ಬಿಬಿಎಂಪಿ ವ್ಯಾಪ್ತಿಯಲ್ಲಿ ಅಂಚೆ ಮತದಾನ ಮುಕ್ತಾಯ: 3 ಕ್ಷೇತ್ರಗಳಲ್ಲಿ ಶೇ. 94.49 ರಷ್ಟು ಮತದಾನ

ಲೋಕಸಭೆ ಚುನಾವಣೆ ಹಿನ್ನೆಲೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಂಚೆ ಮತದಾನ ಮುಕ್ತಾಯವಾಗಿದೆ. ಬೆಂಗಳೂರು, ಕೇಂದ್ರ, ಉತ್ತರ, ದಕ್ಷಿಣ ಕ್ಷೇತ್ರಗಳಲ್ಲಿ ಶೇ. 94.49 ರಷ್ಟು ಅಂಚೆ ಮತದಾನ ಮಾಡಲಾಗಿದೆ. 85 ವರ್ಷ ಮೇಲ್ಪಟ್ಟವರು ಹಾಗೂ ವಿಶೇಷ ಚೇತನರ ಅಂಚೆ ಮತದಾನಕ್ಕೆ ಅವಕಾಶ ನೀಡಲಾಗಿತ್ತು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಅಂಚೆ ಮತದಾನ ಮುಕ್ತಾಯ: 3 ಕ್ಷೇತ್ರಗಳಲ್ಲಿ ಶೇ. 94.49 ರಷ್ಟು ಮತದಾನ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Apr 19, 2024 | 5:19 PM

ಬೆಂಗಳೂರು, ಏಪ್ರಿಲ್ 19: ಬಿಬಿಎಂಪಿ (bbmp) ವ್ಯಾಪ್ತಿಯಲ್ಲಿ ಅಂಚೆ ಮತದಾನ ಮುಕ್ತಾಯವಾಗಿದೆ. 85 ವರ್ಷ ಮೇಲ್ಪಟ್ಟವರು ಹಾಗೂ ವಿಶೇಷ ಚೇತನರ ಅಂಚೆ ಮತದಾನಕ್ಕೆ (Voting) ಅವಕಾಶ ನೀಡಲಾಗಿತ್ತು. ಪಾಲಿಕೆ ವ್ಯಾಪ್ತಿಯ 3 ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಶೇ. 94.49 ರಷ್ಟು ಅಂಚೆ ಮತದಾನವಾಗಿದೆ. ಬೆಂಗಳೂರು ವ್ಯಾಪ್ತಿಯಲ್ಲಿ ಹಿರಿಯ ನಾಗರಿಕರಿಂದ ಬಾರಿ ಮತದಾನವಾಗಿದೆ. ಬೆಂಗಳೂರು ನಗರ ಪ್ರದೇಶದಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಮತ್ತು ಅಂಗವಿಕಲರಿಗೆ ಮತದಾನ ಮಾಡಲಾಗಿದೆ.

ನಗರದಲ್ಲಿ 85 ವರ್ಷ ಮೇಲ್ಪಟ್ಟ ಒಟ್ಟು 1,13,108 ಹಿರಿಯ ನಾಗರಿಕರ ಪೈಕಿ 7,556 ಹಿರಿಯರು ಮಾತ್ರ ಮನೆಯಿಂದಲೇ ಮತದಾನ ಮಾಡಲು ನೋಂದಾಯಿಸಿಕೊಂಡಿದ್ದರು. ಅದೇ ರೀತಿಯಾಗಿ 30,693 ಅಂಗವಿಕಲರ ಪೈಕಿ 302 ಮಂದಿ ಮಾತ್ರ ಮನೆಯಿಂದ ಮತ ಚಲಾಯಿಸಲು ನೋಂದಣಿ ಮಾಡಿಕೊಂಡಿದ್ದರು. ಇದರಿಂದ ಒಟ್ಟು ನೋಂದಾಯಿತ ಮನೆ ಮತದಾರರ ಸಂಖ್ಯೆ 7,858ಕ್ಕೆ ಏರಿಕೆ ಆಗಿತ್ತು.

ಇದನ್ನೂ ಓದಿ: ಸಂಸದ ತೇಜಸ್ವಿ ಸೂರ್ಯ ಭಾವಚಿತ್ರದ ನಕಲಿ ಎಟಿಎಂ ಕಾರ್ಡ್ ವಿತರಿಸಿ ಕಾಂಗ್ರೆಸ್‌ನಿಂದ ವಿನೂತನ ಪ್ರಚಾರ

ಲೋಕಸಭೆ ಚುನಾವಣೆಗೆ ಕರ್ನಾಟಕದ 28 ಸ್ಥಾನಗಳಿಗೆ ಎರಡು ಹಂತಗಳಲ್ಲಿ ಅಂದರೆ ಏಪ್ರಿಲ್ 26 ಮತ್ತು ಮೇ 7 ರಂದು (ಎರಡನೇ ಮತ್ತು ಮೂರನೇ ಹಂತ) ಮತದಾನ ನಡೆಯಲಿದೆ.

ಹಂತ 1: ಉಡುಪಿ ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ.

ಇದನ್ನೂ ಓದಿ: ಮತದಾರರಿಗೆ ಬೆದರಿಕೆ ಆರೋಪ: ಡಿಕೆ ಶಿವಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಹಂತ 2: ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ.

ಕ್ಷೇತ್ರ                                     ನೋಂದಣಿ           ಮತದಾನ          ಶೇ.

ಬೆಂಗಳೂರು ಉತ್ತರ                   2062                         1923             93.26% ಬೆಂಗಳೂರು ಕೇಂದ್ರ                  1822                          1720             94.40% ಬೆಂಗಳೂರು ದಕ್ಷಿಣ                   2523                          2411              95.56% ಒಟ್ಟು                                         6407                          6054             94.49%

ವರದಿ: ಶಾಂತ ಮೂರ್ತಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:53 pm, Fri, 19 April 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ