ನಾನು ಯಾವುದೇ ಉಚ್ಚಾಟನೆಗೆ ಹೆದರುವುದಿಲ್ಲ ಎಂದ ಕೆಎಸ್ ಈಶ್ವರಪ್ಪ
ಬಿಜೆಪಿ ಪಕ್ಷದಿಂದ 6 ವರ್ಷ ಉಚ್ಚಾಟನೆ ಹಿನ್ನಲೆ ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷೇತರ ಅಭ್ಯರ್ಥಿ ಕೆಎಸ್ ಈಶ್ವರಪ್ಪ, ನಾನು ಯಾವುದೇ ಉಚ್ಚಾಟನೆಗೆ ಹೆದರುವುದಿಲ್ಲ. ಚುನಾವಣೆಯಲ್ಲಿ ಗೆದ್ದು ಮತ್ತೆ ಬಿಜೆಪಿಗೆ ಹೋಗುತ್ತೇನೆ. ನನಗೆ ರೈತನ ಚಿಹ್ನೆ ಬಂದಿರುವುದು ಸಂತೋಷ ತಂದಿದೆ ಎಂದು ಹೇಳಿದ್ದಾರೆ.
ಶಿವಮೊಗ್ಗ, ಏಪ್ರಿಲ್ 22: ನಾನು ಯಾವುದೇ ಉಚ್ಚಾಟನೆಗೆ ಹೆದರುವುದಿಲ್ಲ. ಚುನಾವಣೆಯಲ್ಲಿ ಗೆದ್ದು ಮತ್ತೆ ಬಿಜೆಪಿಗೆ (BJP) ಹೋಗುತ್ತೇನೆ ಎಂದು ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ (KS Eshwarappa) ಹೇಳಿದ್ದಾರೆ. ಬಿಜೆಪಿಯಿಂದ 6 ವರ್ಷ ಉಚ್ಚಾಟನೆ ಬೆನ್ನಲ್ಲೇ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಪ್ಪ, ಮಕ್ಕಳು ಆರಂಭದಿಂದ ಸುಳ್ಳು ಹೇಳುತ್ತಾ ಬಂದಿದ್ದಾರೆ. ಅವರು ಷಡ್ಯಂತ್ರ ಮಾಡುತ್ತಾ ಬಂದರು. ಅವರು ಯಾವ ಮುಖ ಇಟ್ಟುಕೊಂಡು ಉತ್ತರ ನೀಡುತ್ತಾರೆ. ಅವರು ಪ್ರಕ್ರಿಯೆ ನೀಡಲಿ, ನಂತರ ನಾನು ಅವರಿಗೆ ಉತ್ತರ ನೀಡುತ್ತೇನೆ ಎಂದು ವಾಗ್ದಾಳಿ ಮಾಡಿದ್ದಾರೆ.
ಬಿಎಸ್ ಯಡಿಯೂರಪ್ಪ ಕುಟುಂಬ ದಿಕ್ಕು ತಪ್ಪಿಸುವ ಪ್ರಯತ್ನ ಮಾಡಿದರು. ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಈಶ್ವರಪ್ಪ ಬರುತ್ತಾರೆ ಅಂದರು. ಬಳಿಕ ನಾಮಪತ್ರ ಹಾಕುವುದಿಲ್ಲ ಎಂದಿದ್ದರು. ದಿನಾಂಕ 19ನೇ ಶಾಕಿಂಗ್ ಅಂತಾ ಹೇಳಿದ್ದರು. ಇಂದು ನಾಮಪತ್ರ ವಾಪಸ್ಗೆ ಕಡೆ ದಿನ. ಇಂದು ನಾನು ಕಣದಲ್ಲಿದ್ದೇನೆ. ನನಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರ ಬೆಂಬಲವಿದೆ ಎಂದಿದ್ದಾರೆ.
ಇದನ್ನೂ ಓದಿ: KS Eshwarappa: ಬಿಜೆಪಿಯಿಂದ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ 6 ವರ್ಷ ಉಚ್ಚಾಟನೆ
ನಾನು ಐದು ಬಾರಿ ಕಮಲದ ಚಿಹ್ನೆಯಿಂದ ಸ್ಪರ್ಧೆ ಮಾಡಿದ್ದೇನೆ. ನನಗೆ ರೈತನ ಚಿಹ್ನೆ ಬಂದಿರುವುದು ಸಂತೋಷ ತಂದಿದೆ. ಲೋಕಸಭೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ನನಗೆ ಶೇ 60 ರಷ್ಟು ಬಿಜೆಪಿ ಬೆಂಬಲ ಇದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ನೇಹಾ ಪ್ರಕರಣದಲ್ಲಿ ಸಿಎಂ ಮತ್ತು ಗೃಹ ಸಚಿವ ನೀಡಿರುವ ಬೇಜವಾಬ್ದಾರಿ ಹೇಳಿಕೆಗಳು ಖಂಡನೀಯ: ಕೆಎಸ್ ಈಶ್ವರಪ್ಪ
2ನೇ ಹಂತದ ಕ್ಷೇತ್ರಗಳಲ್ಲಿ ನಾಮಪತ್ರ ಹಿಂಪಡೆಯುವ ಸಮಯ ಅಂತ್ಯವಾಗಿದ್ದು, ಕೊನೆಯ ದಿನವೂ ಕೆ.ಎಸ್.ಈಶ್ವರಪ್ಪ ನಾಮಪತ್ರ ವಾಪಸ್ ಪಡೆದಿರಲಿಲ್ಲ. ಹೀಗಾಗಿ ಬಂಡಾಯ ಅಭ್ಯರ್ಥಿಯಾಗಿ ಚುನಾವಣಾ ಕಣದಲ್ಲಿ ಉಳಿದುಕೊಂಡಿದ್ದಾರೆ. ಬಿಜೆಪಿ ಹಿರಿಯ ನಾಯಕರ ಮನವೊಲಿಕೆಗೂ ಜಗ್ಗಿರಲಿಲ್ಲ. ಮೋದಿ ಭಾವಚಿತ್ರ ಬಳಸಿಕೊಂಡು ಈಶ್ವರಪ್ಪ ಪ್ರಚಾರ ನಡೆಸುತ್ತಿದ್ದಾರೆ. ಹಾಗಾಗಿ ಬಿಜೆಪಿಗೆ ತಲೆ ನೋವಾಗಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 9:56 pm, Mon, 22 April 24