ರಾಜ್ಯದ ಹಲವೆಡೆ ಅಕ್ರಮವಾಗಿ ಸಾಗಿಸ್ತಿದ್ದ ನಗದು, ಚಿನ್ನಾಭರಣ ಜಪ್ತಿ; ಎಲ್ಲೆಲ್ಲಿ?

ಲೋಕಸಭಾ ಚುನಾವಣೆ(Lok sabha election) ನೀತಿ ಸಂಹಿತೆ ಜಾರಿ ಹಿನ್ನಲೆ ಚುನಾವಣಾ ಅಕ್ರಮ ನಡೆಯದಂತೆ ಚೆಕ್​ಪೋಸ್ಟ್​ ನಿರ್ಮಿಸಿ ಬೀಗಿ ಬಂದೋಬಸ್ತ್​ ಮಾಡಲಾಗಿದೆ. ಈ ಹಿನ್ನಲೆ ರಾಜ್ಯದ ಹಲವು ಕಡೆಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ರೂಪಾಯಿ ಜೊತೆಗೆ ಚಿನ್ನಾಭರಣಗಳನ್ನು ಜಪ್ತಿ ಮಾಡಲಾಗಿದೆ.

ರಾಜ್ಯದ ಹಲವೆಡೆ ಅಕ್ರಮವಾಗಿ ಸಾಗಿಸ್ತಿದ್ದ ನಗದು, ಚಿನ್ನಾಭರಣ ಜಪ್ತಿ; ಎಲ್ಲೆಲ್ಲಿ?
ಹಣ ಜಪ್ತಿ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Mar 20, 2024 | 10:42 PM

ಬಳ್ಳಾರಿ, ಮಾ.20: ಲೋಕಸಭಾ ಚುನಾವಣೆ(Lok sabha election) ನೀತಿ ಸಂಹಿತೆ ಜಾರಿ ಹಿನ್ನಲೆ ಚುನಾವಣಾ ಅಕ್ರಮ ನಡೆಯದಂತೆ ಚೆಕ್​ಪೋಸ್ಟ್​ ನಿರ್ಮಿಸಿ ಬೀಗಿ ಬಂದೋಬಸ್ತ್​ ಮಾಡಲಾಗಿದೆ. ಈ ಹಿನ್ನಲೆ ರಾಜ್ಯದ ಹಲವು ಕಡೆಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ರೂಪಾಯಿ ಜೊತೆಗೆ ಚಿನ್ನಾಭರಣಗಳನ್ನು ಜಪ್ತಿ ಮಾಡಲಾಗಿದೆ. ಅದರಂತೆ ಬಳ್ಳಾರಿ ತಾಲೂಕಿನ ಸಿಂದವಾಳ ಗ್ರಾಮದ ಬಳಿಯ ಚೆಕ್​ಪೋಸ್ಟ್​ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 26 ಕೆಜಿ ಬೆಳ್ಳಿ ಮತ್ತು 3.55 ಲಕ್ಷ ರೂ. ಹಣವನ್ನು ಬಳ್ಳಾರಿಯಿಂದ ಆಂಧ್ರದ ಆದೋನಿ ಕಡೆ ಸಾಗಿಸುತ್ತಿದ್ದ ವೇಳೆ ವಶಕ್ಕೆ ಪಡೆಯಲಾಗಿದೆ. ಈ ಕುರಿತು ಮೋಕಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕಾರಿನಲ್ಲಿ ಸಾಗಿಸುತ್ತಿದ್ದ 108 ಸೀರೆಗಳ ಜಪ್ತಿ

ಚಿತ್ರದುರ್ಗ: ಚಿತ್ರದುರ್ಗ ಬಳಿ ಕಾರಿನಲ್ಲಿ ಸಾಗಿಸುತ್ತಿದ್ದ 108 ಸೀರೆಗಳ ಜಪ್ತಿ ಮಾಡಲಾಗಿದೆ. ನಗರದ JMIT ಬಳಿ ಚೆಕ್​ಪೋಸ್ಟ್​ನಲ್ಲಿ ತಪಾಸಣೆ ವೇಳೆ ಪತ್ತೆಯಾಗಿದ್ದು, ಬ್ಯಾಗ್​ಗಳಲ್ಲಿ ತುಂಬಿಸಿ ಕಾರಿನಲ್ಲಿ ಸಾಗಿಸಲಾಗುತ್ತಿತ್ತು.  ಸೀರೆ ಸಮೇತ ಕಾರ್​ನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಚಿತ್ರದುರ್ಗ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ:ಕಾಫಿನಾಡಿನಲ್ಲಿ ಚುನಾವಣಾಧಿಕಾರಿಗಳ ಭರ್ಜರಿ ಬೇಟೆ: ಜಿಲ್ಲೆಯ ವಿವಿಧ ಚೆಕ್‌ಪೋಸ್ಟ್‌ನಲ್ಲಿ ಲಕ್ಷಾಂತರ ಮೌಲ್ಯದ ನಗದು, ಗಿಫ್ಟ್​ ಜಪ್ತಿ

ಓಮ್ನಿ ವ್ಯಾನ್​ನಲ್ಲಿ ಸಾಗಿಸುತ್ತಿದ್ದ 20 ಲಕ್ಷ ಹಣ ವಶಕ್ಕೆ

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಚೌಡಿಪಾಳ್ಯ ಬಳಿ ಚೆಕ್​ಪೋಸ್ಟ್​ನಲ್ಲಿ ದಾಖಲೆ ಇಲ್ಲದೆ ಓಮ್ನಿ ವ್ಯಾನ್​ನಲ್ಲಿ ಸಾಗಿಸುತ್ತಿದ್ದ 20 ಲಕ್ಷ ಹಣವನ್ನ ವಶಕ್ಕೆ ಪಡೆಯಲಾಗಿದೆ. ಇವರು ಕಡೂರು ತಾಲೂಕಿನಿಂದ ಅರಸೀಕೆರೆಗೆ ಸಾಗಿಸುತ್ತಿದ್ದರು.ಈ ವೇಳೆ ಎಸ್.ಎಸ್.ಟಿ ಟೀಮ್ ತಪಾಸಣೆ ವೇಳೆ ಹಣ ಸಿಕ್ಕಿದೆ.

ಹೊಳೆಹರಹಳ್ಳಿ ಚೆಕ್​ಪೋಸ್ಟ್​ನಲ್ಲಿ  3.98 ಲಕ್ಷ ಹಣ ಜಪ್ತಿ

ದಾವಣಗೆರೆ: ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 3.98 ಲಕ್ಷ ಹಣ ಜೊತೆಗೆ 21 ಮೊಬೈಲ್​ನ್ನು ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಹೊಳೆಹರಹಳ್ಳಿ ಬಳಿ ಚುನಾವಣಾ ಚೆಕ್​ಪೋಸ್ಟ್​ನಲ್ಲಿ ವಶಕ್ಕೆ ಪಡೆಯಲಾಗಿದೆ. ಈ ಕುರಿತು ದಾವಣಗೆರೆ ಜಿಲ್ಲಾ ಚುನಾವಣಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಮಾಹಿತಿ ನೀಡಿದ್ದಾರೆ.

1 ಲಕ್ಷ ರೂಪಾಯಿ ಹಣ ಹಾಗೂ ದ್ವಿಚಕ್ರ ವಾಹನ ವಶಕ್ಕೆ

ಕೋಲಾರ: ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕು ಹಕ್ಕಿಪಿಕ್ಕಿ ಕಾಲೋನಿ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಲಕ್ಷ ರೂಪಾಯಿ ಹಣ ಹಾಗೂ ದ್ವಿಚಕ್ರ ವಾಹನವನ್ನ ವಶಕ್ಕೆ ಪಡೆಯಲಾಗಿದೆ. ಶಿಡ್ಲಘಟ್ಟ ಮೂಲದ ಗೋಪಾಲ ಎಂಬುವರಿಗೆ ಸೇರಿದ ಹಣ ಹಾಗೂ ದ್ವಿಚಕ್ರ ವಾಹನ ಇದಾಗಿದ್ದು, ಮದನಪಲ್ಲಿಯಿಂದ ಶಿಡ್ಲಘಟ್ಟ ತಾಲ್ಲೂಕಿನ ಬುಡಗವಾರಪಲ್ಲಿಗೆ ತೆಗೆದುಕೊಂಡು ಹೋಗುತ್ತಿದ್ದ ವೇಳೆ ಇನ್ಸ್ಪೆಕ್ಟರ್ ಜಯಾನಂದ್ ನೇತೃತ್ವದಲ್ಲಿ ತಪಾಸಣೆ ನಡೆಸಿ, ಜಪ್ತಿ ಮಾಡಲಾಗಿದೆ. ಈ ಕುರಿತು ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ