ನಮ್ಮ ಮಕ್ಕಳ ಮೇಲೆ ಹಲ್ಲೆ, ಮಾರುಕಟ್ಟೆಗಳಲ್ಲಿ ಬಾಂಬ್​​ ಸ್ಫೋಟ: ಕಾಂಗ್ರೆಸ್ ವಿರುದ್ಧ ಬೆಂಗಳೂರಿನಲ್ಲಿ ಮೋದಿ ವಾಗ್ದಾಳಿ

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಚುನಾವಣಾ ಸಮಾವೇಶ ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೊದಿ, ರಾಜ್ಯ ಕಾಂಗ್ರೆಸ್ ಸರ್ಕಾರದ ನೀತಿ ಅಪಾಯಕಾರಿಯಾಗಿದೆ. ಬೆಂಗಳೂರಿನಲ್ಲಿ ಬಾಂಬ್ ಸ್ಫೋಟವಾಗುತ್ತಿದೆ, ಹಲ್ಲೆ ನಡೆಯುತ್ತಿದೆ. ಇದು ಸಾಮಾನ್ಯ ವಿಚಾರವಲ್ಲ, ಕಾಂಗ್ರೆಸ್ ಗೆಲ್ಲಿಸುವುದು ಬೇಡ ಎಂದು ವಾಗ್ದಾಳಿ ಮಾಡಿದ್ದಾರೆ. ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ ಎಂದು ಕಾಂಗ್ರೆಸ್​ ವಿರುದ್ಧ ಕಿಡಿಕಾರಿದ್ದಾರೆ.

ನಮ್ಮ ಮಕ್ಕಳ ಮೇಲೆ ಹಲ್ಲೆ, ಮಾರುಕಟ್ಟೆಗಳಲ್ಲಿ ಬಾಂಬ್​​ ಸ್ಫೋಟ: ಕಾಂಗ್ರೆಸ್ ವಿರುದ್ಧ ಬೆಂಗಳೂರಿನಲ್ಲಿ ಮೋದಿ ವಾಗ್ದಾಳಿ
ಪ್ರಧಾನಿ ನರೇಂದ್ರ ಮೋದಿ
Follow us
ಕಿರಣ್​ ಹನಿಯಡ್ಕ
| Updated By: ಗಂಗಾಧರ​ ಬ. ಸಾಬೋಜಿ

Updated on:Apr 20, 2024 | 6:28 PM

ಬೆಂಗಳೂರು, ಏಪ್ರಿಲ್​ 20: ನಗರದಲ್ಲಿ ನಮ್ಮ ಮಕ್ಕಳ ಮೇಲೆ ಹಲ್ಲೆ ನಡೆಯುತ್ತಿದೆ. ಮಾರುಕಟ್ಟೆಗಳಲ್ಲಿ ಬಾಂಬ್​​ ಸ್ಪೋಟ್​ಗೊಳುತ್ತಿವೆ. ಭಜನೆ ಅಥವಾ ಕಿರ್ತನೆ ಕೇಳುವುದರಿಂದ ಕೂಡ ಹಲ್ಲೆ ಮಾಡುತ್ತಿದ್ದಾರೆ. ಇವು ಸಾಮಾನ್ಯ ಘಟನೆಗಳು ಅಲ್ಲ, ಹಾಗಾಗಿ ಈ ಕಾಂಗ್ರೆಸ್​ನಿಂದ ಆದಷ್ಟು ಅಲರ್ಟ್​ ಆಗಿರಿ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಬೆಂಗಳೂರು ಮತ್ತು ಕರ್ನಾಟಕದ ಜನರಿಗೆ ಮನವಿ ಮಾಡಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ಭಾಷಣ ಮಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದ ನೀತಿ ಅಪಾಯಕಾರಿಯಾಗಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

ಬೆಂಗಳೂರನ್ನು ಅದ್ಭುತ ನಗರವಾಗಿಸಲು ನಾವು ಪ್ರಯತ್ನಿಸುತ್ತಿದ್ದೇವೆ. ಎನ್​ಡಿಎ ಅವಧಿಯಲ್ಲಿ ತೆರಿಗೆ ಪದ್ಧತಿ ಬದಲಾವಣೆಯಾಗಿದೆ. ಜಿಎಸ್​ಟಿ ಜಾರಿ ನಂತರ ಪರೋಕ್ಷ ತೆರಿಗೆ ಹೊರೆ ತಪ್ಪಿದೆ. 2014, 2019ರ ಚುನಾವಣೆಯಲ್ಲಿ ದಾಖಲೆ ಪ್ರಮಾಣದಲ್ಲಿ ಗೆಲ್ಲಿಸಿದ್ರಿ. ಭಾರತದ ಬ್ಯಾಂಕಿಂಗ್ ವ್ಯವಸ್ಥೆ ಸಂಕಷ್ಟದಲ್ಲಿತ್ತು, ಈಗ ಬದಲಾಗಿದೆ ಎಂದರು.

ಇದನ್ನೂ ಓದಿ: Narendra Modi in Chikkaballapur: ರೈತ ವಿರೋಧಿ ಕಾಂಗ್ರೆಸ್​ಗೆ ಪಾಠ ಕಲಿಸಿ; ಚಿಕ್ಕಬಳ್ಳಾಪುರದಲ್ಲಿ ಮೋದಿ ಕರೆ

21ನೇ ಶತಮಾನದಲ್ಲಿ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿದೆ. ಇಡೀ ದೇಶವೇ ನನ್ನ ಪರಿವಾರವಾಗಿದೆ. INDIA ಮೈತ್ರಿಕೂಟಕ್ಕೆ ಅವರವರ ಕುಟುಂಬವೇ ಮುಖ್ಯವಾಗಿದೆ. ಇದೇ NDA ಮತ್ತು INDIA ಮೈತ್ರಿಕೂಟಕ್ಕೆ ಇರುವ ವ್ಯತ್ಯಾಸ ಎಂದು ಹೇಳಿದ್ದಾರೆ.

ಭಾರತ ವಿಶ್ವದ 5ನೇ ದೊಡ್ಡ ಆರ್ಥಿಕ ಶಕ್ತಿವಾಗಿ ಹೊರಹೊಮ್ಮಿದೆ

ಭಾರತದಲ್ಲಿ ಹೂಡಿಕೆಗೆ ಇಂದು ಹಲವು ದೇಶಗಳು ಉತ್ಸುಕವಾಗಿವೆ. ಭಾರತದ ಗೆಳೆತನ ಮಾಡಲು ಎಲ್ಲಾ ದೇಶಗಳು ಹಾತೊರೆಯುತ್ತಿವೆ. ಭಾರತ ವಿಶ್ವದ 5ನೇ ದೊಡ್ಡ ಆರ್ಥಿಕ ಶಕ್ತಿವಾಗಿ ಹೊರಹೊಮ್ಮಿದೆ. ಭಾರತ ಯಾರನ್ನೂ ಅನುಸರಿಸುತ್ತಿಲ್ಲ, ಬೇರೆಯವರು ಅನುಸರಿಸ್ತಿದ್ದಾರೆ. ದೇಶದಲ್ಲಿ ಇಷ್ಟು ದೊಡ್ಡ ಬದಲಾವಣೆ ಆಗಿದ್ದೇಗೆ ಅಂದರೆ ನಿಮ್ಮಿಂದ. ನೀವು ನೀಡಿದ ಮತದಿಂದ ದೇಶದಲ್ಲಿ ಮಹತ್ವದ ಬದಲಾವಣೆ ಆಗಿದೆ ಎಂದಿದ್ದಾರೆ.

ಇದನ್ನೂ ಓದಿ: ‘ಕೈ’ಕೊಟ್ಟ ಚೆಂಬನ್ನು ಅಕ್ಷಯ ಪಾತ್ರೆಯಾಗಿಸಿ ಬಡವರಿಗೆ ಕೊಟ್ಟ ಮೋದಿ: ಹೆಚ್​ಡಿ ದೇವೇಗೌಡ

ನರೇಂದ್ರ ಮೋದಿ ವಿರುದ್ಧ ಸುಳ್ಳು ಆರೋಪ ಮಾಡಲಾಗುತ್ತಿದೆ. ಮೋದಿ ಪರಿವಾರದ ವಿರುದ್ಧ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಜನರ ಬದುಕಿನಲ್ಲಿ ಬದಲಾವಣೆ ತರಲು ನಿರಂತರವಾಗಿ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದ್ದಾರೆ.

ಜನರ ಕನಸು ನನಸು ಮಾಡುವುದೆ ನಮ್ಮ ಸಂಕಲ್ಪ

ಜನರ ಕನಸು ನನಸು ಮಾಡುವುದೆ ನಮ್ಮ ಸಂಕಲ್ಪ. ಇದಕ್ಕಾಗಿ ಬಿಜೆಪಿ-ಜೆಡಿಎಸ್ ಒಟ್ಟಾಗಿದ್ದೇವೆ. ನಿಮ್ಮ ಕನಸೇ ನನ್ನ ಕನಸು. ನನ್ನ ಪ್ರತಿ ಕ್ಷಣ ನಿಮಗಾಗಿ, ದೇಶಕ್ಕಾಗಿ ಸಮರ್ಪಣೆ. ಇದು 24/7 ಫಾರ್ 2047 ವರೆಗೆ ನಿರಂತರ. ನನ್ನ ಒಂದು ಕೆಲಸ ಮಾಡುತ್ತೀರಾ? ಅತಿ ಹೆಚ್ಚು ಮತದಾನ ಮಾಡಿಸಿ. ನಿಮ್ಮ ಬೂತ್​​ನಲ್ಲಿ ಹೆಚ್ಚು ಲೀಡ್ ಕೊಡಿಸಿ. ಇನ್ನೊಂದು ನನ್ನ ಪರ್ಸನಲ್ ಕೆಲಸ ಮಾಡುತ್ತೀರಾ? ಮನೆಗಳಿಗೆ ಹೋಗಿ ಎಲ್ಲರಿಗೂ ನಾನು ಬಂದಿದ್ದೆ ಎಂದು ಹೇಳಿ, ನಮಸ್ಕಾರ ತಿಳಿಸಿ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:03 pm, Sat, 20 April 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ