AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ 55 ಕಡೆ ಲೋಕಾಯುಕ್ತ ದಾಳಿ, ಅಧಿಕಾರಿಗಳ ಮನೆಯಲ್ಲಿ ತಲಾಶ್​

ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ 12 ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಿದ್ದಾರೆ. ಬೆಂಗಳೂರು ನಗರದ ಆರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಇಬ್ಬರು, ಶಿವಮೊಗ್ಗ ಜಿಲ್ಲೆಯ ಇಬ್ಬರು, ಯಾದಗಿರಿ, ತುಮಕೂರಿನಲ್ಲಿ ತಲಾ ಓರ್ವ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಕರ್ನಾಟಕದ 55 ಕಡೆ ಲೋಕಾಯುಕ್ತ ದಾಳಿ, ಅಧಿಕಾರಿಗಳ ಮನೆಯಲ್ಲಿ ತಲಾಶ್​
ಲೋಕಾಯುಕ್ತ
ವಿವೇಕ ಬಿರಾದಾರ
|

Updated on:Jul 19, 2024 | 8:20 AM

Share

ಬೆಂಗಳೂರು, ಜುಲೈ 19: ಶುಕ್ರವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ (Lokayukta) ಕರ್ನಾಟಕಾದ್ಯಂತ ದಾಳಿ ಮಾಡಿದ್ದಾರೆ. 12 ಜನ ಅಧಿಕಾರಿಗಳಿಗೆ ಸೇರಿದ 55 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ, ತಪಾಸಣೆ ನಡೆಸಿದ್ದಾರೆ. ಬೆಂಗಳೂರು (Bengaluru) ನಗರದ ಆರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಇಬ್ಬರು, ಶಿವಮೊಗ್ಗ ಜಿಲ್ಲೆಯ ಇಬ್ಬರು, ಯಾದಗಿರಿ, ತುಮಕೂರಿನಲ್ಲಿ ತಲಾ ಓರ್ವ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಲೋಕಾಯುಕ್ತ ದಾಳಿ

  1. ತುಮಕೂರು- ಕೆಐಎಡಿಬಿ ಇಲಾಖೆ ಆಪರೇಟಿಂಗ್ ಆಫೀಸರ್
  2. ಯಾದಗಿರಿ- ಬಲವಂತ್ ಜಿಲ್ಲಾ ಪಂಚಾಯತ್​ ಯಾದಗಿರಿ ಪ್ರಾಜೆಕಟ್​
  3. ಬೆಂಗಳೂರು ಗ್ರಾ- ಆರ್ ಸಿದ್ದಪ್ಪ ಸೀನಿಯರ್​ ಪಶುವೈದ್ಯ- ದೊಡ್ಡಬೈಲವಂಗಲ ದೊಡ್ಡಬಳ್ಳಾಪುರ
  4. ಬೆಂಗಳೂರು ಗ್ರಾ- ಕೆ ನರಸಿಂಹ ಮೂರ್ತಿ ಪೌರಾಡಳಿತ ಆಯುಕ್ತ ಹೆಬ್ಬಗೋಡಿ
  5. ಬೆಂಗಳೂರು ನಗರ- ಬಿ ವಿ ರಾಜ FDA KDB LAND acquisition
  6. ಬೆಂಗಳೂರು ನಗರ- ರಮೇಶ್ ಕುಮಾರ್ ಜಾಯಿಂಟ್​ ಕಮಿಷನರ್ ಕಮಷಿಯಲ್ ಟ್ಯಾಕ್ಸ್​
  7. ಬೆಂಗಳೂರು ನಗರ- ಅಥ್ತಾರ್ ಅಲಿ- ಡೆಪ್ಯೂಟಿ ಕಂಟ್ರೋಲರ್​ ಲೀಗಲ್​ ಭೂ ವಿಜ್ಞಾನ
  8. ಶಿವಮೊಗ್ಗ- ನಾಗೇಶ್​ ಬಿ- ಅಧ್ಯಕ್ಷ ಅಂತರಗಂಗೆ ಗ್ರಾ.ಪಂ. ಭದ್ರವತಿ
  9. ಶಿವಮೊಗ್ಗ- ಪ್ರಕಾಶ್​​ ಡೆಪ್ಯೂಟಿ ಡೈರೆಕ್ಟರ್​ ಆರ್ಟಿಕಲ್ಚರ್​ ಶಿವಮೊಗ್ಗ
  10. ಬೆಂಗಳೂರು ನಗರ-ಚೇತನ್ ಕುಮಾರ್ ಕಾರ್ಮಿಕ ಇಲಾಖಾಧಿಕಾರಿ ಮಂಡ್ಯ ವಿಭಾಗ
  11. ಬೆಂಗಳೂರು ನಗರ – ಆನಂದ್ ಸಿಎಲ್​- ಆಯುಕ್ತ ಮಂಗಳೂರು ಮಹಾನಗರ ಪಾಲೀಕೆ
  12. ಬೆಂಗಳೂರ ನಗರ- ಮಂಜುನಾಥ್​ TR- ಫಸ್ಟ್​ ಡಿವಿಜನ್​ ಅಸಿಸ್ಟೆಂಟ್​ (FDA) ಬೆಂಗಳೂರು ಉತ್ತರ ವಿಭಾಗ, ಈ ಎಲ್ಲ ಅಧಿಕಾರಿಗಳಿಗೆ ಸಂಬಂಧಿಸಿದ 55 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಲೋಕಾಯುಕ್ತ ಅಧಿಕಾರಿಗಳು ತುಮಕೂರಿನ ಕೆಐಎಡಿಬಿ ಅಪರ ನಿರ್ದೇಶಕ ಸಿ.ಟಿ ಮುದ್ದುಕುಮಾರ್ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಸಿ.ಟಿ ಮುದ್ದುಕುಮಾರ್ ಅವರಿಗೆ ಸೇರಿದ ಒಟ್ಟು ಏಳು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಸಿ.ಟಿ ಮುದ್ದುಕುಮಾರ್ ಬೆಂಗಳೂರಿನ ನಾಗರಭಾವಿಯ ಎರಡನೇ ಹಂತದಲ್ಲಿ ವಾಸವಾಗಿದ್ದಾರೆ. ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಖನಿಜ ಭವನದಲ್ಲಿ ಕಚೇರಿ ಇದೆ.

ತುಮಕೂರು ನಗರದ ಬನಶಂಕರಿ ನಗರದಲ್ಲಿ, ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿರುವ ಸಿ.ಟಿ ಮುದ್ದುಕುಮಾರ್ ಅವರಿಗೆ ಸೇರಿದ ಮನೆ ಇದೆ. ಚಿಕ್ಕನಾಯಕನಹಳ್ಳಿ ತಾಲೂಕಿನ ಶೆಟ್ಟಿಕೆರೆ ಹೋಬಳಿ ರಂಗನಾಥಪುರದಲ್ಲಿ ಸಿ.ಟಿ ಮುದ್ದುಕುಮಾರ್ ಅವರಿಗೆ ಸೇರಿದ ಫಾರಂಹೌಸ್ ಇದೆ. ಅಲ್ಲದೆ ತುಮಕೂರಿನ ಅಂತರಸನಹಳ್ಳಿಯ ಇಂಡಸ್ಟ್ರಿಯಲ್ ಏರಿಯಾದಲ್ಲಿ ಪ್ಲಾಸ್ಟಿಕ್ ಬಾಟಲ್ ತಯಾರಿಕಾ ಘಟಕವಿದೆ. ಈ ಎಲ್ಲ ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:01 am, Fri, 19 July 24

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ