Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತದಾನದ ಬಳಿಕ ಹೃದಯಘಾತದಿಂದ ವೃದ್ಧೆ ಸಾವು: ಕುಡಿದು ಬಂದ ಮತದಾರನಿಂದ ಮತಗಟ್ಟೆಯಲ್ಲಿ ಗಲಾಟೆ

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಹಿತ್ತಲ ಗ್ರಾಮದಲ್ಲಿ ಮತ ಹಾಕಲು ತೆರಳುತ್ತಿದ್ದ ವ್ಯಕ್ತಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಖಾಸಗಿ ಬಸ್​ಗೆ ಡಿಕ್ಕಿಯಾಗಿ ಬೈಕ್​ ಸವಾರ ದುರ್ಮರಣ ಹೊಂದಿದ್ದಾರೆ. ಚುರ್ಚಿಗುಂಡಿಯಿಂದ ಭದ್ರಾವತಿಗೆ ತೆರಳುವಾಗ ಅಪಘಾತ ಸಂಭವಿಸಿದೆ. ಮತ್ತೊಂದು ಪ್ರಕರಣದಲ್ಲಿ ಸೊರಬ ತಾಲೂಕಿನ ಕುಂಸಿ ಗ್ರಾಮದಲ್ಲಿ ಮತದಾನದ ಬಳಿಕ ಹೃದಯಘಾತದಿಂದ ವೃದ್ಧೆ ಮಲ್ಲಮ್ಮ (96) ಸಾವನ್ನಪ್ಪಿದ್ದಾರೆ.

ಮತದಾನದ ಬಳಿಕ ಹೃದಯಘಾತದಿಂದ ವೃದ್ಧೆ ಸಾವು: ಕುಡಿದು ಬಂದ ಮತದಾರನಿಂದ ಮತಗಟ್ಟೆಯಲ್ಲಿ ಗಲಾಟೆ
ಮತದಾನದ ಬಳಿಕ ಹೃದಯಘಾತದಿಂದ ವೃದ್ದೆ ಸಾವು: ಕುಡಿದು ಬಂದ ಮತದಾರನಿಂದ ಮತಗಟ್ಟೆಯಲ್ಲಿ ಗಲಾಟೆ
Follow us
Basavaraj Yaraganavi
| Updated By: ಗಂಗಾಧರ​ ಬ. ಸಾಬೋಜಿ

Updated on:May 07, 2024 | 3:05 PM

ಶಿವಮೊಗ್ಗ, ಮೇ 07: ಲೋಕಸಭಾ ಚುನಾವಣೆಗೆ (Lok Sabha Elections) ಕರ್ನಾಟಕದ 14 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದೆ. ಈ ವೇಳೆ ಕೆಲ ಸಾವು ನೋವುಗಳು ಸಂಭವಿಸಿವೆ. ಮತ ಹಾಕಲು ತೆರಳುತ್ತಿದ್ದ ವ್ಯಕ್ತಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಶಿಕಾರಿಪುರ ತಾಲೂಕಿನ ಹಿತ್ತಲ ಗ್ರಾಮದಲ್ಲಿ ನಡೆದಿದೆ. ಖಾಸಗಿ ಬಸ್​ಗೆ ಡಿಕ್ಕಿಯಾಗಿ ಬೈಕ್​ ಸವಾರ ದುರ್ಮರಣ ಹೊಂದಿದ್ದಾರೆ. ಮಂಜುನಾಥ್(32) ಮೃತ ಬೈಕ್ ಸವಾರ. ಚುರ್ಚಿಗುಂಡಿಯಿಂದ ಭದ್ರಾವತಿಗೆ ತೆರಳುವಾಗ ಅಪಘಾತ ಸಂಭವಿಸಿದೆ. ಶಿಕಾರಿಪುರದ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ನಡೆದಿದೆ. ಮತ್ತೊಂದು ಪ್ರಕರಣದಲ್ಲಿ ಸೊರಬ ತಾಲೂಕಿನ ಕುಂಸಿ ಗ್ರಾಮದಲ್ಲಿ ಮತದಾನದ ಬಳಿಕ ಹೃದಯಘಾತದಿಂದ ವೃದ್ಧೆ ಮಲ್ಲಮ್ಮ (96) ಸಾವನ್ನಪ್ಪಿದ್ದಾರೆ.

ಪತಿ ಸಾವಿನ ನೋವಿನಲ್ಲೂ ಮತದಾನ ಮಾಡಿದ ಮಹಿಳೆ

ಪತಿ ಸಾವಿನ ನೋವಿನಲ್ಲೂ ಮತಗಟ್ಟೆ ಕೇಂದ್ರಕ್ಕೆ ಆಗಮಿಸಿ ಮಹಿಳೆ ಮತದಾನ ಮಾಡಿರುವಂತಹ ಘಟನೆ  ಜಿಲ್ಲೆಯ ಹೊಸನಗರ ತಾಲೂಕಿನ ಆಡುಗೋಡಿಯಲ್ಲಿ ನಡೆದಿದೆ. ವೆಂಕಟೇಶ್ ಅನಾರೋಗ್ಯದ ಕಾರಣ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ನಿಧನ ಹೊಂದಿದ್ದಾರೆ.

ಇದನ್ನೂ ಓದಿ: ಲೋಕಸಭಾ ಚುನಾವಣೆ: ಮತಹಾಕಿದವರಿಗೆ ಧಾರವಾಡದಲ್ಲಿ ಉಚಿತ ಆರೋಗ್ಯ ತಪಾಸಣೆ, ಹುಬ್ಬಳ್ಳಿಯಲ್ಲಿ ಫ್ರೀ ಐಸ್ ಕ್ರೀಂ

ಮತ ಹಾಕುವ ಮೊದಲು ಪತಿಯ ಸಾವಿನ ವಿಷಯ ತಿಳಿದ ಕಲಾವತಿ ಎಂಬುವವರು ಮತ ಹಾಕಿ ಬಳಿಕ ಪತಿಯ ಮೃತದೇಹ ನೋಡಲು ತೆರಳಿದ್ದಾರೆ.

ಕುಡಿದು ಬಂದ ಮತದಾರನಿಂದ ಮತಗಟ್ಟೆಯಲ್ಲಿ ಕಿರಿಕ್​

ಚಿಕ್ಕೋಡಿ: ಮತದಾರನೋರ್ವ ಮತಗಟ್ಟೆಗೆ ಮತಚಲಾಯಿಸಲು ಕುಡಿದು ಬಂದು ಆವಾಂತರ ಮಾಡಿರುವಂತಹ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಾವತಿ ಗ್ರಾಮದಲ್ಲಿ ನಡೆದಿದೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ: ಹಲವು ವಿಶೇಷಗಳಿಗೆ ಸಾಕ್ಷಿಯಾದ ರಾಜ್ಯದ 2ನೇ ಹಂತದ ಮತದಾನ

154 ನಂಬರಿನ ಮತಗಟ್ಟೆಯಲ್ಲಿ ಮದ್ಯ ಪ್ರಿಯ ಇವಿಎಂ ಯಂತ್ರ ಸದ್ದು ಮಾಡಿಲ್ಲ ಎಂದು ಕಿರಿಕ್​ ಮಾಡಿದ್ದಾನೆ. ಭದ್ರತಾ ಸಿಬ್ಬಂದಿ ಮತಗಟ್ಟೆಯಿಂದ ಹೊರಗೆ ಕಳಿಸುವಾಗ ಬಿದ್ದು ಗಾಯಗೊಂಡಿದ್ದಾನೆ.

ಮತದಾನದ ವಿಡಿಯೋ ವೈರಲ್ ಮಾಡಿದ ಮತದಾರ

ಹಾವೇರಿ: ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಮತದಾರನೋರ್ವ ಮತದಾನ ಮಾಡಿದ ವಿಡಿಯೋ ವೈರಲ್ ಮಾಡಿರುವಂತಹ ಘಟನೆ ನಡೆದಿದೆ. ಮತದಾನದ ಗೌಪ್ಯತೆ ಕಾಪಾಡಿಕೊಳ್ಳದೆ ಕಾಂಗ್ರೆಸ್ ಅಭ್ಯರ್ಥಿಗೆ ಮತದಾನ ಮಾಡಿ ವಿಡಿಯೋ ಹರಿ ಬಿಡಲಾಗಿದೆ. ಹೀಗಾಗಿ ವಿಡಿಯೋ ಬಗ್ಗೆ ಬಿಜೆಪಿ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:05 pm, Tue, 7 May 24

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್