AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಹಿತಿ ಸೋರಿಕೆ: ರಾಜಭವನ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಲು ಅನುಮತಿ ಕೋರಿ ಡಿಜಿ-ಐಜಿಪಿಗೆ ಲೋಕಾಯುಕ್ತ ಪತ್ರ

ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಪತ್ರ ಸಂಘರ್ಷ ತಾರಕಕ್ಕೇರಿದೆ. ಹೆಚ್​ಡಿ ಕುಮಾರಸ್ವಾಮಿ ಅವರ ವಿರುದ್ಧ ಲೋಕಾಯುಕ್ತರು ಕಾನೂನು ಕ್ರಮ ಮತ್ತು ತನಿಖೆಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಬರೆದಿದ್ದ ಮನವಿ ಪತ್ರ ಸೋರಿಕೆಯಾಗಿದ್ದು, ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಈ ವಿಚಾರವಾಗಿ ಮಹತ್ವದ ಬೆಳವಣಿಗೆ ನಡೆದಿದೆ.

ಮಾಹಿತಿ ಸೋರಿಕೆ: ರಾಜಭವನ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಲು ಅನುಮತಿ ಕೋರಿ ಡಿಜಿ-ಐಜಿಪಿಗೆ ಲೋಕಾಯುಕ್ತ ಪತ್ರ
ಲೋಕಾಯುಕ್ತ, ರಾಜಭವನ
ಪ್ರಸನ್ನ ಗಾಂವ್ಕರ್​
| Edited By: |

Updated on:Sep 27, 2024 | 11:45 AM

Share

ಬೆಂಗಳೂರು, ಸೆಪ್ಟೆಂಬರ್​ 27: ರಾಜ್ಯಪಾಲರು (Governor) ಹಾಗೂ ರಾಜ್ಯ ಸರ್ಕಾರ ನಡುವಿನ ಶೀತಲ ಸಮರ ತಾರಕಕ್ಕೇರಿದೆ. ರಾಜಭವನ ಸಚಿವಾಲಯದ (Raj Bhavan secretariat) ಅಧಿಕಾರಿಗಳ ವಿರುದ್ಧ ತನಿಖೆ ನಡೆಸಲು ಅನುಮತಿ ಕೋರಿ ಡಿಜಿ-ಐಜಿಪಿ ಮತ್ತು ಎಡಿಜಿಪಿಗೆ ಲೋಕಾಯುಕ್ತ (Lokayukta) ಎಸ್​ಐಟಿ ಐಜಿಪಿ ಚಂದ್ರಶೇಖರ್ ಪತ್ರ ಬರೆದಿದ್ದಾರೆ.

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ವಿರುದ್ಧ ಕೇಳಿಬಂದಿರುವ ಗಣಿ ನಿಯಮ ಉಲ್ಲಂಘನೆ ಆರೋಪದ ತನಿಖೆಗೆ ಅಥವಾ ಕಾನೂನು ಕ್ರಮ ತೆಗೆದುಕೊಳ್ಳಲು ಅನುಮತಿ ಕೋರಿ ಲೋಕಾಯುಕ್ತ 2023ರ ಸೆ.24ರಂದು ರಾಜ್ಯಪಾಲರಿಗೆ ಪ್ರಸ್ತಾವ ಸಲ್ಲಿಕೆ ಮಾಡಿತ್ತು. ನಿಯಮಗಳ ಪ್ರಕಾರ ನಾಲ್ಕು ತಿಂಗಳೊಳಗೆ ಕಡತ ವಿಲೇವಾರಿ ಮಾಡಬೇಕು. ಆದರೆ, ಎಂಟು ತಿಂಗಳಿನಿಂದ ಕಡತ ರಾಜ್ಯಪಾಲರ ಸಚಿವಾಲಯದಲ್ಲೇ ಬಾಕಿ ಉಳಿದಿದೆ. ಇದು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ 19ರ ಪ್ರಕಾರ ಸ್ಪಷ್ಟ ಉಲ್ಲಂಘನೆಯಾಗಿದೆ.

ಇದನ್ನೂ ಓದಿ: ಮುಡಾ ಹಗರಣ ತನಿಖೆಗೆ ಸಿಬಿಐ ಎಂಟ್ರಿ ತಡೆಯಲು ಸಿದ್ದರಾಮಯ್ಯ ಮಾಸ್ಟರ್ ಪ್ಲ್ಯಾನ್!

ಹೆಚ್.ಡಿ ಕುಮಾರಸ್ವಾಮಿ ಅವರ ವಿರುದ್ಧ ಕಾನೂನು ಕ್ರಮ ಅಥವಾ ತನಿಖೆಗೆ ಅನುಮತಿ ಕೋರಿ ಲೋಕಾಯುಕ್ತ ರಾಜ್ಯಪಾಲರಿಗೆ ಪತ್ರ ಬರೆದೆ ವಿಚಾರ ಆಗಸ್ಟ್ 7 ರಂದು ಮಾಧ್ಯಮಗಳಲ್ಲಿ ವರದಿ ಪ್ರಸಾರವಾಯ್ತು. ಸುದ್ದಿ ಪ್ರಸಾರವಾದ ಬಳಿಕ, ಅಗಸ್ಟ್​ 20 ರಂದು ರಾಜ್ಯಪಾಲರು, ಲೋಕಾಯುಕ್ತ ಪೊಲೀಸ್‌ ವಿಭಾಗಕ್ಕೆ ಪತ್ರ ಬರೆದು ಮಾಹಿತಿ ಹೇಗೆ ಸೋರಿಕೆ ಆಯ್ತು ಅಂತ ವರದಿ ಕೇಳಿದ್ದರು. ಈ ಬಗ್ಗೆ ಆಂತರಿಕ ತನಿಖೆ ನಡೆಸಿದ ಲೋಕಾಯುಕ್ತ, ಸಂಸ್ಥೆಯಲ್ಲಿ ಯಾವುದೇ ಮಾಹಿತಿ ಸೋರಿಕೆ ಆಗಿಲ್ಲ. ಮಾಹಿತಿ ಸೋರಿಕೆಯಲ್ಲಿ ಎಸ್‌ಐಟಿ ಪಾತ್ರ ಇಲ್ಲ ಎಂದು ವರದಿ ನೀಡಿತ್ತು.

ಇದೀಗ, ಕಡತದ ಮಾಹಿತಿ ಹೇಗೆ ಸೋರಿಕೆ ಆಗಿದೆ ಅಂತ ತನಿಖೆ ನಡೆಸುವ ಅಗತ್ಯವಿದೆ. ಹೀಗಾಗಿ, ರಾಜಭವನ ಸಚಿವಾಲಯದ ಅಧಿಕಾರಿಗಳ ವಿರುದ್ಧ ತ‌ನಿಖೆ ನಡೆಸಲು ಅನುಮತಿ ಕೋರಿ ಲೋಕಾಯುಕ್ತ ಸ್ಪೆಷಲ್ ಎಸ್​ಐಟಿ ಐಜಿಪಿ ಎಂ. ಚಂದ್ರಶೇಖರ್ ಅವರು ಸೆಪ್ಟೆಂಬರ್​ 4 ರಂದು ಡಿಜಿ-ಐಜಿಪಿ ಅಲೋಕ್ ಮೋಹನ್ ಮತ್ತು ಹೆಚ್ಚುವರಿ ಪೊಲೀಸ್​ ಮಹಾನಿರ್ದೇಶಕ ಮನೀಶ್​ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:23 am, Fri, 27 September 24

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್