ಲೋಕಸಭೆ ಚುನಾವಣೆ 2024: ಬಹಿರಂಗ ಪ್ರಚಾರಕ್ಕೆ ಬ್ರೇಕ್, ಮೇ 7ಕ್ಕೆ 14 ಕ್ಷೇತ್ರಗಳಿಗೆ ಮತದಾನ

Lok Sabha Election 2024: ಉತ್ತರ ಕರ್ನಾಟಕದ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್​, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಿಗೆ ಮೇ 7 ರಂದು ಮತದಾನ ನಡೆಯಲಿದೆ.

ಲೋಕಸಭೆ ಚುನಾವಣೆ 2024: ಬಹಿರಂಗ ಪ್ರಚಾರಕ್ಕೆ ಬ್ರೇಕ್, ಮೇ 7ಕ್ಕೆ 14 ಕ್ಷೇತ್ರಗಳಿಗೆ ಮತದಾನ
ಮತದಾನ
Follow us
ವಿವೇಕ ಬಿರಾದಾರ
|

Updated on: May 05, 2024 | 9:50 PM

ಬೆಂಗಳೂರು, ಮೇ 05: ಲೋಕಸಭೆ ಚುನಾವಣೆಯ (Lok Sabha Election) ರಾಜ್ಯದ ಎರಡನೇ ಹಂತದ ಮತದಾನ (Voting) ಮೇ 7 ರಂದು ನಡೆಯಲಿದೆ. ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಬಹಿರಂಗ ಪ್ರಚಾರಕ್ಕೆ ಇಂದು (ಮೇ 5) ಸಂಜೆ 6 ಗಂಟೆಗೆ ತೆರೆ ಬಿದ್ದಿದೆ. ಈ ಮೂಲಕ ಧ್ವನಿವರ್ಧಕಗಳು, ಮೈಕ್​ಗಳು, ಬ್ಯಾನರ್​ಗಳು ಮತ್ತು ಮೆಗಾ ರ್ಯಾಲಿಗಳನ್ನು ಬಳಸಿ ಪ್ರಚಾರ ಮಾಡುವಂತಿಲ್ಲ. ಕೇವಲ ಮನೆ ಮನೆ ಪ್ರಚಾರಕ್ಕೆ ಅವಕಾಶ ನೀಡಲಾಗಿದೆ.

ಉತ್ತರ ಕರ್ನಾಟಕದ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್​, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಇಂದು ಸಂಜೆ 6 ಗಂಟೆಯಿಂದ ಮತದಾನ ನಡೆಯುವ ಜಿಲ್ಲೆಗಳಲ್ಲಿ ರಾಜ್ಯದ ಗಡಿಗಳನ್ನು ಮುಚ್ಚಲಾಗುವುದು. ಚುನಾವಣೆ ಮುಗಿಯುವವರೆಗು ಮದ್ಯ ಮಾರಾಟಕ್ಕೆ ಅನುಮತಿ ಇಲ್ಲ. ಬೇರೆ ರಾಜ್ಯಗಳಿಂದಲೂ ಮದ್ಯ ತುರವಂತಿಲ್ಲ.

ಬೀದರ್​, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಉತ್ತರ ಕನ್ನಡ, ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗಳು ತೆಲಂಗಾಣ, ಆಂಧ್ರಪ್ರದೇಶ, ಗೋವಾ ಮತ್ತು ಮಹಾರಾಷ್ಟ್ರದೊಂದಿಗೆ ಗಡಿಯನ್ನು ಹಂಚಿಕೊಂಡಿವೆ. ಸಿಇಒ ಕಚೇರಿಯು ನೆರೆಯ ರಾಜ್ಯಗಳ ರಾಜ್ಯ ಸರ್ಕಾರಗಳಿಗೆ ಮತದಾನ ಮಾಡಲು ಅವಕಾಶ ನೀಡಲು ಎಲ್ಲ ಉದ್ಯೋಗಿಗಳು ಮತ್ತು ಕಾರ್ಮಿಕರಿಗೆ ಮೇ 7 ರಂದು ವೇತನ ಸಹಿತ ರಜೆ ನೀಡುವಂತೆ ವಿನಂತಿಸಿದೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ: ಕರ್ನಾಟಕದಲ್ಲಿ ಮತದಾನದಲ್ಲಿಯೂ ಮಹಿಳೆಯರದ್ದೇ ಮೇಲುಗೈ

227 ಅಭ್ಯರ್ಥಿಗಳು ಕಣದಲ್ಲಿ

ಒಟ್ಟು 14 ಲೋಕಸಭಾ ಕ್ಷೇತ್ರಗಳಲ್ಲಿ 227 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಚಿಕ್ಕೋಡಿ 17 ಜನ ಪುರುಷರು, ಓರ್ವ ಮಹಿಳೆ ಕಣದಲ್ಲಿದ್ದಾರೆ. ಬೆಳಗಾವಿಯಲ್ಲಿ 13 ಜನ ಪುರುಷರು, ಬಾಗಲಕೋಟೆಯಲ್ಲಿ 20 ಜನ ಪುರುಷರು, ಇಬ್ಬರು ಮಹಿಳೆಯರು, ವಿಜಯಪುರದಲ್ಲಿ ಆರು ಪುರುಷರು, ಇಬ್ಬರು ಮಹಿಳೆಯರು, ಕಲಬುರಗಿಯಲ್ಲಿ 12 ಜನ ಪುರುಷರು, ಓರ್ವ ಮಹಿಳೆ, ರಾಯಚೂರಿನಲ್ಲಿ ಏಳು ಜನ ಪುರುಷರು, ಓರ್ವ ಮಹಿಳೆ, ಬೀದರ್ 18 ಜನ ಪುರುಷರು, ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ 17 ಜನ ಪುರುಷ, ಇಬ್ಬರು ಮಹಿಳೆಯರು, ಬಳ್ಳಾರಿ 10 ಜನ ಪುರುಷರು, ಹಾವೇರಿಯಲ್ಲಿ 11 ಜನ ಪುರುಷರು ಹಾಗೂ ಮೂವರು ಮಹಿಳಾ ಅಭ್ಯರ್ಥಿಗಳು, ಧಾರವಾಡದಲ್ಲಿ 17 ಜನ ಪುರುಷರು, ಉತ್ತರ ಕನ್ನಡದಲ್ಲಿ 12 ಜನ ಪುರುಷರು ಹಾಗೂ ಓರ್ವ ಮಹಿಳೆ, ದಾವಣಗೆರೆಯಲ್ಲಿ 25 ಜನ ಪುರುಷ ಐವರು ಮಹಿಳೆಯರು, ಶಿವಮೊಗ್ಗದಲ್ಲಿ 21 ಜನ ಪುರುಷರು ಇಬ್ಬರು ಮಹಿಳಾ ಅಭ್ಯರ್ಥಿಗಳು ಅಖಾಡದಲ್ಲಿದ್ದಾರೆ.

2ನೇ ಹಂತದ ಮತದಾನಕ್ಕೆ ಮತದಾರರ ಸಂಖ್ಯೆ

ಒಟ್ಟು 2.59.17.493 ಮತದಾರರು ಮತ ಚಲಾವಣೆ ಮಾಡಲಿದ್ದಾರೆ. 1.29.48.978 ಪುರುಷರು, 1.29.66.570 ಮಹಿಳೆಯರು, ಇತರೆ 1.945 ಮತದಾರರು ಮತ ಚಲಾಯಿಸಲಿದ್ದಾರೆ. 3.78.144 ಯುವ ಪುರುಷ ಮತದಾರರು ಇದ್ದಾರೆ. ಯುವ 3.12.703 ಮಹಿಳಾ ಮತದಾರರು ಇದ್ದಾರೆ. ಒಟ್ಟು 6.90.929 ಯುವ ಮತದಾರರಿದ್ದಾರೆ. 85 ವರ್ಷ ಮೇಲ್ಪಟ್ಟವರು 2.29.263 ಜನರು ಇದ್ದಾರೆ. 3.43.966 ದಿವ್ಯಾಂಗ ಮತದಾರರ ಹೆಸರು ಮತದಾನ ಪಟ್ಟಿಯಲ್ಲಿದೆ. ಕಲಬುರಗಿ ಲೋಕಸಭಾ ಕ್ಷೇತ್ರ ಅತಿ ಹೆಚ್ಚು ಮತಗಳನ್ನು ಹೊಂದಿದೆ. ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ 20.98.202 ಮತದಾರರು ಪಟ್ಟಿಯಲ್ಲಿದ್ದಾರೆ. ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ಅತಿ ಕಡಿಮೆ ಮತದಾರರನ್ನು ಹೊಂದಿದೆ. ಉತ್ತರ ಕನ್ನಡದಲ್ಲಿ 16.41.156 ಮತದಾರರು ಇದ್ದಾರೆ. ಮೇ 7 ರಂದು ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಲಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ