AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು, ರಾಯಚೂರು, ಬೆಳಗಾವಿ, ಬಾಗಲಕೋಟೆ ಸೇರಿ ಹಲವೆಡೆ ಲೋಕಾಯುಕ್ತ ದಾಳಿ

ಬೆಂಗಳೂರು, ರಾಯಚೂರು, ಬೆಳಗಾವಿ, ಬಾಗಲಕೋಟೆ ಸೇರಿದಂತೆ ಕರ್ನಾಟಕದ ಹಲವೆಡೆ ಶುಕ್ರವಾರ ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಳೆಗಳ ಪರಿಶೀಲನೆ ಆರಂಭಿಸಿದ್ದಾರೆ. ಇದರೊಂದಿಗೆ ಲೋಕಾಯುಕ್ತ ಅಧಿಕಾರಿಗಳಿಂದ ಭ್ರಷ್ಟರ ಬೇಟೆ ಮುಂದುವರಿದಿದೆ. ಎಲ್ಲೆಲ್ಲಿ, ಯಾರ್ಯಾರ ಮನೆಗಳು, ಕಚೇರಿಗಳ ಮೇಲೆ ದಾಳಿ ನಡೆಯಿತು ಎಂಬ ಮಾಹಿತಿ ಇಲ್ಲಿದೆ.

ಬೆಂಗಳೂರು, ರಾಯಚೂರು, ಬೆಳಗಾವಿ, ಬಾಗಲಕೋಟೆ ಸೇರಿ ಹಲವೆಡೆ ಲೋಕಾಯುಕ್ತ ದಾಳಿ
ಹಲವೆಡೆ ಲೋಕಾಯುಕ್ತ ದಾಳಿ
ಗಣಪತಿ ಶರ್ಮಾ
|

Updated on:Jan 31, 2025 | 7:53 AM

Share

ಬೆಂಗಳೂರು, ಜನವರಿ 31: ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ಬೆಳಗ್ಗೆಯೇ ಭ್ರಷ್ಟರ ಬೇಟೆ ಕಾರ್ಯಾಚರಣೆಗೆ ಇಳಿದಿದ್ದು ಬಾಗಲಕೋಟೆ, ರಾಯಚೂರು, ಬೆಳಗಾವಿ ಸೇರಿದಂತೆ ಹಲವೆಡೆ ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ ಇಬ್ಬರು ಅಧಿಕಾರಿಗಳು, ಬಾಗಲಕೋಟೆಯ ಗ್ರಾಮ ಪಂಚಾಯತ್ ಪಿಡಿಒ, ರಾಯಚೂರಿನಲ್ಲಿ ಜಿಲ್ಲಾ ಪಂಚಾಯತ್ ಲೆಕ್ಕಪತ್ರ ಅಧಿಕಾರಿ ಮನೆಗಳ ಮೇಲೆ ದಾಳಿ ನಡೆಸಲಾಗಿದೆ.

ಬೆಂಗಳೂರಿನಲ್ಲಿ ಕೂಡ ಬಿಬಿಎಂಪಿ ಎಇಇ ಮಾಧವ ರಾವ್ ಮನೆ ಮೇಲೆ ದಾಳಿ ನಡೆದಿದೆ. ಎಂಜಿನಿಯರಿಂಗ್ ವಿಭಾಗದ ಎಇಇ ಮಾಧವರಾವ್ ಮನೆಗೆ ತಲುಪಿರುವ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಬೆಳಗಾವಿಯಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾ ದಾಳಿ ನಡೆದಿದೆ. ಬೆಳಗಾವಿ ನಗರದ ಅನಗೋಳದಲ್ಲಿರುವ, ಬೆಳಗಾವಿ ಪ್ರಭಾರಿ ಸಬ್ ರಿಜಿಸ್ಟರ್ ಸಚಿನ್ ಮಂಡೇದ್ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಮನೆ, ಕಚೇರಿ ಸೇರಿ 3 ಕಡೆಗಳಲ್ಲಿ ದಾಳಿ ನಡೆಸಲಾಗಿದೆ.

ಹಾರೂಗೇರಿ ವೆಟರ್ನರಿ ಇನ್ಸ್​​ಪೆಕ್ಟರ್​​ ಸಂಜಯ್ ಮನೆ ಮೇಲೂ ದಾಳಿ ನಡೆದಿದೆ. ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದ ನಿವಾಸದ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು, ಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಬಾಗಲಕೋಟೆ: ಪಿಡಿಒ ಮನೆ ಮೇಲೆ ಲೋಕಾ ದಾಳಿ

ಗ್ರಾಮ ಪಂಚಾಯತ್ ಪಿಡಿಒ ಎಸ್.ಪಿ.ಹಿರೇಮಠ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಬಾಗಲಕೋಟೆಯ ವಿದ್ಯಾಗಿರಿಯ 22ನೇ ಕ್ರಾಸ್​ನಲ್ಲಿರುವ ಮನೆ‌ ಮೇಲೆ ಬಾಗಲಕೋಟೆ ಲೋಕಾಯುಕ್ತ ಡಿವೈಎಸ್​ಪಿ ಸಿದ್ದೇಶ್ ನೇತೃತ್ವದಲ್ಲಿ ದಾಳಿ ನಡೆದಿದೆ. ಲೋಕಾಯುಕ್ತರು ಏಕಕಾಲಕ್ಕೆ ಮೂರು ಕಡೆ ದಾಳಿ ನಡೆಸಿದ್ದಾರೆ. ಹಿರೇಮಠ ಅವರ ನರಗುಂದದ ನಿವಾಸದ ಮೇಲೂ ದಾಳಿ ನಡೆದಿದೆ.

ಭಾರೀ ನಗದು ಪತ್ತೆ? ಹಣ ಎಣಿಸುವ ಮಷಿನ್ ಸಹಿತ ಲೋಕಾ ಎಂಟ್ರಿ

ಹೂಲಗೇರಿ ಪಿಡಿಒ ಎಸ್​​.ಪಿ.ಹಿರೇಮಠ ಐಷಾರಾಮಿ‌ ಮನೆ ಹೊಂದಿದ್ದು, ಇವರ ಮನೆಯಲ್ಲಿ ಪತ್ತೆಯಾಗಿರುವ ನಗದು ನೋಟುಗಳನ್ನು ಎಣಿಸಲು ಲೋಕಾ ಅಧಿಕಾರಿಗಳು ಮನೆಯೊಳಗೆ ಹಣ ಎಣಿಸುವ ಮಷಿನ್ ತೆಗೆದುಕೊಂಡು ಹೋಗಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣ: ಇಡಿ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ

ಮತ್ತೊಂದೆಡೆ, ಜಿ.ಪಂ. ಲೆಕ್ಕಪತ್ರ ಸಹಾಯಕ ಅಧಿಕಾರಿ ನರಸಿಂಗ್ ರಾವ್ ಅವರ ರಾಯಚೂರು ನಗರದ ಜವಾರ್ ಕಾಲೋನಿಯಲ್ಲಿನ ಮನೆ ಮೇಲೆ ಲೋಕಾ ದಾಳಿ ನಡೆದಿದೆ. ಸದ್ಯ ಅಧಿಕಾರಿಗಳಿಂದ ದಾಖಲೆಗಳ ಪರಿಶೀಲನೆ ಮುಂದುವರಿದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:49 am, Fri, 31 January 25

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!