AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lokayukta Raid: ಕರ್ನಾಟಕದ ಹಲವೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ, ಅಧಿಕಾರಿಗಳು ಶಾಕ್

ಕರ್ನಾಟಕದಲ್ಲಿ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ರಾಜ್ಯದ ಹಲವೆಡೆ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಿದ್ದೆಗಣ್ಣಲ್ಲಿದ್ದ ಸರ್ಕಾರಿ ಅಧಿಕಾರಿಗಳು ಲೋಕಾಯುಕ್ತರನ್ನು ಕಂಡು ಶಾಕ್ ಆಗಿದ್ದಾರೆ. ಚಿತ್ರದುರ್ಗ, ಹಾಸನ, ಕಲಬುರಗಿ, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ದಾಳಿಯಾಗಿದ್ದು, ಇದರ ಸಂಪೂರ್ಣ ವಿವರ ಈ ಕೆಳಗಿನಂತಿದೆ.

Lokayukta Raid: ಕರ್ನಾಟಕದ ಹಲವೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ, ಅಧಿಕಾರಿಗಳು ಶಾಕ್
ಲೋಕಾಯುಕ್ತ
Digi Tech Desk
| Updated By: ರಮೇಶ್ ಬಿ. ಜವಳಗೇರಾ|

Updated on:Oct 30, 2023 | 8:00 AM

Share

ಬೆಂಗಳೂರು, (ಅಕ್ಟೋಬರ್ 30): ಕರ್ನಾಟಕದ ಹಲವೆಡೆ ಇಂದು(ಸೋಮವಾರ) ಬೆಳ್ಳಬೆಳಗ್ಗೆ ಲೋಕಾಯುಕ್ತ ದಾಳಿಯಾಗಿದೆ(Lokayukta raids). ರಾಜ್ಯದ ಬರೋಬ್ಬರಿ 90 ಕಡೆ ವಿವಿಧ ಇಲಾಖೆಗಳ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.  ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಮೇಲೆ ವಿವಿಧ ಇಲಾಖೆಗಳ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಾಕಾಲಕ್ಕೆ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

ಚಿತ್ರದುರ್ಗದಲ್ಲಿ ದಾಳಿ

ಚಿತ್ರದುರ್ಗದಲ್ಲಿ(Chitradurga) ಇಂದು(ಅ.30) ಬೆಳ್ಳಬೆಳಗ್ಗೆ ಲೋಕಾಯುಕ್ತ ದಾಳಿಯಾಗಿದೆ. ಇಬ್ಬರು ಅಧಿಕಾರಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೋಕಾಯುಕ್ತ ಎಸ್ಪಿ ವಾಸುದೇವರಾಮ್ ನೇತೃತ್ವದಲ್ಲಿ ಚಿತ್ರದುರ್ಗದ ಹಿರಿಯೂರಿನಲ್ಲಿ ಅರಣ್ಯ ಇಲಾಖೆ ಎಸಿಎಫ್ ನಾಗೇಂದ್ರ ನಾಯ್ಕ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಸಿಸ್ಟೆಂಟ್ ಡೈರೆಕ್ಟರ್ ಕೃಷ್ಣಮೂರ್ತಿ ಮನೆ ಮೇಲೆ ದಾಳಿಯಾಗಿದ್ದು, ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

ಅರಣ್ಯ ಇಲಾಖೆ ಎಸಿಎಫ್ ನಾಗೇಂದ್ರ ನಾಯ್ಕ್ ಅವರ ಹಿರಿಯೂರು ಪಟ್ಟಣದ ಚಂದ್ರಾ ಲೇಔಟ್ ನಲ್ಲಿರುವ ಮನೆ ಮತ್ತು ತವಂದಿ ಗ್ರಾಮದ ಬಳಿಯ ಫಾರ್ಮ್ ಹೌಸ್​ನಲ್ಲಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಸಮಾಜ ಕಲ್ಯಾಣ ಇಲಾಖೆಯ ಅಸಿಸ್ಟೆಂಟ್ ಡೈರೆಕ್ಟರ್ ಕೃಷ್ಣಮೂರ್ತಿ ಅವರ ಹಿರಿಯೂರು ಪಟ್ಟಣದ ಕುವೆಂಪು ನಗರದ ಮನೆಯಲ್ಲೂ ಸಹ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆ ಪತ್ರಗಳನ್ನು ಪರಿಶೀಲಿಸುತ್ತಿದ್ದಾರೆ.

ಹಾಸನದಲ್ಲೂ ಲೋಕಾಯುಕ್ತ ಅಧಿಕಾರಿಗಳ ದಾಳಿ

ಹಾಸನದಲ್ಲಿ KPTCL ಜೂನಿಯರ್ ಇಂಜಿನಿಯರ್ H.E.ನಾರಾಯಣ ಎನ್ನುವರ ಮನೆ, ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೋಕಾಯುಕ್ತ ಎಸ್‌ಪಿ ಮಲ್ಲಿಕ್, ಡಿವೈಎಸ್‌ಪಿ ತಿರುಮಲೇಶ್, ಪೊಲೀಸ್ ಇನ್ಸ್‌ಪೆಕ್ಟರ್‌ಗಳಾ ಬಾಲು, ಶಿಲ್ಪಾ ನೇತೃತ್ವದಲ್ಲಿ ಹಾಸನ ಹೊರವಲಯದ ಬೊಮ್ಮನಾಯಕನಹಳ್ಳಿರುವ ನಾರಾಯಣ ನಿವಾಸ ಹಾಗೂ ಗೊರೂರಿನಲ್ಲಿರುವ ಕಚೇರಿ ಮೇಲೆ ದಾಳಿಯಾಗಿದ್ದು, ದಾಖಲೆ ಪರಿಶೀನಲೆ ನಡೆಸಿದ್ದಾರೆ.

ಹಾವೇರಿಯಲ್ಲಿ ರೇಡ್

ಹಾವೇರಿಯ ಅರಣ್ಯ ಇಲಾಖೆಯ ಇಬ್ಬರು ಅಧಿಕಾರಿಗಳ ಮನೆ, ಕಚೇರಿ ಮೇಲೆ ದಾಳಿಯಾಗಿದೆ. ಹಾವೇರಿ RFO ಪರಮೇಶಪ್ಪ ಪೇರಲನವರ್ ಹಾಗೂ ನ್ಯಾಮತಿ RFO ಮಾಲತೇಶ್​ ಮನೆ, ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ದಾವಣಗೆರೆ ಲೋಕಾಯುಕ್ತ ಎಸ್ಪಿ ನೇತೃತ್ವದಲ್ಲಿ ಏಕಕಾಲಕ್ಕೆ 9 ಕಡೆಗಳಲ್ಲಿ ದಾಳಿ ಮಾಡಿದ್ದಾರೆ. ಶಿವಾಜಿನಗರ, ದಾನೇಶ್ವರಿ ಪಾರ್ಕ್, ದಾನಮ್ಮ ದೇವಿ ದೇವಸ್ಥಾನ ಬಳಿ ಇರುವ ಮನೆಗಳಲ್ಲಿ ಶೋಧ ನಡೆಸಿದ್ದಾರೆ.

ಕಲಬುರಗಿಯಲ್ಲಿ ಎರಡು ಕಡೆ ಲೋಕಾಯುಕ್ತ ದಾಳಿ‌

ಕಲಬುರಗಿಯಲ್ಲಿ ಎರಡು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.‌ ಬೀದರ ವಲಯ ಅರಣ್ಯಾಧಿಕಾರಿ ಬಸವರಾಜ್ ಡಾಂಗೆ ಮತ್ತು ದೇವದುರ್ಗದ KBJNL ಇಇ ತಿಪ್ಪಣ್ಣ ಅನ್ನದಾನಿ ಮನೆಗಳ ಮೇಲೆ ದಾಳಿಯಾಗಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದನೆಯ ಆರೋಪ ಹಿನ್ನಲೆ ಲೋಕಾಯುಕ್ತ ಎಸ್ಪಿ ಎಸ್.ಎಸ್.ಕರ್ನೂಲ್ ನೇತೃತ್ವದಲ್ಲಿ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲಿಸಿದ್ದಾರೆ.

ಬೆಂಗಳೂರಿನಲ್ಲೂ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್​​

ಬೆಂಗಳೂರಿನಲ್ಲೂ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್ ಕೊಟ್ಟಿದ್ದಾರೆ. ಕೆ.ಆರ್.​ಪುರಂ ಎಆರ್​ಒಗೆ ಸೇರಿದ ಮೂರು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಮಾಹಿತಿ ಹಿನ್ನೆಲೆ ದಾಳಿ ನಡೆದಿದೆ ಎಂದು ತಿಳಿದುಬಂದಿದೆ,

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:24 am, Mon, 30 October 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ