‘ಕೈ’ಕೊಟ್ಟ ಚೆಂಬನ್ನು ಅಕ್ಷಯ ಪಾತ್ರೆಯಾಗಿಸಿ ಬಡವರಿಗೆ ಕೊಟ್ಟ ಮೋದಿ: ಹೆಚ್​ಡಿ ದೇವೇಗೌಡ

ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿ ನಡೆದ ಬೃಹತ್ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಹೆಚ್​ಡಿ ದೇವೇಗೌಡ, ಚೊಂಬು ಜಾಹೀರಾತು ಕೊಟ್ಟ ಸಿಎಂ ಸಿದ್ದರಾಮಯ್ಯಗೆ ನಾಚಿಕೆ ಆಗಬೇಕು. ಮೋದಿ ಅಧಿಕಾರಕ್ಕೆ ಬಂದು ಸಣ್ಣ ವರ್ಗದವರನ್ನೇ ಮೇಲಕ್ಕೆ ಎತ್ತಿದ್ದಾರೆ. ಆ ಮೂಲಕ ಖಾಲಿಯಾಗಿದ್ದ ಚೊಂಬನ್ನೇ ಮೋದಿ ಅಕ್ಷಯ ಪಾತ್ರೆಯಾಗಿ ಮಾಡಿದ್ದಾರೆ ಎಂದು ಹೇಳಿದ್ದಾರೆ.

Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಗಂಗಾಧರ​ ಬ. ಸಾಬೋಜಿ

Updated on:Apr 20, 2024 | 4:34 PM

ಚಿಕ್ಕಬಳ್ಳಾಪುರ, ಏಪ್ರಿಲ್​ 20: ಸಂಪತ್ತು ಲೂಟಿ ಮಾಡಿ 2014ರಲ್ಲಿ ಪ್ರಧಾನಿ ನರೇಂದ್ರ ಮೋದಿಗೆ (Narendra Modi) ಖಾಲಿ ಚೊಂಬು ಕೊಟ್ರು. ಮೋದಿ ಅಧಿಕಾರಕ್ಕೆ ಬಂದು ಸಣ್ಣ ವರ್ಗದವರನ್ನೇ ಮೇಲಕ್ಕೆ ಎತ್ತಿದ್ದಾರೆ. ಆ ಮೂಲಕ ಖಾಲಿಯಾಗಿದ್ದ ಚೊಂಬನ್ನೇ ಮೋದಿ ಅಕ್ಷಯ ಪಾತ್ರೆಯಾಗಿ ಮಾಡಿದ್ದಾರೆ ಎಂದು ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಹೆಚ್​ಡಿ ದೇವೇಗೌಡ (HD DeveGowda) ಕಾಂಗ್ರೆಸ್​​ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿ ನಡೆದ ಬೃಹತ್ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಅವರು, ಈ ಚೊಂಬನ್ನು ಯಾರು ಕೊಟ್ಟವರು. ದೇಶದಲ್ಲಿ ಯುಪಿಎ ಸರ್ಕಾರ ಇದ್ದಾಗ ದೇಶದ ಸಂಪತ್ತನ್ನು ಲೂಟಿ ಮಾಡಿದರು. ಯುಪಿಎ ಸರ್ಕಾರ ಲೂಟಿ ಮಾಡಿದ್ದಕ್ಕೆ ಚೊಂಬು ಖಾಲಿ ಆಗಿತ್ತು ಎಂದಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್ ಈ ರಾಜ್ಯವನ್ನು ಲೂಟಿ ಮಾಡಿದ್ದಾರೆ. ಚೊಂಬು ಜಾಹೀರಾತು ಕೊಟ್ಟ ಸಿಎಂ ಸಿದ್ದರಾಮಯ್ಯಗೆ ನಾಚಿಕೆ ಆಗಬೇಕು ಎಂದು ಕಿಡಿಕಾರಿದ್ದಾರೆ. ಈ ರಾಜ್ಯದಲ್ಲಿ 28 ಸ್ಥಾನಗಳಲ್ಲೂ ಎನ್​ಡಿಎ ಅಭ್ಯರ್ಥಿಗಳನ್ನು ಗೆಲ್ಲಿಸಬೇಕಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Narendra Modi in Karnataka Live: ಚಿಕ್ಕಬಳ್ಳಾಪುರದಲ್ಲಿ ಪ್ರಧಾನಿ ಮೋದಿ ಅಬ್ಬರದ ಭಾಷಣ; ನೇರ ಪ್ರಸಾರ ಇಲ್ಲಿದೆ

ಕೋಲಾರದಲ್ಲಿ ರಾಹುಲ್ ಭಾಷಣ ಬಗ್ಗೆ ವ್ಯಾಖ್ಯಾನ ಮಾಡಲು ಹೋಗಲ್ಲ. ನಿನ್ನೆ ಮಲ್ಲೇಶ್​ಬಾಬುಗಾಗಿ ಎರಡು ಸಭೆಗಳನ್ನು ಮಾಡಿದ್ದೇನೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಡಾ.ಕೆ.ಸುಧಾಕರ್​ಗೆ ಮತ ನೀಡಿ. ದೇಶದಲ್ಲಿ 400 ಸ್ಥಾನ ಗೆಲ್ಲುವ ಗುರಿ ಮುಟ್ಟಲು ಇಲ್ಲಿ 28 ಸ್ಥಾನ ಗೆಲ್ಲಬೇಕು. ರಾಜ್ಯದಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದಾರಂತೆ. ಈಗ ದೇಶದಲ್ಲಿ 25 ಗ್ಯಾರಂಟಿ ಕೊಡ್ತಾರಂತೆ ಎಂದು ವಾಗ್ದಾಳಿ ಮಾಡಿದರು.

ಇದನ್ನೂ ಓದಿ: ಮಂಡ್ಯ-ಮೈಸೂರು ಭಾಗಕ್ಕೆ ದೇವೇಗೌಡ ಮತ್ತು ಕುಮಾರಸ್ವಾಮಿ ಕೊಡುಗೆ ಏನೂ ಇಲ್ಲ: ಡಿಕೆ ಶಿವಕುಮಾರ್

ದೇಶದಲ್ಲಿ ವಿಪಕ್ಷ ಸ್ಥಾನ ಪಡೆಯುವ ಯೋಗ್ಯತೆಯೂ ಕಾಂಗ್ರೆಸ್​​ಗೆ ಇಲ್ಲ. ಬೆಂಗಳೂರಿನ ನೀರಿನ ಸಮಸ್ಯೆ ಬಗ್ಗೆ ಪಿಎಂ ಮೋದಿ ಪ್ರಸ್ತಾಪ ಮಾಡಿದ್ದರು. ರಾಜ್ಯದಲ್ಲಿ 28 ಅಭ್ಯರ್ಥಿಗಳನ್ನು ಗೆಲ್ಲಿಸಿ ನವದೆಹಲಿಗೆ ಕಳುಹಿಸೋಣ. ಬಳಿಕ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿಕೊಡಿ ಎಂದು ಕೇಳೋಣ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:33 pm, Sat, 20 April 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ