ಲೋಕಸಭಾ ಚುನಾವಣೆ, ಬೆಂಗಳೂರಿನಲ್ಲಿ ಅಲರ್ಟ್: ಮಾದರಿ ನೀತಿಸಂಹಿತೆ ಜಾರಿಗೆ ತುಷಾರ್ ಗಿರಿನಾಥ್ ಆದೇಶ

ಲೋಕಸಭಾ ಚುನಾವಣೆ ಹಿನ್ನೆಲೆ ಬೆಂಗಳೂರಿನಲ್ಲಿ ಅಲರ್ಟ್ ಆಗಿದ್ದು, ಮಾದರಿ ನೀತಿಸಂಹಿತೆ ಜಾರಿಗೆ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್​​ ಆದೇಶ ಹೊರಡಿಸಿದ್ದಾರೆ. ಅಧಿಕಾರಿಗಳ ಜೊತೆ ಸಭೆ ನಡೆಸಿ ಸೂಚನೆ ನೀಡಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರ, ತೆಗೆಯಲು ತಿಳಿಸಿದ್ದು, ಮಾದರಿ ನೀತಿ ಸಂಹಿತೆ ಉಲ್ಲಘನೆಗಳ ಮೇಲೆ ನಿಗಾವಹಿಸಲು ಸೂಚಿಸಿದ್ದಾರೆ.

ಲೋಕಸಭಾ ಚುನಾವಣೆ, ಬೆಂಗಳೂರಿನಲ್ಲಿ ಅಲರ್ಟ್: ಮಾದರಿ ನೀತಿಸಂಹಿತೆ ಜಾರಿಗೆ ತುಷಾರ್ ಗಿರಿನಾಥ್ ಆದೇಶ
ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್
Follow us
ಗಂಗಾಧರ​ ಬ. ಸಾಬೋಜಿ
|

Updated on:Mar 16, 2024 | 4:12 PM

ಬೆಂಗಳೂರು, ಮಾರ್ಚ್​​ 16: ಲೋಕಸಭಾ ಚುನಾವಣೆ ಹಿನ್ನೆಲೆ ನಗರದಲ್ಲಿ ಅಲರ್ಟ್ ಆಗಿದ್ದು, ಮಾದರಿ ನೀತಿಸಂಹಿತೆ ಜಾರಿಗೆ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ (Tushar Giri Nath)​​ ಆದೇಶ ಹೊರಡಿಸಿದ್ದಾರೆ. ಅಧಿಕಾರಿಗಳ ಜೊತೆ ಸಭೆ ನಡೆಸಿ ಸೂಚನೆ ನೀಡಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರ, ತೆಗೆಯಲು ತಿಳಿಸಿದ್ದು, ಮಾದರಿ ನೀತಿ ಸಂಹಿತೆ ಉಲ್ಲಘನೆಗಳ ಮೇಲೆ ನಿಗಾವಹಿಸಲು ಸೂಚಿಸಿದ್ದಾರೆ. ಸರ್ಕಾರಿ ಕಛೇರಿ, ಸರ್ಕಾರಿ ಆಸ್ತಿಗಳು ಸೇರಿದಂತೆ ಇನ್ನಿತರೆ ಸಾರ್ವಜನಿಕ ಸ್ಥಳಗಳಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರ ಹಾಗೂ ಜಾಹೀರಾತುಗಳನ್ನ ತೆಗೆಯಲು ಅಧಿಕಾರಿಗಳಿಗೆ ಆದೇಶಿಸಲಾಗಿದೆ.

ಯಾವುದೇ ಫ್ಲೆಕ್ಸ್, ಪೋಸ್ಟರ್, ಬ್ಯಾನರ್, ಬಿತ್ತಿಪತ್ರಗಳು, ಗೋಡೆ ಬರಹಗಳು ಇರುವಂತಿಲ್ಲ. ಕುಡಿಯುವ ನೀರಿನ ಘಟಕ, ಉದ್ಯಾನವನ ಸೇರಿದಂತೆ ಇನ್ನಿತರೆ ಸ್ಥಳಗಳಲ್ಲಿ ಅಳವಡಿಸಿರುವ ನಾಮಫಲಕಗಳಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರಗಳು ಇರುವಂತಿಲ್ಲ.

ಇದನ್ನೂ ಓದಿ: Lok Sabha Election Dates: ಕರ್ನಾಟಕದಲ್ಲಿ ಎಷ್ಟು ಹಂತದಲ್ಲಿ ಲೋಕಸಭೆ ಚುನಾವಣೆ? ದಿನಾಂಕ, ಇತರ ವಿವರ ಇಲ್ಲಿದೆ

24 ಗಂಟೆಗಳ ಒಳಗೆ ಸರ್ಕಾರದ ವೆಬ್ ಸೈಟ್​ಗಳಲ್ಲಿ ರಾಜಕೀಯ ಪ್ರತಿನಿಧಿಗಳ ಭಾವಚಿತ್ರ ತೆಗೆಯಲು,  RO, ARO ಕಚೇರಿಗಳಲ್ಲಿ ನಿಯಂತ್ರಣ ಕೊಠಡಿ ಸ್ಥಾಪನೆಗೆ, ಎಫ್‌ಎಸ್‌ಟಿ, ಎಸ್‌ಎಸ್‌ಟಿ ಸೇರಿದಂತೆ ಇನ್ನಿತರೆ ತಂಡಗಳನ್ನ ಸಕ್ರಿಯಗೊಳಿಸುವಂತೆ ಅಧಿಕಾರಿಗಳ ಆಂತರಿಕ ಸಭೆಯಲ್ಲಿ ಸೂಚನೆ ನೀಡಲಾಗಿದೆ.

ಕರ್ನಾಟಕದಲ್ಲಿ 2 ಹಂತದಲ್ಲಿ ಮತದಾನ

ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಎರಡನೇ ಹಂತದಲ್ಲಿ ದಕ್ಷಿಣ ಕರ್ನಾಟಕದಲ್ಲಿ ಮತದಾನ ನಡೆದರೆ, ಮೂರನೇ ಹಂತದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಮತದಾನ ನಡೆಯಲಿದೆ.

ಇದನ್ನೂ ಓದಿ: Lok Sabha Election Dates: 7 ಹಂತಗಳಲ್ಲಿ ಚುನಾವಣೆ; ಏಪ್ರಿಲ್ 19ರಂದು ಮೊದಲ ಹಂತದ ಮತದಾನ, ಜೂನ್ 4ಕ್ಕೆ ಫಲಿತಾಂಶ

ಕರ್ನಾಟಕದಲ್ಲಿ ಏಪ್ರಿಲ್ 26ರಂದು ಹಾಗೂ ಮೇ 7ರಂದು ಮತದಾನ ನಡೆಯಲಿದೆ. ಜೂನ್ 4ರಂದು ಮತ ಎಣಿಕೆ, ಫಲಿತಾಂಶ ಪ್ರಕಟವಾಗಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:56 pm, Sat, 16 March 24

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ