ಮಾದರಿ ನೀತಿ ಸಂಹಿತೆ ಉಲ್ಲಂಘನೆ: 189 ಪ್ರಕರಣ ದಾಖಲು; ಚುನಾವಣಾ ಆಯೋಗ

ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಈ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದವರ ವಿರುದ್ಧ ಚುನಾವಣಾ ಆಯೋಗ ಶಿಸ್ತು ಕ್ರಮ ಕೈಗೊಳ್ಳುತ್ತದೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ರಾಜ್ಯದಲ್ಲಿ 189 ಪ್ರಕರಣಗಳು ದಾಖಲಾಗಿವೆ.

ಮಾದರಿ ನೀತಿ ಸಂಹಿತೆ ಉಲ್ಲಂಘನೆ: 189 ಪ್ರಕರಣ ದಾಖಲು; ಚುನಾವಣಾ ಆಯೋಗ
ಚುನಾವಣಾ ಆಯೋಗ
Follow us
ವಿವೇಕ ಬಿರಾದಾರ
|

Updated on:Apr 26, 2024 | 12:59 PM

ಬೆಂಗಳೂರು, ಏಪ್ರಿಲ್​ 26: ಲೋಕಸಭೆ ಚುನಾವಣೆಯಲ್ಲಿ (Lok Sabha Election) ಮಾದರಿ ನೀತಿ ಸಂಹಿತೆ (Model Code Conduct) ಉಲ್ಲಂಘನೆ ಆರೋಪದ ಅಡಿಯಲ್ಲಿ ಬುಧವಾರದವರೆಗೂ ರಾಜಕೀಯ ಪಕ್ಷಗಳು ಮತ್ತು ಜನಪ್ರತಿದಗಳ ವಿರುದ್ಧ 189 ಪ್ರಕರಣ ದಾಖಲಾಗಿವೆ ಎಂದು ಚುನಾವಣಾ ಆಯೋಗ (Election Commission) ತಿಳಿಸಿದೆ. ಇವುಗಳಲ್ಲಿ ದ್ವೇಷಪೂರಿತ ಭಾಷಣ 23, ಮತದಾರರನ್ನು ಪ್ರಚೋದಿಸಲು ಯತ್ನಿಸಿದ ಆರೋಪದಡಿ 28, ಧಾರ್ಮಿಕ ಸ್ಥಳಗಳ ದುರ್ಬಳಕೆ ಅಡಿಯಲ್ಲಿ 25 ಮತ್ತು ಮಕ್ಕಳನ್ನು ಪ್ರಚಾರಕ್ಕಾಗಿ ಬಳಸಿಕೊಂಡ ಆರೋಪದಡಿ 15 ಪ್ರಕರಣಗಳು ದಾಖಲಾಗಿವೆ. ಪ್ರಮುಖ ಪಕ್ಷಗಳು ಸೇರಿದಂತೆ ಪಕ್ಷೇತರ ಅಭ್ಯರ್ಥಿಗಳ ವಿರುದ್ಧವೂ ಪ್ರಕರಣ ದಾಖಲಾಗಿವೆ ಎಂದು ತಿಳಿಸಿದೆ.

ಬೆಂಗಳೂರು ನಗರದಲ್ಲಿ 46 ಕೋಟಿ ಜಪ್ತಿ

ಮೂರು ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ಬೆಂಗಳೂರು ನಗರ ಜಿಲ್ಲೆಯೊಂದರಲ್ಲೇ ಚುನಾವಣಾ ಆಯೋಗ 46.11 ಕೋಟಿ ರೂ. ಮೌಲ್ಯದ ನಗದು, ವಸ್ತುಗಳನ್ನು ಜಪ್ತಿ ಮಾಡಿದೆ. ಜಿಲ್ಲಾ ಚುನಾವಣಾ ಕಚೇರಿಯ ಅಂಕಿಅಂಶಗಳ ಪ್ರಕಾರ, ಏಪ್ರಿಲ್ 25 ರವರೆಗೆ ಒಟ್ಟು 6,552 ಎಫ್‌ಐಆರ್‌ಗಳು ದಾಖಲಾಗಿವೆ.

ಇದನ್ನೂ ಓದಿ: ಕರ್ನಾಟಕ ಲೋಕಸಭೆ ಚುನಾವಣೆಗೆ Rapidoದಿಂದ ಉಚಿತ ಸೇವೆ, ಯಾರಿಗೆಲ್ಲ ಲಭ್ಯ, ಇಲ್ಲಿದೆ ಮಾಹಿತಿ

ಲೆಕ್ಕಕ್ಕೆ ಸಿಗದ 11.83 ಕೋಟಿ ನಗದು ಹಾಗೂ 19.2 ಕೋಟಿ ಮೌಲ್ಯದ ಮದ್ಯವನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಅಬಕಾರಿ ಇಲಾಖೆಯು ಚುನಾವಣಾಧಿಕಾರಿಗಳೊಂದಿಗೆ ಸೇರಿ 4,67,629.634 ಲೀಟರ್ ಮದ್ಯವನ್ನು ವಶಪಡಿಸಿಕೊಂಡಿದೆ. 7.17 ಕೋಟಿ ಮೌಲ್ಯದ ಒಟ್ಟು 227.47 ಕೆಜಿ ಮಾದಕ ವಸ್ತುಗಳು ಮತ್ತು 53.71 ಲಕ್ಷ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಸೇರಿದಂತೆ 49.58 ಕೆಜಿ ಬೆಲೆಬಾಳುವ ಲೋಹಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

1.23 ಕೋಟಿ ಮೌಲ್ಯದ ವಸ್ತುಗಳನ್ನು ಹಾಗೂ 6.14 ಕೋಟಿ ಮೌಲ್ಯದ ಹಲವು ವಾಹನಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಜಪ್ತಿ ಮಾಡಲಾದ ವಾಹನಗಳನ್ನು ನಗದು, ಚಿನ್ನ, ಮದ್ಯ, ಬಿಟ್ಟಿ ವಸ್ತುಗಳನ್ನು ಸಾಗಿಸಲು ವಾಹನಗಳನ್ನು ಬಳಸಲಾಗುತ್ತಿತ್ತು. ಪೊಲೀಸರು 129 ಎಫ್‌ಐಆರ್‌ಗಳನ್ನು ದಾಖಲಿಸಿದ್ದರೆ, ಅಬಕಾರಿ ಇಲಾಖೆ 6,423 ಪ್ರಕರಣಗಳನ್ನು ದಾಖಲಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:34 am, Fri, 26 April 24

ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ: ಅಭಿಮಾನಿಗಳ ಆಕ್ರೋಶ
‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ: ಅಭಿಮಾನಿಗಳ ಆಕ್ರೋಶ