AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Elections 2024: 4 ಸಮಾವೇಶ, 8 ಲೋಕಸಭಾ ಕ್ಷೇತ್ರಗಳ ಟಾರ್ಗೆಟ್: ರಾಜ್ಯದಲ್ಲಿ ಪ್ರಧಾನಿ ಮೋದಿ ಭರ್ಜರಿ ಮತಬೇಟೆ

ಬಹಿರಂಗ ಪ್ರಚಾರಕ್ಕೆ ಉಳಿದಿರುವುದು ಆರೇ ಆರು ದಿನ ಮಾತ್ರ. ಮೇ 7 ರಂದು ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಹೀಗಾಗಿ ಬಿಜೆಪಿ ಅಬ್ಬರದ ಪ್ರಚಾರಕ್ಕೆ ಇಳಿದಿದೆ. ನಿನ್ನೆ ರಾತ್ರಿಯೇ ಬೆಳಗಾವಿಗೆ ಬಂದಿಳಿದಿದ್ದ ಪ್ರಧಾನಿ ಮೋದಿ ಬೆಳಗಾವಿ ಸೇರಿದಂತೆ ಶಿರಸಿ, ದಾವಣಗೆರೆ ಹಾಗೂ ಹೊಸಪೇಟೆಯಲ್ಲಿ ಇಂದು ರ್‍ಯಾಲಿ ಮಾಡಿದರು. ಒಂದಲ್ಲ ಎರಡಲ್ಲ ಒಂದೇ ದಿನ ನಾಲ್ಕು ಕ್ಷೇತ್ರಗಳಲ್ಲಿ ಪ್ರಧಾನಿ ಮೋದಿ ಅಬ್ಬರದ ಪ್ರಚಾರ ಮಾಡಿದ್ದಾರೆ.

Lok Sabha Elections 2024: 4 ಸಮಾವೇಶ, 8 ಲೋಕಸಭಾ ಕ್ಷೇತ್ರಗಳ ಟಾರ್ಗೆಟ್: ರಾಜ್ಯದಲ್ಲಿ ಪ್ರಧಾನಿ ಮೋದಿ ಭರ್ಜರಿ ಮತಬೇಟೆ
ಮೋದಿ ಭರ್ಜರಿ ಮತಬೇಟೆ
TV9 Web
| Edited By: |

Updated on:Apr 28, 2024 | 8:43 PM

Share

ಬೆಂಗಳೂರು, ಏಪ್ರಿಲ್​ 28: ಲೋಕಸಭಾ ಚುನಾವಣೆಯ (Lok Sabha Elections) ಎರಡನೇ ಹಂತದ ಮತ ಪ್ರಚಾರ ಕಣದಲ್ಲಿ ಮಾತಿನ ಬಾಣಗಳು ಮತ್ತಷ್ಟು ಬಿರುಸುಗೊಂಡಿದ್ದವು. ಎರಡನೇ ಹಂತದ ಮತದಾನ ನಡೆಯಲಿರುವ 8 ಕ್ಷೇತ್ರಗಳನ್ನು ಟಾರ್ಗೆಟ್ ಮಾಡಿದ ಪ್ರಧಾನಿ ನರೇಂದ್ರ ಮೋದಿ (Narendra Modi) ಬೆಳಗಾವಿ, ಶಿರಸಿ, ದಾವಣಗೆರೆ ಹಾಗೂ ಹೊಸಪೇಟೆಯಲ್ಲಿ ಇಂದು ರ್‍ಯಾಲಿ ಮಾಡಿದರು. ಒಂದೇ ಸಮಾವೇಶದಲ್ಲಿ ಎರಡೆರಡು ಕ್ಷೇತ್ರಗಳ ಮತದಾರರನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಿದರು. ಮಾತಿನುದ್ದಕ್ಕೂ ರಾಜ್ಯ ಕಾಂಗ್ರೆಸ್ ಸರ್ಕಾರ, ರಾಹುಲ್ ಗಾಂಧಿ ವಿರುದ್ಧ ಸರಣಿ ವಾಗ್ದಾಳಿ ನಡೆಸಿದರು. ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹತ್ಯೆ, ಬೆಂಗಳೂರು ಕೆಫೆ ಬಾಂಬ್ ಸ್ಫೊಟ, ಪಿತ್ರಾರ್ಜಿತ ಆಸ್ತಿ ತೆರಿಗೆಯೇ ಪ್ರಧಾನಿ ಮೋದಿ ಭಾಷಣದ ಮೇನ್ ಹೈಲೈಟ್ಸ್ ಆಗಿತ್ತು.

ರಾಹುಲ್ ಗಾಂಧಿ ವಿರುದ್ಧ ಮೋದಿ ಪರೋಕ್ಷ ವಾಗ್ದಾಳಿ

ಇಂದು ಬೆಳಗ್ಗೆ ಬೆಳಗಾವಿಯಲ್ಲಿ ಮತಬೇಟೆ ಆರಂಭಿಸಿದ ಪ್ರಧಾನಿ ಮೋದಿ, ಕಾಂಗ್ರೆಸ್​ನ ತುಷ್ಠೀಕರಣದಿಂದಾಗಿ ಕೆಫೆ ಬಾಂಬ್ ಸ್ಫೋಟವನ್ನು ಸಿಲಿಂಡರ್ ಸ್ಫೋಟ ಅಂದಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಿಮ್ಮ ಮಾಂಗಲ್ಯ ಸರವನ್ನೂ ಹುಡುಕಿಕೊಂಡು ಬರ್ತಾರೆ ಅಂತಾ ವಾಗ್ದಾಳಿ ಮಾಡಿದ್ದಾರೆ. ಇದೇ ವೇಳೆ ಬೆಳಗಾವಿ ನಮ್ಮ ದೇಶದ ರಾಜ ಮಹಾರಾಜರನ್ನು ಕಾಂಗ್ರೆಸ್ ನಾಯಕರು ಅವಮಾನಿಸಿದ್ದಾರೆ. ಈ ಮೂಲಕ ಛತ್ರಪತಿ ಶಿವಾಜಿ ಹಾಗೂ ಕಿತ್ತೂರು ರಾಣಿ ಚೆನ್ನಮ್ಮಗೆ ಅವಮಾನಿಸಿದ್ದಾರೆ ಅಂತಾ ರಾಹುಲ್ ಗಾಂಧಿ ವಿರುದ್ಧ ಮೋದಿ ಪರೋಕ್ಷ ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ನೇಹಾ, ಜೈನಮುನಿ ಹತ್ಯೆ, ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿದ್ದ ಪ್ರಕರಣ ಪ್ರಸ್ತಾಪಿಸಿ ಕಾಂಗ್ರೆಸ್​ ವಿರುದ್ಧ ಮೋದಿ ಚಾಟಿ

ಶಿರಸಿಯಲ್ಲಿ ಉತ್ತರ ಕನ್ನಡ ಹಾಗೂ ಧಾರವಾಡ ಕ್ಷೇತ್ರಗಳಲ್ಲಿ ಕ್ಯಾಂಪೇನ್ ಮಾಡಿದ ಪ್ರಧಾನಿ ಮೋದಿ ರಾಮಂದಿರ ವಿಚಾರ ಪ್ರಸ್ತಾಪಿಸುತ್ತಾ ಇಲ್ಲೂ ಕಾಂಗ್ರೆಸ್ ವಿರುದ್ಧ ಮಾತಿನ ಬಾಣ ಪ್ರಯೋಗಿಸಿದ್ದಾರೆ. ಇದೇ ವೇಳೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯದಲ್ಲಿ ನಾಚಿಕೆಗೇಡಿನ ಸರ್ಕಾರ ವಿದೆ ಅಂತಾ ವಾಗ್ದಾಳಿ ಮಾಡಿದ್ದಾರೆ.

ಇನ್ನು ಹುಬ್ಬಳ್ಳಿಯಲ್ಲಿ ಭಾಷಣ ಮಾಡಿದ ಪ್ರಧಾನಿ ಮೋದಿ, ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ನೇಹಾ ಹತ್ಯೆ ಮಾಡಲಾಗಿದೆ ಅಂತಾ ಸರ್ಕಾರ ವಿರುದ್ಧ ಕಿಡಿಕಾರಿದ್ದಾರೆ. ಕೆಲ ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ ನಮ್ಮ ಒಬ್ಬಳು ಸಹೋದರಿಗೆ ಆಗಿರೋದನ್ನು ನೋಡಿ ಇಡೀ ದೇಶವೇ ಆಘಾತಕ್ಕೊಳಗಾಗಿದೆ. ಕರ್ನಾಟಕದಲ್ಲಿ ಪ್ರತಿಯೊಬ್ಬ ತಂದೆ ತಾಯಿಗೆ ತಮ್ಮ ಹೆಣ್ಣುಮಕ್ಕಳ ಬಗ್ಗೆ ಚಿಂತೆಯಾಗಿದೆ. ಯಾರ ಕಾರಣದಿಂದ? ಕಾಂಗ್ರೆಸ್​ನ ಪಾಪದ ಕಾರಣದಿಂದ ಎಂದಿದ್ದಾರೆ.

ನರೇಂದ್ರ ಮೋದಿ ಇರುವುದು ಸ್ವಂತಕ್ಕಾಗಿ ಅಲ್ಲ, ನಿಮಗಾಗಿ

ಹೊಸಪೇಟೆ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ನರೇಂದ್ರ ಮೋದಿ ಇರುವುದು ಸ್ವಂತಕ್ಕಾಗಿ ಅಲ್ಲ, ನಿಮಗಾಗಿ. ಬಳ್ಳಾರಿ ಜನ ಬಿಜೆಪಿಯ ವಿಶ್ವಾಸ, ವಿಕಾಸವನ್ನು ನೋಡಿದ್ದಾರೆ. ಕಾಂಗ್ರೆಸ್​​ ಪಕ್ಷದ ವಿಶ್ವಾಸಘಾತಕತನ ನೋಡಿದ್ದಾರೆ. ಸುಷ್ಮಾ ಸ್ವರಾಜ್​​ ಗೆದ್ದಾಗ ಇಲ್ಲಿ ಸಾಕಷ್ಟು ಕೆಲಸ ಮಾಡಿದ್ದರು. ಕಾಂಗ್ರೆಸ್ ಮೇಡಂ ಇಲ್ಲಿಂದ ಗೆದ್ದು ವಿಶ್ವಾಸಘಾತಕತನ ಮಾಡಿದರು. ಸುಳ್ಳು ಹೇಳುವುದು ಮೋಸ ಮಾಡುವುದು ಕಾಂಗ್ರೆಸ್​ ಟ್ರ್ಯಾಕ್​​ ರೆಕಾರ್ಡ್​. ನಿಮ್ಮ ಒಂದೊಂದು ಮತ ಕಾಂಗ್ರೆಸ್​ ತಪ್ಪುಗಳಿಗೆ ಪಾಠ ಕಲಿಸಬೇಕು. ನೀವು ಒತ್ತುವ ಕಮಲದ ಬಟನ್ ನೇರವಾಗಿ ಮೋದಿಗೆ ಹೋಗುತ್ತದೆ. ಬಲಿಷ್ಠ ಮೋದಿ ಬಲಿಷ್ಠ ವಿಕಸಿತ ಸರ್ಕಾರಕ್ಕೆ ಕಾರಣವಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಳಗಾವಿಯ ಬಿಜೆಪಿ ಸಮಾವೇಶದಲ್ಲಿ ಗಿಫ್ಟ್ ನೋಡಿ ಭಾವುಕರಾದ ಮೋದಿ, ವಿಡಿಯೋ ನೋಡಿ

ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಮೇ 7ರಂದು ನಡೆಯಲಿದೆ. ಹೀಗಾಗಿ ಉಳಿದಿರೋ ಒಂದು ವಾರದಲ್ಲಿ ಮತದಾರರನ್ನು ತಮ್ಮತ್ತ ಸೆಳೆಯಲು ಬಿಜೆಪಿ, ಕಾಂಗ್ರೆಸ್ ಭಾರೀ ಕಸರತ್ತು ನಡೆಸುತ್ತಿವೆ.

ವರದಿ: ಬ್ಯೂರೋ ರಿಪೋರ್ಟ್ ಟಿವಿ9

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:41 pm, Sun, 28 April 24

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​