AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ವರ್ಷ ಮಾತ್ರವಲ್ಲ, ಭವಿಷ್ಯದ ದೃಷ್ಟಿಯಿಂದಲೂ ನಿಮ್ಮ ‌ಸಹಕಾರ ಬೇಕು: ಜೈಶಂಕರ್

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ವಿದೇಶಾಂಗ ಸಚಿವ ಎಸ್​ ಜೈಶಂಕರ್​ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಹಲವು ವಿಚಾರಗಳನ್ನು ತಿಳಿಸಿದರು. ಪ್ರಣಾಳಿಕೆಯಲ್ಲಿ ‌ತಿಳಿಸಿರುವಂತೆ ಮುಂದಿನ ವರ್ಷಗಳಲ್ಲಿ ನಾವು ನಡೆದುಕೊಳ್ಳುತ್ತೇವೆ ಎಂದು ಬಿಜೆಪಿ ನಾಯಕ ಎಸ್​ ಜೈಶಂಕರ್​ ಹೇಳಿದರು.

5 ವರ್ಷ ಮಾತ್ರವಲ್ಲ, ಭವಿಷ್ಯದ ದೃಷ್ಟಿಯಿಂದಲೂ ನಿಮ್ಮ ‌ಸಹಕಾರ ಬೇಕು: ಜೈಶಂಕರ್
ವಿದೇಶಾಂಗ ಸಚಿವ ಎಸ್​. ಜೈಶಂಕರ್
TV9 Web
| Edited By: |

Updated on: Apr 15, 2024 | 2:48 PM

Share

ಬೆಂಗಳೂರು ಏಪ್ರಿಲ್​ 15: ನಮ್ಮ ಪಕ್ಷದ ಪ್ರಣಾಳಿಕೆ ಬಿಡುಗಡೆಯಾಗಿದೆ. ಮುಂದಿನ ಐದು ವರ್ಷ ಏನು ಮಾಡುತ್ತೇವೆ ಅನ್ನುವುದನ್ನು ಹೇಳಿದ್ದೇವೆ. ಕೇವಲ ಐದು ವರ್ಷ ಮಾತ್ರವಲ್ಲ, ಭವಿಷ್ಯದ ದೃಷ್ಟಿಯಿಂದಲೂ ನಿಮ್ಮ ‌ಸಹಕಾರ ಬೇಕು ಎಂದು ವಿದೇಶಾಂಗ ಸಚಿವ ಎಸ್​. ಜೈಶಂಕರ್ (S Jaishankar)​ ಹೇಳಿದರು. ಬೆಂಗಳೂರಿನ (Bengaluru) ಚುನಾವಣಾ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮತ್ತೊಮ್ಮೆ ಮೋದಿ ಸಲುವಾಗಿ ನಾನು ಬೆಂಗಳೂರಿಗೆ ಬಂದಿದ್ದೇನೆ ಎಂದರು.

ನಮ್ಮ ಹತ್ತು ವರ್ಷದ ಸಾಧನೆಯನ್ನು ಜನರ ಮುಂದೆ ಇಟ್ಟಿದ್ದೇವೆ. 25 ಕೋಟಿ ಜನ ಬಡತನದಿಂದ ಹೊರಬಂದಿದ್ದಾರೆ. ಕೊರೊನಾ ವಿರುದ್ಧ ಹೋರಾಡಲು ವ್ಯಾಕ್ಸಿನ್ ಅಭಿವೃದ್ಧಿ ‌ಪಡಿಸಿದ್ದೇವೆ. ಪ್ರತಿದಿನ ದೇಶದಲ್ಲಿ ರಸ್ತೆ, ರೈಲ್ವೇ ಟ್ಯ್ರಾಕ್​​ ನಿರ್ಮಾಣವಾಗುತ್ತಿವೆ. ಜಿ20 ಯಶಸ್ವಿಯಾಗಿ ನಿರ್ವಹಿಸಿದ್ದೇವೆ. ಯುದ್ಧ ಪೀಡಿತ ದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಆಪರೇಷನ್ ಗಂಗಾ ಸೇರಿದಂತೆ ಹಲವು ಹೆಸರುಗಳಲ್ಲಿ ಕಾರ್ಯಾಚರಣೆ ನಡೆಸಿ ತಾಯ್ನಾಡಿಗೆ ಕರೆ ತಂದಿದ್ದೇವೆ ಎಂದು ತಿಳಿಸಿದರು.

ಪ್ರಣಾಳಿಕೆಯಲ್ಲಿ ‌ತಿಳಿಸಿರುವಂತೆ ಮುಂದಿನ ವರ್ಷಗಳಲ್ಲಿ ನಾವು ನಡೆದುಕೊಳ್ಳುತ್ತೇವೆ. ವರ್ಷಕ್ಕೆ ಸರಾಸರಿ ಎಂಟು ವಿಮಾನ ನಿಲ್ದಾಣಗಳ ನಿರ್ಮಾಣ ಮಾಡುತ್ತೇವೆ. ಮೂಲಭೂತ ಸೌಕರ್ಯಗಳ ವೃದ್ಧಿ, ಭಯೋತ್ಪಾದನೆ ಚಟುವಟಿಕೆಗಳ ನಿಗ್ರಹಕ್ಕೆ ಕಠಿಣ ಕ್ರಮ ವಹಿಸಲಾಗಿದೆ. ಪಿಎಂ ಗರೀಬ್ ಕಲ್ಯಾಣ್ ಯೋಜನೆ ಮುಂದಿನ ಐದು ವರ್ಷವೂ ಮುಂದುವರೆಯಲಿದೆ. ಆವಾಸ್​ ಯೋಜನೆ ಅಡಿಯಲ್ಲಿ ಮುಂದಿನ ಐದು ವರ್ಷ 3 ಕೋಟಿ ಮನೆಗಳನ್ನು ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ. ಹಿರಿಯರಿಗೆ ಆಯುಷ್ಮಾನ್ ಭಾರತ್ ವಿಸ್ತರಿಸಲಾಗುವುದು. ವಿಪುಲ ಉದ್ಯೋಗವಕಾಶ, ಮುದ್ರಾ ಯೋಜನೆಯನ್ನು ಸ್ಟಾರ್ಟಪ್​ಗಳಿಗೂ ವಿಸ್ತರಣೆ ಹೀಗೆ ಹಲವು ಭರವಸೆಗಳನ್ನು ಕೊಡಲಾಗಿದೆ ಎಂದು ತಿಳಿಸಿದರು.

 ಇದನ್ನೂಓದಿ: ನಿಮ್ಮ ಮಾತನ್ನು ಗೌರವಿಸುತ್ತೇವೆ ಜೈಶಂಕರ್​​, ಖಂಡಿತ 17 ಭಾರತೀಯರನ್ನು ಬಿಡುಗಡೆ ಮಾಡುತ್ತೇವೆ ಎಂದ ಇರಾನ್

ಗಡಿಯಲ್ಲಿ ಭದ್ರತೆ ಹೆಚ್ಚಿಸಿದ್ದೇವೆ. ಸೈಬರ್ ದಾಳಿ ಮೇಲೆ ಕಣ್ಣಿಟ್ಟಿದ್ದೇವೆ. ಬೆಂಗಳೂರಿಗೆ ಸಾಕಷ್ಟು ಯೋಜನೆ ‌ಬಂದಿವೆ. ವಂದೇ ಭಾರತ್, ಸಬರ್ಬನ್ ರೈಲು ಬಂದಿದೆ. ಮೇಕ್ ಇನ್ ಇಂಡಿಯಾಗೆ ಒತ್ತು‌ ನೀಡಿದ್ದೇವೆ. ಕೇಂದ್ರ ಸರ್ಕಾರ ಗಟ್ಟಿಯಾಗಿದೆ. ಇರಾನ್, ಇರಾಕ್​ನಲ್ಲಿ ಸರಣಿ ದಾಳಿಗಳಾಗುತ್ತವೆ. ಇದರಿಂದ ಭಾರತೀಯರು ಹೆದರಿದ್ದಾರೆ. ನಾನು ಅಲ್ಲಿನ ಅಧಿಕಾರಿಗಳೊಂದಿಗೆ ಮಾತಾನಾಡಿದ್ದೇನೆ, ಆದಷ್ಟು ಬೇಗ ಭಾರತಕ್ಕೆ ಮರಳಿ ಎಂದಿದ್ದೇನೆ ಎಂದರು. ರಾಜ್ಯಕ್ಕೆ ಕೇಂದ್ರ ಬರ ಪರಿಹಾರ ಬಿಡುಗಡೆ ಮಾಡದ ವಿಚಾರವಾಗಿ ಮಾತನಾಡಿದ ಅವರು, ಕೇವಲ ಕರ್ನಾಟಕ ಮಾತ್ರವಲ್ಲ, ಇನ್ನೂ ಕೆಲವು ರಾಜ್ಯಗಳದ್ದೂ ಬರ ಪರಿಹಾರ ಬಾಕಿ ಇದೆ. ಬರ ಪರಿಹಾರ ಬಿಡುಗಡೆಗೆ ಆಯೋಗದ ಅನುಮತಿ ಕೇಳಲಾಗಿದೆ ಎಂದು ತಿಳಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್