AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Elections 2024: ಮತದಾನ ಕೇಂದ್ರ ತಿಳಿಯಲು ಮೊಬೈಲ್​ ಆ್ಯಪ್​ ಸಿದ್ಧಪಡಿಸಿದ ಬಿಬಿಎಂಪಿ

ಲೋಕಸಭೆ ಚುನಾವಣೆಯ ಎರಡನೇ ಹಂತದ (ರಾಜ್ಯದ ಮೊದಲ ಹಂತದ) ಮತದಾನ ಏಪ್ರಿಲ್ 26ರಂದು ನಡೆಯಲಿದೆ. ಹೀಗಾಗಿ ಬೆಂಗಳೂರಿನ ಮತದಾರರು ತಮ್ಮ ಮತಗಟ್ಟೆಯನ್ನು ತಿಳಿದುಕೊಳ್ಳಲು ಸಹಾಯವಾಗಲೆಂದು ಬಿಬಿಎಂಪಿ ಆಂಡ್ರಾಯ್ಡ್ ಮೊಬೈಲ್​ ಆ್ಯಪ್​ನ್ನು ಸಿದ್ಧಪಡಿಸಿದೆ. ಅಷ್ಟೆ ಅಲ್ಲದೇ ಅಧಿಕೃತ ವೆಬ್​ಸೈಟ್​ಗೆ ಹೋಗಿ ಕೂಡ ತಮ್ಮ ಮತಗಟ್ಟೆ ಯಾವುದು ಎಂದು ತಿಳಿದುಕೊಳ್ಳಬಹುದಾಗಿದೆ.

Lok Sabha Elections 2024: ಮತದಾನ ಕೇಂದ್ರ ತಿಳಿಯಲು ಮೊಬೈಲ್​ ಆ್ಯಪ್​ ಸಿದ್ಧಪಡಿಸಿದ ಬಿಬಿಎಂಪಿ
ಟಿವಿ9ನಲ್ಲಿ ವರದಿ ಬಳಿಕ ಎಚ್ಚೆತ್ತ ಬಿಬಿಎಂಪಿ: ಮರ, ರೆಂಬೆ, ಕೊಂಬೆ ತೆರವಿಗೆ ಸಹಾಯವಾಣಿ ಬಿಡುಗಡೆ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Apr 23, 2024 | 4:29 PM

Share

ಬೆಂಗಳೂರು, ಏಪ್ರಿಲ್​ 23: ಲೋಕಸಭೆ ಚುನಾವಣೆಯ (Lok Sabha Election 2024) ಎರಡನೇ ಹಂತದ (ರಾಜ್ಯದ ಮೊದಲ ಹಂತದ) ಮತದಾನ (Vote) ಏಪ್ರಿಲ್ 26ರಂದು ನಡೆಯಲಿದೆ. ಈ ಹಿನ್ನೆಲೆ ರಾಜ್ಯ ನಾಯಕರುಗಳು ಬಿರುಸಿನ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಏ.24 ರ ಸಂಜೆ 6ರಿಂದ ಏ.26ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಕೂಡ ಜಾರಿ ಆಗಲಿದೆ. ಏ. 26 ರಂದು ಬೆಳಿಗ್ಗೆ 7 ರಿಂದ ಸಂಜೆ 6 ರವರೆ ಮತದಾನ ನಡೆಯಲಿದ್ದು, ಹೀಗಾಗಿ ಬೆಂಗಳೂರಿನ ಮತದಾರರು ತಮ್ಮ ಮತಗಟ್ಟೆಯನ್ನು ತಿಳಿದುಕೊಳ್ಳಲು ಸಹಾಯವಾಗಲೆಂದು ಬಿಬಿಎಂಪಿ ಆಂಡ್ರಾಯ್ಡ್ ಮೊಬೈಲ್​ ಆ್ಯಪ್​ನ್ನು ಸಿದ್ಧಪಡಿಸಿದೆ.

ಈ ಕುರಿತಾಗಿ ಬಿಬಿಎಂಪಿ ಮತ್ತು ಜಿಲ್ಲಾ ಚುನಾವಣಾಧಿಕಾರಿಗಳು ಮಾಹಿತಿ ನೀಡಿದ್ದು, ‘ನಮಸ್ಕಾರ ಬೆಂಗಳೂರಿನ ಮತದಾರರೇ, ಲೋಕಸಭೆ ಚುನಾವಣೆ ಹಿನ್ನೆಲೆ ಏ. 26 ರಂದು ಬೆಳಿಗ್ಗೆ 7 ರಿಂದ ಸಂಜೆ 6 ರವರೆಗೆ ಮತದಾನ ನಿಗದಿಯಾಗಿದೆ. ದಯವಿಟ್ಟು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿ ಮತ್ತು ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸಿ’ ಎಂದು ಹೇಳಿದೆ.

ಇದನ್ನೂ ಓದಿ: ಏ.24ರ ಸಂಜೆಯಿಂದ ಬೆಂಗಳೂರಿನಲ್ಲಿ 144 ಸೆಕ್ಷನ್​ ಜಾರಿ: ಮದ್ಯ ಸಿಗಲ್ಲ, ಬಹಿರಂಗ ಪ್ರಚಾರಕ್ಕೆ ಬ್ರೇಕ್​

ನಿಮ್ಮ ಮತಗಟ್ಟೆಯನ್ನು ತಿಳಿದುಕೊಳ್ಳಲು https://electoralsearch.eci.gov.in ವೈಬ್​ಸೈಟ್​ಗೆ ಅಥವಾ ಆಂಡ್ರಾಯ್ಡ್ ಮೊಬೈಲ್​ ಆ್ಯಪ್​ನ್ನು https://play.google.com/store/apps/details?id=com.eci.citizen&hl=en%C2%A7IN&gl=US ಡೌನ್ ಲೋಡ್ ಮಾಡಿಕೊಳ್ಳಲು ತಿಳಿಸಲಾಗಿದೆ.

1 ಕೋಟಿ 1 ಲಕ್ಷದ 20 ಸಾವಿರದಷ್ಟು ಮತದಾರರು

ಬಿಬಿಎಂಪಿ ಆಯುಕ್ತರು ಹಾಗೂ ನಗರ ಪೊಲೀಸ್ ಆಯುಕ್ತರಿಂದ ಸಭೆ ಬಳಿ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಪ್ರತಿಕ್ರಿಯಿಸಿದ್ದು, ಏಪ್ರಿಲ್ 26 ರಂದು ಬೆಳಗ್ಗೆ 7 ರಿಂದ ಮತದಾನ ಪ್ರಾರಂಭವಾಗುತ್ತೆ. 1 ಕೋಟಿ 1 ಲಕ್ಷದ 20 ಸಾವಿರದಷ್ಟು ಮತದಾರರಿದ್ದಾರೆ. ಕೆಲವೇ ದಿನಗಳು ಬಾಕಿ ಇರೋದರಿಂದ ಮತದಾರರಿಗೆ ಆಮಿಷಗಳು ಒಡ್ಡುವ ಸಾಧ್ಯತೆ ಇದೆ. ಹಾಗಾಗಿ ಇದರ ಮೇಲೆ ಹದ್ದಿನ ಕಣ್ಣಿಡಬೇಕಾಗುತ್ತೆ.

ಇದನ್ನೂ ಓದಿ: ವಿಧಾನಸೌಧದ ಆವರಣದಲ್ಲಿ ಪ್ರತಿಭಟನೆ: ಸಿದ್ದರಾಮಯ್ಯ, ಡಿಕೆಶಿ, ಸುರ್ಜೇವಾಲ ವಿರುದ್ಧ ಬಿಜೆಪಿ ದೂರು

ಮತದಾನದ ಪ್ರಾಮುಖ್ಯತೆ ಕಾಪಾಡಬೇಕಿದೆ. ಇವತ್ತು ಅದೇ ನಿಟ್ಟಿನಲ್ಲಿ ಸಭೆ ನಡೆಸಲಾಗಿದೆ. ನಗರ ಪೊಲೀಸರು ಸೇರಿದಂತೆ ವಿವಿಧ ಇಲಾಖೆ ಜೊತೆಗೆ ಸಭೆ ನಡೆಸಲಾಗಿದೆ. 72 ಗಂಟೆ ಹೇಗೆ ಆ್ಯಕ್ಟಿವ್ ಆಗಿರಬೇಕು ಎಂದು ಚರ್ಚೆ ನಡೆಸಲಾಗಿದೆ. ಬ್ಯಾಂಕ್ ಮಾಹಿತಿ ಆಧಾರದ ಮೇಲು ಕ್ರಮ ಕೈಗೊಳ್ಳಲು ಚರ್ಚೆ ನಡೆಸಲಾಗಿದೆ. ಸಂಶಯಾಸ್ಪದ ವಸ್ತುಗಳು ಕಂಡು ಬಂದರೆ ಕಣ್ಣಿಡುತ್ತೇವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.