ಲೋಕಸಭಾ ಚುನಾವಣೆಗೆ ಬಿಜೆಪಿಯ 2ನೇ ಪಟ್ಟಿ ಪ್ರಕಟ, ಕರ್ನಾಟಕದ ಹಲವು ಹಾಲಿ ಸಂಸದರಿಗೆ ಟಿಕೆಟ್ ಕಟ್

BJP releases 2nd list: ಲೋಕಸಭಾ ಚುನಾವಣೆಗೆ ಬಿಜೆಪಿಯ ಎರಡನೇ ಪಟ್ಟಿ ಪ್ರಕಟವಾಗಿದೆ. ಅದರಲ್ಲಿ ಕರ್ನಾಟಕದ ಪೈಕಿ ಮೊದಲ ಪಟ್ಟಿ ಪ್ರಕಟವಾಗಿದ್ದು, ಕೆಲ ಹಾಲಿ ಸಂಸದರಿಗೆ ಹೈಕಮಾಂಡ್ ಬಿಗ್ ಶಾಕ್ ಕೊಟ್ಟಿದೆ. ಒಟ್ಟು 28 ಕ್ಷೇತ್ರಗಳಲ್ಲಿ ಮೂರು ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟುಕೊಟ್ಟಿದ್ದು, ಇನ್ನುಳಿದ 25 ಕ್ಷೇತ್ರಗಳ ಪೈಕಿ ಈಗ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಇನ್ನುಳಿದಂತೆ ಐದು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ. ಹಾಗೇ ಈ ಬಾರಿ 8 ಹಾಲಿ ಸಂಸದರಿಗೆ ಟಿಕೆಟ್​ ಮಿಸ್ ಆಗಿದೆ.

ಲೋಕಸಭಾ ಚುನಾವಣೆಗೆ ಬಿಜೆಪಿಯ 2ನೇ ಪಟ್ಟಿ ಪ್ರಕಟ, ಕರ್ನಾಟಕದ ಹಲವು ಹಾಲಿ ಸಂಸದರಿಗೆ ಟಿಕೆಟ್ ಕಟ್
ಬಿಜೆಪಿImage Credit source: The Hindu
Follow us
ರಮೇಶ್ ಬಿ. ಜವಳಗೇರಾ
|

Updated on:Mar 13, 2024 | 7:46 PM

ನವದೆಹಲಿ, (ಮಾರ್ಚ್ 13): ಲೋಕಸಭಾ ಚುನಾವಣೆಗೆ(Lok Sabha Elections 2024) ಬಿಜೆಪಿಯ ಎರಡನೇ ಪಟ್ಟಿ ಪ್ರಕಟವಾಗಿದ್ದು, ಕರ್ನಾಟಕದ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ. ಅದರಲ್ಲೂ ಮುಖ್ಯವಾಗಿ ಹಲವು ಹಾಲಿ ಸಂಸದರಿಗೆ ಟಿಕೆಟ್​ ಮಿಸ್ ಆಗಿದ್ದು, ಹೊಸ ಮುಖಗಳಿಗೆ ಮಣೆ ಹಾಕಿದೆ.  ಒಟ್ಟು ಎಂಟು ಹಾಲಿ ಸಂಸದರಿಗೆ ಟಿಕೆಟ್ ಮಿಸ್ ಆಗಿದ್ದು, ಆರು ಹೊಸ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಇದರಿಂದ ಘಟಾನುಘಟಿ ನಾಯಕರುಗಳಿಗೆ ಹೈಕಮಾಂಡ್​  ಬಿಗ್ ಶಾಕ್ ಕೊಟ್ಟಿದೆ.

8 ಹಾಲಿ ಸಂಸದರಿಗೆ ಟಿಕೆಟ್ ಮಿಸ್

ಕರ್ನಾಟಕ ಬಿಜೆಪಿಯ ಒಟ್ಟು 8 ಹಾಲಿ ಸದಸ್ಯರಿಗೆ ಈ ಬಾರಿ ಟಿಕೆಟ್‌ ತಪ್ಪಿದೆ.  ಮೈಸೂರು-ಪ್ರತಾಪ್‌ ಸಿಂಹ, ಬೆಂಗಳೂರು ಉತ್ತರ- ಡಿವಿ ಸದಾನಂದ ಗೌಡ, ಕೊಪ್ಪಳ- ಕರಡಿ ಸಂಗಣ್ಣ, ಹಾವೇರಿ-ಶಿವಕುಮಾರ್‌ ಉದಾಸಿ, ತುಮಕೂರು-ಜಿಎಸ್‌ ಬಸವರಾಜು(ನಿವೃತ್ತಿ ಘೋಷಿಸಿದ್ದರು) ದಕ್ಷಿಣ ಕನ್ನಡ-ನಳಿನ್ ಕುಮಾರ್ ಕಟೀಲ್, ಚಾಮರಾಜನಗರ-ಶ್ರೀನಿವಾಸ್ ಪ್ರಸಾದ್(ನಿವೃತ್ತಿ ಘೋಷಿಸಿದ್ದರು), ಬಳ್ಳಾರಿ- ದೇವೇಂದ್ರಪ್ಪ.

ಯಾರ್ಯಾರಿಗೆ ಟಿಕೆಟ್?

  • ಚಿಕ್ಕೋಡಿ ಲೋಕಸಭಾ ಕ್ಷೇತ್ರ-ಅಣ್ಣಾ ಸಾಹೇಬ್ ಜೊಲ್ಲೆ
  • ಬಾಗಲಕೋಟೆ ಲೋಕಸಭಾ ಕ್ಷೇತ್ರ-ಪಿ.ಸಿ.ಗದ್ದಿಗೌಡರ್
  • ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ-ಕೋಟ ಶ್ರೀನಿವಾಸ ಪೂಜಾರಿ
  • ಹಾವೇರಿ ಲೋಕಸಭಾ ಕ್ಷೇತ್ರ-ಬಸವರಾಜ ಬೊಮ್ಮಾಯಿ
  • ಮೈಸೂರು ಕ್ಷೇತ್ರ-ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್
  • ಬೆಂಗಳೂರು ಗ್ರಾಮಾಂತರ ಕ್ಷೇತ್ರ-ಡಾ.ಸಿ.ಎನ್.ಮಂಜುನಾಥ
  • ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ-ಶೋಭಾ ಕರಂದ್ಲಾಜೆ
  • ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ-ತೇಜಸ್ವಿ ಸೂರ್ಯ
  • ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ-ಪಿ.ಸಿ.ಮೋಹನ್
  • ತುಮಕೂರು ಲೋಕಸಭಾ ಕ್ಷೇತ್ರ-ವಿ.ಸೋಮಣ್ಣ
  • ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ-ಕ್ಯಾಪ್ಟನ್ ಬ್ರಿಜೇಶ್ ಚೌಟಾ
  • ಚಾಮರಾಜನಗರ ಲೋಕಸಭಾ ಕ್ಷೇತ್ರ-ಎಸ್.ಬಾಲರಾಜು
  • ಧಾರವಾಡ ಲೋಕಸಭಾ ಕ್ಷೇತ್ರ-ಪ್ರಹ್ಲಾದ್ ಜೋಶಿ
  • ಕೊಪ್ಪಳ ಲೋಕಸಭಾ ಕ್ಷೇತ್ರ-ಡಾ.ಬಸವರಾಜ ತ್ಯಾವಟೂರು
  • ದಾವಣಗೆರೆ ಲೋಕಸಭಾ ಕ್ಷೇತ್ರ-ಗಾಯತ್ರಿ ಸಿದ್ದೇಶ್ವರ್
  • ಬಳ್ಳಾರಿ ಲೋಕಸಭಾ ಕ್ಷೇತ್ರ-ಬಿ.ಶ್ರೀರಾಮುಲು
  • ಕಲಬುರಗಿ ಲೋಕಸಭಾ ಕ್ಷೇತ್ರ-ಡಾ.ಉಮೇಶ್ ಜಾಧವ್
  • ಬೀದರ್ ಲೋಕಸಭಾ ಕ್ಷೇತ್ರ-ಭಗವಂತ ಖೂಬಾ
  • ವಿಜಯಪುರ ಲೋಕಸಭಾ ಕ್ಷೇತ್ರ-ರಮೇಶ್ ಜಿಗಜಿಣಗಿ
  • ಶಿವಮೊಗ್ಗ ಲೋಕಸಭಾ ಕ್ಷೇತ್ರ-ಬಿ.ವೈ.ರಾಘವೇಂದ್ರ

ಯಾರ ಬದಲಿಗೆ ಯಾರಿಗೆ ಟಿಕೆಟ್​?

  • ದಕ್ಷಿಣ ಕನ್ನಡ ಕ್ಷೇತ್ರದಿಂದ ನಳಿನ್ ಕುಮಾರ್ ಕಟೀಲು ಬದಲಿಗೆ ಬ್ರಿಜೇಶ್​ ಚೌಟಾಗೆ ಟಿಕೆಟ್
  • ಮೈಸೂರು- ಪ್ರತಾಪ್​ ಸಿಂಹ ಬದಲು ಯದುವೀರ ಒಡೆಯರ್​ಗೆ ಟಿಕೆಟ್
  • ಬಳ್ಳಾರಿಯಲ್ಲಿ ದೇವೇಂದ್ರಪ್ಪ ಬದಲು ಶ್ರೀರಾಮುಲುಗೆ ಟಿಕೆಟ್
  • ಹಾವೇರಿಯಲ್ಲಿ ಶಿವಕುಮಾರ್ ಬದಲು ಬೊಮ್ಮಾಯಿಗೆ ಟಿಕೆಟ್
  • ತುಮಕೂರಿನಲ್ಲಿ G.S​.ಬಸವರಾಜು ಬದಲು ಸೋಮಣ್ಣ ಕಣಕ್ಕೆ
  • ಕೊಪ್ಪಳದಲ್ಲಿ ಸಂಗಣ್ಣ ಕರಡಿ ಬದಲು ಡಾ.ಬಸವರಾಜ​ ಕ್ಯಾವಟರ್
  • ಹಾಲಿ ಸಂಸದ ಸದಾನಂದಗೌಡರಿಗೆ ಕೈತಪ್ಪಿದ ಬಿಜೆಪಿ ಟಿಕೆಟ್
  • ಬೆಂಗಳೂರು ಉತ್ತರ ಕ್ಷೇತ್ರದಿಂದ ಶೋಭಾ ಕರಂದ್ಲಾಜೆ ಕಣಕ್ಕೆ
  •  ಚಾಮರಾಜನಗರದಿಂದ ವಿ.ಶ್ರೀನಿವಾಸ​ ಪ್ರಸಾದ್​ ಬದಲಿಗೆ ಎಸ್​.ಬಾಲರಾಜುಗೆ ಟಿಕೆಟ್

ಲೋಕಸಭಾ ಚುನಾವಣೆಗೆ ಹೊಸಮುಖಗಳು

  • ಡಾ. ಸಿ.ಎನ್. ಮಂಜುನಾಥ್-ಬೆಂಗಳೂರು ಗ್ರಾಮಾಂತರ
  • ಯದುವೀರ ಕೃಷ್ಣದತ್ತ ಒಡೆಯರ್-ಮೈಸೂರು-ಕೊಡಗು
  • ಕ್ಯಾ. ಬ್ರಿಜೇಶ್ ಚೌಟ-ದಕ್ಷಿಣ ಕನ್ನಡ
  • ಕೋಟ ಶ್ರೀನಿವಾಸ ಪೂಜಾರಿ-ಉಡುಪಿ-ಚಿಕ್ಕಮಗಳೂರು
  • ಗಾಯತ್ರಿ ಸಿದ್ದೇಶ್ವರ-ದಾವಣಗೆರೆ
  • ಡಾ. ಬಸವರಾಜ ಕ್ಯಾವತ್ತೂರ್-ಕೊಪ್ಪಳ

ಜೆಡಿಎಸ್​ಗೆ ಬಿಟ್ಟುಕೊಟ್ಟ ಮೂರು ಕ್ಷೇತ್ರಗಳು

  • ಮಂಡ್ಯ
  • ಹಾಸನ
  • ಕೋಲಾರ

ಐದು ಕ್ಷೇತ್ರಗಳ ಟಿಕೆಟ್ ಕಾಯ್ದಿರಿಸಿದ ಬಿಜೆಪಿ

ಒಟ್ಟು 28 ಕ್ಷೇತ್ರಗಳಲ್ಲಿ ಮೂರು ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟುಕೊಟ್ಟಿದ್ದು, ಇನ್ನುಳಿದ 25 ಕ್ಷೇತ್ರಗಳ ಪೈಕಿ ಈಗ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಇನ್ನುಳಿದಂತೆ ಐದು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ. ರಾಯಚೂರು, ಚಿತ್ರದುರ್ಗ, ಬೆಳಗಾವಿ, ಚಿಕ್ಕಬಳ್ಳಾಪುರ, ಉತ್ತರ ಕನ್ನಡ ಕ್ಷೇತ್ರಗಳ ಟಿಕೆಟ್ ಕಾಯ್ದಿರಿಸಿದೆ.

ಉಳಿದ ಐದು ಕ್ಷೇತ್ರಗಳಲ್ಲಿ ಟಿಕೆಟ್ ಫೈಟ್

  •  ಚಿತ್ರದುರ್ಗ ಕ್ಷೇತ್ರದಲ್ಲಿ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಮತ್ತು ಮಾಜಿ ಸಂಸದ ಜನಾರ್ದನ ಸ್ವಾಮಿ ನಡುವೆ ಫೈಟ್
  • ಬೆಳಗಾವಿ ಕ್ಷೇತ್ರದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಂಗಳಾ ಅಂಗಡಿ, ಮಹಾಂತೇಶ್ ಕವಟಗಿಮಠ, ರಮೇಶ್ ಕತ್ತಿ ನಡುವೆ ಫೈಟ್
  • ಉತ್ತರ ಕನ್ನಡ ಕ್ಷೇತ್ರದಲ್ಲಿ ಹಾಲಿ ಸಂಸದ ಅನಂತಕುಮಾರ್ ಹೆಗಡೆ, ವಿಶ್ಚೇಶ್ವರ ಹೆಗಡೆ ಕಾಗೇರಿ, ಗೋಪಾಲ್ ಹೆಸರು ಚರ್ಚೆ
  • ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಡಾ. ಕೆ. ಸುಧಾಕರ್ ಮತ್ತು ಅಲೋಕ್ ವಿಶ್ವನಾಥ್ ನಡುವೆ ಫೈಟ್
  • ರಾಯಚೂರು ಕ್ಷೇತ್ರದಲ್ಲಿ ಹಾಲಿ ಸಂಸದ ರಾಜಾ ಅಮರೇಶ ನಾಯಕ್ ಮತ್ತು ಬಿ.ವಿ‌‌. ನಾಯಕ್ ನಡುವೆ ಫೈಟ್

Published On - 7:20 pm, Wed, 13 March 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ