ಲೋಕಸಭಾ ಚುನಾವಣೆ ದಿನಾಂಕ ಘೋಷಣೆ: ಜಿಲ್ಲಾವಾರು ಮತದಾರರ ವಿವರ ನೀಡಿದ ಜಿಲ್ಲಾಧಿಕಾರಿಗಳು

ಭಾರತೀಯ ಚುನಾವಣಾ ಆಯೋಗ (Election Commission of India) ಇಂದು (ಮಾ.16) 2024ರ ಲೋಕಸಭೆ ಚುನಾವಣೆಯ ದಿನಾಂಕವನ್ನು ಪ್ರಕಟಿಸಿದೆ.  7 ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ. ಈ ಹಿನ್ನಲೆ ರಾಜ್ಯದ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸುದ್ದಿಗೋಷ್ಠಿ ನಡೆಸಿ ಮತದಾರರ ವಿವರ ನೀಡಿದ್ದಾರೆ.

ಲೋಕಸಭಾ ಚುನಾವಣೆ ದಿನಾಂಕ ಘೋಷಣೆ: ಜಿಲ್ಲಾವಾರು ಮತದಾರರ ವಿವರ ನೀಡಿದ ಜಿಲ್ಲಾಧಿಕಾರಿಗಳು
ಲೋಕಸಭಾ ಚುನಾವಣೆ ಜಿಲ್ಲಾವಾರು ಮತದಾರರ ಲಿಸ್ಟ್
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Mar 16, 2024 | 9:25 PM

ಬೆಂಗಳೂರು, ಮಾ.16: ಭಾರತೀಯ ಚುನಾವಣಾ ಆಯೋಗ (Election Commission of India) ಇಂದು (ಮಾ.16) 2024ರ ಲೋಕಸಭೆ ಚುನಾವಣೆಯ ದಿನಾಂಕವನ್ನು ಪ್ರಕಟಿಸಿದೆ.  7 ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ. ಜೊತೆಗೆ ಜೂನ್ 4ರಂದು ಮತ ಎಣಿಕೆ, ಫಲಿತಾಂಶ ಪ್ರಕಟವಾಗಲಿದೆ. ಈ ಹಿನ್ನಲೆ ರಾಜ್ಯದ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸುದ್ದಿಗೋಷ್ಠಿ ನಡೆಸಿ ಮತದಾರರ ವಿವರ ನೀಡಿದ್ದಾರೆ.

ಅದರಂತೆ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಮಾತನಾಡಿ, ‘ರಾಜ್ಯದಲ್ಲಿ 5,42, 8088 ಕೋಟಿ ಜನ ಮತದಾರರು ಇದ್ದಾರೆ. ಅದರಲ್ಲಿ 2,71,21,407 ಪುರುಷ, 2,70,81,748, 4,933 ತೃತೀಯ ಲಿಂಗ ಮತದಾರರು ಮತ್ತು 11,24,622 ಯುವ ಮತದಾರರು ಇದ್ದಾರೆ ಎಂದರು. ಜೊತೆಗೆ ಅತಿ ಹೆಚ್ಚು ಮತದಾರರು ಹೊಂದಿರುವ ಲೋಕಸಭಾ ಕ್ಷೇತ್ರ ಬೆಂಗಳೂರು ಉತ್ತರವಾದರೆ, ಅತೀ ಕಡಿಮೆ ಮತದಾರರು ಹೊಂದಿರುವ ಲೋಕಸಭಾ ಕ್ಷೇತ್ರ ಉಡುಪಿ-ಚಿಕ್ಕಮಗಳೂರು ಆಗಿದ್ದು, ಇನ್ನು ಮೊದಲ ಬಾರಿಗೆ 11,24,622 ಮತದಾರರು ವೋಟ್ ಹಾಕುತ್ತಿದ್ದರೆ, 85 ವರ್ಷ ದಾಟಿದ 57,01,68 ಮತದಾರರು ಇದ್ದಾರೆ.

ರಾಜ್ಯದಲ್ಲಿ 58 ದಸಾವಿರ ಮತಕೇಂದ್ರಗಳಿವೆ

ಹೌದು, 58 ಸಾವಿರ ಮತಕೇಂದ್ರಗಳಿವೆ. 3.5 ಲಕ್ಷ ಚುನಾವಣಾ ಸಿಬ್ಬಂದಿಗಳು ಕಾರ್ಯನಿರ್ವಹಣೆ ಮಾಡಲಿದ್ದಾರೆ. ಜೊತೆಗೆ 28 ಕ್ಷೇತ್ರಗಳಲ್ಲಿ ಆರ್​ಒಗಳ ನೇಮಕವಾಗಿದೆ. ಎಆರ್​ಒಗಳಿಗೂ ತರಬೇತಿ ನೀಡಲಾಗಿದೆ. ಅಗಸ್ಟ್ ನಿಂದ ಇಲ್ಲಿಯವರೆಗೆ 4,678 ಎಫ್​ಐಆರ್ ದಾಖಲಾಗಿದೆ ಎಂದರು.

ಇದನ್ನೂ ಓದಿ:ಸೋಮಶೇಖರ್ ಅಡ್ಡ ಮತದಾನ ಮಾಡಿ ಪಕ್ಷ ಮತ್ತು ಮತದಾರರಿಗೆ ದ್ರೋಹವೆಸಗಿದ್ದಾರೆ: ಆರ್ ಅಶೋಕ

ಜಿಲ್ಲಾವಾರು ಮತದಾರರ ವಿವರ ಇಂತಿದೆ

ಬೆಳಗಾವಿ: ಚುನಾವಣೆ ಘೋಷಣೆ ಬೆನ್ನಲ್ಲೆ ಬೆಳಗಾವಿ ಜಿಲ್ಲಾ ಚುನಾವಣಾ ಅಧಿಕಾರಿ ನಿತೇಶ್ ಪಾಟೀಲ್ ಸುದ್ದಿಗೋಷ್ಠಿ ನಡೆಸಿ ಚುನಾವಣೆ, ಮತದಾರ ಹಾಗೂ ಮತಗಟ್ಟೆ ವಿವರ ನೀಡಿದ್ದಾರೆ. ಚುನಾವಣೆ ವೇಳೆ ಅಕ್ರಮಗಳನ್ನ ತಡೆಯಲು ಒಟ್ಟು 64 ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದ್ದು, ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯಲ್ಲಿ ಒಟ್ಟು 4,524 ಮತಗಟ್ಟೆಗಳ ಸ್ಥಾಪನೆ ಮಾಡಲಾಗಿದೆ. ಇನ್ನು ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯಲ್ಲಿ ಒಟ್ಟು 17,41,758 ಮತದಾರರು ಇದ್ದರೆ, ಬೆಳಗಾವಿ ಲೋಕಸಭಾ ವ್ಯಾಪ್ತಿಯಲ್ಲಿಯೇ 19,04,099 ಮತದಾರರು ಇದ್ದಾರೆ. ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭೆ ವ್ಯಾಪ್ತಿಯಲ್ಲಿ ಒಟ್ಟು 36,45,853 ಮತದಾರಿದ್ದಾರೆ.

ರಾಮನಗರ: ರಾಮನಗರ ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಮಾತನಾಡಿ, ‘ ಜಿಲ್ಲೆಯಲ್ಲಿ 27 ಲಕ್ಷ 63 ಸಾವಿರ ಮತದಾರರಿದ್ದಾರೆ. 28 ಕ್ಕೆ ನಾಮಿನೇಷನ್, ಜಿಲ್ಲಾಧಿಕಾರಿ ಕಚೇರಿಯಲ್ಲಿ ರಿಸೀವ್ ಮಾಡ್ತೇವೆ. ರಾಮನಗರ ಎರಡನೇ ಹಂತದಲ್ಲಿದೆ. ರಾಮನಗರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕೌಂಟಿಂಗ್ ಆಗುತ್ತದೆ. ಇಂದಿನಿಂದಲೇ ಚೆಕಪೋಸ್ಟ್ ಮಾಡೋದಕ್ಕೆ ತಯಾರಿ ಮಾಡಿಕೊಳ್ಳುತ್ತಿದ್ದೇವೆ. ಇನ್ನು ರಾಮನಗರದಲ್ಲಿ 230‌ ಸೂಕ್ಷ್ಮ ಮತಗಟ್ಟೆಗಳಿದ್ದು, 7 ಅತಿ ಸೂಕ್ಷ್ಮ ಮತಗಟ್ಟೆಗಳಿವೆ. ಬೆಂ.ಗ್ರಾ ಲೋಕಸಭಾ ಕ್ಷೇತ್ರದಲ್ಲಿ 27,63,910 ಮತದಾರರಿದ್ದಾರೆ. ಪುರುಷರು ಮತದಾರರ ಸಂಖ್ಯೆ- 14,06,042, ಮಹಿಳಾ ಮತದಾರರ ಸಂಖ್ಯೆ- 13,57,541, ಇತರೆ-321 ಸೇರಿ ಕ್ಷೇತ್ರದಲ್ಲಿ ಒಟ್ಟು 2,829 ಮತಗಟ್ಟೆಗಳನ್ನ ಸ್ಥಾಪನೆ ಮಾಡಲಾಗುವುದು ಎಂದರು.

ಇದನ್ನೂ ಓದಿ:ಮತದಾರರಿಗೆ ಆಮಿಷ ಆರೋಪ: ಕೇಂದ್ರ, ರಾಜ್ಯ ಸರ್ಕಾರ, ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನೋಟಿಸ್

ಹಾವೇರಿ: ಲೋಕಸಭಾ ಚುನಾವಣೆ ದಿನಾಂಕ ನಿಗದಿಯಾದ ಹಿನ್ನಲೆ ಹಾವೇರಿ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಸುದ್ದಿಗೋಷ್ಟಿ ನಡೆಸಿ, ‘ ಹಾವೇರಿ ಜಿಲ್ಲೆಗೆ ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್ 12 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗುತ್ತದೆ. ಒಟ್ಟು ಕ್ಷೇತ್ರದಲ್ಲಿ 17,77,877 ಮತದಾರು ಇದ್ದಾರೆ. 8,95,366 ಪುರಾಷ ಮತದಾರರು ಹಾಗೂ 8,82,430 ಮಹಿಳಾ ಮತದಾರರು ಮತ್ತು 81 ಜನ ಇತರೇ ಮತದಾರರಿದ್ದಾರೆ. ಹಾವೇರಿ- ಗದಗ ಲೋಕಸಭಾ ಕ್ಷೇತ್ರದಲ್ಲಿ ಸುಕ್ಷ್ಮ – 370, ಅತಿಸೂಕ್ಷ್ಮ 39 ಮತಗಟ್ಟೆ ಎಂದು ಗುರುತಿಸಲಾಗಿದೆ ಎಂದರು.

ಲೋಕಸಭಾ ಚುನಾವಣಾ ದಿನಾಂಕ ಘೋಷಣೆ ಹಿನ್ನಲೆ ದಾವಣಗೆರೆ: ಜಿಲ್ಲಾಧಿಕಾರಿ ಡಾ, ವೆಂಕಟೇಶ್ ಸುದ್ದಿಗೋಷ್ಟಿ ನಡೆಸಿ, ‘ ದಾವಣಗೆರೆ ಲೋಕಸಭಾ ಚುನಾವಣಾ ಮೂರನೇ ಹಂತಕ್ಕೆ ನಡೆಯಲಿದೆ. ಈ ಲೋಕಸಭಾ ಕ್ಷೇತ್ರದ ಒಟ್ಟು 8 ವಿಧಾನಸಭಾ ಕ್ಷೇತ್ರ ಗಳನ್ನು ಒಳಗೊಂಡಿದೆ. 8 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 1946 ಮತಗಟ್ಟೆಗಳನ್ನು ಹೊಂದಿದ್ದು, 83,8,705 ಪುರುಷರು, 84,0,340 ಮಹಿಳೆರು, 136 ಇತರೆ, 565 ಸರ್ವೀಸ್ ಓಟ್, ಒಟ್ಟು 16,79,746 ಮತಗಳನ್ನು ಹೊಂದಿದ್ದಾರೆ. ಎಲ್ಲಾ ಕಡೆಗಳಲ್ಲಿ ಚಕ್‌ ಪೋಸ್ಟ್ ಗಳನ್ನು ನಿರ್ಮಾಣ ಮಾಡಲಾಗುವುದು ಎಂದರು.

ಧಾರವಾಡ: ಲೋಕಸಭೆ ಸಾರ್ವತ್ರಿಕ ಚುನಾವಣೆ ಘೋಷಣೆ ಹಿನ್ನೆಲೆ ಧಾರವಾಡದಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ ಧಾರವಾಡ ಕ್ಷೇತ್ರದಲ್ಲಿ 3ನೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಈ ಕ್ಷೇತ್ರದಲ್ಲಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳಿವೆ. ಅದರಲ್ಲಿ ಧಾರವಾಡ ಜಿಲ್ಲೆಯ 7, ಹಾವೇರಿ ಜಿಲ್ಲೆಯ ಶಿಗ್ಗಾವಿ ಕ್ಷೇತ್ರ ಸೇರಿದೆ. ಒಟ್ಟು 1893 ಮತಗಟ್ಟೆಗಳನ್ನು ಮತದಾನಕ್ಕೆ ನಿಗದಿ ಮಾಡಲಾಗಿದೆ. ಕ್ಷೇತ್ರದಲ್ಲಿ ಒಟ್ಟು17,91,386 ಮತದಾರರಿದ್ದು, ಅದರಲ್ಲಿ 8,99,246 ಪುರುಷ, 8,92,043 ಮಹಿಳಾ ಹಾಗೂ 97 ಇತರೆ ಮತದಾರರಿದ್ದಾರೆ ಎಂದರು.

ಇದನ್ನೂ ಓದಿ:ಮತದಾರರಿಗೆ ಆಮಿಷ ಆರೋಪ: ಕೇಂದ್ರ, ರಾಜ್ಯ ಸರ್ಕಾರ, ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನೋಟಿಸ್

ವಿಜಯಪುರ:ರಾಜ್ಯದಲ್ಲಿ ಎರಡು ಹಂತದ ಮತದಾನ ನಡೆಯಲಿದ್ದು, ಎರಡನೇ ಹಂತದ ಮತದಾನ ಕ್ಷೇತ್ರಗಳ ಪಟ್ಟಿಯಲ್ಲಿ ವಿಜಯಪುರ ಲೋಕಸಭಾ ಕ್ಷೇತ್ರ ಇದೆ. ವಿಜಯಪುರ ಎಸ್ಸಿ ಮೀಸಲು ಕ್ಷೇತ್ರದ ಚುನಾವಣೆ ಪ್ರಕ್ರಿಯೆ ಕುರಿತು ಮಾತನಾಡಿದ ಡಿಸಿ ಭೂಬಾಲನ್, ‘ ಎಪ್ರಿಲ್ 12 ರಂದು ಅಧಿಸೂಚನೆ ಪ್ರಕಟವಾಗುತ್ತದೆ. ಏಪ್ರೀಲ್ 19 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಜಿಲ್ಲೆಯಲ್ಲಿ ಒಟ್ಟು ಮತದಾರರು 19,31,342 ಮತದಾರರಿದ್ದು, ಪುರುಷ‌ ಮತದಾರರು 9,81,251 ಹಾಗೂ ಮಹಿಳಾ ಮತದಾರರು 9,49,885 ಜೊತೆಗೆ ಇತರೆ ಮತದಾರರು 206 ಇದ್ದಾರೆ ಎಂದರು.

ಶಿವಮೊಗ್ಗ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸುದ್ದಿಗೋಷ್ಟಿ ನಡೆಸಿ, ‘ಶಿವಮೊಗ್ಗ ಜಿಲ್ಲೆಯಲ್ಲಿ 2ನೇ ಹಂತದಲ್ಲಿ ಚುನಾವಣೆ ನಡೆಯುತ್ತದೆ. ಮೇ 7 ರಂದು ಶಿವಮೊಗ್ಗದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 12 ರಿಂದ 19 ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ 8 ವಿಧಾನಸಭಾ ಕ್ಷೇತ್ರಗಳಿವೆ. ಲೋಕಸಭಾ ಕ್ಷೇತ್ರದಲ್ಲಿ 8.52,107 ಪುರುಷ, 8,77,761 ಮಹಿಳೆಯರು ಸೇರಿದಂತೆ ಒಟ್ಟು 17,29,901 ಮತದಾರರಿದ್ದಾರೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ