AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತದಾನ ಮಾಡಿದವರಿಗೆ ಉಚಿತ ಆಹಾರದ ಕೊಡುಗೆ ನೀಡಲು ಹೋಟೆಲ್​​ಗಳಿಗೆ ಹೈಕೋರ್ಟ್ ಅನುಮತಿ

ಮತದಾನ ಮಾಡಿ ಬಂದವರಿಗೆ ಉಚಿತ ಆಹಾರದ ಕೊಡುಗೆ ನೀಡಬೇಕೆಂದು ಬಯಸಿರುವ ಬೆಂಗಳೂರಿನ ಹೋಟೆಲ್​​ಗಳಿಗೆ ಕರ್ನಾಟಕ ಹೈಕೋರ್ಟ್ ಸಿಹಿ ಸುದ್ದಿ ನೀಡಿದೆ. ಉಚಿತ ಆಹಾರ ನೀಡಲು ಷರತ್ತುಬದ್ಧ ಅನುಮತಿ ನೀಡಿದೆ. ಮತದಾನ ಪ್ರಮಾಣ ಹೆಚ್ಚಿಸುವ ಸದುದ್ದೇಶದೊಂದಿಗೆ ಕಳೆದ ವರ್ಷ ವಿಧಾನಸಭಾ ಚುನಾವಣೆ ವೇಳೆಯೂ ಕೆಲವು ಹೋಟೆಲ್​​ಗಳು ಉಚಿತ ಆಹಾರದ ಕೊಡುಗೆ ನೀಡಿದ್ದವು.

ಮತದಾನ ಮಾಡಿದವರಿಗೆ ಉಚಿತ ಆಹಾರದ ಕೊಡುಗೆ ನೀಡಲು ಹೋಟೆಲ್​​ಗಳಿಗೆ ಹೈಕೋರ್ಟ್ ಅನುಮತಿ
ಹೈಕೋರ್ಟ್
Ganapathi Sharma
|

Updated on: Apr 24, 2024 | 9:14 AM

Share

ಬೆಂಗಳೂರು, ಏಪ್ರಿಲ್ 24: ಲೋಕಸಭೆ ಚುನಾವಣೆಗೆ (Lok Sabha Elections) ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಏಪ್ರಿಲ್ 26ರಂದು ಶುಕ್ರವಾರ ನಡೆಯಲಿದೆ. ಆ ದಿನ ಮತದಾನ ಮಾಡಿ ಅದಕ್ಕೆ ಸಂಬಂಧಿಸಿದ ಪುರಾವೆಗಳನ್ನು ತೋರಿಸಿದವರಿಗೆ ಉಚಿತವಚವಾಗಿ ಆಹಾರ ನೀಡಲು ಬೃಹತ್ ಬೆಂಗಳೂರು ಹೊಟೇಲ್ ಅಸೋಸಿಯೇಷನ್‌ನ ಸದಸ್ಯರಿಗೆ ಕರ್ನಾಟಕ ಹೈಕೋರ್ಟ್ (Karnataka High Court) ಅನುಮತಿ ನೀಡಿದೆ. ಈ ವಿಚಾರವಾಗಿ ಹೈಕೋರ್ಟ್​ ಮಂಗಳವಾರ ಮಧ್ಯಂತರ ಆದೇಶ ನೀಡಿದೆ. ಮತದಾನ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಬೆಂಗಳೂರಿನ ಕೆಲವು ಹೋಟೆಲ್​ಗಳು ಕಳೆದ ವರ್ಷ ವಿಧಾನಸಭೆ ಚುನಾವಣೆ ವೇಳೆಯೂ ಇದೇ ರೀತಿಯ ಪ್ರಯತ್ನ ಮಾಡಿದ್ದವು.

ಹೋಟೆಲ್​​ಗಳ ಸಂಘ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಮಧ್ಯಂತರ ಆದೇಶ ನೀಡಿದ್ದಾರೆ.

ಅರ್ಜಿದಾರರು ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಬಾರದು ಎಂಬ ಷರತ್ತಿನೊಂದಿಗೆ, ಅರ್ಜಿದಾರರ ಸಂಘ ಮತ್ತು ಅದರ ಸದಸ್ಯರು 2024 ರ ಏಪ್ರಿಲ್ 26, ರಂದು ಬೆಂಗಳೂರಿನಲ್ಲಿ ಮತದಾರರಿಗೆ ಉಚಿತ ಆಹಾರವನ್ನು ವಿತರಿಸಲು ಅನುಮತಿಸಲಾಗಿದೆ ಎಂದು ನ್ಯಾಯಾಲಯ ಆದೇಶದಲ್ಲಿ ಹೇಳಿದೆ.

ಯಾವುದೇ ರಾಜಕೀಯ ಪಕ್ಷದೊಂದಿಗೆ ಸಂಬಂಧ ಹೊಂದಿದ್ದು ಈ ಕೆಲಸ ಮಾಡುತ್ತಿಲ್ಲ. ಮತ ಚಲಾಯಿಸಿದವರಿಗೆ ಮಾತ್ರ ಈ ರೀತಿಯ ಉಚಿತ ಆಹಾರ ನೀಡಲಾಗುತ್ತದೆ ಎಂದು ಅರ್ಜಿದಾರರು ಹೈಕೋರ್ಟ್​ಗೆ ಸಲ್ಲಿಸಿದ್ದ ಮನವಿಯಲ್ಲಿ ಉಲ್ಲೇಖಿಸಿದ್ದರು.

ಇದನ್ನೂ ಓದಿ: ಕೊಪ್ಪಳ: ಗಂಗಾವತಿಯ ಶ್ರೀರಾಮನಗರದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ ವ್ಯಕ್ತಿ ಮೇಲೆ ಹಲ್ಲೆ

ಬೆಂಗಳೂರು ನಗರ ಸೇರಿದಂತೆ ವಿವಿಧ ಕಡೆಗಳಲ್ಲಿ ಕಡಿಮೆ ಮತದಾನವಾಗುತ್ತಿದೆ. ಹೀಗಾಗಿ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಮಾತ್ರ ಈ ವಿಧಾನವನ್ನು ಅನುಸರಿಸುತ್ತಿದ್ದೇವೆ. ಕಳೆದ ವರ್ಷ ವಿಧಾನಸಭಾ ಚುನಾವಣೆಯ ವೇಳೆ ಉಚಿತ ಆಹಾರ ನೀಡಲಾಗಿತ್ತು. ಆಗಲೂ ನಮ್ಮ ವಿರುದ್ಧ ಯಾವುದೇ ನಿಯಮ ಉಲ್ಲಂಘನೆಯ ದೂರುಗಳು ದಾಖಲಾಗಿಲ್ಲ ಎಂದು ಅರ್ಜಿದಾರರು ಕೋರ್ಟ್​​ಗೆ ತಿಳಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ