ಬೆಂಗಳೂರು, ಮಾರ್ಚ್ 24: ಲೋಕಸಭಾ ಚುನಾವಣೆಗೆ (Lok Sabha Elections) ಬಿಜೆಪಿ ಅಭ್ಯರ್ಥಿಳ ತನ್ನ 5ನೇ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದೆ. ಕರ್ನಾಟಕ ಸೇರಿದಂತೆ 8 ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಕರ್ನಾಟಕದಲ್ಲಿ ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆಗೆ ಟಿಕೆಟ್ ಕೈತಪ್ಪಿದ್ದು, ತೀವ್ರ ವಿರೋಧದ ನಡುವೆ ಜಗದೀಶ್ ಶೆಟ್ಟರ್ಗೆ ಬೆಳಗಾವಿ ಟಿಕೆಟ್ ಘೋಷಣೆ ಮಾಡಲಾಗಿದೆ.
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಟಿಕೆಟ್ ಯಾರಿಗೆ ನೀಡಬೇಕು ಎಂಬ ಗೊಂದಲದಲ್ಲಿ ಬಿಜೆಪಿ ಹೈಕಮಾಂಡ್ ಇದ್ದಂತೆ ಕಾಣುತ್ತಿದೆ. ರಘುಚಂದನ್ ಹಾಗೂ ಗೋವಿಂದ ಕಾರಜೋಳ ನಡುವೆ ಟಿಕೆಟ್ಗಾಗಿ ಫೈಟ್ ನಡೆಯುತ್ತಿದೆ. ಆದರೆ, ಕಾರಜೋಳ ಅವರಿಗೆ ಟಿಕೆಟ್ ನೀಡದಂತೆ ಸ್ಥಳೀಯರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಸದ್ಯ, ರಾಜ್ಯ ನಾಯಕರೊಂದಿಗೆ ಮತ್ತೊಮ್ಮೆ ಚರ್ಚಿಸಿ ಟಿಕೆಟ್ ಘೋಷಿಸಲು ಹೈಕಮಾಂಡ್ ನಿರ್ಧರಿಸಿದೆ.
ಇದನ್ನೂ ಓದಿ: Congress 4th candidate list: ಕಾಂಗ್ರೆಸ್ ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ; ಮೋದಿ ವಿರುದ್ಧ ಅಜಯ್ ರೈ ಸ್ಪರ್ಧೆ
ಚಿಕ್ಕಬಳ್ಳಾಫುರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಮಾಜಿ ಸಚಿವ ಡಾ.ಕೆ.ಸುಧಾಕರ್ ಪಾಲಾಗಿದೆ. ಕ್ಷೇತ್ರದ ಟಿಕೆಟ್ ತನ್ನ ಪುತ್ರ ಅಲೋಕ್ಗೆ ಕೊಡಿಸಲು ಭಾರೀ ಪ್ರಯತ್ನ ಮಾಡಿದ್ದ ಯಲಹಂಕ ಶಾಸಕ ಎಸ್ಆರ್ ವಿಶ್ವಾನಥ್ ಅವರು ಸುಧಾಕರ್ಗೆ ಟಿಕೆಟ್ ನೀಡದಂತೆ ವಿರೋಧಿ ಅಲೆ ಸೃಷ್ಟಿಸಿದ್ದರು. ಅಲ್ಲದೆ, ಸುಧಾಕರ್ ಮತ್ತು ವಿಶ್ವನಾಥ್ ನಡುವೆ ವಾಗ್ವಾದವೂ ನಡೆದಿತ್ತು. ಕೊನೆಯಲ್ಲಿ ಕ್ಷೇತ್ರದ ಟಿಕೆಟ್ ಸುಧಾಕರ್ಗೆ ನೀಡಲಾಗಿದೆ.
ಆರು ಬಾರಿ ಗೆದ್ದಿದ್ದ ಉತ್ತರ ಕನ್ನಡದ ಸಮಸದ ಅನಂತಕುಮಾರ್ ಹೆಗಡೆಗೆ ಈ ಬಾರಿ ಟಿಕೆಟ್ ಮಿಸ್ ಆಗಿದ್ದು, ವಿಧಾನಸಭೆ ಮಾಜಿ ಸ್ಪೀಕರ್ ವಿಶ್ಚೇಶ್ವರ ಹೆಗಡೆ ಕಾಗೇರಿ ಅವರಿಗೆ ಕ್ಷೇತ್ರದಲ್ಲಿ ಮಣೆ ಹಾಕಲಾಗಿದೆ. ಟಿಕೆಟ್ ಕೈತಪ್ಪುವ ಸುಳಿವು ಪಡೆದಿದ್ದ ಅನಂತಕುಮಾರ್ ಹೆಗಡೆ ಅವರು ಕಳೆದ ಒಂದು ವಾರದಿಂದ ಪ್ರಚಾರ ನಿಲ್ಲಿಸಿದ್ದರು. ಸದಾ ವಿವಾದಾತ್ಮಕ ಹೇಳಿಕೆಗಳಿಂದ ಸುದ್ದಿಯಾಗುತ್ತಿದ್ದ ಇವರಿಗೆ ಈ ಬಾರಿ ಟಿಕೆಟ್ ಕೈತಪ್ಪಲು ಇತ್ತೀಚೆಗೆ ಸಂವಿಧಾನ ತಿದ್ದುಪಡಿ ಕುರಿತು ನೀಡಿದ ಹೇಳಿಕೆಯೇ ಕಾರಣವಾಯ್ತಾ ಎನ್ನುವ ಪ್ರಶ್ನೆ ಎದ್ದಿದೆ.
Fifth list of BJP candidates for ensuing General Elections 2024 to the Parliamentary Constituencies of different states finalised by BJP CEC. 1/3@BJP4India pic.twitter.com/qJHt0YBCwK
— Sanjay Mayukh (Modi Ka Parivar) (@drsanjaymayukh) March 24, 2024
ಮತ್ತಷ್ಟು ಚುನಾವಣಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 9:17 pm, Sun, 24 March 24