AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bagalkote: ಒಂದೇ ದಿನ ಬಾಗಲಕೋಟೆ ಕ್ಷೇತ್ರದಲ್ಲಿ ಪ್ರಧಾನಿ ಮೋದಿ, ಪ್ರಿಯಾಂಕಾ ಭರ್ಜರಿ ಪ್ರಚಾರ

ಬಾಗಲಕೋಟೆ ಜಿಲ್ಲೆಯಲ್ಲಿ ಲೋಕಸಭೆ ರಣಕಣ ರಂಗೇರಿದೆ. ಕಾಂಗ್ರೆಸ್​, ಮೇ 7ರಂದು ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಮತದಾನ ಹಿನ್ನೆಲೆ ಇಂದು ಬೆಳಗಾವಿಗೆ ಆಗಮಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಏಪ್ರಿಲ್ 29ರ ಮಧ್ಯಾಹ್ನ 12.05ಕ್ಕೆ ಬಾಗಲಕೋಟೆಗೆ ಆಗಮಿಸಲಿದ್ದಾರೆ. ಇದೇ ವೇಳೆ ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ಕೂಡ ಜಿಲ್ಲೆಯ ಜಮಖಂಡಿಗೆ ಆಗಮಿಸುತ್ತಿದ್ದಾರೆ.

Bagalkote: ಒಂದೇ ದಿನ ಬಾಗಲಕೋಟೆ ಕ್ಷೇತ್ರದಲ್ಲಿ ಪ್ರಧಾನಿ ಮೋದಿ, ಪ್ರಿಯಾಂಕಾ ಭರ್ಜರಿ ಪ್ರಚಾರ
ಪ್ರಧಾನಿ ಮೋದಿ, ಪ್ರಿಯಾಂಕಾ ಗಾಂಧಿ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Apr 27, 2024 | 8:41 PM

Share

ಬಾಗಲಕೋಟೆ, ಏಪ್ರಿಲ್​ 27: ಜಿಲ್ಲೆಯಲ್ಲಿ ಲೋಕಸಭೆ ರಣಕಣ ರಂಗೇರಿದೆ. ಕಾಂಗ್ರೆಸ್​, ಬಿಜೆಪಿ ಅಭ್ಯರ್ಥಿಗಳು ಎಲ್ಲ ಕಡೆ ಬಿರುಸಿನ ಪ್ರಚಾರ ನಡೆಸಿದ್ದಾರೆ. ಮೇ 7ರಂದು ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಮತದಾನ ಹಿನ್ನೆಲೆ ಇಂದು ಬೆಳಗಾವಿಗೆ ಆಗಮಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಏಪ್ರಿಲ್ 29ರ ಮಧ್ಯಾಹ್ನ 12.05ಕ್ಕೆ ಬಾಗಲಕೋಟೆಗೆ ಆಗಮಿಸಲಿದ್ದಾರೆ. ಇದೇ ವೇಳೆ ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ (Priyanka Gandhi) ಕೂಡ ಜಿಲ್ಲೆಯ ಜಮಖಂಡಿಗೆ ಆಗಮಿಸುತ್ತಿದ್ದಾರೆ. ಹೀಗಾಗಿ ಒಂದೇ ದಿನ ಬಾಗಲಕೋಟೆ ಕ್ಷೇತ್ರದಲ್ಲಿ ಮೋದಿ ಮತ್ತು ಪ್ರಿಯಾಂಕಾ ಭರ್ಜರಿ ಪ್ರಚಾರ ಮಾಡಲಿದ್ದಾರೆ.

ಪ್ರಿಯಾಂಕಾ ಗಾಂಧಿ ಬಾಗಲಕೋಟೆ ಭೇಟಿ ವಿವರ

ಏಪ್ರಿಲ್​ 29ರಂದು ಬೆಳಗ್ಗೆ 11.20ಕ್ಕೆ ಬೆಳಗಾವಿಗೆ ಆಗಮಿಸುವ ಪ್ರಿಯಾಂಕಾ ಗಾಂಧಿ ಬೆಳಗಾವಿಯಿಂದ ಜಮಖಂಡಿಗೆ ಹೆಲಿಕಾಪ್ಟರ್​ನಲ್ಲಿ ತೆರಳಲಿದ್ದಾರೆ. ಏ.29ರಂದು ಮಧ್ಯಾಹ್ನ 12 ಗಂಟೆಗೆ ಜಮಖಂಡಿಗೆ ಆಗಮಿಸಲಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪರ ಪ್ರಚಾರ ಮಾಡಲಿದ್ದಾರೆ. ಬಳಿಕ ಜಮಖಂಡಿಯಲ್ಲಿ ನಡೆಯುವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ನಂತರ ಬೆಳಗಾವಿ ಮಾರ್ಗವಾಗಿ ಕಲಬುರಗಿ ಕಡೆ ಪ್ರಯಾಣ ಬೆಳೆಸಲಿದ್ದಾರೆ.

ಅಭ್ಯರ್ಥಿಗಳ ಪರ ಪ್ರಧಾನಿ ಮೋದಿ ಪ್ರಚಾರ

ಇನ್ನು ಪ್ರಧಾನಿ ಮೋದಿ ಕೂಡ ಜಿಲ್ಲೆಗೆ ಲಗ್ಗೆಯಿಡುತ್ತಿದ್ದು, ಕೇಸರಿ ಕಲಿಗಳಿಗೆ ಮತ್ತಷ್ಟು ಹುರುಪು ಬಂದಿದೆ.  ಬಿಜೆಪಿ ಅಭ್ಯರ್ಥಿ ಪಿಸಿ ಗದ್ದಿಗೌಡರ, ವಿಜಯಪುರ ಅಭ್ಯರ್ಥಿ ರಮೇಶ್ ಜಿಗಜಿಣಗಿ ಪರ ಪ್ರಧಾನಿ ಮೋದಿ ಪ್ರಚಾರ ಮಾಡಲಿದ್ದಾರೆ. ಮೋದಿ ಆಗಮನದಿಂದ‌ ಅಭ್ಯರ್ಥಿಗಳಿಗೆ ಬೂಸ್ಟ್ ಸಿಕ್ಕಂತಾಗಿದೆ.

ಇದನ್ನೂ ಓದಿ: ಏಪ್ರಿಲ್‌ 28ಕ್ಕೆ ಕರ್ನಾಟಕಕ್ಕೆ ಮೋದಿ: 2ನೇ ಹಂತದ ಬಿಜೆಪಿ ಪ್ಲ್ಯಾನ್‌ ಏನು? ಎಲ್ಲೆಲ್ಲಿ? ಇಲ್ಲಿದೆ ವಿವರ

ಮೋದಿ ಬರೋದರಿಂದ‌ ಬಿಜೆಪಿ ಕಾರ್ಯಕರ್ತರಿಗೆ ಹೆಚ್ಚಿನ ಉತ್ಸಾಹ ಬರಲಿದ್ದು ಇದು ಬಾಗಲಕೋಟೆ, ವಿಜಯಪುರ ಅಭ್ಯರ್ಥಿಗಳಿಗೆ ಬಾರಿ ಪ್ಲಸ್ ಆಗಲಿದೆ. ಮೋದಿ ಆಗಮನದಿಂದ ಮತ್ತಷ್ಟು ಹೆಚ್ಚು ಮತಗಳ ಅಂತರದಿಂದ ವಿಜೆಪಿ ಅಭ್ಯರ್ಥಿಗಳು ಗೆಲ್ತಾರೆ ಎಂಬ ವಿಶ್ವಾಸದಲ್ಲಿದ್ದಾರೆ ಬಿಜೆಪಿ ಮುಖಂಡರಿದ್ದಾರೆ.

ಮೋದಿ ಪ್ರಚಾರ ಸಮಾವೇಶಕ್ಕೆ ಈಗಾಗಲೇ ಭರದ ಸಿದ್ಧತೆ ಶುರುವಾಗಿದೆ. ಸಮಾವೇಶಕ್ಕಾಗಿ ನೂರು‌ ಎಕರೆ ಜಾಗದಲ್ಲಿ ಸಿದ್ಧತೆ ‌ನಡೆದಿದೆ. ಬಾಗಲಕೋಟೆಯ ನವನಗರದ ಸೆಕ್ಟರ್ ನಂ 110, 111, 112, 113 ವ್ಯಾಪ್ತಿ ಪ್ರದೇಶದ ನೂರು ಎಕರೆ ಜಾಗದಲ್ಲಿ ಸಮಾವೇಶ ನಡೆಯಲಿದೆ. ಸಮಾವೇಶದ ಮೈದಾನದಲ್ಲಿ ಇಂದು ಬಿಜೆಪಿ ಮುಖಂಡರು ಪೂಜೆ ಸಲ್ಲಿಸಿದ್ದಾರೆ. ಗೋಪೂಜೆ ಹಾಗೂ ಭೂಮಿ ಪೂಜೆ ‌ಮಾಡಿ ಕಾರ್ಯಕ್ರಮದ ವೇದಿಕೆ ಸಿದ್ದತೆ ‌ಕಾರ್ಯ ಶುರು ಮಾಡಿದ್ದಾರೆ.

ಇದನ್ನೂ ಓದಿ: ಗದ್ದಿಗೌಡರ್ ಸೇರಿ ರಾಜ್ಯದ 25 ಬಿಜೆಪಿ ಸಂಸದರು ಒಮ್ಮೆಯಾದರೂ ಸಂಸತ್ತಿನಲ್ಲಿ ಬಾಯಿಬಿಟ್ರಾ? ಸಿದ್ದರಾಮಯ್ಯ

ಉತ್ತರಕ್ಕೆ‌ ಮುಖ ‌ಮಾಡಿ 6/40 ಅಡಿ ವೇದಿಕೆ ಇರಲಿದೆ. ವೇದಿಕೆ‌ ಮುಂದೆ 40 ಅಡಿ‌ ಡಿ‌ಜೋನ್ ಇರಲಿದೆ. ಮುಂದೆ 300/600 ಅಡಿ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಖುರ್ಚಿ ಹಾಗೂ ಪೆಂಡಾಲ್ ವ್ಯವಸ್ಥೆ ಇರಲಿದೆ. ಬಾಗಲಕೋಟೆ ಹಾಗೂ ವಿಜಯಪುರ ಅವಳಿ ಜಿಲ್ಲೆಗಳಿಂದ ಎರಡು ಲಕ್ಷಕ್ಕೂ ಅಧಿಕ ಜನರು ಸೇರುವ ನಿರೀಕ್ಷೆ ಇದೆ. ವೇದಿಕೆಯಲ್ಲಿ ಕೇಂದ್ರ ಸರಕಾರದ ಯೋಜನೆ ಸದುಪಯೋಗ ಪಡೆದುಕೊಂಡ ಐದು ಜನ ಫಲಾನುಭವಿಗಳಿಂದ ಮೋದಿಗೆ ಸನ್ಮಾನ ನಡೆಯಲಿದೆ. ಎಲ್​ಇಡಿ ಮೂಲಕ ಮೋದಿ ಗ್ಯಾರಂಟಿಗಳು, ಕೇಂದ್ರದ ಯೋಜನೆಗಳ‌ ಪ್ರದರ್ಶನ ನಡೆಯಲಿದೆ. ವೇದಿಕೆಯ ಬಲಭಾಗದಲ್ಲಿ ಹೆಲಿಪ್ಯಾಡ್ ಸಿದ್ದ ಮಾಡಲಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 8:40 pm, Sat, 27 April 24

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ