AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌಪ್ಯ ಮತದಾನದ ನಿಯಮ ಉಲ್ಲಂಘನೆ: ಬಳ್ಳಾರಿ ಪಾಲಿಕೆ ಸದಸ್ಯನ ವಿರುದ್ಧ ಎಫ್ಐಆರ್ ದಾಖಲು

ಗೌಪ್ಯ ಮತದಾನ ಮಾಡಬೇಕೆಂಬ ನಿಯಮವಿದ್ದರೂ ಹಲವು ಯುವಕರು ತಾವು ಮತದಾನ ಮಾಡಿದ ವೀಡಿಯೋ, ಪೊಟೋ ತೆಗದುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವುದು ಒಂದು ಶೋಕಿಯಾಗಿದೆ. ಸದ್ಯ ಕರ್ನಾಟಕದಲ್ಲಿ ನಡೆಯುತ್ತಿರುವ ಎರಡನೇ ಹಂತದ ಲೋಕಸಭಾ ಚುನಾವಣೆ ವೇಳೆಯಲ್ಲೂ ಸಹ ಹಲವೆಡೆ ಮತದಾರರು ತಮ್ಮ ಮತದಾನದ ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿಕೊಳ್ಳುತ್ತಿದ್ದಾರೆ. ಅದರಂತೆ ಬಳ್ಳಾರಿಯಲ್ಲಿ ಓರ್ವ ಜನಪ್ರತಿನಿಧಿಯೇ ಮತದಾನದ ವಿಡಿಯೋ ಮಾಡಿಕೊಂಡಿದ್ದು, ಇದೀಗ ಅವರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಗೌಪ್ಯ ಮತದಾನದ ನಿಯಮ ಉಲ್ಲಂಘನೆ: ಬಳ್ಳಾರಿ ಪಾಲಿಕೆ ಸದಸ್ಯನ ವಿರುದ್ಧ ಎಫ್ಐಆರ್ ದಾಖಲು
ಗೌಪ್ಯ ಮತದಾನದ ನಿಯಮ ಉಲ್ಲಂಘನೆ: ಬಳ್ಳಾರಿ ಪಾಲಿಕೆ ಸದಸ್ಯನ ವಿರುದ್ಧ ಎಫ್ಐಆರ್ ದಾಖಲು
ವಿನಾಯಕ ಬಡಿಗೇರ್​
| Edited By: |

Updated on: May 07, 2024 | 7:34 PM

Share

ಬಳ್ಳಾರಿ, ಮೇ 07: ಮತದಾನದ (Voting) ಗೌಪ್ಯತೆ ನಿಯಮ ಉಲ್ಲಂಘನೆ ಹಿನ್ನೆಲೆ ಬಳ್ಳಾರಿ ಮಹಾನಗರ ಪಾಲಿಕೆ 10ನೇ ವಾರ್ಡ್​ನ ಬಿಜೆಪಿ ಸದಸ್ಯ ಕೋನಂಕಿ ತಿಲಕ್ ವಿರುದ್ದ ನಗರದ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ (FIR) ದಾಖಲಾಗಿದೆ. ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ, ಮತದಾರರ ಮೇಲೆ ಪ್ರಭಾವ ಬೀರುವ ಕೆಲಸ ಮಾಡಿದ್ದಾರೆ ಎಂದು ಚುನಾವಣೆ ಫ್ಲೈಯಿಂಗ್ ಸ್ಕ್ವಾಡ್​ರಿಂದ ದೂರು ಹಿನ್ನೆಲೆ ಎಫ್​ಐಆರ್​ ದಾಖಲಿಸಲಾಗಿದೆ.

ಕೋನಂಕಿ ತಿಲಕ್​ ಮತ ಚಲಾಯಿಸುವಾಗ ಇವಿಎಂ ಮಿಷಿನ್ ಮೇಲೆ ಕಮಲದ ಚಿನ್ನೆ ಮೇಲೆ ಬೆರಳಿಟ್ಟು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಬಳಿಕ ಆ ಫೋಟೋವನ್ನು ವಾಟ್ಸಾಪ್ ಸ್ಟೇಟಸ್​ಗೆ ಹಾಕಿ ಎಡವಟ್ಟು ಮಾಡಿಕೊಂಡಿದ್ದಾರೆ. ಜೊತೆಗೆ ಬಿಜೆಪಿಯ ರಾಮುಲುಗೆ ಮತ ಹಾಕಿರುವೆ ಎಂದು ಬರೆದುಕೊಂಡಿದ್ದಾರೆ. ಆ ಮೂಲಕ ಜನಪ್ರತಿನಿಧಿಯಿಂದಲೇ ನಿಯಮ ಉಲ್ಲಂಘನೆ ಮಾಡಲಾಗಿದೆ.

ಮತದಾನದ ವಿಡಿಯೋಗಳು ವೈರಲ್

ವಿಜಯಪುರ: ನಗರದಲ್ಲಿ ಮತದಾನ ಮಾಡಿದ ವಿಡಿಯೋಗಳು ವೈರಲ್​ ಆಗಿವೆ. ಮತದಾನ ಮಾಡುವಲ್ಲಿ ಮೊಬೈಲ್ ಒಯ್ಯದಂತೆ ಕ್ರಮ ತೆಗೆದುಕೊಂಡಿದ್ದರೂ ಘಟನೆಗಳು ನಡೆದಿವೆ. ಮತದಾನ ಮಾಡಿದ ದೃಶ್ಯವನ್ನು ಕೆಲವರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ.

ಇದನ್ನೂ ಓದಿ: ಒಂದೇ ಕುಟುಂಬ 69 ಸದಸ್ಯರಿಂದ ಮತದಾನ; ಸೆಲ್ಫಿ ಕ್ಲಿಕ್ಕಿಸಿ ಸಂಭ್ರಮ

ಗೌಪ್ಯ ಮತದಾನವನ್ನು ರಾಜಕೀಯ ಮುಖಂಡರ ಬೆಂಬಲಿಗರು ಬಹಿರಂಗ ಪಡಿಸಿದ್ದಾರೆ. ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗೆ ಮತ ಹಾಕುವ ವೇಳೆ ಕೆಲ ಮತದಾರರು ವಿಡಿಯೋ ಮಾಡಿ ವೈರಲ್ ಮಾಡಿದ್ದಾರೆ. ಮತದಾನ ಮಾಡಿದ ವಿಡಿಯೋವನ್ನು ವಾಟ್ಸಾಪ್ ಸ್ಟೇಟಸ್​ಗೆ ಬೆಂಬಲಿಗರು ಹಾಕಿಕೊಂಡಿದ್ದಾರೆ. ಬಿಜೆಪಿಯ ಜಿಗಜಿಣಗಿಗೆ ಮತಹಾಕಿ ಕಾಂಗ್ರೆಸ್ ಅಭ್ಯರ್ಥಿ ಭಾವಚಿತ್ರಕ್ಕೆ ಅಶ್ಲೀಲವಾಗಿ ಸನ್ನೆ ಮಾಡಿದ ವಿಡಿಯೋ ಸಹ ವೈರಲ್ ಆಗಿದೆ.

ತಾನು ಓಟ್ ಹಾಕುವುದನ್ನು ವಿಡಿಯೋ ಮಾಡಿ ಸ್ಟೇಟಸ್​ಗೆ ಹಾಕಿದ ಭೂಪ

ಕೊಪ್ಪಳ: ಮತಗಟ್ಟೆಯೊಳಗೆ ಮೊಬೈಲ್​ ನಿಷೇಧವಿದ್ದರೂ ಕೂಡ ಮತ ಹಾಕುವುದನ್ನು ಓರ್ವ ವ್ಯಕ್ತಿ ಮೊಬೈಲ್​ನಲ್ಲಿ ವಿಡಿಯೋ ಮಾಡಿಕೊಂಡಿದ್ದಾರೆ. ಬಳಿಕ ತಾನು ಓಟ್ ಹಾಕಿದ್ದನ್ನು ಸ್ಟೇಟಸ್​ಗೆ ಕೂಡ ಹಾಕಿಕೊಂಡಿರುವಂತಹ ಘಟನೆ ಜಿಲ್ಲೆಯ ಕಾರಟಗಿ ತಾಲೂಕಿನ ಹಾಲಸಮುದ್ರ ಗ್ರಾಮದಲ್ಲಿ ನಡೆದಿದೆ.

ಇದನ್ನೂ ಓದಿ: Dharwad: ಊಟಕ್ಕಾಗಿ ಮತದಾನವನ್ನೇ ನಿಲ್ಲಿಸಿದ ಚುನಾವಣಾ ಸಿಬ್ಬಂದಿ: ಮತದಾರರು ಆಕ್ರೋಶ

ಬೂತ್ ನಂಬರ್ 139 ರಲ್ಲಿ ರೆಕಾರ್ಡ್ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿದಾಡುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್