ತಿಪ್ಪೇಸ್ವಾಮಿ ಅಲ್ಲ, ಬಂಗಾರ ಸ್ವಾಮಿ! ಲೋಕಾಯುಕ್ತ ದಾಳಿ ವೇಳೆ ಮನೆಯಲ್ಲಿ ಸಿಕ್ತು ಕೆಜಿಗಟ್ಟಲೆ ಚಿನ್ನ, ಬೆಳ್ಳಿ

Karnataka Lokayukta Raid: ಬೆಳ್ಳಂಬೆಳಗ್ಗೆಯೇ ಭ್ರಷ್ಟರ ಬೇಟೆಗಿಳಿದಿದ್ದ ಲೋಕಾಯುಕ್ತ ಅಧಿಕಾರಿಗಳಿಗೆ ದೊಡ್ಡ ತಿಮಿಂಗಿಲಗಳೇ ಬಲೆಗೆ ಬಿದ್ದಿವೆ. ಬೆಂಗಳೂರಿನಲ್ಲಿ ಟೌನ್​​ ಮತ್ತು ಕಂಟ್ರಿ ಪ್ಲಾನಿಂಗ್ ನಿರ್ದೇಶಕ ತಿಪ್ಪೇಸ್ವಾಮಿ ಮನೆ ಮೇಲೆ ದಾಳಿ ನಡೆಸಿದ ಲೋಕಾಯುಕ್ತಕ್ಕೆ, ಕೆಜಿಗಟ್ಟಲೇ ಚಿನ್ನ-ಬೆಳ್ಳಿ, ಲಕ್ಷಾಂತರ ರೂಪಾಯಿ ಮೌಲ್ಯದ ನಗದು ದೊರೆತಿದೆ. ವಿವರಗಳು ಇಲ್ಲಿವೆ.

ತಿಪ್ಪೇಸ್ವಾಮಿ ಅಲ್ಲ, ಬಂಗಾರ ಸ್ವಾಮಿ! ಲೋಕಾಯುಕ್ತ ದಾಳಿ ವೇಳೆ ಮನೆಯಲ್ಲಿ ಸಿಕ್ತು ಕೆಜಿಗಟ್ಟಲೆ ಚಿನ್ನ, ಬೆಳ್ಳಿ
ತಿಪ್ಪೇಸ್ವಾಮಿ ಮನೆಯಲ್ಲಿ ದೊರೆತ ಆಭರಣ, ಹಣ (ಒಳಚಿತ್ರದಲ್ಲಿ ತಿಪ್ಪೇಸ್ವಾಮಿ)
Follow us
ರಾಚಪ್ಪಾಜಿ ನಾಯ್ಕ್
| Updated By: Ganapathi Sharma

Updated on: Nov 21, 2024 | 2:10 PM

ಬೆಂಗಳೂರು, ನವೆಂಬರ್ 21: ಭ್ರಷ್ಟ ಅಧಿಕಾರಿಗಳಿಗೆ ಗುರುವಾರ ಬೆಳಗ್ಗೆಯೇ ದೊಡ್ಡ​ ಶಾಕ್ ನೀಡಿದ ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರು, ಮಂಗಳೂರು ಸೇರಿದಂತೆ 4 ಕಡೆಗಳ 25 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ಇದರಿಂದಾಗಿ ಮುಂಜಾನೆಯ ಗಡದ್ದು ನಿದ್ದೆಯಲ್ಲಿದ್ದ ಭ್ರಷ್ಟ ಅಧಿಕಾರಿಗಳು ಬೆಚ್ಚಿಬಿದ್ದಿದ್ದಾರೆ. ಅಕ್ರಮ ಆಸ್ತಿ ಸಂಪಾದಿಸಿವರಿಗೆ ಲೋಕಾಯುಕ್ತ ಬಿಸಿ ಮುಟ್ಟಿದೆ. ದಾಳಿ ವೇಳೆ, ಅಪಾರ ಪ್ರಮಾಣದ ಚಿನ್ನಾಭರಣ ಕಂಡು ಲೋಕಾಯುಕ್ತ ಅಧಿಕಾರಿಗಳೇ ಬೆಚ್ಚಿಬೀಳುವಂತಾಗಿದೆ.

ಬೆಂಗಳೂರಿನಲ್ಲಿ ಟೌನ್​ ಪ್ಲಾನಿಂಗ್ ನಿರ್ದೇಶಕ ತಿಪ್ಪೇಸ್ವಾಮಿ ಮನೆ ಮೇಲೆ ರೇಡ್ ವೇಳೆ ಕಂಡುಬಂದ ಅಪಾರ ಮೌಲ್ಯದ ಆಸ್ತಿ ದಾಖಲೆಗಳು, ಚಿನ್ನಾಭರಣ ನೋಡಿ ಅಧಿಕಾರಿಗಳೇ ಶಾಕ್​ ಆಗಿದ್ದಾರೆ. ಬನಶಂಕರಿಯ 3ನೇ ಹಂತದ ವಿಶ್ವೇಶ್ವರಯ್ಯ ರಸ್ತೆಯಲ್ಲಿರುವ ನಿವಾಸದಲ್ಲಿ ಶೋಧ ನಡೆಸಿದ ಅಧಿಕಾರಿಗಳಿಗೆ, ಬೆಚ್ಚಿಬೀಳುವಷ್ಟು ಸಂಪತ್ತು ದೊರೆತಿದೆ.

ತಿಪ್ಪೇಸ್ವಾಮಿ ಮನೆಯಲ್ಲಿ ವಜ್ರ, ಚಿನ್ನದ ರತ್ನ ಭಂಡಾರ ಪತ್ತೆ

Lokayukta found KGs of gold, silver and lakhs of rupees cash in Bengaluru Town Planning Director Tippeswamy residence

ದಾಳಿ ವೇಳೆ ತಿಪ್ಪೇಸ್ವಾಮಿ ಮನೆಯಲ್ಲಿ ಅಪಾರ ಮೌಲ್ಯದ ಚಿನ್ನಾಭರಣ ಕಂಡು ಲೋಕಾಯುಕ್ತ ಅಧಿಕಾರಿಗಳೇ ಬೆಚ್ಚಿಬಿದ್ದಿದ್ದಾರೆ. 28 ಕ್ಕೂ ಹೆಚ್ಚು ಜೊತೆ ಓಲೆ, 23 ಕ್ಕೂ ಹೆಚ್ಚು ಚಿನ್ನದ ಸರ, ಮುತ್ತಿನ ಹಾರ ಪತ್ತೆಯಾಗಿದೆ. ಇದಿಷ್ಟೇ ಅಲ್ಲ, ಕೋಟಿ ರೂಪಾಯಿ ಮೌಲ್ಯದ ಚಿನ್ನದ ನೆಕ್ಲೆಸ್​, ಚಿನ್ನದ ಉಂಗುರವೂ ಪತ್ತೆಯಾಗಿದೆ.

ಕಂತೆ ಕಂತೆ ನೋಟು, ದುಬಾರಿ ವಾಚು, ಕೆಜಿಗಟ್ಟಲೆ ಬೆಳ್ಳಿ

ಕೇವಲ ಬಂಗಾರ ಮಾತ್ರ ಅಲ್ಲದೆ, 500, 200 ರೂ. ಮುಖ ಬೆಲೆಯ 8 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ. 8 ಕ್ಕೂ ಹೆಚ್ಚು ದುಬಾರಿ ಬೆಲೆಯ ಬ್ರಾಂಡೆಡ್​ ವಾಚ್​ಗಳು ಸಿಕ್ಕಿವೆ. ಇನ್ನು ಕೆಜಿಗಟ್ಟಲೆಯ ಬೆಳ್ಳಿ ಸಾಮಾಗ್ರಿಗಳು ಕೂಡ ಪತ್ತೆಯಾಗಿದೆ.

ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಅಬಕಾರಿ ಇಲಾಖೆ ಎಸ್​ಪಿ ಮನೆ ಮೇಲೂ ಲೋಕಾಯುಕ್ತ ದಾಳಿ ಮಾಡಿದೆ. ಬೆಳಗ್ಗೆ 6 ಗಂಟೆಯ ವೇಳೆ ಅಬಕಾರಿ ಇಲಾಖೆ ಎಸ್​ಪಿ ಮೋಹನ್ ಮನೆ ಮೇಲೆ ರೇಡ್ ಮಾಡಲಾಗಿದೆ. ಮಹತ್ವದ ದಾಖಲೆಗಳನ್ನ ಪರಿಶೀಲನೆ ಮಾಡಲಾಯಿತು.

ಮಂಗಳೂರಿನಲ್ಲಿ ಗಣಿ ಇಲಾಖೆ ಅಧಿಕಾರಿ ಮನೆ ಮೇಲೆ ರೇಡ್

ಲೋಕಾಯುಕ್ತ ಅಧಿಕಾರಿಗಳು ಮಂಗಳೂರಿನಲ್ಲಿ ಗಣಿ ಅಧಿಕಾರಿ ಕಚೇರಿ, ಮನೆ ಮೇಲೂ ದಾಳಿ ಮಾಡಿದ್ದಾರೆ. ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿ ಕೃಷ್ಣವೇಣಿ ನಿವಾಸದಲ್ಲಿ ಪರಿಶೀಲನೆ ನಡೆಸಿದ್ದಾರೆ. ಮಂಗಳೂರಿನ ವೆಲೆನ್ಸಿಯಾದ ಮನೆ, ಕಚೇರಿಯಲ್ಲಿ ದಾಖಲೆಗಳನ್ನ ಪರಿಶೀಲನೆ ಮಾಡಿದ್ದಾರೆ. ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಗಣಿ ಇಲಾಖೆ ಅಧಿಕಾರಿಯಾಗಿದ್ದ ಕೃಷ್ಣವೇಣಿ, 2 ತಿಂಗಳ ಹಿಂದಷ್ಟೇ ಮಂಗಳೂರಿಗೆ ಬಂದಿದ್ದರು.

ಕೃಷ್ಣವೇಣಿಗೆ ಸಂಬಂಧಪಟ್ಟ ಮತ್ತಷ್ಟು ಕಡೆಗಳಲ್ಲಿ ದಾಳಿ ಮಾಡಲಾಗಿದೆ. ಚಿಕ್ಕಬಳ್ಳಾಪುರದಲ್ಲಿರುವ ಮನೆ, ಅಪಾರ್ಟ್​ಮೆಂಟ್​, ಕಚೇರಿ ಮೇಲೆ ರೇಡ್ ಮಾಡಲಾಗಿದೆ. ಇನ್ನು ಯಲಹಂಕದಲ್ಲಿರುವ ಅಪಾರ್ಟ್​ಮೆಂಟ್​ನಲ್ಲೂ ಪರಿಶೀಲನೆ ಮಾಡಲಾಯಿತು.

ಮಂಡ್ಯದಲ್ಲಿ ಕಾವೇರಿ ನಿಗಮದ ಎಂಡಿ ಮನೆ ಮೇಲೆ ದಾಳಿ

ಮಂಡ್ಯ ಜಿಲ್ಲೆಯಲ್ಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕಾವೇರಿ ನೀರಾವರಿ ನಿಗಮದ ಎಂಡಿ ಮಹೇಶ್​ ನಿವಾಸಗಳ ಮೇಲೆ ದಾಳಿ ಮಾಡಲಾಗಿದೆ. ಮಳವಳ್ಳಿಯಲ್ಲಿರೋ ನಿವಾಸದಲ್ಲಿ ದಾಖಲೆಗಳನ್ನ ಪರಿಶೀಲನೆ ಮಾಡಲಾಗಿದೆ. ಇನ್ನು ಎಂಡಿ‌ ಮಹೇಶ್, ಪತ್ನಿಗೆ ಸೇರಿದ ಪೆಟ್ರೋಲ್ ಬಂಕ್​ ಮೇಲೂ ರೇಡ್​ ಮಾಡಲಾಯಿತು. ಆದಾಯಕ್ಕೂ ಮೀರಿ ಆಸ್ತಿಗಳಿಕೆ ದೂರು ಹಿನ್ನೆಲೆ ಮಹತ್ವದ ದಾಖಲೆಗಾಗಿ ಹುಡುಕಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು, ಮಂಗಳೂರು, ಮಂಡ್ಯ ಸೇರಿ ಕರ್ನಾಟಕದ 7 ಕಡೆ ಲೋಕಾಯುಕ್ತ ದಾಳಿ

ಅಕ್ರಮ ಆಸ್ತಿ ಸಂಪಾದನೆ ಬಗ್ಗೆ ದೂರು ಬಂದ ಹಿನ್ನೆಲೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾ ಬಿಸಿ ಮುಟ್ಟಿಸಿದೆ. ದಾಳಿ ವೇಳೆ ಅಪಾರ ಮೌಲ್ಯದ ಚಿನ್ನಾಭರಣ, ಆಸ್ತಿ ದಾಖಲೆ ಪತ್ತೆಯಾಗಿದೆ. ಅದರಲ್ಲೂ ಟೌನ್​ ಪ್ಲಾನಿಂಗ್​​ ನಿರ್ದೇಶಕ ತಿಪ್ಪೇಸ್ವಾಮಿ ಮನೆಯಲ್ಲಿ ವಜ್ರ ವೈಡೂರ್ಯ ಕಂಡು ಅಧಿಕಾರಿಗಳೇ ಬೆಚ್ಚಿಬಿದ್ದಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ