Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್‌ನ ಕೆಲ ನಾಯಕರು, ಕಾರ್ಯಕರ್ತರು ಬೆಂಬಲಿಸಿದ್ದಾರೆ: ಮತದಾನ ದಿನವೇ ಕುಮಾರಸ್ವಾಮಿ ಹೊಸ ಬಾಂಬ್​​

ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಇಂದು ನಡೆಯುತ್ತಿದೆ. ಮಂಡ್ಯದ ಮದ್ದೂರು ತಾಲೂಕಿನ ಕೆ.ಹೊನಲಗೆರೆ ಗ್ರಾಮದಲ್ಲಿ ಮೈತ್ರಿ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಅಧಿಕ ಬಹುಮತದೊಂದಿಗೆ ಗೆಲುವಿನ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಜೊತೆಗೆ ಕಾಂಗ್ರೆಸ್‌ನ ಕೆಲ ನಾಯಕರು ಮತ್ತು ಕಾರ್ಯಕರ್ತರು ಬೆಂಬಲಿಸಿದ್ದಾರೆ ಎಂದು ಮತದಾನ ದಿನವೇ ಹೊಸ ಬಾಂಬ್ ಸಿಡಿಸಿದ್ದಾರೆ.

ಕಾಂಗ್ರೆಸ್‌ನ ಕೆಲ ನಾಯಕರು, ಕಾರ್ಯಕರ್ತರು ಬೆಂಬಲಿಸಿದ್ದಾರೆ: ಮತದಾನ ದಿನವೇ ಕುಮಾರಸ್ವಾಮಿ ಹೊಸ ಬಾಂಬ್​​
ಹೆಚ್‌ಡಿ ಕುಮಾರಸ್ವಾಮಿ
Follow us
ಪ್ರಶಾಂತ್​ ಬಿ.
| Updated By: ಗಂಗಾಧರ​ ಬ. ಸಾಬೋಜಿ

Updated on: Apr 26, 2024 | 3:09 PM

ಮಂಡ್ಯ, ಏಪ್ರಿಲ್​ 26: ಮಂಡ್ಯದಲ್ಲಿ (Mandya) ನಮಗೆ ತುಂಬಾ ಒಳ್ಳೆಯ ಪ್ರತಿಕ್ರಿಯೆ ಇದೆ. ಯಾವುದೇ ರೀತಿಯ ಸಮಸ್ಯೆ ನಮಗೆ ಇಲ್ಲ. ಪಕ್ಷ, ಜಾತಿಭೇದ ಮರೆತು ಸಪೋರ್ಟ್ ಮಾಡಿದ್ದಾರೆ. ಕಾಂಗ್ರೆಸ್‌ನ ಕೆಲ ನಾಯಕರು ಮತ್ತು ಕಾರ್ಯಕರ್ತರು ಬೆಂಬಲಿಸಿದ್ದಾರೆ ಎಂದು ಮೈತ್ರಿ ಅಭ್ಯರ್ಥಿ, ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ. ಮಂಡ್ಯದ ಮದ್ದೂರು ತಾಲೂಕಿನ ಕೆ.ಹೊನಲಗೆರೆ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಸಂಪೂರ್ಣವಾಗಿ ಮಂಡ್ಯ ಜನರು ನನ್ನ ಬೆಂಬಲಿಸಿದ್ದಾರೆ. ಅತ್ಯಂತ ಉತ್ಸಾಹದಿಂದ ಮತದಾನ ನಡೆಯುತ್ತಿದೆ ಎಂದು ರಾಜ್ಯದಲ್ಲಿ ಅಧಿಕ ಬಹುಮತ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಚುನಾವಣೆ ಅಂದರೆ ಅಪಪ್ರಚಾರ, ನಮ್ಮ ವಿರೋಧ ಮಾಡುವುದು ಸಹಜ. ಮಂಡ್ಯ ಜಿಲ್ಲೆಯಲ್ಲಿ ಎಲ್ಲರೂ ನಮಗೆ ಸಹಕಾರ ನೀಡಿದ್ದಾರೆ. ನನ್ನ ಮತ ಇರುವುದು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ. ಹೀಗಾಗಲೇ ಮತ ಹಾಕಿ ಬಂದಿದ್ದೇನೆ. ಈಗ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ತಾಲೂಕುವಾರು ಭೇಟಿ ನೀಡುತ್ತಿದ್ದೇನೆ. ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಸುಮಲತಾ ಅವರು ಇಂದು ನನಗೆ ಮತ ಕೊಟ್ಟಿದ್ದಾರೆ

ಜೆಡಿಎಸ್‌ ಅವರು ನನ್ನ ಪ್ರಚಾರಕ್ಕೆ ಕರೆದಿಲ್ಲ ಎಂಬ ಸುಮಲತಾ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ನಾನೇ ಸುಮಲತಾ ಮನೆಗೆ ಹೋಗಿ ಅವರ ಸಹಕಾರ ಕೇಳಿದ್ದೇನೆ. ಅದಕ್ಕಿಂತ ನಾನು ಏನು ಮಾಡಲು ಸಾಧ್ಯ. ಅಂಬರೀಶ್ ಅಭಿಮಾನಿಗಳು ಒಳಗೊಂಡಂತೆ ನನಗೆ ಸಹಾಯ ಮಾಡಿದ್ದಾರೆ. ಮೋದಿ ಅವರ ಕಾರ್ಯಕ್ರಮದ ವೇದಿಕೆಯಲ್ಲಿ ಸಾಧ್ಯವಾದರೆ ಎರಡು ದಿನ ಪ್ರಚಾರಕ್ಕೆ ಬನ್ನಿ ಅಕ್ಕ ಎಂದಿದ್ದೆ. ಮಾಜಿ ಸಚಿವ ಅಶೋಕ್ ಅವರು ಸಹ ನಾನು ಕರೆದಾಗ ಇದ್ದರು. ಅಶೋಕ್ ಸಹ ಮಂಡ್ಯಗೆ ಬಂದು ಪ್ರಚಾರ ಮಾಡಿ ಎಂದಿದ್ದರು.

ಇದನ್ನೂ ಓದಿ: ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ನಾಯಕರು ಗಿಫ್ಟ್​​​​ ಕಾರ್ಡ್​​ಗಳನ್ನು ವಿತರಿಸುತ್ತಿದ್ದಾರೆ: ಹೆಚ್ ಡಿ ಕುಮಾರಸ್ವಾಮಿ

ಎಲ್ಲಾ ಬಿಜೆಪಿ ನಾಯಕರು ನನ್ನ ಪರ ಕೆಲಸ ಮಾಡಿದ್ದಾರೆ. ಇಂದು ಸುಮಲತಾ ಅವರು ಇಂದು ನನಗೆ ಮತ ಕೊಟ್ಟಿದ್ದಾರೆ. ಈ ಗೊಂದಲಗಳಿಗೆ ಯಾರು ಪ್ರಚಾರ ಕೊಡುವುದು ಬೇಡ. ಯಾರು ಯಾರ ಬಗ್ಗೆಯೂ ಸಣ್ಣತನದಲ್ಲಿ ಮಾತನಾಡುವುದು ಬೇಡ. ಎಲ್ಲರೂ ಒಟ್ಟಾಗಿ ಕೆಲಸ ಮಾಡಿರೋದ್ರಿಂದ ರಾಜ್ಯದಲ್ಲಿ ಅತ್ಯಂತ ಬಹುಮತಗಳಲ್ಲಿ ಗೆಲ್ಲಲು ಕಾರಣವಾಗುತ್ತೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಾನು ಮಾಡಿದ ತ್ಯಾಗಕ್ಕೆ ಬೆಲೆಯಿಲ್ಲದಂತಾಯಿತು, ಜೆಡಿಎಸ್ ವರಿಷ್ಠರ ಧೋರಣೆಯಿಂದ ಬಹಳ ಬೇಸರವಾಗಿದೆ: ಸುಮಲತಾ ಅಂಬರೀಶ್

ಪಕ್ಷ, ಜಾತಿಯ ವ್ಯಾಮೋಹಕ್ಕೆ ಒಳಗಾಗದೆ ಜನರು ನನಗೆ ಮತ ನೀಡಿದ್ದಾರೆ. ಚುನಾವಣೆ ನಾನು ಮಾಡಿಲ್ಲ, ಮಂಡ್ಯ ನನ್ನ ಪರ ಚುನಾವಣೆ ಮಾಡಿದ್ದಾರೆ. ನನ್ನ ಗೆಲುವು ಮಂಡ್ಯ ಜಿಲ್ಲೆಯ ಜನರಿಗೆ ಸೇರಬೇಕು. ಎರಡನೇ ಹಂತದ ಚುನಾವಣೆ ಪ್ರಚಾರಕ್ಕೂ ಹೋಗುತ್ತೇನೆ ಎಂದು ತಿಳಿಸಿದರು.

ನನಗೆ ಯಾರು ವಿರೋಧ ಮಾಡಿಲ್ಲ: ಹೆಡಿ ಕುಮಾರಸ್ವಾಮಿ

ಸುಮಲತಾ ಬೆಂಬಲ ನೀಡಿಲ್ಲ ಎಂಬ ಮಾಜಿ ಪ್ರಧಾನಿ ದೇವೇಗೌಡರ ಹೇಳಿಕೆ ವಿಚಾರವಾಗಿ ಮಾತನಾಡಿದ್ದು, ಆ ಬಗ್ಗೆ ನನಗೆ ಮಾಹಿತಿ ಇಲ್ಲ. ಸುಮಲತಾ ಅವರ ಪ್ರಶ್ನೆ ಇಲ್ಲಿ ಬರಲ್ಲ. ದೇವೇಗೌಡರು ಯಾಕೆ ಹೇಳಿದಾರೆ ಗೊತ್ತಿಲ್ಲ. ಅವರಿಗೆ ಮಾಹಿತಿ ಕೊರತೆ ಇರಬಹುದು. ಪಕ್ಷ, ಭೇದ ಮರೆತು ಮಂಡ್ಯದಲ್ಲಿ ಜನರು ಆಶೀರ್ವಾದ ಮಾಡಿದ್ದಾರೆ‌. ನನಗೆ ಯಾರು ವಿರೋಧ ಮಾಡಿಲ್ಲ. ಎಲ್ಲರೂ ನನಗೆ ಸಹಾಯ ಮಾಡಿದ್ದಾರೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ