AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣಾ ಅಕ್ರಮ: ರಾಜ್ಯದ ಮೊದಲ ಹಂತದ ಮತದಾನ ದಿನ 2,172 ಪ್ರಕರಣ ದಾಖಲು

ಶುಕ್ರವಾರ ರಾಜ್ಯದ ಮೊದಲ ಹಂತದ ಮತದಾನ ನಡೆಯಿತು. 14 ಕ್ಷೇತ್ರಗಳಿಗೆ ಮತದಾನ ನಡೆದಿದ್ದು, ಘಟಾನುಘಟಿ ನಾಯಕರು ಸೇರಿದಂತೆ 247 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಮತಪೆಟ್ಟಿಗೆ ಸೇರಿದೆ. ಮೊದಲ ಹಂತದ ಮತದಾನದ ದಿನ ರಾಜ್ಯದಲ್ಲಿ 2,172 ಪ್ರಕರಣವನ್ನು ಚುನಾವಣಾ ಆಯೋಗ ದಾಖಲಿಸಿದೆ.

ಚುನಾವಣಾ ಅಕ್ರಮ: ರಾಜ್ಯದ ಮೊದಲ ಹಂತದ ಮತದಾನ ದಿನ 2,172 ಪ್ರಕರಣ ದಾಖಲು
ಚುನಾವಣಾ ಆಯೋಗ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Apr 27, 2024 | 9:52 AM

Share

ಬೆಂಗಳೂರು, ಏಪ್ರಿಲ್​ 27: ಲೋಕಸಭೆಯ (Lok Sabha Election) ರಾಜ್ಯದ 14 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಶುಕ್ರವಾರ ಮತದಾನ (Voting) ನಡೆಯಿತು. ಮೊದಲ ಹಂತದ ಚುನಾವಣೆ ಸಂದರ್ಭದಲ್ಲಿ ಎಸ್​ಎಸ್​ಟಿ ಮತ್ತು ಪೊಲೀಸ್​ ಇಲಾಖೆ ರಾಜ್ಯದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಹಣ, ಮದ್ಯ, ಡ್ರಗ್ಸ್, ಚಿನ್ನಾಭರಣ ಮತ್ತು ಉಚಿತ ಉಡುಗೊರೆಗಳನ್ನು ಜಪ್ತಿ ಮಾಡಿದ್ದು, ಈ ಸಂಬಂಧ 2,172 ಪ್ರಕರಣಗಳು ದಾಖಲಾಗಿವೆ. ಅಬಕಾರಿ ಇಲಾಖೆ 3098 ಹೀನಸ್ ಪ್ರಕರಣಗಳನ್ನು ದಾಖಲಿಸಿದೆ.

ಲೈಸೆನ್ಸ್ ಉಲ್ಲಂಘನೆ ಮಾಡಿದ್ದಕ್ಕೆ 4789 ಪ್ರಕರಣ, ಎನ್​ಡಿಪಿಎಸ್​ ಕಾಯ್ದೆ ಅಡಿ 177, ಸೆಕ್ಷನ್ 15ರಡಿ 28,299 ಪ್ರಕರಣಗಳು ದಾಖಲಾಗಿವೆ. ಅಧಿಕಾರಿಗಳು ಒಟ್ಟು 1,916 ವಾಹನಗಳನ್ನು ಜಪ್ತಿ ಮಾಡಲಾಗಿದೆ.

ಇನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಯಲಹಂಕಾದ ಮಾದನಾಯನಹಳ್ಳಿ ಬಳಿ 4.80 ಕೋಟಿ ರೂಪಾಯಿ ಜಪ್ತಿ ಮಾಡಿದ್ದಾರೆ. ಎಫ್​ಎಸ್​ಟಿ ತಂಡ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಕೋರಮಂಗಲದಲ್ಲಿ 18.82 ಲಕ್ಷ ರೂಪಾಯಿ, ಕೋಲಾರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಕೆಜಿಎಫ್​ನ ಬೇತಮಂಗಲದಲ್ಲಿ 47.56 ಲಕ್ಷ ಹಣ ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಇಂಡಿಗನತ್ತ ಗ್ರಾಮದಲ್ಲಿ ಇವಿಎಂ ಧ್ವಂಸ: ಅಷ್ಟಕ್ಕೂ ಆಗಿದ್ದೇನು? ಕಾರಣ ಬಿಚ್ಚಿಟ್ಟ ಜಿಲ್ಲಾಧಿಕಾರಿ

ಮೈಸೂರಿನ ಕಾಳಿದಾಸನಹುಂಡಿ ಚೆಕ್​​ಪೋಸ್ಟ್​​ನಲ್ಲಿ 81.90 ಲಕ್ಷ, ಬೆಂಗಳೂರಿನ ರಾಯನ್ ಸರ್ಕಲ್ ಚೆಕ್​​​ಪೋಸ್ಟ್​ನಲ್ಲಿ 20 ಲಕ್ಷ, ಉಡುಪಿ ಜಿಲ್ಲೆ ಕುಂದಾಪುರದಲ್ಲಿ 43.34 ಲಕ್ಷ ರೂಪಾಯಿ ಜಪ್ತಿ ಮಾಡಲಾಗಿದೆ.

ರಾಜ್ಯದ ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಿತು. ಘಟಾನುಘಟಿ ನಾಯಕರು ಸೇರಿದಂತೆ 247 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಮತಪೆಟ್ಟಿಗೆ ಸೇರಿದೆ. ಮೊದಲ ಹಂತದ ಮತದಾನದಲ್ಲಿ ಶೇ 69 ರಷ್ಟು ಮತದಾನವಾಗಿದೆ. ಎರಡನೇ ಹಂತದ ಮತದಾನ ಮೇ 7 ರಂದು ನಡೆಯಲಿದೆ.

ಬೆಂಗಳೂರಿನ ಸದ್ದಗುಂಟೆಪಾಳ್ಯದ ಮತಗಟ್ಟೆ ಸಂಖ್ಯೆ 91, 92, 93, 94 ಬಳಿ ನೀತಿ ಸಂಹಿತೆ ಉಲ್ಲಂಘಿಸಿದ್ದ ಬಿಜೆಪಿ ಹಾಗೂ ಕಾಂಗ್ರೆಸ್​ ಕಾರ್ಯಕರ್ತರ ವಿರುದ್ಧ ಬಿಬಿಎಂಪಿ ಅಧಿಕಾರಿ ಶ್ರೀನಿವಾಸ್ ಹಾಗೂ ಪೊಲೀಸ್ ಸಿಬ್ಬಂದಿ ಚಂದ್ರಶೇಖರ್ ನೀಡಿದ ದೂರಿನನ್ವಯ ಎನ್​ಸಿಆರ್ ದಾಖಲಾಗಿದೆ. ಮತದಾರರ ಮೇಲೆ ಪ್ರಭಾವ ಬೀರಿರುವ ಆರೋಪ ಮತ್ತು ನಿಷೇಧಾಜ್ಞೆ ನಡುವೆಯೂ ಉಭಯ ಪಕ್ಷದ ಕಾರ್ಯಕರ್ತರ ನಡುವೆ ಜಗಳವಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:41 am, Sat, 27 April 24

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ