AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂತೆ ಕಂತೆ ಹಣ, ಕುಕ್ಕರ್, ನೂರಾರು ಸೀರೆಗಳು ಜಪ್ತಿ: ಎಲ್ಲೆಲ್ಲಿ ಎಷ್ಟೆಷ್ಟು ಸಿಕ್ತು ನೋಡಿ

ಲೋಕಸಭೆ ಚುನಾವಣೆಗೆ ಮಾದರಿ ನೀತಿ ಸಂಹಿತೆ ಘೋಷಣೆಯಾದ ಬೆನ್ನಲ್ಲೇ ರಾಜ್ಯದಾದ್ಯಂತ ಅಕ್ರಮವಾಗಿ ನಗದು ಸಾಗಾಟ ಮಾಡುವ ಪ್ರಕರಣಗಳು ಪತ್ತೆಯಾಗುತ್ತಿವೆ. ಜೊತೆಗೆ ಮತದಾರರಿಗೆ ಆಮಿಷವನ್ನು ಸಲುವಾಗಿ ಕುಕ್ಕರ್, ಸೀರೆ, ಆಭರಣ ಹಂಚಲು ರಾಜಕಾರಣಿಗಳು ಮುಂದಾಗಿದ್ದಾರೆ. ರಾಜ್ಯದ ಯಾವ ಭಾಗದಲ್ಲಿ ಎಷ್ಟೆಷ್ಟು ನಗದು ಹಾಗೂ ಇತರ ವಸ್ತುಗಳು ಸಿಕ್ಕಿವೆ ಎಂಬ ವಿವರ ಇಲ್ಲಿದೆ ನೋಡಿ.

ಕಂತೆ ಕಂತೆ ಹಣ, ಕುಕ್ಕರ್, ನೂರಾರು ಸೀರೆಗಳು ಜಪ್ತಿ: ಎಲ್ಲೆಲ್ಲಿ ಎಷ್ಟೆಷ್ಟು ಸಿಕ್ತು ನೋಡಿ
ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಚೌಡಿಪಾಳ್ಯ ಚೆಕ್ ಪೋಸ್ಟ್​​ನಲ್ಲಿವಶಪಡಿಸಿಕೊಂಡಿರುವ ಹಣ
ಗಣಪತಿ ಶರ್ಮಾ
|

Updated on: Mar 21, 2024 | 6:58 AM

Share

ಬೆಂಗಳೂರು, ಮಾರ್ಚ್ 21: ಲೋಕಸಭೆ ಚುನಾವಣೆ (Lok Sabha Elections) ನೀತಿ ಸಂಹಿತೆ (Model Code of Conduct) ಜಾರಿಯಾದ ಬೆನ್ನಲ್ಲೇ ರಾಜ್ಯದಾದ್ಯಂತ ಅಲ್ಲಲ್ಲಿ ಅಕ್ರಮ ನಗದು ಸಾಗಾಟ, ಮತದಾರರಿಗೆ ಆಮಿಷವೊಡ್ಡಲು ಕುಕ್ಕರ್, ಸೀರೆ ಇತ್ಯಾದಿ ವಸ್ತುಗಳನ್ನು ಸಾಗಿಸುತ್ತಿರುವುದು ಕಂಡುಬರುತ್ತಿದೆ. ಕಾರಿನ ಡಿಕ್ಕಿ ತುಂಬ ನೂರಾರು ಸೀರೆಗಳ ಬ್ಯಾಗ್​ಗಳು, ಬೆಳ್ಳಿಯ ಗಟ್ಟಿಗಳು, ಬೈಕ್​-ಕಾರುಗಳಲ್ಲಿ ಲಕ್ಷಾಂತರ, ಕೋಟ್ಯಂತರ ರೂಪಾಯಿ​ ಹಣ ಸಾಗಿಸುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ. ರಾಜ್ಯದ ಹಲವು ಕಡೆ ಪೊಲೀಸರು, ಚುನಾವಣಾ ಅಧಿಕಾರಿಗಳು ಈಗಾಗಲೇ ಕೋಟ್ಯಂತರ ರೂಪಾಯಿ ನಗದು, ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಚಿಕ್ಕಮಗಳೂರಲ್ಲಿ ಒಂದೇ ದಿನ 23 ಲಕ್ಷ ಹಣ ಸೀಜ್

ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಂದೇ ದಿನ 23,62,750 ರೂಪಾಯಿ ಅಕ್ರಮ ಹಣವನ್ನ ಜಪ್ತಿ ಮಾಡಿಕೊಳ್ಳಲಾಗಿದೆ. ಕಡೂರು ತಾಲೂಕಿನಿಂದ ಹಾಸನದ ಅರಸೀಕೆರೆಗೆ ಸಾಗಿಸುತ್ತಿದ್ದ ಬರೋಬ್ಬರಿ 20 ಲಕ್ಷ ಹಣವನ್ನು ಸೀಜ್​ ಮಾಡಲಾಗಿದೆ. ಚೌಡಿಪಾಳ್ಯ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ವೇಳೆ KA13 B7602 ಮಾರುತಿ ಓಮ್ನಿಯಲ್ಲಿ ದಾಖಲೆ ಇಲ್ಲದ ಹಣ ಸಿಕ್ಕಿದ್ದು, ಪೊಲೀಸರು ಹಣವನ್ನ ಸೀಜ್ ಮಾಡಿದ್ದಾರೆ. ಇನ್ನು ಮೂಡಿಗೆರೆ ತಾಲೂಕಿನ ಕಸ್ಕೇಬೈಲು ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 3,62,750 ರೂಪಾಯಿ ಹಣವನ್ನ ವಶಕ್ಕೆ ಪಡೆಯಲಾಗಿದೆ.

ಅಕ್ರಮ ಹಣದ ಜೊತೆಗೆ ಬೈಕ್​ ಕೂಡ ಸೀಜ್

ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕು ಹಕ್ಕಿಪಿಕ್ಕಿ ಕಾಲೋನಿ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1,50,250 ರೂಪಾಯಿ ಹಣ ಹಾಗೂ ದ್ವಿಚಕ್ರ ವಾಹನ ವಶಕ್ಕೆ ಪಡೆಯಲಾಗಿದೆ. ಶಿಡ್ಲಘಟ್ಟ ಮೂಲದ ಗೋಪಾಲ ಎಂಬುವರಿಗೆ ಸೇರಿದ ಹಣ ಹಾಗೂ ದ್ವಿಚಕ್ರ ವಾಹನವನ್ನು ಮದನಪಲ್ಲಿಯಿಂದ ಶಿಡ್ಲಘಟ್ಟದ ಬುಡಗವಾರಪಲ್ಲಿಗೆ ತಗೊಂಡು ಹೋಗುವಾಗ ವಶಕ್ಕೆ ಪಡೆಯಲಾಗಿದೆ.

ಧೂಳಖೇಡ ಚೆಕ್ ಪೋಸ್ಟ್ ನಲ್ಲಿ 4.5 ಲಕ್ಷ ರೂ. ನಗದು ವಶ

ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಧೂಳಖೇಡ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೇ ಸಾಗಿಸ್ತಿದ್ದ 4.5 ಲಕ್ಷ ರೂ. ನಗದು ವಶಕ್ಕೆ ಪಡೆಯಲಾಗಿದೆ. ಮಹಾರಾಷ್ಟ್ರದ ರೋಶನ ಗಜಾನನ ಎಂಬಾತ ವಿಜಯಪುರಕ್ಕೆ ಹಣ ತರುವಾಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಝಳಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಟಿಸಿ ರಿಪೇರಿ ಮಾಡುವ ಗೋದಾಮಿನಲ್ಲಿ 80ಕ್ಕೂ ಹೆಚ್ಚು ಕುಕ್ಕರ್

ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದ 22ನೇ ವಾರ್ಡ್​ನ ಮಲ್ಲಿಪಾಳ್ಯದಲ್ಲಿ ಮತದಾರರಿಗೆ ಹಂಚಲು ತಂದಿದ್ದ ಕುಕ್ಕರ್​ಗಳನ್ನು ವಶಕ್ಕೆ ಪಡೆಯಲಾಗಿದೆ. ಜೆಡಿಎಸ್ ಕಾರ್ಯಕರ್ತರ ಮಾಹಿತಿ ಮೇರೆಗೆ ಚುನಾವಣಾ ಅಧಿಕಾರಿಗಳು ದಾಳಿ ನಡೆಸಿದ್ದು, ಬೆಟ್ಟಸ್ವಾಮಿ ಎಂಬಾತನಿಗೆ ಸೇರಿದ ಗೋದಾಮಿನಲ್ಲಿಟ್ಟಿದ್ದ 80ಕ್ಕೂ ಹೆಚ್ಚು ಕುಕ್ಕರ್ ಗಳನ್ನು ವಶಕ್ಕೆ ಪಡೆಯಲಾಗಿದೆ.. ಈ ಕುಕ್ಕರ್​ಗಳ​ ಮೇಲೆ ಸಿಎಂ, ಡಿಸಿಎಂ ಡಿಕೆ, ಸಂಸದ ಡಿ.ಕೆ ಸುರೇಶ್, ಶಾಸಕ ಡಾ.ರಂಗನಾಥ್ ಭಾವಚಿತ್ರ ಅಂಟಿಸಲಾಗಿತ್ತು. ಸದ್ಯ ಈ ಬಗ್ಗೆ ತನಿಖೆ ನಡೆಸಲಾಗ್ತಿದೆ.

ಇದನ್ನೂ ಓದಿ: ತುಮಕೂರು: ಚುನಾವಣಾ ಅಧಿಕಾರಿಗಳಿಂದ ದಾಳಿ; ಮತದಾರರಿಗೆ ಹಂಚಲು ಸಂಗ್ರಹಿಸಿದ್ದ ಕುಕ್ಕರ್ ವಶಕ್ಕೆ

ಬ್ಯಾಗ್​ಗಳಲ್ಲಿ ಸಾಗಿಸುತ್ತಿದ್ದ 108ಕ್ಕೂ ಹೆಚ್ಚು ಸೀರೆ ವಶ

ಚಿತ್ರದುರ್ಗ ನಗರದ ಜೆ ಎಂಐಟಿ ಬಳಿಯ ಚೆಕ್ ಪೋಸ್ಟ್ ಬಳಿ ಬ್ಯಾಗ್ ಗಳಲ್ಲಿ ಸಾಗಿಸುತ್ತಿದ್ದ 108ಕ್ಕೂ ಹೆಚ್ಚು ಸೀರೆಗಳನ್ನ ವಶಕ್ಕೆ ಪಡೆಯಲಾಗಿದೆ.. ಸೀರೆಗಳು ಸಾಗಿಸುತ್ತಿದ್ದವರ ಬಳಿ ಯಾವುದೇ ದಾಖಲೆ ಇರದ ಕಾರಣ ಸೀರೆ ಹಾಗೂ ಕಾರು ಎರಡನ್ನೂ ಕೂಡ ಚುನಾವಣಾಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ.

26 ಕೆಜಿ ಬೆಳ್ಳಿ, 3 ಲಕ್ಷ 55 ಸಾವಿರ ನಗದು ಜಪ್ತಿ

ಬಳ್ಳಾರಿಯಿಂದ ಆಂಧ್ರದ ಅದೋನಿ ಕಡೆ ಸಾಗಿಸುತ್ತಿದ್ದ ದಾಖಲೆ ರಹಿತ 26 ಕೆಜಿ ಬೆಳ್ಳಿ, 3 ಲಕ್ಷ 55 ಸಾವಿರ ನಗದು ಜಪ್ತಿ ಮಾಡಲಾಗಿದೆ. ಜಪ್ತಿ ಮಾಡಿಕೊಂಡಿ ಈ ಬೆಳ್ಳಿ 10ಲಕ್ಷ ಮೌಲ್ಯದ್ದು ಅಂತಾ ಅಂದಾಜಿಸಲಾಗಿದೆ. AP 21 AX 9388 ನಂಬರಿನ ಕಾರಿನಲ್ಲಿ ಸಾಗಿಸ್ತಿದ್ದಾಗ ಸೀಜ್​ ಮಾಡಲಾಗಿದ್ದು, ಮೋಕಾ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

(ವರದಿ: ಬ್ಯೂರೋ ರಿಪೋರ್ಟ್ ಟವಿ 9 ಬೆಂಗಳೂರು)

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ