ಬೆಂಗಳೂರು, ಏಪ್ರಿಲ್ 23: ಲೋಕಸಭೆ ಚುನಾವಣೆಯ (Lok Sabha Election 2024) ಎರಡನೇ ಹಂತದ (ರಾಜ್ಯದ ಮೊದಲ ಹಂತದ) ಮತದಾನ (Vote) ಏಪ್ರಿಲ್ 26ರಂದು ನಡೆಯಲಿದೆ. ಈ ಹಿನ್ನೆಲೆ ರಾಜ್ಯ ನಾಯಕರುಗಳು ಬಿರುಸಿನ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಏ.24 ರ ಸಂಜೆ 6ರಿಂದ ಏ.26ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಕೂಡ ಜಾರಿ ಆಗಲಿದೆ. ಏ. 26 ರಂದು ಬೆಳಿಗ್ಗೆ 7 ರಿಂದ ಸಂಜೆ 6 ರವರೆ ಮತದಾನ ನಡೆಯಲಿದ್ದು, ಹೀಗಾಗಿ ಬೆಂಗಳೂರಿನ ಮತದಾರರು ತಮ್ಮ ಮತಗಟ್ಟೆಯನ್ನು ತಿಳಿದುಕೊಳ್ಳಲು ಸಹಾಯವಾಗಲೆಂದು ಬಿಬಿಎಂಪಿ ಆಂಡ್ರಾಯ್ಡ್ ಮೊಬೈಲ್ ಆ್ಯಪ್ನ್ನು ಸಿದ್ಧಪಡಿಸಿದೆ.
ಈ ಕುರಿತಾಗಿ ಬಿಬಿಎಂಪಿ ಮತ್ತು ಜಿಲ್ಲಾ ಚುನಾವಣಾಧಿಕಾರಿಗಳು ಮಾಹಿತಿ ನೀಡಿದ್ದು, ‘ನಮಸ್ಕಾರ ಬೆಂಗಳೂರಿನ ಮತದಾರರೇ, ಲೋಕಸಭೆ ಚುನಾವಣೆ ಹಿನ್ನೆಲೆ ಏ. 26 ರಂದು ಬೆಳಿಗ್ಗೆ 7 ರಿಂದ ಸಂಜೆ 6 ರವರೆಗೆ ಮತದಾನ ನಿಗದಿಯಾಗಿದೆ. ದಯವಿಟ್ಟು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿ ಮತ್ತು ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸಿ’ ಎಂದು ಹೇಳಿದೆ.
ಇದನ್ನೂ ಓದಿ: ಏ.24ರ ಸಂಜೆಯಿಂದ ಬೆಂಗಳೂರಿನಲ್ಲಿ 144 ಸೆಕ್ಷನ್ ಜಾರಿ: ಮದ್ಯ ಸಿಗಲ್ಲ, ಬಹಿರಂಗ ಪ್ರಚಾರಕ್ಕೆ ಬ್ರೇಕ್
ನಿಮ್ಮ ಮತಗಟ್ಟೆಯನ್ನು ತಿಳಿದುಕೊಳ್ಳಲು https://electoralsearch.eci.gov.in ವೈಬ್ಸೈಟ್ಗೆ ಅಥವಾ ಆಂಡ್ರಾಯ್ಡ್ ಮೊಬೈಲ್ ಆ್ಯಪ್ನ್ನು https://play.google.com/store/apps/details?id=com.eci.citizen&hl=en%C2%A7IN&gl=US ಡೌನ್ ಲೋಡ್ ಮಾಡಿಕೊಳ್ಳಲು ತಿಳಿಸಲಾಗಿದೆ.
ಬಿಬಿಎಂಪಿ ಆಯುಕ್ತರು ಹಾಗೂ ನಗರ ಪೊಲೀಸ್ ಆಯುಕ್ತರಿಂದ ಸಭೆ ಬಳಿ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಪ್ರತಿಕ್ರಿಯಿಸಿದ್ದು, ಏಪ್ರಿಲ್ 26 ರಂದು ಬೆಳಗ್ಗೆ 7 ರಿಂದ ಮತದಾನ ಪ್ರಾರಂಭವಾಗುತ್ತೆ. 1 ಕೋಟಿ 1 ಲಕ್ಷದ 20 ಸಾವಿರದಷ್ಟು ಮತದಾರರಿದ್ದಾರೆ. ಕೆಲವೇ ದಿನಗಳು ಬಾಕಿ ಇರೋದರಿಂದ ಮತದಾರರಿಗೆ ಆಮಿಷಗಳು ಒಡ್ಡುವ ಸಾಧ್ಯತೆ ಇದೆ. ಹಾಗಾಗಿ ಇದರ ಮೇಲೆ ಹದ್ದಿನ ಕಣ್ಣಿಡಬೇಕಾಗುತ್ತೆ.
ಇದನ್ನೂ ಓದಿ: ವಿಧಾನಸೌಧದ ಆವರಣದಲ್ಲಿ ಪ್ರತಿಭಟನೆ: ಸಿದ್ದರಾಮಯ್ಯ, ಡಿಕೆಶಿ, ಸುರ್ಜೇವಾಲ ವಿರುದ್ಧ ಬಿಜೆಪಿ ದೂರು
ಮತದಾನದ ಪ್ರಾಮುಖ್ಯತೆ ಕಾಪಾಡಬೇಕಿದೆ. ಇವತ್ತು ಅದೇ ನಿಟ್ಟಿನಲ್ಲಿ ಸಭೆ ನಡೆಸಲಾಗಿದೆ. ನಗರ ಪೊಲೀಸರು ಸೇರಿದಂತೆ ವಿವಿಧ ಇಲಾಖೆ ಜೊತೆಗೆ ಸಭೆ ನಡೆಸಲಾಗಿದೆ. 72 ಗಂಟೆ ಹೇಗೆ ಆ್ಯಕ್ಟಿವ್ ಆಗಿರಬೇಕು ಎಂದು ಚರ್ಚೆ ನಡೆಸಲಾಗಿದೆ. ಬ್ಯಾಂಕ್ ಮಾಹಿತಿ ಆಧಾರದ ಮೇಲು ಕ್ರಮ ಕೈಗೊಳ್ಳಲು ಚರ್ಚೆ ನಡೆಸಲಾಗಿದೆ. ಸಂಶಯಾಸ್ಪದ ವಸ್ತುಗಳು ಕಂಡು ಬಂದರೆ ಕಣ್ಣಿಡುತ್ತೇವೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.