ಲೋಕಸಭಾ ಚುನಾವಣೆ: ಕರುನಾಡಿನಲ್ಲಿ ಇಂದು ಮೊದಲ ಹಂತದ ಮತದಾನ, 14 ಕ್ಷೇತ್ರದಲ್ಲಿ ವೋಟಿಂಗ್.. 247 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ!

Lok Sabha Election 2024 Phase 2 Voting: ಕಾಂಗ್ರೆಸ್​ಗೆ ಪ್ರತಿಷ್ಠೆ.. ಬಿಜೆಪಿಗೆ ಅಗ್ನಿ ಪರೀಕ್ಷೆ.. ಕಮಲ ಪಡೆ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್​ಗೆ ಉಳಿವಿನ ಪ್ರಶ್ನೆ. ಹೀಗೆ ನೇರಾ ನೇರ ಪೈಪೋಟಿಗೆ ಕಾರಣವಾಗಿರುವ ರೋಚಕತೆ ಹೆಚ್ಚಿಸಿರುವ ಮತ ಮಹಾಯುದ್ಧಕ್ಕೆ ಕೌಂಟ್​ಡೌನ್ ಶುರುವಾಗಿದೆ. ಇಡೀ ದೇಶದಲ್ಲಿ ಇಂದು ಎರಡನೇ ಹಂತದ ಮತದಾನ ನಡೆಯುತ್ತಿದ್ದರೆ, ಕರುನಾಡ ಪಾಲಿಗೆ ಮೊದಲ ಹಂತವಾಗಿದೆ.

ಲೋಕಸಭಾ ಚುನಾವಣೆ: ಕರುನಾಡಿನಲ್ಲಿ ಇಂದು ಮೊದಲ ಹಂತದ ಮತದಾನ, 14 ಕ್ಷೇತ್ರದಲ್ಲಿ ವೋಟಿಂಗ್.. 247 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ!
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Apr 26, 2024 | 5:00 AM

ಬೆಂಗಳೂರು, (ಏಪ್ರಿಲ್ 26) :ಇಡೀ ಕರ್ನಾಟಕವೇ(Karnataka) ಎದುರು ನೋಡುತ್ತಿರುವ ಲೋಕಸಭಾ ಚುನಾವಣೆಯ ಮತಹಬ್ಬಕ್ಕೆ (Lok Sabha Election 2024 Phase 2 Voting) ಕ್ಷಣಗಣನೆ ಶುರುವಾಗಿದೆ. ಇಂದು ಕರುನಾಡಿನ 14 ಕ್ಷೇತ್ರಗಳಲ್ಲಿ ಮತದಾನ (Voting) ನಡೆಯಲಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದ್ದು,  ಆಯೋಗ ಮತದಾನಕ್ಕೆ ಎಲ್ಲಾ ಸಿದ್ಧತೆಯನ್ನ ಮಾಡಿಕೊಂಡಿದೆ.  ಒಂದು ತಿಂಗಳಿನಿಂದಲೂ ನಾಯಕರ ಭಾಷಣ, ಭರಪೂರ ಭರವಸೆ ಕೇಳಿರೋ ಮತದಾರ ಇಂದು ತನ್ನ ಹಕ್ಕು ಚಲಾಯಿಸಲಿದ್ದಾನೆ. ಬೆಂಗಳೂರಿನ ನಾಲ್ಕು ಕ್ಷೇತ್ರ ಜತೆಗೆ ಮಂಡ್ಯ, ಮೈಸೂರು, ತುಮಕೂರಿನಲ್ಲಿ ವೋಟಿಂಗ್ ನಡೆಯಲಿದೆ. ಹಾಗೇನೆ ಹಾಸನ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು, ಚಿತ್ರದುರ್ಗ ಹೀಗೆ ಒಟ್ಟು 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಕಾಂಗ್ರೆಸ್‌ನ 14, ಬಿಜೆಪಿಯ 11, ಜೆಡಿಎಸ್‌ನ ಮೂವರು ಸೇರಿದಂತೆ 247 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆ ಸೇರಲಿದೆ.

ಇನ್ನು ನಿನ್ನೆ(ಏಪ್ರಿಲ್ 25) ಬೆಳಗಿನಿಂದಲೇ 14 ಕ್ಷೇತ್ರಗಳಲ್ಲಿ ಮಸ್ಟರಿಂಗ್‌ ಮಾಡಿ ಇವಿಎಂ, ವಿವಿಪ್ಯಾಟ್‌, ಮತದಾರರ ಪಟ್ಟಿ, ಶಾಹಿ ಸೇರಿದಂತೆ ಚುನಾವಣೆ ಸಾಮಾಗ್ರಿ ರವಾನಿಸಲಾಗಿದೆ. ಇವುಗಳನ್ನ ಹೊತ್ತು ಚುನಾವಣೆ ಸಿಬ್ಬಂದಿ ಮತಗಟ್ಟೆ ಸೇರಿದ್ದಾರೆ.

ಇದನ್ನೂ ಓದಿ: ಲೋಕಸಭಾ ಚುನಾವಣೆ 2024: ವೋಟರ್​ ಐಡಿ ಇಲ್ಲದಿದ್ದರೂ ಈ ದಾಖಲೆಗಳೊಂದಿಗೆ ನೀವು ಮತದಾನ ಮಾಡ್ಬಹುದು

ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯಲಿದ್ದು, ಒಟ್ಟು 2ಕೋಟಿ 88 ಲಕ್ಷದ 19 ಸಾವಿರದ 342 ಮತದಾರರು ಹಕ್ಕು ಚಲಾಯಿಸಲಿದ್ದಾರೆ. ಈ ಪೈಕಿ 1ಕೋಟಿ 44 ಲಕ್ಷದ 17ಸಾವಿರದ 530 ಪುರುಷ ಮತದಾರರು, 1ಕೋಟಿ 43ಲಕ್ಷದ 87ಸಾವಿರದ 585 ಮಹಿಳಾ ಮತದಾರರಿದ್ದಾರೆ. ಮತಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ, ಮತದಾನದ ವೇಳೆ ವೇಳೆ ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಮನ್‌ರೆಗಾ ಕಾರ್ಡ್, ಬ್ಯಾಂಕ್ ಪಾಸ್‌ ಬುಕ್ ಡ್ರೈವಿಂಗ್ ಲೈಸೆನ್ಸ್ ತೋರಿಸಿ ಹಕ್ಕು ಚಲಾಯಿಸಬಹುದು. 30ಸಾವಿರದ 600 ಮತಗಟ್ಟೆಗಳ ಪೈಕಿ 19,701 ಮತಗಟ್ಟೆಗಳಲ್ಲಿ ಲೈವ್​ವೆಬ್​ಕಾಸ್ಟ್ ಇರಲಿದೆ ಅಂತಾ ಚುನಾವಣಾ ಆಯೋಗ ತಿಳಿಸಿದೆ.

ಬೆಂಗಳೂರು ಗ್ರಾಮಾಂತರ, ಮಂಡ್ಯದಲ್ಲಿ ಹೈವೋಲ್ಟೇಜ್‌ ಕದನ!

ಇಂದು ನಡೆಯೋ 14 ಕ್ಷೇತ್ರಗಳ ಪೈಕಿ ಬೆಂಗಳೂರು ಗ್ರಾಮಾಂತರ ಹಾಗೂ ಮಂಡ್ಯ ಕ್ಷೇತ್ರಗಳು ಹೈವೋಲ್ಟೇಜ್‌ ಕ್ಷೇತ್ರಗಳಾಗಿವೆ. ಹೀಗಾಗಿ ಈ ಎರಡೂ ಕ್ಷೇತ್ರಗಳಲ್ಲಿ ಪೊಲೀಸರ ಭದ್ರತೆ ಹೆಚ್ಚಿಸಲಾಗಿದೆ. ಇನ್ನೂ ಚುನಾವಣಾ ಕಾರ್ಯಕ್ಕಾಗಿ ಆಯೋಗ 3ಸಾವಿರದ 800 ಬಸ್‌ಗಳನ್ನ ಬಳಕೆ ಮಾಡಿಕೊಳ್ತಿದೆ. ಇದರಲ್ಲಿ 2,100 KSRTC ಬಸ್, 1,700 BMTC ಜೊತೆಗೆ ಖಾಸಗಿ ಬಸ್ ಮತ್ತು ಶಾಲಾ ವಾಹನಗಳನ್ನ ಬಳಸಿಕೊಂಡಿದೆ. ಹೀಗಾಗಿ ಇಂದು ಮತ್ತು ನಾಳೆ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯೆಯವಾಗಲಿದೆ. ಖಾಸಗಿ ಬಸ್‌ಗಳಿಗೆ ಬೇಡಿಕೆ ಹೆಚ್ಚಾಗಿದೆ. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಬಸ್​ಗಳು ರಸ್ತೆಗೆ ಇಳಿದಿವೆ. ಬೇಡಿಕೆ ಹೆಚ್ಚಾಗ್ತಿದ್ದಂತೆ, ಟಿಕೆಟ್ ರೇಟ್ ಕೂಡ ಏರಿಕೆಯಾಗಿದೆ. ಚುನಾವಣೆಯನ್ನೇ ಬಂಡವಾಳ ಮಾಡಿಕೊಂಡಿರೋ ಖಾಸಗಿ ಬಸ್ ಮಾಲೀಕರು, ಟಿಕೆಟ್ ರೇಟ್ ಒನ್ ಟು ಡಬಲ್ ಮಾಡಿದ್ದಾರೆ.

ಕರ್ನಾಟಕ ಸೇರಿ 13 ರಾಜ್ಯದ 88 ಕ್ಷೇತ್ರಗಳಲ್ಲಿ ವೋಟಿಂಗ್!

ಕರ್ನಾಟಕ ಮಾತ್ರವಲ್ಲದೇ ಒಟ್ಟು 13 ರಾಜ್ಯದ 88 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಕೇರಳ 20, ಮಧ್ಯಪ್ರದೇಶ 06, ಮಹಾರಾಷ್ಟ್ರ 08, ರಾಜಸ್ಥಾನ 13, ಉತ್ತರ ಪ್ರದೇಶದ 8 ಕ್ಷೇತ್ರ ಸೇರಿ ಒಟ್ಟು 88 ಲೋಕಸಭಾ ಕ್ಷೇತ್ರಗಳಿಗೆ ವೋಟಿಂಗ್ ನಡೆಯಲಿದೆ. ಇನ್ನು ರಾಹುಲ್ ಸ್ಪರ್ಧಿಸಿರುವ ವಯನಾಡಿನಲ್ಲಿ ಇಂದು ವೋಟಿಂಗ್ ನಡೆಯಲಿದೆ. ಇದರ ಜೊತೆಗೆ ಕೇರಳದ ತಿರುವನಂತಪುರಂ ಕ್ಷೇತ್ರದಿಂದ ಕಾಂಗ್ರೆಸ್ ಹಾಲಿ ಸಂಸದ ಶಶಿ ತರೂರ್ ಕಣದಲ್ಲಿದ್ದು, ಅವರ ವಿರುದ್ಧ ಕೇಂದ್ರದ ಹಾಲಿ ಸಚಿವ ರಾಜೀವ್ ಚಂದ್ರಶೇಖರ್ ಇದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು