ನೋವು ಮರೆತು ಪಕ್ಷದೊಂದಿಗೆ ಕೈಜೋಡಿಸಿ ಎಂದು ಕೆಎಸ್​ ಈಶ್ವರಪ್ಪಗೆ ಕೈ ಮುಗಿದು ಮನವಿ ಮಾಡಿದ ಬಿ.ವೈ ವಿಜಯೇಂದ್ರ

| Updated By: ನಯನಾ ರಾಜೀವ್

Updated on: Apr 07, 2024 | 9:17 AM

ಏನಾದರೂ ನೋವಾಗಿದ್ದರೆ ದಯವಿಟ್ಟು ಮರೆತು ಪಕ್ಷಕ್ಕೆ ಸಹಕಾರ ನೀಡಬೇಕೆಂದು ಕೆ.ಎಸ್ ಈಶ್ವರಪ್ಪ(KS Eshwarappa) ಅವರಿಗೆ  ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ(BY Vijayendra) ಮನವಿ ಮಾಡಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ನಿಮ್ಮನ್ನು ಕೈ ಮುಗಿದು ಕೇಳಿಕೊಳ್ಳುತ್ತೇನೆ, ಏನಾದರೂ ನೋವಾಗಿದ್ದರೆ ದಯವಿಟ್ಟು ಮರೆತು ಪಕ್ಷಕ್ಕೆ ಸಹಕಾರ ನೀಡಿ, ಬಿಜೆಪಿ ಹಿತದೃಷ್ಟಿಯಿಂದ ನಮ್ಮೊಂದಿಗೆ ಕೈ ಜೋಡಿಸಿ ಎಂದು ಹೇಳಿದ್ದಾರೆ.

ನೋವು ಮರೆತು ಪಕ್ಷದೊಂದಿಗೆ ಕೈಜೋಡಿಸಿ ಎಂದು ಕೆಎಸ್​ ಈಶ್ವರಪ್ಪಗೆ ಕೈ ಮುಗಿದು ಮನವಿ ಮಾಡಿದ ಬಿ.ವೈ ವಿಜಯೇಂದ್ರ
ವಿಜಯೇಂದ್ರ, ಈಶ್ವರಪ್ಪ
Follow us on

ಏನಾದರೂ ನೋವಾಗಿದ್ದರೆ ದಯವಿಟ್ಟು ಮರೆತು ಪಕ್ಷಕ್ಕೆ ಸಹಕಾರ ನೀಡಬೇಕೆಂದು ಕೆ.ಎಸ್ ಈಶ್ವರಪ್ಪ(KS Eshwarappa) ಅವರಿಗೆ  ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ(BY Vijayendra) ಮನವಿ ಮಾಡಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ನಿಮ್ಮನ್ನು ಕೈ ಮುಗಿದು ಕೇಳಿಕೊಳ್ಳುತ್ತೇನೆ, ಏನಾದರೂ ನೋವಾಗಿದ್ದರೆ ದಯವಿಟ್ಟು ಮರೆತು ಪಕ್ಷಕ್ಕೆ ಸಹಕಾರ ನೀಡಿ, ಬಿಜೆಪಿ ಹಿತದೃಷ್ಟಿಯಿಂದ ನಮ್ಮೊಂದಿಗೆ ಕೈ ಜೋಡಿಸಿ ಎಂದು ಹೇಳಿದ್ದಾರೆ.

ನರೇಂದ್ರ ಮೋದಿಯರು ಮತ್ತೆ ಪ್ರಧಾನಿಯಾಗಬೇಕು ಎಂಬುದು ನಮ್ಮ ಆಶಯ, ಈಶ್ವರಪ್ಪ ಅವರು ಬೆಂಬಲ ನೀಡಿ ರಾಘವೇಂದ್ರನನ್ನು ಗೆಲ್ಲಿಸಬೇಕು ಎಂದು ಕೇಳಿಕೊಂಡಿದ್ದಾರೆ. ಈ ಮೊದಲು ಒಂದೆರಡು ದಿನಗಳ ಹಿಂದೆ ಮಾತನಾಡುವಾಗ ಕೇಂದ್ರ ವರಿಷ್ಠರು ಕೆಎಸ್​ ಈಶ್ವರಪ್ಪ ಅವರಿಗೆ ಪರಿಸ್ಥಿತಿಯ ಮನವರಿಕೆ ಮಾಡಿಕೊಡಲಿದ್ದಾರೆ ಎಂದು ಹೇಳಿದ್ದರು.

ನಾನು ಅವರನ್ನು ವೈಯಕ್ತಿಕವಾಗಿ ಭೇಟಿಯಾಗಲು ಸಾಧ್ಯವಾಗಿಲ್ಲ, ಏನು ಕೋಪ ಇದೆ ಎಂಬುದನ್ನು ಅವರ ಜತೆ ಚರ್ಚೆ ನಡೆಸಿ ಬಳಿಕ ಮಾತನಾಡುತ್ತೇನೆ ಎಂದಿದ್ದರು. 2009 ರಿಂದ ಶಿವಮೊಗ್ಗ ಲೋಕಸಭಾ ಕ್ಷೇತ್ರ ಬಿಎಸ್‌ ಯಡಿಯೂರಪ್ಪ ಕುಟುಂಬದ ಹಿಡಿತದಲ್ಲಿದೆ. 2019 ರಲ್ಲಿ ಬಿವೈ ರಾಘವೇಂದ್ರ 7,29,872 ಮತಗಳನ್ನು ಪಡೆದುಕೊಂಡಿದ್ದರು.ಇವರ ವಿರುದ್ಧ ಸ್ಪರ್ಧಿಸಿದ್ದ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ 5,06,512 ಮತಗಳನ್ನು ಪಡೆದುಕೊಂಡಿದ್ದರು.

ಮತ್ತಷ್ಟು ಓದಿ: ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಧಮ್ಕಿ ಹಾಕಲಾಗುತ್ತಿದೆ: ಬಿವೈ ರಾಘವೇಂದ್ರ ಆರೋಪ

ಈ ನಡುವೆ ಈ ಬಾರಿ ಸ್ವತಂತ್ರ ಅಭ್ಯರ್ಥಿಯಾಗಿ ಕೆ.ಎಸ್ ಈಶ್ವರಪ್ಪ ಸ್ಪರ್ಧೆ ಮಾಡಲು ಸಿದ್ದಗೊಂಡಿದ್ದಾರೆ. ಹಿಂದುತ್ವ, ಮೋದಿ ಹೆಸರಿನಲ್ಲಿ ಚುನಾವಣೆಗೆ ನಿಲ್ಲುವುದಾಗಿ ಘೋ‍ಷಣೆ ಮಾಡಿದ್ದಾರೆ. ಇನ್ನು ಕಾಂಗ್ರೆಸ್‌ ನಿಂದ ಗೀತಾ ಶಿವರಾಜ್ ಕುಮಾರ್ ಕಣದಲ್ಲಿದ್ದಾರೆ. ಆದರೆ ಇವರು ರಾಘವೇಂದ್ರ ವಿರುದ್ಧ ಪ್ರಬಲ ಅಭ್ಯರ್ಥಿ ಎಂದು ಕರೆಯಲು ಸಾಧ್ಯವಿಲ್ಲ ಎಂದೂ ಹೇಳಲಾಗುತ್ತಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:17 am, Sun, 7 April 24