ಲೋಕಸಭಾ ಚುನಾವಣೆ 2024: ವೋಟರ್​ ಐಡಿ ಇಲ್ಲದಿದ್ದರೂ ಈ ದಾಖಲೆಗಳೊಂದಿಗೆ ನೀವು ಮತದಾನ ಮಾಡ್ಬಹುದು

Loksabha Elections 2024: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಎರಡು ಹಂತದಲ್ಲಿ ನಡೆಯಲಿದ್ದು, ಏಪ್ರಿಲ್ 26ರಂದು ಮೊದಲ ಹಂತದಲ್ಲಿ ಒಟ್ಟು 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಇನ್ನುಳಿದ 14 ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಮೇ 7ರಂದು ಮತದಾನ ನಡೆಯಲಿದೆ. ಹಾಗಾದ್ರೆ, ವೋಟರ್ ಐಡಿ ಇಲ್ಲದಿದ್ದರೂ ಯಾವೆಲ್ಲಾ ದಾಖಲೆಗಳನ್ನು ತೋರಿಸಿ ಮತದಾನ ಮಾಡಬಹುದು ಎನ್ನುವ ವಿವರ ಇಲ್ಲಿದೆ.

ಲೋಕಸಭಾ ಚುನಾವಣೆ 2024: ವೋಟರ್​ ಐಡಿ ಇಲ್ಲದಿದ್ದರೂ ಈ ದಾಖಲೆಗಳೊಂದಿಗೆ ನೀವು ಮತದಾನ ಮಾಡ್ಬಹುದು
ಸಾಂದರ್ಭಿಕ ಚಿತ್ರ
Follow us
ರಮೇಶ್ ಬಿ. ಜವಳಗೇರಾ
|

Updated on: Apr 25, 2024 | 9:05 AM

ಬೆಂಗಳೂರು, (ಏಪ್ರಿಲ್ 25): ಕರ್ನಾಟಕದಲ್ಲಿ (Karnataka) ಲೋಕಸಭಾ ಚುನಾವಣೆ (Loksabha Elections 2024) ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆಯಲಿದೆ. 14 ಕ್ಷೇತ್ರಗಳಿಗೆ ಏಪ್ರಿಲ್ 26 ರಂದು ಮತದಾನ ನಡೆಯಲಿದೆ. ಇನ್ನುಳಿದ ಉತ್ತರ ಕರ್ನಾಟಕದ ಭಾಗದ 14 ಕ್ಷೇತ್ರಗಳಿಗೆ ಮೇ 7 ರಂದು ಮತದಾನ ನಡೆಯಲಿದೆ. ಇನ್ನು ಮತ ಚಲಾಯಿಸಲು ಮತಗಟ್ಟೆ ಪ್ರವೇಶಿಸುವ ಮತದಾರರು ಮತಗಟ್ಟೆ ಅಧಿಕಾರಿಗೆ ತಮ್ಮ ಗುರುತನ್ನು ಖಾತ್ರಿ ಪಡಿಸಲು ಫೋಟೋ ಇರುವ ಗುರುತಿನ ಚೀಟಿಯನ್ನು(identity card) ತೋರಿಸಬೇಕು. ಹೀಗಾಗಿ ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದ್ದು, ವೋಟರ್​ ಐಡಿ ಕಾರ್ಡ್ ಇಲ್ಲದಿದ್ದರೂ ಸಹ ನೀವು ಮತದಾನ ಮಾಡಬಹುದು. ಹಾಗಾದ್ರೆ, ಯಾವೆಲ್ಲಾ ಗುರುತಿನ ಚೀಟಿ ಮೂಲಕ ಮತದಾನ ಮಾಡಬಹುದು ಎನ್ನುವುದು ಈ ಕೆಳಗಿನಂತಿದೆ.

ಇದನ್ನೂ ಓದಿ: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಬಲ್ ಸೆಕ್ಯೂರಿಟಿ ಸಿಸ್ಟಮ್, ಕರ್ನಾಟಕದಲ್ಲಿ ಎಷ್ಟು ಮತದಾರರು? ಇಲ್ಲಿದೆ ವಿವರ

ಎಲೆಕ್ಷನ್ ವೋಟರ್ ಐಡಿ ಇಲ್ಲವಾದಲ್ಲಿ ಪರ್ಯಾಯ ದಾಖಲೆಗಳು lok sabha election 2024 phase 2 polls voting in Karnataka on 26h April Don't have a Voter ID card You can still vote for lok sabha if you have these documents

  • ಆಧಾರ್ ಕಾರ್ಡ್
  • MNREGA ಜಾಬ್ ಕಾರ್ಡ್
  • ಬ್ಯಾಂಕ್/ಪೋಸ್ಟ್ ಆಫೀಸ್ ನೀಡಿದ ಭಾವಚಿತ್ರವಿರುವ ಪಾಸ್‌ಬುಕ್‌ಗಳು
  • ಕಾರ್ಮಿಕ ಸಚಿವಾಲಯದ ಯೋಜನೆಯ ಅಡಿಯಲ್ಲಿ ನೀಡಲಾದ ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್, ಚಾಲನಾ ಪರವಾನಗಿ.
  • ಪ್ಯಾನ್ ಕಾರ್ಡ್.
  • NPR ಅಡಿಯಲ್ಲಿ RGI ನೀಡಿದ ಸ್ಮಾರ್ಟ್ ಕಾರ್ಡ್, ಭಾರತೀಯ ಪಾಸ್‌ಪೋರ್ಟ್
  • ಭಾವಚಿತ್ರ ಹೊಂದಿರುವ ಪಿಂಚಣಿಯ ದಾಖಲೆ.
  • ಕೇಂದ್ರ / ರಾಜ್ಯ ಸರ್ಕಾರ / ಪಿಎಸ್‌ಯು / ಪಬ್ಲಿಕ್ ಲಿಮಿಟೆಡ್ ಕಂಪನಿಗಳು ಉದ್ಯೋಗಿಗಳಿಗೆ ನೀಡಿದ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿಗಳು
  • MPಗಳು/MLAಗಳು/MLC ಗಳಿಗೆ ನೀಡಲಾದ ಅಧಿಕೃತ ಗುರುತಿನ ಚೀಟಿಗಳು
  • ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ, ಭಾರತ ಸರ್ಕಾರ ನೀಡಿರುವ ವಿಶಿಷ್ಟ ಅಂಗವೈಕಲ್ಯ ID (UDID) ಕಾರ್ಡ್.

ಭಾವಚಿತ್ರ ಹೊಂದಿರುವ ಮತದಾರರ ಗುರುತಿನ ಚೀಟಿಯಲ್ಲಿ(ಎಲೆಕ್ಷನ್ ಕಾರ್ಡ್) ದೋಷಗಳಿದ್ದರೆ, ಇಲ್ಲವೆ ಗುರುತಿನ ಚೀಟಿ ತರದಿದ್ದ ಸಂದರ್ಭದಲ್ಲಿ ಭಾರತ ಆಯೋಗ ಪರಿಗಣಿಸಿರುವ ಮೇಲಿನ ದಾಖಲೆಗಳ ಪೈಕಿ ಒಂದನ್ನು ತೋರಿಸಿ ಮತದಾನ ಮಾಡಬಹುದು. ಒಂದು ವೇಳೆ ಮತದಾರರ ಗುರುತಿನ ಚೀಟಿಯಲ್ಲಿ ದೋಷವಿದ್ದರೆ, ಇಲ್ಲವೆ ಮತದಾರರ ಗುರುತಿನ ಚೀಟಿಯಲ್ಲಿರುವ ವ್ಯಕ್ತಿಯ ಭಾವಚಿತ್ರ ಹೊಂದಾಣಿಕೆ ಆಗದಿದ್ದಾಗ ಮೇಲೆ ತಿಳಿಸಲಾಗಿರುವ ದಾಖಲಾತಿಗಳ ಪೈಕಿ ಒಂದನ್ನು ತೋರಿಸಿ ಮತ ಚಲಾಯಿಸಬಹುದು.

ಎಡಗೈ ತೋರು ಬೆರಳಿಗೆ ಅಳಿಸಲಾಗದ ಶಾಯಿ: ರಾಜ್ಯದಲ್ಲಿ ಮೊದಲ ಹಂತದಲ್ಲಿ ನಡೆಯುವ ಮತದಾನದ ವೇಳೆ ಎಲ್ಲ ಮತ ಹಾಕಿದ ಮತದಾರರ ಎಡಗೈ ತೋರು ಬೆರಳಿಗೆ ಅಳಿಸಲಾಗದ ಶಾಯಿಯನ್ನು (ಚುನಾವಣಾ ನೀತಿ ಸಂಹಿತೆ 1961 ರ ನಿಯಮ 49K ಪ್ರಕಾರ) ಹಚ್ಚಲಾಗುತ್ತದೆ ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ