ಲೋಕಸಭೆ ಚುನಾವಣೆ: ಮತದಾನದ ವೇಳೆ ಕೆಲವೆಡೆ ಗದ್ದಲ, ಗೊಂದಲ, ಎಲ್ಲೆಲ್ಲಿ ಏನೇನನಾಯ್ತು? ಇಲ್ಲಿದೆ ವಿವರ

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಬಹುತೇಕ ಶಾಂತವಾಗಿಯೇ ನಡೆಯುತ್ತಿದೆ. ಕೆಲವೆಡೆ ಸಣ್ಣ ಪುಟ್ಟ ಗೊಂದಲ, ಗಲಾಟೆ ನಡೆದಿದೆ. ಕೆಲವೆಡೆ ಮತಯಂತ್ರದಲ್ಲಿ ಲೋಪ ಕಂಡುಬಂದಿದ್ದು, ನಂತರ ಅವುಗಳನ್ನು ಸರಿಪಡಿಸಿ ಮತದಾನ ಮುಂದುವರಿಸಲಾಯೊತು. ಎಲ್ಲೆಲ್ಲಿ ಏನೇನಾಯಿತು ಎಂಬ ವಿವರ ಇಲ್ಲಿದೆ.

ಲೋಕಸಭೆ ಚುನಾವಣೆ: ಮತದಾನದ ವೇಳೆ ಕೆಲವೆಡೆ ಗದ್ದಲ, ಗೊಂದಲ, ಎಲ್ಲೆಲ್ಲಿ ಏನೇನನಾಯ್ತು? ಇಲ್ಲಿದೆ ವಿವರ
ಗ್ಯಾರಂಟಿ ಕಾರ್ಡ್ ಹಂಚಿಕೆ ಮಾಡಿ ಮತದಾರರಿಗೆ ಆಮಿಷವೊಡ್ಡಿದ ಕಾಂಗ್ರೆಸ್: ಕುಮಾರಸ್ವಾಮಿ ಆರೋಪ
Follow us
Ganapathi Sharma
|

Updated on:Apr 26, 2024 | 2:30 PM

ಬೆಂಗಳೂರು, ಏಪ್ರಿಲ್ 26: ಲೋಕಸಭೆ ಚುನಾವಣೆಯ (Lok Sabha Elections) ಮೊದಲ ಹಂತದ ಮತದಾನ (Voting) ರಾಜ್ಯದ 14 ಕ್ಷೇತ್ರಗಳಲ್ಲಿ ನಡೆಯುತ್ತಿದೆ. ಇದೇ ವೇಳೆ, ಕೆಲವೆಡೆ ಗೊಂದಲ ಗಲಾಟೆಗಳು ನಡೆದಿವೆ. ಮಂಡ್ಯದಲ್ಲಿ ಮತದಾನ ಯಂತ್ರ ಕೈ ಕೊಟ್ಟಿದ್ದರಿಂದ ಬೆಳಗ್ಗೆಯೇ ಗೊಂದಲ ಸೃಷ್ಟಿಯಾಗಿತ್ತು. ಮಂಗಳೂರಲ್ಲಿ ಬಿಜೆಪಿ ಕಾರ್ಯಕರ್ತರ ರಂಪಾಟದಿಂದ ಕೆಲ ಕಾಲ ಆತಂಕದ ಸನ್ನಿವೇಶ ಸೃಷ್ಟಿಯಾಗಿತ್ತು. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಗ್ಯಾರಂಟಿ ಕಾರ್ಡ್​ ಹಂಚಿದ ಆರೋಪ ಕೇಳಿ ಬಂದಿದ್ದು, ಇನ್ನು ಕೆಲವೆಡೆ ಮತದಾನ ದಿನವೂ ಕಾಂಗ್ರೆಸ್ ಕಾರ್ಯಕರ್ತರು ಚೊಂಬು ಅಭಿಯಾನ ನಡೆಸಿದ್ದಾರೆ.

ಮಂಗಳೂರಿನಲ್ಲಿ ನಡೆದಿದ್ದೇನು?

ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ರಂಪಾಟ ಮಾಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಮತ ಚಲಾಯಿಸಿ ಹೊರ ಬಂದಾಗ, ಈ ರಂಪಾಟ ನಡೆದಿದೆ. ಬಿಜೆಪಿ ಕಾರ್ಯಕರ್ತರು ಪೊಲೀಸ್ ಅಧಿಕಾರಿಯನ್ನೇ ತಳ್ಳಿ ವಾಗ್ವಾದ ನಡೆಸಿದ್ದಾರೆ. ಕೂಡಲೇ ಎಚ್ಚೆತ್ತುಕೊಂಡ ಸ್ಥಳದಲ್ಲಿದ್ದ ಪೊಲೀಸರು ಮತಗಟ್ಟೆಯಲ್ಲಿದ್ದ ಬಿಜೆಪಿ ಕಾರ್ಯಕರ್ತರನ್ನ ಓಡಿಸಿದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್, ಸೋಲಿನ ಭೀತಿಯಿಂದ ಬಿಜೆಪಿಯವರು ಅಶಾಂತಿ ವಾತಾವರಣ ನಿರ್ಮಾಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ವಿರುದ್ಧ ಗ್ಯಾರಂಟಿ ಕಾರ್ಡ್ ಹಂಚಿಕೆ ಆರೋಪ

ಜೆಡಿಎಸ್ ನಾಯಕರು ಕಾಂಗ್ರೆಸ್ ನಾಯಕರ ವಿರುದ್ಧ ಗ್ಯಾರಂಟಿ ಕಾರ್ಡ್​ ಹಂಚಿಕೆ ಆರೋಪ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಗ್ಯಾರಂಟಿ ಕಾರ್ಡ್ ವಿತರಣೆ ಮಾಡಲಾಗಿದೆ ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಇನ್ನು ಹಾಸನದಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್​​​ಡಿ ದೇವೇಗೌಡ, ಕಾಂಗ್ರೆಸ್​ನವರು ಗ್ಯಾರಂಟಿ ಪತ್ರ ಪ್ರದರ್ಶನ ಮಾಡಿದ್ದಾರೆ. ಇಲ್ಲಿ ಮನೆ ಮನೆಗೆ ಗ್ಯಾರಂಟಿ ಕಾರ್ಡ್​ ಹಂಚಿದ್ದಾರೆ ಎಂದು ಆರೋಪಿಸಿದ್ದಾರೆ.

ಇದೆಲ್ಲದರ ಮಧ್ಯೆ ಕಾಂಗ್ರೆಸ್ ಕಾರ್ಯಕರ್ತರು ಮತದಾನದ ದಿನವೂ ಚೊಂಬು ಅಭಿಯಾನ ನಡೆಸಿದ್ದಾರೆ. ಚೊಂಬು ಪೋಸ್ಟರ್ ಧರಿಸಿದ ಕಾಂಗ್ರೆಸ್ ಏಜೆಂಟರು, ‘ಚೊಂಬೇಶ್ವರನ ಸಹವಾಸ ದಿನವಿಡೀ ಉಪವಾಸ’ ಅಂತಾ ಅಭಿಯಾನ ಮಾಡಿದ್ದಾರೆ. ಅಲ್ಲದೆ, ಬೆಂಗಳೂರಿನ ಮಂಜುನಾಥ್ ನಗರದ ಗೌತಮ್ ಕಾಲೇಜು ಬಳಿ ರಾಷ್ಟ್ರೀಯ ಯುವಕಾಂಗ್ರೆಸ್ ಅಧ್ಯಕ್ಷ ಬಿವಿ ಶ್ರೀನಿವಾಸ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಖಾಲಿ ಚೊಂಬು ಹಾಗೂ ಗ್ಯಾಸ್ ಸಿಲಿಂಡರ್ ಪ್ರದರ್ಶನ ಮಾಡಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಲೋಕಸಭೆ ಚುನಾವಣೆಗೆ Rapidoದಿಂದ ಉಚಿತ ಸೇವೆ, ಯಾರಿಗೆಲ್ಲ ಲಭ್ಯ, ಇಲ್ಲಿದೆ ಮಾಹಿತಿ

ಇದೆಲ್ಲದರ ಮಧ್ಯೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ತಾಪಕ್ಕೆ ಮತದಾರರು ಹೈರಾಣದರು. ಮತ ಕೇಂದ್ರದಲ್ಲಿ ಶಾಮಿಯಾನ ಹಾಕದ್ದಕ್ಕೆ ಆಕ್ರೋಶ ಹೊರಹಾಕಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ತಾಪಕ್ಕೆ ಮತದಾರರು ಹೈರಾಣ

ಅತ್ತ ಆನೇಕಲ್​ ಪಟ್ಟಣದಲ್ಲಿ ಪೆಂಡಾಲ್ ಹಾಕಿದ್ದಕ್ಕೆ ವಾಗ್ವಾದ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತರು ಹಾಕಿದ್ದ ಪೆಂಡಲ್​ಗಳಿಗೆ ಬಿಜೆಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು. ಮಂಡ್ಯ ಜಿಲ್ಲೆ ಶ್ರೀರಂಗ ಪಟ್ಟಣ ಮತ್ತು ಕೆಆರ್​ಎಸ್​ನಲ್ಲಿ ಮತಯಂತ್ರ ಕೈ ಕೊಟ್ಟಿತ್ತು. ಹೀಗಾಗಿ ಮತ ಯಂತ್ರ ಸರಿಪಡಿಸಲು ಅಧಿಕಾರಿಗಳು ಹರಸಾಹಸ ಪಟ್ಟರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:24 pm, Fri, 26 April 24

‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ