Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಲ್ಹಾದ್​ ಜೋಶಿಯನ್ನು ಮತ್ತೊಮ್ಮೆ ದೆಹಲಿಗೆ ಕಳುಹಿಸಿ, ಮತ್ತಷ್ಟು ದೊಡ್ಡ ವ್ಯಕ್ತಿ ಮಾಡುತ್ತೇವೆ: ಅಮಿತ್ ಶಾ

ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ಬಿಜೆಪಿ ಸಮಾವೇಶದಲ್ಲಿ ಕೇಂದ್ರ ಗೃಹಸಚಿವ ಶಾ ಮಾತನಾಡಿದ್ದು, ಪ್ರಲ್ಹಾದ್​ ಜೋಶಿಯನ್ನು ಹಾಡಿ ಹೊಗಳಿದ್ದಾರೆ. ಪ್ರಲ್ಹಾದ್​ ಜೋಶಿ ಅವರು ನೋಡುವುದಕ್ಕೆ ತುಂಬಾ ಸಾಧಾರಣಾ ವ್ಯಕ್ತಿಯಂತೆ ಕಾಣುತ್ತಾರೆ. ಆದರೆ ಹುಬ್ಬಳ್ಳಿ ಧಾರವಾಡದ ಅಭಿವೃದ್ಧಿ ಅಂತ ಬಂದಾಗ ಅವರು ನಮ್ಮ ಜೊತೆ ಜಗಳವಡಿಯಾದರೂ ಅಭಿವೃದ್ಧಿ ಮಾಡಿದ್ದಾರೆ. ಇಂತಹ ಸಂಸದರು ಸಿಕ್ಕಾಗ ಬಿಟ್ಟುಕೊಳ್ಳಬಾರದು ಎಂದು ಹೇಳಿದ್ದಾರೆ.

Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ಗಂಗಾಧರ​ ಬ. ಸಾಬೋಜಿ

Updated on:May 01, 2024 | 10:42 PM

ಹುಬ್ಬಳ್ಳಿ, ಮೇ 1: ರಾಜ್ಯದಲ್ಲಿ ಮೇ 7ರಂದು ಎರಡನೇ ಹಂತದ ಲೋಕಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಹೀಗಾಗಿ ರಾಜ್ಯಕ್ಕೆ ಬಿಜೆಪಿ ನಾಯಕರು ಭೇಟಿ ನೀಡುತ್ತಿದ್ದಾರೆ. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಿದ್ದು, ಅಭ್ಯರ್ಥಿಗಳ ಪರ ಮತಯಾಚನೆ ಮಾಡಿದ್ದರು. ಅದೇ ರೀತಿಯಾಗಿ ಇಂದು ಹುಬ್ಬಳ್ಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಭೇಟಿ ನೀಡಿದ್ದು, ಪ್ರಲ್ಹಾದ್​ ಜೋಶಿ (Pralhad Joshi) ಪರ ಮತಯಾಚನೆ ಮಾಡಿದ್ದಾರೆ. ನಗದರಲ್ಲಿ ಆಯೋಜಿಸಿದ್ದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ಪ್ರಲ್ಹಾದ್​ ಜೋಶಿಯನ್ನು ಗೆಲ್ಲಿಸುವ ಮೂಲಕ ಮತ್ತೊಮ್ಮೆ ದೆಹಲಿಗೆ ಕಳುಹಿಸಿ, ನಾವು ಅವರನ್ನು ಮತ್ತಷ್ಟು ದೊಡ್ಡ ವ್ಯಕ್ತಿಯನ್ನಾಗಿ ಮಾಡುತ್ತೇವೆ ಎಂದು ಹೇಳಿದ್ದಾರೆ.

ಪ್ರಲ್ಹಾದ್​ ಜೋಶಿ ಅವರು ನೋಡುವುದಕ್ಕೆ ತುಂಬಾ ಸಾಧಾರಣಾ ವ್ಯಕ್ತಿಯಂತೆ ಕಾಣುತ್ತಾರೆ. ಆದರೆ ಹುಬ್ಬಳ್ಳಿ ಧಾರವಾಡದ ಅಭಿವೃದ್ಧಿ ಅಂತ ಬಂದಾಗ ಅವರು ನಮ್ಮ ಜೊತೆ ಜಗಳವಡಿಯಾದರೂ ಅಭಿವೃದ್ಧಿ ಮಾಡಿದ್ದಾರೆ. ಇಂತಹ ಸಂಸದರು ಸಿಕ್ಕಾಗ ಬಿಟ್ಟುಕೊಳ್ಳಬಾರದು. ಸರಿಯಾಗಿ ವಿಚಾರ ಮಾಡಿ ಓಟು ಮಾಡಿ ಎಂದು ನೆರೆದಿದ್ದ ಸಾರ್ವಜನಿಕರಲ್ಲಿ ಅಮಿತ್ ಶಾ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಫಯಾಜ್​ಗೆ ಗಲ್ಲು ಶಿಕ್ಷೆಯಾಗಬೇಕೆಂದು ಅಮಿತ್​ ಶಾಗೆ ಮನವಿ ಸಲ್ಲಿಸಿದ ನೇಹಾ ಪೋಷಕರು

ರಾಜ್ಯದಲ್ಲಿ ಆತಂಕವಾದಕ್ಕೆ ಅಂತ್ಯ ಹಾಡಬೇಕೆಂದ್ದರೆ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಬೇಕು. ಮೋದಿ ಮತ್ತೊಮ್ಮೆ ಪ್ರಧಾನಿ ಆಗಿದ್ದರಿಂದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಯಿತು. ಮತ ಬ್ಯಾಂಕ್ ದೂರವಾಗುತ್ತೆ ಅಂತ ಸೋನಿಯಾ, ರಾಹುಲ್, ಖರ್ಗೆ ರಾಮ ಪ್ರಾಣ ಪ್ರತಿಷ್ಠಾಪನೆಯಿಂದ ದೂರ ಉಳಿದರು. ಭ್ರಷ್ಟಾಚಾರ, ಪರಿವಾರವಾದದಲ್ಲಿ ಕಾಂಗ್ರೆಸ್ ಮುಳುಗಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದುಮಾಡಿದರೆ ರಕ್ತಪಾತವಾಗಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಂದಿದ್ದರು. ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದುಗೊಳಿಸಿ 5 ವರ್ಷಗಳು ಕಳೆದಿದೆ. ಕಾಶ್ಮೀರದಲ್ಲಿ ಏನೂ ಆಗಿಲ್ಲ, ಕಲ್ಲುತೂರಾಟ ಪ್ರಕರಣ ನಿಂತುಹೋಗಿದೆ. ಪುಲ್ವಾಮಾ ದಾಳಿ ನಂತರ ಪಾಕ್​ಗೆ ಮೋದಿ ಸರ್ಕಾರದಿಂದ ತಕ್ಕ ಉತ್ತರ ನೀಡಲಾಗಿದೆ. ಈ ಚುನಾವಣೆಯಲ್ಲಿ ರಾಜ್ಯದ ಜನತೆ ಸೂಕ್ತ ನಿರ್ಧಾರ ಕೈಗೊಳ್ಳಬೇಕಿದೆ. ದೇಶದ ಅರ್ಥವ್ಯವಸ್ಥೆ 3ನೇ ಸ್ಥಾನಕ್ಕೆ ಕೊಂಡೊಯ್ಯುವ ನಾಯಕತ್ವ ಬೇಕು. ನಕ್ಸಲ್​ವಾದಿ ಪ್ರದೇಶದಲ್ಲಿ ಶಾಂತಿ ನೆಲೆಸಬೇಕಿದೆ. ಈ ಎಲ್ಲಾ ಕಾರಣಗಳಿಂದ ಮೋದಿ 3ನೇ ಅವಧಿಗೆ ಪ್ರಧಾನಿಯಾಗಬೇಕು ಎಂದಿದ್ದಾರೆ.

ಇದನ್ನೂ ಓದಿ: Prajwal Revanna: ಪ್ರಜ್ವಲ್ ವಿಡಿಯೋ ಕೇಸ್: ಕಠೋರ ಶಿಕ್ಷೆ ನೀಡಿ, ಅದಕ್ಕೆ ಬೆಂಬಲ ಕೊಡ್ತೇವೆ ಎಂದ ಅಮಿತ್ ಶಾ

ಭ್ರಷ್ಟಾಚಾರ, ಸ್ವಜನಪಕ್ಷಪಾತ, ಜೈಲಿಗೆ ಹೋಗಿಬಂದವರು ಒಂದೆಡೆ. ರಜೆ ಮೋಜು ಮಾಡಲು ವಿದೇಶಕ್ಕೆ ತೆರಳುವವರು ಒಂದು ಕಡೆ. ದೀಪಾವಳಿ ದಿನವೂ ರಜೆ ಇಲ್ಲದೆ ಕೆಲಸ ಮಾಡುವ ಮೋದಿ ಒಂದೆಡೆ. ಯಾರು ದೇಶದ ಪ್ರಧಾನಮಂತ್ರಿ ಆಗಬೇಕೆಂದು ನೀವೇ ನಿರ್ಧರಿಸಿ. ಇಡೀ ದೇಶವೇ ಇಂದು ಮೋದಿ ಮೋದಿ ಎಂದು ಹೇಳುತ್ತಿದೆ. ಈ ಬಾರಿ ಮೋದಿಯನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸಬೇಕು ಎಂದು ಹೇಳಿದ್ದಾರೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:40 pm, Wed, 1 May 24

ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್