Lok Sabha Election Dates: ಕರ್ನಾಟಕದಲ್ಲಿ 2 ಹಂತದಲ್ಲಿ ಲೋಕಸಭೆ ಚುನಾವಣೆ? ನಿಮ್ಮ ಕ್ಷೇತ್ರದಲ್ಲಿ ಯಾವಾಗ ಮತದಾನ? ಇಲ್ಲಿದೆ ನೋಡಿ
ಲೋಕಸಭೆ ಚುನಾವಣೆ ವೇಳಾಪಟ್ಟಿ: ಲೋಕಸಭೆ ಚುನಾವಣೆ ದಿನಾಂಕ ಪ್ರಕಟವಾಗಿದ್ದು, ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದೆ. ಕರ್ನಾಟಕದಲ್ಲಿ 2 ಹಂತದಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಲಿದೆ. ಕರ್ನಾಟಕದಲ್ಲಿ ಏಪ್ರಿಲ್ 26 ಮತ್ತು ಮೇ 7ರಂದು ಮತದಾನ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಮುಂದೆ ಓದಿ.
ನವದೆಹಲಿ, ಮಾರ್ಚ್ 16: ಕೇಂದ್ರ ಚುನಾವಣಾ ಆಯೋಗದ (Election Commission of India) ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮುಂಬರುವ ಲೋಕಸಭೆ ಚುನಾವಣೆ ದಿನಾಂಕವನ್ನು (Lok Sabha Election Dates) ಶನಿವಾರ ಪ್ರಕಟಿಸಿದರು. ದೇಶದಾದ್ಯಂತ 543 ಲೋಕಸಭಾ ಕ್ಷೇತ್ರಗಳಲ್ಲಿ 7 ಹಂತಗಳಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 19ರಂದು ಮೊದಲ ಹಂತದ ಮತದಾನ ನಡೆಯಲಿದೆ. ಕರ್ನಾಟಕದಲ್ಲಿ 2 ಹಂತದಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಲಿದೆ. ಚುನಾವಣಾ ಮಾದರಿ ನೀತಿ ಸಂಹಿತೆ (Model Code of Conduct) ಕೂಡ ಇಂದಿನಿಂದಲೇ ಜಾರಿಗೆ ಬರಲಿದೆ. ಮತ್ತೊಂದೆಡೆ, ಲೋಕಸಭೆ ಚುನಾವಣೆಗೆ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದ್ದು, ಚುನಾವಣಾ ದಿನಾಂಕ ಪ್ರಕಟವಾದ ದಿನವೇ ಕರ್ನಾಟಕದಲ್ಲಿ ಪ್ರಧಾನಿ ಮೋದಿ ಪ್ರಚಾರ ಕಹಳೆ ಮೊಳಗಿಸಿದ್ದಾರೆ.
ಏಪ್ರಿಲ್ 26, ಮೇ 7ರಂದು ಮತದಾನ
ಕರ್ನಾಟಕದಲ್ಲಿ ಏಪ್ರಿಲ್ 26ರಂದು ಹಾಗೂ ಮೇ 7ರಂದು ಮತದಾನ ನಡೆಯಲಿದೆ. ಜೂನ್ 4ರಂದು ಮತ ಎಣಿಕೆ, ಫಲಿತಾಂಶ ಪ್ರಕಟವಾಗಲಿದೆ. ದಕ್ಷಿಣ ಕರ್ನಾಟಕ ಎರಡನೇ ಹಂತದಲ್ಲಿ ಮತದಾನ ನಡೆದರೆ, ಉತ್ತರ ಕರ್ನಾಟಕ ಪ್ರದೇಶಗಳಲ್ಲಿ ಮೂರನೇ ಹಂತದಲ್ಲಿ ಮತದಾನ ನಡೆಯಲಿದೆ.
ಏಪ್ರಿಲ್ 26ಕ್ಕೆ ಎಲ್ಲೆಲ್ಲಿ ಮತದಾನ?
- ಚಿತ್ರದುರ್ಗ
- ಉಡುಪಿ-ಚಿಕ್ಕಮಗಳೂರು
- ದಕ್ಷಿಣ ಕನ್ನಡ
- ಹಾಸನ
- ತುಮಕೂರು
- ಚಿಕ್ಕಬಳ್ಳಾಪುರ
- ಕೋಲಾರ
- ಮಂಡ್ಯ
- ಮೈಸೂರು-ಕೊಡಗು
- ಚಾಮರಾಜನಗರ
- ಬೆಂಗಳೂರು ಗ್ರಾಮಾಂತರ
- ಬೆಂಗಳೂರು ದಕ್ಷಿಣ
- ಬೆಂಗಳೂರು ಉತ್ತರ
- ಬೆಂಗಳೂರು ಕೇಂದ್ರ
ಮೇ 7ರಂದು ಎಲ್ಲೆಲ್ಲಿ ಮತದಾನ?
- ಬೆಳಗಾವಿ
- ಬಳ್ಳಾರಿ
- ಚಿಕ್ಕೋಡಿ
- ಹಾವೇರಿ-ಗದಗ
- ಕಲಬುರಗಿ
- ಬೀದರ್
- ಹುಬ್ಬಳಿ – ಧಾರವಾಡ
- ಕೊಪ್ಪಳ
- ರಾಯಚೂರು
- ಉತ್ತರ ಕನ್ನಡ
- ದಾವಣಗೆರೆ
- ಶಿವಮೊಗ್ಗ
- ಬಾಗಲಕೋಟೆ
- ವಿಜಯಪುರ
ಇದನ್ನೂ ಓದಿ: 7 ಹಂತಗಳಲ್ಲಿ ಲೋಕಸಭೆ ಚುನಾವಣೆ;ಏಪ್ರಿಲ್ 19ರಂದು ಮೊದಲ ಹಂತದ ಮತದಾನ
ಚುನಾವಣಾ ಆಯೋಗದ ಮಾಹಿತಿ ಪ್ರಕಾರ, ದೇಶದಲ್ಲಿ ಒಟ್ಟು 97 ಕೋಟಿ ನೋಂದಾಯಿತ ಮತದಾರರಿದ್ದಾರೆ. 10.5 ಲಕ್ಷಕ್ಕೂ ಹೆಚ್ಚು ಮತಗಟ್ಟೆಗಳು ಇವೆ. 1.5 ಕೋಟಿ ಸಿಬ್ಬಂದಿ, 55 ಲಕ್ಷ ಇವಿಎಂಗಳಿಂದ ಚುನಾವಣೆ ನಿರ್ವಹಿಸಲ್ಪಡುತ್ತವೆ.
ರಾಜ್ಯದಲ್ಲಿ ಒಟ್ಟು 28 ಲೋಕಸಭಾ ಕ್ಷೇತ್ರಗಳಿದ್ದು ಕಳೆದ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸಿತ್ತು. 25 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರೆ ಕಾಂಗ್ರೆಸ್ ಬೆಂಗಳೂರು ಗ್ರಾಮಾಂತರದಲ್ಲಿ ಮಾತ್ರ ಜಯ ಗಳಿಸಿತ್ತು. ಉಳಿದಂತೆ ಜೆಡಿಎಸ್ ಒಂದು ಸ್ಥಾನ ಹಾಗೂ ಪಕ್ಷೇತರ ಅಭ್ಯರ್ಥಿ ಒಂದು ಸ್ಥಾನ ಗಳಿಸಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:03 pm, Sat, 16 March 24