ಲೋಕಸಭೆ ಚುನಾವಣೆ ಸೋಲು, ಮಾಹಿತಿ ಸಂಗ್ರಹಕ್ಕೆ ಮುಂದಾದ ಸಿಎಂ ಸಿದ್ದರಾಮಯ್ಯ: ಬೆಂಗಳೂರಿನ ಕಾಂಗ್ರೆಸ್ ಶಾಸಕರಿಗೆ ಬುಲಾವ್

ಲೋಕಸಭೆಯಲ್ಲಿ ಹೀನಾಯ ಸೋಲಿಂದ ಸಿಎಂ ಸಿದ್ದರಾಮಯ್ಯ ಅಲರ್ಟ್​ ಆಗಿದ್ದಾರೆ. ಬೆಂಗಳೂರಿನ ಕಾಂಗ್ರೆಸ್ ಶಾಸಕರಿಗೆ ಬುಲಾವ್​ ಕೊಟ್ಟಿದ್ದಾರೆ. ಶಾಸಕರ ಜೊತೆ ಸಭೆ ನಡೆಸುವ ಮೂಲಕ ಫಲಿತಾಂಶದ ಮಾಹಿತಿ ಸಂಗ್ರಹಕ್ಕೆ ಸಿದ್ಧತೆ ನಡೆಸಿದ್ದಾರೆ. ಸಿಎಂ ಸಭೆಗೆ ಯಾರೆಲ್ಲ ಹಾಜರಾಗಲಿದ್ದಾರೆ? ತಿಳಿಯಲು ಮುಂದೆ ಓದಿ.

ಲೋಕಸಭೆ ಚುನಾವಣೆ ಸೋಲು, ಮಾಹಿತಿ ಸಂಗ್ರಹಕ್ಕೆ ಮುಂದಾದ ಸಿಎಂ ಸಿದ್ದರಾಮಯ್ಯ: ಬೆಂಗಳೂರಿನ ಕಾಂಗ್ರೆಸ್ ಶಾಸಕರಿಗೆ ಬುಲಾವ್
ಸಿದ್ದರಾಮಯ್ಯ
Follow us
| Updated By: ಗಣಪತಿ ಶರ್ಮ

Updated on:Jun 10, 2024 | 3:14 PM

ಬೆಂಗಳೂರು, ಜೂನ್ 10: ಲೋಕಸಭೆ ಚುನಾವಣೆಯಲ್ಲಿ (Lok Sabha Elections) ಸೋಲಿನಿಂದ ಕಂಗೆಟ್ಟಿರುವ ಕಾಂಗ್ರೆಸ್‌ಗೆ ಚೇತರಿಸಿಕೊಳ್ಳುವುದೇ ತಲೆನೋವಾಗಿದೆ. 20 ಸ್ಥಾನದಲ್ಲಿ ಗೆಲ್ಲುತ್ತೇವೆ ಎನ್ನುತ್ತಿದ್ದ ಕಾಂಗ್ರೆಸ್​ (Congress) ನಾಯಕರ ನಿರೀಕ್ಷೆ ಹುಸಿಯಾಗಿದೆ. ಕೇವಲ 9 ಸ್ಥಾನ ಗೆದ್ದ ‘ಕೈ’ ನಾಯಕರಿಗೆ ಸೋಲಿನ ಆಘಾತವಾಗಿದೆ. ಇದರ ಬೆನ್ನಲ್ಲೇ ರಾಜ್ಯ ನಾಯಕರ ಮೇಲೆ ಕೇಂದ್ರ ನಾಯಕರು ಒತ್ತಡದ ಮೇಲೆ ಒತ್ತಡ ಹಾಕ್ತಿದ್ದಾರೆ. ಮೊನ್ನೆಯಷ್ಟೇ ಸಚಿವರು, ಶಾಸಕರ ಜೊತೆ ಸಭೆ ಮಾಡಿದ್ದ ರಾಹುಲ್​ ಗಾಂಧಿ ಅಸಮಾಧಾನ ಹೊರಹಾಕಿದ್ದರು. 18 ಸಚಿವರ ಬಗ್ಗೆ ವರದಿ ಕೇಳಿದ್ದರು. ಇದಿಷ್ಟೇ ಅಲ್ಲ, ಕಾಂಗ್ರೆಸ್​ನಲ್ಲೇ ಕೆಲ ಶಾಸಕರು ಗ್ಯಾರಂಟಿ ಯೋಜನೆಯೇ ಕೈ ಹಿಡಿದಿಲ್ಲ, ಬಂದ್ ಮಾಡಬೇಕು ಎಂತೆಲ್ಲಾ ಮಾತನಾಡಿದರು. ಹೀಗಾಗಿ ಅಲರ್ಟ್ ಆಗಿರುವ ಸಿಎಂ ಸಿದ್ದರಾಮಯ್ಯ (Siddaramaiah), ಕಾಂಗ್ರೆಸ್ ಶಾಸಕರ ಸಭೆ ಕರೆದಿದ್ದಾರೆ.

ಲೋಕಸಭೆಯಲ್ಲಿ ಹೀನಾಯ ಸೋಲಿಂದ ಸಿಎಂ ಸಿದ್ದರಾಮಯ್ಯ ಅಲರ್ಟ್​ ಆಗಿದ್ದಾರೆ. ಬೆಂಗಳೂರಿನ ಕಾಂಗ್ರೆಸ್ ಶಾಸಕರಿಗೆ ಬುಲಾವ್​ ಕೊಟ್ಟಿದ್ದಾರೆ. ಶಾಸಕರ ಜೊತೆ ಸಭೆ ನಡೆಸುವ ಮೂಲಕ ಫಲಿತಾಂಶದ ಮಾಹಿತಿ ಸಂಗ್ರಹಕ್ಕೆ ಸಿದ್ಧತೆ ನಡೆಸಿದ್ದಾರೆ. ಇದಿಷ್ಟೇ ಅಲ್ಲ, ಬಿಬಿಎಂಪಿ ಚುನಾವಣೆಯ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ. ಸಂಜೆ 5 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ನೇತೃತ್ವದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿಯಾಗಲಿದ್ದಾರೆ.

ಸಭೆಯಲ್ಲಿ ಯಾರೆಲ್ಲ ಭಾಗಿ?

ಬಿಟಿಎಂ ಲೇಔಟ್ ಶಾಸಕ ರಾಮಲಿಂಗಾರೆಡ್ಡಿ, ಬ್ಯಾಟರಾಯನಪುರ ಶಾಸಕ ಕೃಷ್ಣ ಬೈರೇಗೌಡ, ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್, ಗಾಂಧಿನಗರ ಶಾಸಕ ದಿನೇಶ್ ಗುಂಡೂರಾವ್, ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ಹೆಬ್ಬಾಳ ಕಾಂಗ್ರೆಸ್ ಶಾಸಕ ಭೈರತಿ ಸುರೇಶ್, ಪುಲಕೇಶಿನಗರ ಶಾಸಕ ಎ.ಸಿ.ಶ್ರೀನಿವಾಸ್, ಸರ್ವಜ್ಞನಗರ ‘ಕೈ’ ಶಾಸಕ ಕೆ.ಜೆ.ಜಾರ್ಜ್, ಶಾಂತಿನಗರ ಶಾಸಕ ಎನ್.ಎ.ಹ್ಯಾರಿಸ್, ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್, ವಿಜಯನಗರ ‘ಕೈ’ ಶಾಸಕ ಎಂ.ಕೃಷ್ಣಪ್ಪಗೆ ಬುಲಾವ್ ನೀಡಲಾಗಿದ್ದು, ಇವರೆಲ್ಲರೂ ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.

ಸೋಲಿನ ಪರಾಮರ್ಶೆಗೆ ಸಮಿತಿ ರಚಿಸಲು ಎಐಸಿಸಿ ನಿರ್ಧಾರ

ರಾಜ್ಯದಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಸೋಲು ಹಿನ್ನೆಲೆಯಲ್ಲಿ ಸೋಲಿನ ಪರಾಮರ್ಶೆಗೆ ಸಮಿತಿ ರಚಿಸಲು ಎಐಸಿಸಿ ನಿರ್ಧರಿಸಿದೆ. ಎಐಸಿಸಿ ಹಾಗೂ ರಾಜ್ಯ ನಾಯಕರ ನೇತೃತ್ವದ ಸಮಿತಿ ರಚನೆಗೆ ನಿರ್ಧಾರ ಮಾಡಲಾಗಿದೆ. ಕ್ಷೇತ್ರವಾರು ಮಾಹಿತಿ ಪಡೆದು ಯಾವ ಕಾರಣಕ್ಕೆ ಸೋಲಾಗಿದೆ ಎಂಬ ಮಾಹಿತಿ ಸಂಗ್ರಹಿಸಲಿದ್ದಾರೆ. ಇಷ್ಟು ದಿನ ಕೆಲ ಸಚಿವರು ತಮ್ಮ ಭವಿಷ್ಯಕ್ಕೆ ಆತಂಕ ಇಲ್ಲ ಅಂದುಕೊಂಡಿದ್ದರು. ಆದರೆ, ಇದೀಗ ಸಮಿತಿ ರಚನೆಯ ಮೂಲಕ ಸಚಿವರ ಭವಿಷ್ಯಕ್ಕೂ ತೂಗುಗತ್ತಿಯಾಗಲಿದೆ.

ಮಗನ ಸೋಲು; ಹೆಬ್ಬಾಳ್ಕರ್​ಗೆ ಸಿಂಪತಿ ತೋರಿಸಿದ ಸಿಎಂ!

ಸಚಿವೆ ಲಕ್ಷೀ ಹೆಬ್ಬಾಳ್ಕರ್ ಪುತ್ರ ಮೃಣಾಲ್​ ಹೆಬ್ಬಾಳ್ಕರ್​​ಗೆ ಸೋಲಾದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಕರುಣೆ ತೋರಿಸಿದ್ದಾರೆ. ನಿನ್ನೆ ಸಿಎಂ ಭೇಟಿಗೆ ಬೆಳಗಾವಿಯ ಕಾಂಗ್ರೆಸ್​ ನಾಯಕರು ಆಗಮಿಸಿದ್ದರು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸತೀಶ್​ ಜಾರಕಿಹೊಳಿ, ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಬಂದಿದ್ದರು. ಪ್ರಿಯಾಂಕಾಗೆ ಅಭಿನಂದಿಸುವ ವೇಳೆ ಪಕ್ಕದಲ್ಲೇ ಲಕ್ಷ್ಮೀ ಹೆಬ್ಬಾಳ್ಕರ್ ನಿಂತಿದ್ದರು. ಈ ವೇಳೆ ಸಾರಿ ಕಣಮ್ಮಾ ಅಂತಾ ಸಿಎಂ ಸಿಂಪತಿ ತೋರಿಸಿದ್ದಾರೆ.

ಇದನ್ನೂ ಓದಿ: ಸ್ಥಗಿತವಾಗುತ್ತಾ ಗ್ಯಾರಂಟಿ ಯೋಜನೆಗಳು? ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ಮತ್ತೆ ಶಾಕಿಂಗ್ ಹೇಳಿಕೆ

ಇನ್ನು ರಾಜ್ಯದಲ್ಲಿ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಯ ವಿಚಾರವೂ ಚರ್ಚೆ ನಡೆಯುತ್ತಿದೆ. ಈ ಮಧ್ಯೆ ಗೃಹ ಸಚಿವ ಪರಮೇಶ್ವರ್ ಮಾತನಾಡಿ, ನಮ್ಮಲ್ಲಿ ಹೆಚ್ಚುವರಿ ಡಿಸಿಎಂ ಹುದ್ದೆ ಬಗ್ಗೆ ಚರ್ಚೆ ನಡೆದಿಲ್ಲ ಎಂದಿದ್ದಾರೆ.

ರಾಜ್ಯದ ಮತ್ತಷ್ಟುವ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:14 pm, Mon, 10 June 24

ತಾಜಾ ಸುದ್ದಿ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ