AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳ್ಳಂಬೆಳಿಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್​​​: ಚಿನ್ನಾಭರಣ, ಕಂತೆ ಕಂತೆ ನೋಟು ಪತ್ತೆ

ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಶಾಕ್​ ನೀಡಿದ್ದಾರೆ. ಬೆಂಗಳೂರು, ಬಳ್ಳಾರಿ, ರಾಮನಗರ ಸೇರಿದಂತೆ ರಾಜ್ಯದ 30 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಲೋಕಾಯುಕ್ತ ಅಧಿಕಾರಿಗಳ ದಾಳಿ ವೇಳೆ ಅಧಿಕಾರಿಗಳ ಮನೆಯಲ್ಲಿ ಕಂತೆ ಕಂತೆ ನೋಟು, ವಿದೇಶಿ ಕರೆನ್ಸಿ, ಚಿನ್ನ, ಬೆಳ್ಳಿ ಆಭರಣ, ವಾಚ್​ಗಳು, ಮೊಬೈಲ್​ ಪತ್ತೆಯಾಗಿವೆ.

ಬೆಳ್ಳಂಬೆಳಿಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್​​​: ಚಿನ್ನಾಭರಣ, ಕಂತೆ ಕಂತೆ ನೋಟು ಪತ್ತೆ
ಅಧಿಕಾರಿಗಳ ಮೆನೆಯಲ್ಲಿ ಪತ್ತೆಯಾದ ಚಿನ್ನ, ಹಣ
Jagadisha B
| Updated By: ವಿವೇಕ ಬಿರಾದಾರ|

Updated on: Jan 09, 2024 | 11:14 AM

Share

ಬೆಂಗಳೂರು, ಜನವರಿ 09: ಲೋಕಾಯುಕ್ತ (Lokayukta) ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಶಾಕ್​ ನೀಡಿದ್ದಾರೆ. ಬೆಂಗಳೂರು, ಬಳ್ಳಾರಿ, ರಾಮನಗರ ಸೇರಿದಂತೆ ರಾಜ್ಯದ 30 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಬೆಂಗಳೂರಿನ ನಾಲ್ಕು ಹಾಗೂ ರಾಮನಗರದ ಎರಡು ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಈ ದಾಳಿ ನಡೆಸಿದೆ. ಪಿಡಬ್ಯೂಡಿ (PWD), ಪಿಡಿಓ (PDO) , ಬೆಸ್ಕಾಂ (BESCOM), ಕೆಆರ್​ಐಡಿಎಲ್ (KRIDL)​ ಹಾಗೂ ಪಂಚಾಯತ್ ಸದಸ್ಯ ಮತ್ತು ಟೌನ್ ಪ್ಲ್ಯಾನಿಂಗ್ ಅಧಿಕಾರಿ​ಗೆ ಸೇರಿದ ಜಾಗಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಲೋಕೋಪಯೋಗಿ ಇಲಾಖೆ ಇಂಜಿನಿಯರ್​ ಆಗಿರುವ ಸತೀಶ್​ ಬಾಬು ಅವರ ಚಿತ್ರದುರ್ಗ ಮತ್ತು ಬೆಂಗಳೂರು ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕೋಲಾರ ಮೂಲದ ಇಂಜಿನಿಯರ್ ಸತೀಶ್ ಬಾಬು, ಈ ಹಿಂದೆ ಚಿತ್ರದುರ್ಗದಲ್ಲಿ ಕಾರ್ಯ ನಿರ್ವಹಿಸಿದ್ದರು. ಇದೀಗ ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಲೋಕಾಯುಕ್ತ ಅಧಿಕಾರಿಗಳ ದಾಳಿಯಲ್ಲಿ ಸತೀಶ್​ ಬಾಬು ಅವರ ಮನೆಯಲ್ಲಿ ಅಪಾರ ಪ್ರಮಾಣದ ಚಿನ್ನಾಭರಣ, ಕಂತೆ ಕಂತೆ ನೋಟುಗಳು ಪತ್ತೆಯಾಗಿವೆ.

ಅಕ್ರಮ ಆಸ್ತಿ ಗಳಿಕೆ‌‌ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ತಾಲೂಕಿನ‌ ಚೆನ್ನೇನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಸುರೇಶ್ ಮನೆ ಮೇಲೆ ಲೋಕಾಯುಕ್ತ ಡಿವೈಎಸ್​ಪಿ ಗೌತಮ್ ನೇತೃತ್ವದಲ್ಲಿ ದಾಳಿ ನಡೆದಿದೆ. ಅಧಿಕಾರಿಗಳು ಕಳೆದ 1 ಗಂಟೆಯಿಂದ ದಾಖಲೆ ಪರಿಶೀಲಿಸುತ್ತಿದ್ದಾರೆ.

ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಸಾಸಲುಪುರ ಗ್ರಾಮದಲ್ಲಿರುವ ಟೌನ್ ಅಂಡ್‌ ರೂರಲ್ ಪ್ಲ್ಯಾನಿಂಗ್ ಜಂಟಿ ನಿರ್ದೇಶಕ‌ ಮಂಜೇಶ್ ಅವರ ಮಂಜೇಶ್ ಫಾರ್ಮ್​ಹೌಸ್ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಮಂಜೇಶ್ ಆನೇಕಲ್​ನಲ್ಲಿ ಜಂಟಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸ್ತಿದ್ದಾರೆ. ಮಂಜೇಶ್ ಅವರಿ​ಗೆ ಸೇರಿದ ‌9 ಕಡೆ ರಾಮನಗರ ಲೋಕಾಯುಕ್ತ ಇನ್ಸ್​ಪೆಕ್ಟರ್ ಲಕ್ಷ್ಮಣ್ ನೇತೃತ್ವದಲ್ಲಿ ದಾಳಿ ನಡೆದಿದೆ.

ಇದನ್ನೂ ಓದಿ: ತುಮಕೂರು: ಹೆರಿಗೆ ಮಾಡಿಸಲು ಲಂಚಕ್ಕೆ ಬೇಡಿಕೆ‌ಯಿಟ್ಟಿದ್ದ ಸರ್ಕಾರಿ ವೈದ್ಯ ಲೋಕಾಯುಕ್ತ ಬಲೆಗೆ

ನೆಲಮಂಗಲದ ಕುಂದಾಣ ಪಿಡಿಒ ಪದ್ಮನಾಬ್​ ಅವರಿಗೆ ಸೇರಿದ ಮೂರು ಕಡೆ ಲೋಕಾಯುಕ್ತ ದಾಳಿ ನಡೆದಿದೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಮನೆ ಮೇಲೆ, ದಾಬಸ್ ಪೇಟೆ ಹಾಗೂ ತುಮಕೂರಿನಲ್ಲಿ ಪದ್ಮನಾಬ್​ ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಪರಿಶೀಲನೆ ನಡೆದಿದೆ.

ಕೆಆರ್​ಐಡಿಎಲ್​ನ ಎಇಇ ಸೈಯದ್ ಮುನೀರ್ ಮನೆ ಮೇಲೆ ಲೋಕಾಯುಕ್ತ ರೇಡ್ ಮಾಡಿದೆ. ಸೈಯದ್ ಮುನೀರ್ ಅಹ್ಮದ್​ಗೆ ಸೇರಿದ 6 ಕಡೆಯಲ್ಲಿ ದಾಳಿ ನಡೆದಿದ್ದು, ಬೆಂಗಳೂರಿನ ಆರ್.ಟಿ.ನಗರ ನಿವಾಸದಲ್ಲಿ ಅಪಾರ ಪ್ರಮಾಣದ ಹಣ ಪತ್ತೆಯಾಗಿದೆ. ವಿದೇಶಿ ಕರೆನ್ಸಿ, ಚಿನ್ನ, ಬೆಳ್ಳಿ ಆಭರಣ, ವಾಚ್​ಗಳು, ಮೊಬೈಲ್​ ಪತ್ತೆಯಾಗಿವೆ.

ಬೆಸ್ಕಾಂ ಚೀಫ್​ ಜನರಲ್​​​ ಮ್ಯಾನೇಜರ್​​ ಎಂ.ಎಲ್. ನಾಗರಾಜ್ ಅವರಿಗೆ ಸೇರಿದ ವಿವಿಧ ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ​​ಬೆಂಗಳೂರಿನ ಎರಡು ಮತ್ತು ಬಳ್ಳಾರಿಯ ಐದು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ನಾಗರಾಜ್​ 7.50 ಲಕ್ಷ ರೂ. ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳ ಕೈಗೆ ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದರು. ಲೋಕಾಯುಕ್ತ ದಾಳಿ ವೇಳೆ 9 ನಿವೇಶನ, ಮೂರು ಮನೆ, ಎರಡು ಪೆಟ್ರೋಲ್ ಬಂಕ್​, ಶಿಕ್ಷಣ ಸಂಸ್ಥೆ ಮತ್ತು ನಾಲ್ಕು ಕಡೆ ಕೃಷಿ ಜಮೀನು ಹೊಂದಿರುವ ದಾಖಲೆ ಪತ್ತೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ