AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಮನೆಯಿಂದ ಹೊರಬಂದು ಮತದಾನ ಮಾಡಿದ ಅನಂತಕುಮಾರ್​ ಹೆಗಡೆ: ಹೇಳಿದ್ದಿಷ್ಟು

ಶಿರಸಿಯಲ್ಲಿ ಮತದಾನ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅನಂತ್​ ಕುಮಾರ್​ ಹೆಗಡೆ, ಮತದಾನ ಮಾಡುವುದು ದೇಶದ ಜನರ ಕರ್ತವ್ಯ.​ ಹಾಗಾಗಿ ನಾನು ಒಬ್ಬ ದೇಶದ ಪ್ರಜೆಯಾಗಿ ಮತ ಚಲಾವಣೆ ಮಾಡಿದ್ದೇನೆ ಎಂದು ಹೇಳಿದ್ದಾರೆ. ಲೋಕಸಭೆ ಚುನಾವಣೆ ಟಿಕೆಟ್ ಕೈ ತಪ್ಪಿದಕ್ಕೆ ಸೈಲೆಂಟ್​ ಆಗಿದ್ದ ಅನಂತ್​ ಕುಮಾರ್​ ಹೆಗಡೆ ಕೊನೆಗೂ ಮತದಾನ ಮಾಡಿದ್ದಾರೆ.

ಕೊನೆಗೂ ಮನೆಯಿಂದ ಹೊರಬಂದು ಮತದಾನ ಮಾಡಿದ ಅನಂತಕುಮಾರ್​ ಹೆಗಡೆ: ಹೇಳಿದ್ದಿಷ್ಟು
ಕೊನೆಗೂ ಮನೆಯಿಂದ ಹೊರಬಂದು ಮತದಾನ ಮಾಡಿದ ಅನಂತಕುಮಾರ್​ ಹೆಗಡೆ: ಹೇಳಿದ್ದಿಷ್ಟು
ಸೂರಜ್​, ಮಹಾವೀರ್​ ಉತ್ತರೆ
| Updated By: ಗಂಗಾಧರ​ ಬ. ಸಾಬೋಜಿ|

Updated on:May 07, 2024 | 5:49 PM

Share

ಕಾರವಾರ, ಮೇ 07: ಲೋಕಸಭೆ ಚುನಾವಣೆ ಟಿಕೆಟ್ ಕೈ ತಪ್ಪಿದಕ್ಕೆ ಸೈಲೆಂಟ್​ ಆಗಿದ್ದ ಅನಂತ್​ ಕುಮಾರ್​ ಹೆಗಡೆ (Anantkumar Hegde) ಕೊನೆಗೂ ಮತದಾನ ಮಾಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಕೆಹೆಚ್​ಬಿ ಕಾಲೋನಿಯ ಸರ್ಕಾರಿ ಪ್ರಾರ್ಥಮಿಕ ಶಾಲೆಯ ಮತಗಟ್ಟೆಗೆ ಪತ್ನಿ ಜೊತೆಗೆ ಆಗಮಿಸಿ ಮತದಾನ (voting) ಮಾಡಿದ್ದಾರೆ. ಟಿಕೆಟ್ ಕೈ ತಪ್ಪಿದಕ್ಕೆ ಬಹಿರಂಗವಾಗಿ ಕಾಣಿಸಿಕೊಳ್ಳದೆ ಯಾವುದೇ ಪ್ರಚಾರ ಮಾಡಿರಲಿಲ್ಲ. ಹೀಗಾಗಿ ಒಲ್ಲದ ಮನಸ್ಸಿನಿಂದಲ್ಲೇ ಮತದಾನ ಕೇಂದ್ರಕ್ಕೆ ಆಗಮಿಸಿ ಮತಚಲಾಯಿಸಿದ್ದಾರೆ.

ಅನಂತ್​ ಕುಮಾರ್​ ಹೆಗಡೆ ಪ್ರತಿ ಬಾರಿ ಬೆಳಿಗ್ಗೆ 8 ಗಂಟೆಗೆ ಮತದಾನ ಮಾಡುತ್ತಿದ್ದರು. ಆದರೆ ಇದೆ ಮೊದಲ ಬಾರಿಗೆ ಸಂಜೆ 4:30 ಮತದಾನಕ್ಕೆ ಆಗಮಿಸಿದ್ದರು. ಎಲ್ಲರಂತೆ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.

ಮತದಾನ ಮಾಡುವುದು ದೇಶದ ಜನರ ಕರ್ತವ್ಯ; ಅನಂತ್​ ಕುಮಾರ್​ ಹೆಗಡೆ

ಶಿರಸಿಯಲ್ಲಿ ಮತದಾನ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅನಂತ್​ ಕುಮಾರ್​ ಹೆಗಡೆ, ಮತದಾನ ಮಾಡುವುದು ದೇಶದ ಜನರ ಕರ್ತವ್ಯ.​ ಹಾಗಾಗಿ ನಾನು ಒಬ್ಬ ದೇಶದ ಪ್ರಜೆಯಾಗಿ ಮತ ಚಲಾವಣೆ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ತಮ್ಮ ಫೋಟೋ ಬಳಸಿ ಬಿಜೆಪಿಗೆ ವೋಟ್​ ಹಾಕುವಂತೆ ಪೋಸ್ಟ್: ದೂರು ದಾಖಲಿಸಿದ ಅನಂತಕುಮಾರ್ ಹೆಗಡೆ

ಟಿಕೆಟ್​ ಕೈ ತಪ್ಪಿದ ಬಳಿಕ ಸೈಲೆಂಟ್​ ಆದ ಬಗ್ಗೆ ಹೇಳಿಕೆ ನೀಡಲು ನಿರಾಕರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಬಂದಾಗ ಯಾಕೆ ಕಾಣ್ಸಿಲ್ಲ ಎಂಬ ಪ್ರಶ್ನೆಗೆ ಮತ್ತು ಇತರೆ ಯಾವುದೇ ರಾಜಕೀಯ ಪ್ರಶ್ನೆಗೆ ಉತ್ತರಿಸದೆ ಧನ್ಯವಾದ ಹೇಳಿದ್ದಾರೆ.

ಇದನ್ನೂ ಓದಿ: ಏಪ್ರಿಲ್ 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ: ಅನಂತಕುಮಾರ್ ಹೆಗಡೆ ಮನೆ ಸಮೀಪದ ಮೈದಾನದಲ್ಲೇ ಸಮಾವೇಶ!

ಅನಂತ್​ ಕುಮಾರ್​ ಹೆಗಡೆ ಆರು ಬಾರಿ ಬಿಜೆಪಿ ಸಂಸದನಾಗಿದ್ದರು. ಈ ಬಾರಿಯೂ ಟಿಕೆಟ್ ಸಿಗುತ್ತದೆ ಎಂಬ ನೀರಿಕ್ಷೆಯಲ್ಲಿದ್ದ ಅವರು, ಡಿಸೆಂಬರ್​ನಿಂದ ಮಾರ್ಚ್​ವರೆಗೆ ಕ್ಷೇತ್ರದಾದ್ಯಂತ ಸಂಚರಿಸಿ ಚುನಾವಣೆಗೆ ಪ್ರಚಾರ ಆರಂಭ ಮಾಡಿದ್ದರು. ಆದರೆ ಕೊನೆಯ ಹಂತದಲ್ಲಿ ಟಿಕೆಟ್ ಮಿಸ್ ಆಗಿತ್ತು. ಆ ಮೂಲಕ ಟಿಕೆಟ್​ ವಿಶ್ವೇಶ್ವರ ಹೆಗಡೆ ಕಾಗೇರಿ ಪಾಲಾಗಿತ್ತು. ಹೀಗಾಗಿ ಮುನಿಸಿಕೊಂಡಿದ್ದ ಅನಂತ್​ ಕುಮಾರ್​, ಇದುವರೆಗೂ ಬಹಿರಂಗವಾಗಿ ಕಾಣಿಸಿಕೊಂಡಿರಲಿಲ್ಲ. ಒಂದೇ ಒಂದು ಹೇಳಿಕೆಯನ್ನ ಕೊಡದೆ ಫುಲ್ ಸೈಲೆಂಟ್ ಆಗಿದ್ದರು. ಆದರೆ ಇಂದು ರಾಜ್ಯದಲ್ಲಿ ಎರಡನೇ ಹಂತದ ಮತದಾನ ಹಿನ್ನಲೆ ಅವರು ಕೂಡ ಮತದಾನ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:47 pm, Tue, 7 May 24

‘ಪವಿತ್ರಾ ಗೌಡ ಶ್ರೀಮಂತೆ ಅಲ್ಲ, ತುಂಬ ಕಷ್ಟ ಇದೆ’: ಲಾಯರ್ ಅಚ್ಚರಿಯ ಹೇಳಿಕೆ
‘ಪವಿತ್ರಾ ಗೌಡ ಶ್ರೀಮಂತೆ ಅಲ್ಲ, ತುಂಬ ಕಷ್ಟ ಇದೆ’: ಲಾಯರ್ ಅಚ್ಚರಿಯ ಹೇಳಿಕೆ
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾದ ಸಚಿವ ಎಸ್. ಜೈಶಂಕರ್
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾದ ಸಚಿವ ಎಸ್. ಜೈಶಂಕರ್
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ