ಲೋಕಸಭಾ ಟಿಕೆಟ್​ ಮಿಸ್; ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾದ್ರಾ ಕರಡಿ ಸಂಗಣ್ಣ?

ಲೋಕಸಭೆ ಚುನಾವಣೆ(Lok Sabha Election) ಟಿಕೆಟ್ ಮೇಲೆ ಕಣ್ಣಿಟ್ಟಿದ್ದ ಕೆಲವರಿಗೆ ಟಿಕೆಟ್ ಮಿಸ್ ಆಗಿರುವುದು ಅಸಮಾಧಾನಕ್ಕೆ ಕಾರಣವಾಗಿದೆ. ಇನ್ನು ಮೂರನೇ ಬಾರಿ ಸ್ಪರ್ಧಿಸಿ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದ ಕೊಪ್ಪಳದ ಹಾಲಿ ಸಂಸದ ಕರಡಿ ಸಂಗಣ್ಣ(Karadi Sanganna)ಗೆ ಬಿಜೆಪಿ ಹೈಕಮಾಂಡ್ ಶಾಕ್ ನೀಡಿದ್ದು, ಮೂರನೇ ಬಾರಿಗೆ ಟಿಕೆಟ್ ನಿರಾಕರಿಸಿದೆ. ಇದು ಕರಡಿ ಸಂಗಣ್ಣ ಮತ್ತು ಅವರ ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿದ್ದು, ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿ ಯಾಗಿ ಸ್ಪರ್ಧಿಸುವಂತೆ ಬೆಂಬಲಿಗರ ಆಗ್ರಹಿಸಿದ್ದಾರೆ.

ಲೋಕಸಭಾ ಟಿಕೆಟ್​ ಮಿಸ್; ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾದ್ರಾ ಕರಡಿ ಸಂಗಣ್ಣ?
ಕರಡಿ ಸಂಗಣ್ಣ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Mar 20, 2024 | 3:32 PM

ಕೊಪ್ಪಳ, ಮಾ.20:ಬಿಜೆಪಿಯಲ್ಲಿ ಟಿಕೆಟ್ ಬೇಗುದಿ ಹೆಚ್ಚಾಗಿದೆ. ಲೋಕಸಭೆ ಚುನಾವಣೆ(Lok Sabha Election) ಟಿಕೆಟ್ ಮೇಲೆ ಕಣ್ಣಿಟ್ಟಿದ್ದ ಕೆಲವರಿಗೆ ಟಿಕೆಟ್ ಮಿಸ್ ಆಗಿರುವುದು ಅಸಮಾಧಾನಕ್ಕೆ ಕಾರಣವಾಗಿದೆ. ಇನ್ನು ಮೂರನೇ ಬಾರಿ ಸ್ಪರ್ಧಿಸಿ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದ ಕೊಪ್ಪಳದ ಹಾಲಿ ಸಂಸದ ಕರಡಿ ಸಂಗಣ್ಣ(Karadi Sanganna)ಗೆ ಬಿಜೆಪಿ ಹೈಕಮಾಂಡ್ ಶಾಕ್ ನೀಡಿದ್ದು, ಮೂರನೇ ಬಾರಿಗೆ ಟಿಕೆಟ್ ನಿರಾಕರಿಸಿದೆ. ಇದು ಕರಡಿ ಸಂಗಣ್ಣ ಮತ್ತು ಅವರ ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿದ್ದು, ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿ ಯಾಗಿ ಸ್ಪರ್ಧಿಸುವಂತೆ ಬೆಂಬಲಿಗರ ಆಗ್ರಹಿಸಿದ್ದಾರೆ. ಈ ಹಿನ್ನಲೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಚಿಂತನೆ ನಡೆಸಿರುವ ಅವರು, ನಾಳೆ(ಮಾ.21) ಬೆಂಬಲಿಗರ ಸಭೆ ಕರೆದಿದ್ದು, ತೀರ್ವ ಕುತೂಹಲಕ್ಕೆ ಕಾರಣವಾಗಿದೆ.

ಬಿಜೆಪಿ ಹೈಕಮಾಂಡ್ ವಿರುದ್ದ ಸಂಸದ ಕರಡಿ ಸಂಗಣ್ಣ ಮತ್ತು ಬೆಂಬಲಿಗರ ಅಸಮಾಧಾನ

ಕಳೆದ ಎರಡು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಪಡೆದು ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿದ್ದ ಕರಡಿ ಸಂಗಣ್ಣ, ಈ ಬಾರಿ ಕೂಡ ತನಗೆ ಸುಲಭವಾಗಿ ಟಿಕೆಟ್ ಸಿಗುತ್ತದೆ ಎನ್ನುವ ವಿಶ್ವಾಸದಲ್ಲಿದ್ದರು. ಆದ್ರೆ, ಬಿಜೆಪಿ ಹೈಕಮಾಂಡ್, ಕರಡಿ ಸಂಗಣ್ಣಗೆ ಕೈಕೊಟ್ಟಿದ್ದು, ವೈದ್ಯರಾಗಿರುವ ಡಾ. ಬಸವರಾಜ್ ಎನ್ನುವವರಿಗೆ ಈ ಬಾರಿಯ ಟಿಕೆಟ್ ಘೋಷಣೆ ಮಾಡಿದೆ. ಇದು ಕರಡಿ ಸಂಗಣ್ಣ ಮತ್ತು ಅವರ ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿದೆ. ಯಾವ ಕಾರಣಕ್ಕೆ ಟಿಕೆಟ್ ನೀಡಿಲ್ಲ, ತಪ್ಪಿಸಿದವರು ಯಾರು, ಟಿಕೆಟ್ಗೆ ಯಾವ ಮಾನದಂಡ ಅನುಸರಿಸಲಾಗಿದೆ. ಯಾಕೆ ನನ್ನ ಜೊತೆ ಹೈಕಮಾಂಡ್ ನಾಯಕರು ಮಾತನಾಡಲಿಲ್ಲ ಎಂದು ಪ್ರಶ್ನೆ ಮಾಡಿದ್ದ ಕರಡಿ ಸಂಗಣ್ಣ, ತನ್ನ ಪ್ರಶ್ನೆಗೆ ಹೈಕಮಾಂಡ್ ನಾಯಕರು ಉತ್ತರಿಸಬೇಕು ಎಂದು ಹೇಳಿದ್ದರು. ಇನ್ನು ಕರಡಿ ಸಂಗಣ್ಣ ಕಾಂಗ್ರೆಸ್​ಗೆ ಹೋಗ್ತಾರೆ, ಪಕ್ಷೇತರರಾಗಿ ಸ್ಪರ್ಧಿಸುತ್ತಾರೆ ಎನ್ನುವ ಹತ್ತಾರು ಉಹಾಪೋಹಗಳು ಕ್ಷೇತ್ರದಲ್ಲಿ ಹಬ್ಬಿವೆ. ಹೀಗಾಗಿ ಕರಡಿ ಸಂಗಣ್ಣ ನಾಳೆ ಬೆಂಬಲಿಗರ ಸಭೆ ಕರೆದಿದ್ದಾರೆ.

ಇದನ್ನೂ ಓದಿ:ಲೋಕಸಭಾ ಟಿಕೆಟ್​ ಮಿಸ್​ ಆದ್ರೂ ಮೋದಿಯನ್ನ ಹಾಡಿ ಹೊಗಳಿದ ಸಂಸದ ಕರಡಿ ಸಂಗಣ್ಣ

ಇನ್ನು ಜಿಲ್ಲಾ ಬಿಜೆಪಿ ನಾಯಕರು, ಕರಡಿ ಸಂಗಣ್ಣ ಮನೆಯತ್ತ ಧಾವಿಸಿ ಬಂದಿದ್ದು, ವಿಧಾನಸಭೆಯಲ್ಲಿ ಬಿಜೆಪಿ ಮುಖ್ಯ ಸಚೇತಕರಾಗಿರುವ ಜಿಲ್ಲೆಯ ಶಾಸಕ ದೊಡ್ಡನಗೌಡ ಪಾಟೀಲ್, ಜಿಲ್ಲಾ ಬಿಜೆಪಿ ಅಧ್ಯಕ್ಷ ನವೀಳ್ ಗುಳಗಣ್ಣವರ, ಮಾಜಿ ಶಾಸಕ ಪರಣ್ಣ ಮುನವಳ್ಳಿ, ಕರಡಿ ಸಂಗಣ್ಣ ಮನೆಗೆ ಭೇಟಿ ನೀಡಿ, ಸಂಗಣ್ಣ ಜೊತೆ ಮಾತುಕತೆ ನಡೆಸಿದರು. ಯಾವುದೇ ಕಾರಣಕ್ಕೂ ಕೂಡ ಪಕ್ಷ ಬಿಡುವ ನಿರ್ಧಾರ ಮಾಡಬೇಡಿ. ಸುದ್ದಿಗೋಷ್ಟಿ ಮಾಡಬೇಡಿ, ಪಕ್ಷದಲ್ಲಿಯೇ ಇರಿ, ಪಕ್ಷ ನಿಮ್ಮ ಸೇವೆಯನ್ನು ಗುರುತಿಸುತ್ತದೆ ಎಂದು ಹೇಳಿದ್ದು, ಜೊತೆಗೆ ಯಡಿಯೂರಪ್ಪ ಮತ್ತು ವಿಜಯೇಂದ್ರ ಜೊತೆ ಕೂಡ ಮಾತನಾಡಿಸಿದ್ದಾರೆ. ಆದ್ರೆ, ಬಿಜೆಪಿ ನಾಯಕರ ಮಾತಿಗೆ ಸೊಪ್ಪು ಹಾಕದ ಕರಡಿ ಸಂಗಣ್ಣ ಅವರು ನಿನ್ನೆ ಮುಂಜಾನೆ ತಮ್ಮ ಮನೆಯಲ್ಲಿ ಸುದ್ದಿಗೋಷ್ಟಿ ನಡೆಸಿ, ‘ನನಗೆ ಟಿಕೆಟ್ ಕೊಡದೇ ಇರೋದು ಮನಸಿಗೆ ನೋವು ತಂದಿಲ್ಲ. ಆದ್ರೆ, ನಾಯಕರು ನಡೆದುಕೊಂಡಿರುವ ರೀತಿ ನನಗೆ ನೋವು ತಂದಿದೆ. ಸೌಜನ್ಯಕ್ಕಾದರೂ ಕೂಡ ಟಿಕೆಟ್ ನೀಡುವ ಮುನ್ನ, ನನ್ನ ಜೊತೆ ಚರ್ಚೆ ಮಾಡಬೇಕಿತ್ತು. ಆದ್ರೆ, ಏನನ್ನು ಹೇಳದೆ, ನನಗೆ ಟಿಕೆಟ್ ನೀಡದೇ ಇರೋದು ನನ್ನ ಮನಸಿಗೆ ನೋವು ತಂದಿದೆ ಎಂದು ಹೇಳಿದ್ದರು.

ಗುರುವಾರ ಬೆಂಬಲಿಗರ ಸಭೆ ಕರೆದ ಕರಡಿ ಸಂಗಣ್ಣ

ಇನ್ನು ಗುರುವಾರ, ಕೊಪ್ಪಳ ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಕರಡಿ ಸಂಗಣ್ಣ ಬೆಂಬಲಿಗರ ಸಭೆ ಕರೆದಿದ್ದಾರೆ.  ಕೊಪ್ಪಳ ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭೆಯಿಂದ ಬೆಂಬಲಿಗರು, ಹಿತೈಷಿಗಳು, ಕಾರ್ಯಕರ್ತರು ಆಗಮಿಸಲಿದ್ದಾರೆ. ಅಂದು ಅವರ ಜೊತೆ ಚರ್ಚಿಸುತ್ತೇನೆ. ಪಕ್ಷದಲ್ಲಿ ಇರಬೇಕಾ?, ಬೇರೆ ಪಕ್ಷಕ್ಕೆ ಹೋಗಬೇಕಾ, ಸ್ಪರ್ಧಿಸಬೇಕಾ, ಬೇಡ್ವಾ ಎನ್ನುವುದರ ಬಗ್ಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಕರಡಿ ಸಂಗಣ್ಣ ಹೇಳಿದ್ದಾರೆ. ಇನ್ನು ಕಾಂಗ್ರೆಸ್​ನಿಂದ ಅನೇಕರು ಸೌಜನ್ಯದ ಕರೆ ಮಾಡಿದ್ದಾರೆ. ಆದ್ರೆ, ಟಿಕೆಟ್ ನೀಡೋ ಬಗ್ಗೆ, ಕಾಂಗ್ರೆಸ್ ಸೇರೋ ಬಗ್ಗೆ ಯಾರು ಚರ್ಚಿಸಿಲ್ಲ ಎಂದರು.

ಕರಡಿ ಸಂಗಣ್ಣ, ಈ ಹಿಂದೆ ಕೂಡ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಕುಟುಂಬಕ್ಕೆ ಟಿಕೆಟ್ ನೀಡದೇ ಇದ್ದಾಗ, ಇದೇ ರೀತಿ ಬಿಜೆಪಿ ನಾಯಕರ ಮೇಲೆ ಒತ್ತಡ ತಂತ್ರ ಹೇರಿ, ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಈ ಬಾರಿ ಕೂಡ ಇದೇ ರೀತಿಯ ತಂತ್ರವನ್ನು ಅನುಸರಿಸುತ್ತಿದ್ದಾರೆ. ಆದ್ರೆ, ಇದು ಎಷ್ಟರ ಮಟ್ಟಿಗೆ ವರ್ಕ್ ಔಟ್ ಆಗುತ್ತದೆ ಎನ್ನುವುದನ್ನ ಕಾಲವೇ ಉತ್ತರಿಸಲಿದೆ. ಇನ್ನು ಗುರುವಾರ ಕರಡಿ ಸಂಗಣ್ಣ ಸಭೆ ಕರೆದಿದ್ದು, ಸಬೆಯಲ್ಲಿ ಯಾವ ಅಭಿಪ್ರಾಯ ವ್ಯಕ್ತವಾಗಲಿದೆ, ಕರಡಿ ಸಂಗಣ್ಣ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎನ್ನುವ ಕುತೂಹಲ ಕೂಡಾ ಹೆಚ್ಚಾಗಿದೆ.

ರಾಜ್ಯದ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ