕುಮಾರ ಹೆಗಡೆಗೆ ಟಿಕೆಟ್ ಮಿಸ್ ಆಗಲು ಒಂದಲ್ಲ, ಎರಡಲ್ಲ ಹಲವು ಕಾರಣ!
ಸಂಸದ ಅನಂತಕುಮಾರ ಹೆಗಡೆ
Follow us
TV9 Web
| Updated By: ವಿವೇಕ ಬಿರಾದಾರ

Updated on:Mar 25, 2024 | 9:06 AM

ಉತ್ತರ ಕನ್ನಡ, ಮಾರ್ಚ್​​ 25: ಲೋಕಸಭೆ ಚುನಾವಣೆಗೆ (Lok Sabha Election) ಬಿಜೆಪಿಯ (BJP) ಐದನೇ ಪಟ್ಟಿ ಬಿಡುಗಡೆಯಾಗಿದೆ. ಹಿಂದೂ ಫೈರ್​ ಬ್ರ್ಯಾಂಡ್​ ಎಂದೆ ಹೆಸರುವಾಸಿಯಾಗಿರುವ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಅನಂತಕುಮಾರ ಹೆಗಡೆ (Ananth Kumar Hegade) ಅವರಿಗೆ ಬಿಜೆಪಿ ಟಿಕೆಟ್​​ ಕೈತಪ್ಪಿದೆ. ಚುನಾವಣೆ ಸಮೀಪಿಸುತ್ತಿದ್ದಂತೆಯೇ ಆಕ್ಟಿವ್​ ಆಗಿದ್ದ ಅನಂತಕುಮಾರ ಹೆಗಡೆ, ವಿವಾದಾತ್ಮಕ ಹೇಳಿಕೆಗಳನ್ನು ನೀಡಿ, ಸಿಎಂ ಸಿದ್ದರಾಮಯ್ಯ ಮೇಲೆ ಮುಗಿ ಬಿದ್ದು, ಪ್ರಧಾನಿ ಮೋದಿಯವರನ್ನು ಹೊಗಳುವ ಮೂಲಕ ಹೈಕಮಾಂಡ್​ ನಾಯಕರನ್ನು ಗಮನವನ್ನು ತಮ್ಮತ್ತ ಸೆಳೆದುಕೊಂಡು ಟಿಕೆಟ್​ ಗಿಟ್ಟಿಸಿಕೊಳ್ಳಲು ಸಾಕಷ್ಟು ಕಸರತ್ತು ನಡೆಸಿದರು ಕೂಡ ಪ್ರಯೋಜನವಾಗಲಿಲ್ಲ.

ಚುನಾವಣಾ ರಾಜಕೀಯದಿಂದ ವಿಮುಖರಾಗಿರುವುದಾಗಿ ಹೇಳಿದ್ದ ಅನಂತ ಕುಮಾರ ಹೆಗಡೆ ಚುನಾವಣೆ ಸಮೀಪಿಸುತ್ತಿದ್ದಂತೆ ಸಕ್ರಿಯರಾದರೂ ಟಿಕೆಟ್ ಪಡೆಯುವಲ್ಲಿ ಸಫಲರಾಗಲಿಲ್ಲ. ಅನಂತಕುಮಾರ್​ ಹೆಗಡೆ ಅವರಿಗೆ ಟಿಕೆಟ್​ ಕೈತಪ್ಪಲಿದೆ ಎಂಬ ಕಾರಣಕ್ಕಾಗಿಯೇ ಬಿಜೆಪಿಯಲ್ಲಿ ಆಕಾಂಕ್ಷಿಗಳ ಸಂಖ್ಯೆ ಹತ್ತಕ್ಕೂ ಮೀರಿತ್ತು. ಅನಂತರ ಕುಮಾರ್​ ಹೆಗಡೆ ಬದಲಿಗೆ ಪ್ರಮುಖವಾಗಿ ಚಿಂತಕ ಚಕ್ರವರ್ತಿ ಸೂಲಿಬೆಲೆ, ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಮೊಮ್ಮಗ ಶಶಿಭೂಷಣ್ ಹೆಗಡೆ ಮತ್ತು ಮಾಜಿ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಹೆಸರು ಮುನ್ನಲೆಗೆ ಬಂದಿತ್ತು. ಕೊನೆಗೆ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಟಿಕೆಟ್​ ಸಿಕ್ಕಿದೆ.

ಅನಂತಕುಮಾರ ಹೆಗಡೆಗೆ ಟಿಕೆಟ್‌ ಕೈತಪ್ಪಲು ಕಾರಣ

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ತನ್ನದೆ ಆದ ಕಾರ್ಯರ್ತರನ್ನು ಹೊಂದಿರುವ ಅನಂತ ಕುಮಾರ ಹೆಗಡೆ, 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಒಂದೆ ಒಂದು ಬಾರಿ ಪ್ರಚಾರ ಮಾಡಲಿಲ್ಲ. ತನಗೂ ವಿಧಾನಸಭಾ ಚುನಾವಣೆಗೂ ಸಂಬಂಧ ಇಲ್ಲ ಎಂಬಂತೆ ಮನೆಯಲ್ಲಿಯೇ ಉಳಿದುಕೊಂಡಿದ್ದರು. ಅಷ್ಟೆ ಅಲ್ಲದೆ ಕಾರವಾರ ಹಾಗೂ ಶಿರಸಿ ಬಿಜೆಪಿ ಅಭ್ಯರ್ಥಿ ಸೋಲಿಸಲು ಅನಂತ ಕುಮಾರ ಹೆಗಡೆ ಕಾಂಗ್ರೆಸ್​ ಅಭ್ಯರ್ಥಿಗಳಿಗೆ ಬೆಂಬಲಿಸಿದರು ಎಂಬ ಆರೋಪ ಜಿಲ್ಲೆಯಲ್ಲಿದೆ.

ಇದನ್ನೂ ಓದಿ: ಕೈತಪ್ಪಿದ ಬಿಜೆಪಿ ಟಿಕೆಟ್: ನಿಜಕ್ಕೂ ಅಷ್ಟೇ ಸಾಕು… ಅನಂತಕುಮಾರ್ ಹೆಗಡೆ ಭಾವುಕ ಪತ್ರ

ವಿಧಾನಸಭಾ ಚುನಾವಣೆ ಪ್ರಚಾರಕ್ಕೆಂದು ಸ್ವತಃ ಪ್ರಧಾನಿ ನರೇಂದ್ರ ಮೋದಿಯವರು ಅಂಕೊಲಾಗೆ ಬಂದರೂ ಸಹಿತ ಪ್ರಧಾನಿ ಸ್ವಾಗತಕ್ಕೆ ಬಾರದೆ ಮನೆಯಲ್ಲಿ ಉಳಿದುಕೊಂಡಿದ್ದರು.

ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪೂರ ತಾಲೂಕಿನ ಹಲಗೇರಿ ಗ್ರಾಮದಲ್ಲಿ ಕಾರ್ಯರ್ತರ ಸಭೆಯನ್ನು ಉದ್ದೆಶಿಸಿ ಮಾತನಾಡುವಾಗ, ಹಿಂದೂತ್ವ ರಾಷ್ಟ್ರೀಯತೆ ಬಗ್ಗೆ ಭಾಷಣ ಮಾಡುವ ಭರದಲ್ಲಿ ಸಂವಿಧಾನ ತಿದ್ದುಪಡಿ ಬಗ್ಗೆ ನೀಡಿರುವ ಹೇಳಿಕೆ ಬಿಜೆಪಿ ಪಕ್ಷಕ್ಕೆ ಭಾರಿ ಮುಜುಗರ ಉಂಟು ಮಾಡಿತ್ತು.

ಹೌದು ಅಬಕಿ ಬಾರ್ ಚಾರಸೊ ಪಾರ ಎಂಬ ಮೋದಿ ಮಾತಿನ ಗುಟ್ಟು ಬಿಚ್ಚಿಟ್ಟಿದ್ದ ಹೆಗಡೆ. ಸಂವಿಧಾನ ತಿದ್ದುಪಡಿ ಮಾಡಲು ನಮಗೆ 400 ಸೀಟಿನ ಅವಶ್ಯಕತೆ ಇದೆ. ಅದಕ್ಕಾಗಿ ಮೋದಿ ಈ ಬಾರಿ 400 ಸೀಟು ಗೆಲ್ಲಿಸುವ ಗುರಿ ಹೊಂದಿದ್ದಾರೆ ಎಂದು ಹೇಳಿದ್ದರು. ಈ ಬಗ್ಗೆ ರಾಹುಲ್ ಗಾಂಧಿ ಕೂಡ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

ಆರು ಬಾರಿ ಗೆಲುವು ಸಾಧಿಸಿರುವ ಅನಂತ ಕುಮಾರ ಹೆಗಡೆ ಜಿಲ್ಲೆಯಲ್ಲಿ ಒಂದೇ ಒಂದು ಅಭಿವೃದ್ಧಿ ಕಾರ್ಯ ಮಾಡಿಲ್ಲ. ಇನ್ನೂ ಅಭಿವೃದ್ಧಿ ಮಾಡುವುದು ನನ್ನ ಕೆಲಸವೆ ಅಲ್ಲ ನಮ್ಮದೇನಿದ್ದರೂ ಶಾಸನ ರಚನೆ ಮಾಡುವುದಷ್ಟೆ ನಮ್ಮ ಕೆಲಸ ಎನ್ನುತ್ತಿರುವುದು ಮತಯಾಚಣೆ ಮಾಡಲು ಬಿಜೆಪಿ ಕಾರ್ಯರ್ತರಿಗೂ ಭಾರಿ ಮುಜುಗರ ಉಂಟು ಮಾಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:39 am, Mon, 25 March 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ