ಬೆಂಗಳೂರು, (ಏಪ್ರಿಲ್ 25): ಕರ್ನಾಟಕದಲ್ಲಿ (Karnataka) ಲೋಕಸಭಾ ಚುನಾವಣೆ (Loksabha Elections 2024) ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆಯಲಿದೆ. 14 ಕ್ಷೇತ್ರಗಳಿಗೆ ಏಪ್ರಿಲ್ 26 ರಂದು ಮತದಾನ ನಡೆಯಲಿದೆ. ಇನ್ನುಳಿದ ಉತ್ತರ ಕರ್ನಾಟಕದ ಭಾಗದ 14 ಕ್ಷೇತ್ರಗಳಿಗೆ ಮೇ 7 ರಂದು ಮತದಾನ ನಡೆಯಲಿದೆ. ಇನ್ನು ಮತ ಚಲಾಯಿಸಲು ಮತಗಟ್ಟೆ ಪ್ರವೇಶಿಸುವ ಮತದಾರರು ಮತಗಟ್ಟೆ ಅಧಿಕಾರಿಗೆ ತಮ್ಮ ಗುರುತನ್ನು ಖಾತ್ರಿ ಪಡಿಸಲು ಫೋಟೋ ಇರುವ ಗುರುತಿನ ಚೀಟಿಯನ್ನು(identity card) ತೋರಿಸಬೇಕು. ಹೀಗಾಗಿ ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದ್ದು, ವೋಟರ್ ಐಡಿ ಕಾರ್ಡ್ ಇಲ್ಲದಿದ್ದರೂ ಸಹ ನೀವು ಮತದಾನ ಮಾಡಬಹುದು. ಹಾಗಾದ್ರೆ, ಯಾವೆಲ್ಲಾ ಗುರುತಿನ ಚೀಟಿ ಮೂಲಕ ಮತದಾನ ಮಾಡಬಹುದು ಎನ್ನುವುದು ಈ ಕೆಳಗಿನಂತಿದೆ.
ಭಾವಚಿತ್ರ ಹೊಂದಿರುವ ಮತದಾರರ ಗುರುತಿನ ಚೀಟಿಯಲ್ಲಿ(ಎಲೆಕ್ಷನ್ ಕಾರ್ಡ್) ದೋಷಗಳಿದ್ದರೆ, ಇಲ್ಲವೆ ಗುರುತಿನ ಚೀಟಿ ತರದಿದ್ದ ಸಂದರ್ಭದಲ್ಲಿ ಭಾರತ ಆಯೋಗ ಪರಿಗಣಿಸಿರುವ ಮೇಲಿನ ದಾಖಲೆಗಳ ಪೈಕಿ ಒಂದನ್ನು ತೋರಿಸಿ ಮತದಾನ ಮಾಡಬಹುದು. ಒಂದು ವೇಳೆ ಮತದಾರರ ಗುರುತಿನ ಚೀಟಿಯಲ್ಲಿ ದೋಷವಿದ್ದರೆ, ಇಲ್ಲವೆ ಮತದಾರರ ಗುರುತಿನ ಚೀಟಿಯಲ್ಲಿರುವ ವ್ಯಕ್ತಿಯ ಭಾವಚಿತ್ರ ಹೊಂದಾಣಿಕೆ ಆಗದಿದ್ದಾಗ ಮೇಲೆ ತಿಳಿಸಲಾಗಿರುವ ದಾಖಲಾತಿಗಳ ಪೈಕಿ ಒಂದನ್ನು ತೋರಿಸಿ ಮತ ಚಲಾಯಿಸಬಹುದು.
ಎಡಗೈ ತೋರು ಬೆರಳಿಗೆ ಅಳಿಸಲಾಗದ ಶಾಯಿ: ರಾಜ್ಯದಲ್ಲಿ ಮೊದಲ ಹಂತದಲ್ಲಿ ನಡೆಯುವ ಮತದಾನದ ವೇಳೆ ಎಲ್ಲ ಮತ ಹಾಕಿದ ಮತದಾರರ ಎಡಗೈ ತೋರು ಬೆರಳಿಗೆ ಅಳಿಸಲಾಗದ ಶಾಯಿಯನ್ನು (ಚುನಾವಣಾ ನೀತಿ ಸಂಹಿತೆ 1961 ರ ನಿಯಮ 49K ಪ್ರಕಾರ) ಹಚ್ಚಲಾಗುತ್ತದೆ ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ